AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Day of Women in Diplomacy 2024 : ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕ ದಿನವನ್ನು ಆಚರಿಸುವುದು ಏಕೆ? ಏನಿದರ ಮಹತ್ವ?

ಪ್ರತಿ ವರ್ಷ ಜೂನ್ 24 ರಂದು ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕ ದಿನವನ್ನು ಆಚರಿಸಲಾಗುತ್ತದೆ. ರಾಜತಾಂತ್ರಿಕತೆಗೆ ಮಹಿಳೆಯರ ಕೊಡುಗೆಯನ್ನು ಎತ್ತಿ ತೋರಿಸುವ ಉದ್ದೇಶವನ್ನು ಹೊಂದಿದ್ದು, ಈ ದಿನದ ಕುರಿತಾದ ಇನ್ನಷ್ಟು ಮಾಹಿತಿ ಇಲ್ಲಿದೆ.

International Day of Women in Diplomacy 2024 : ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕ ದಿನವನ್ನು ಆಚರಿಸುವುದು ಏಕೆ? ಏನಿದರ ಮಹತ್ವ?
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Jun 24, 2024 | 10:03 AM

Share

ಅಡುಗೆ ಮನೆಗೆ ಸೀಮಿತವಾಗಿದ್ದ ಹೆಣ್ಣೊಬ್ಬಳು ಇಂದು ಎಲ್ಲಾ ಕ್ಷೇತ್ರದಲ್ಲಿಯೂ ಕೈಯಾಡಿಸುತ್ತಿದ್ದಾಳೆ. ಪುರುಷ ಪ್ರಧಾನ ವ್ಯವಸ್ಥೆಯ ಕಟ್ಟುಪಾಡುಗಳನ್ನು ಮೀರಿ ಇಂದು ಬದುಕು ಕಟ್ಟಿಕೊಂಡಿದ್ದಾಳೆ. ಈಗಾಗಲೇ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಆರ್ಥಿಕವಾಗಿ ತನ್ನ ಕಾಲ ಮೇಲೆ ನಿಂತುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯೂ ಗುರುತಿಸಿಕೊಂಡಿದ್ದರೂ ಕೆಲ ಕ್ಷೇತ್ರದಲ್ಲಿ ಕೆಲವೇ ಕೆಲವು ಮಹಿಳೆಯರಷ್ಟೇ ಕಾಣಸಿಗುತ್ತಾರೆ. ರಾಜತಾಂತ್ರಿಕತೆಯಲ್ಲಿ ಮಹಿಳೆಯೂ ಸ್ಥಾನ ಪಡೆದುಕೊಂಡಿದ್ದಾಳಾದರೂ, ಈ ಮಹಿಳೆಯರ ಸಂಖ್ಯೆಗೆ ಹೋಲಿಸಿದರೆ ಪುರುಷರ ರಾಜತಾಂತ್ರಿಕ ಶ್ರೇಣಿಯೂ ಹೆಚ್ಚಿದೆ. ಹೀಗಾಗಿ ಮಹಿಳೆಯರನ್ನು ಪ್ರೋತ್ಸಾಹಿಸಿ, ಗೌರವಿಸುವ ನಿಟ್ಟಿನಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಜೂನ್ 24 ರಂದು ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕ ದಿನದ ಇತಿಹಾಸ

ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯ 76 ನೇ ಅಧಿವೇಶನದಲ್ಲಿ, ಸಾಮಾನ್ಯ ಸಭೆಯಲ್ಲಿ ಪ್ರತಿ ವರ್ಷ ಜೂನ್ 24 ಅನ್ನು ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕ ದಿನವೆಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷವು ಜೂನ್ 24 ರಂದು ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕರ ದಿನವನ್ನು ಆಚರಿಸಲಾಗುತ್ತಿದೆ. ಈ ನಿರ್ಣಯದಂತೆ ಅಸೆಂಬ್ಲಿಯ ಎಲ್ಲಾ ಸದಸ್ಯ ರಾಷ್ಟ್ರಗಳು, ವಿಶ್ವಸಂಸ್ಥೆಯ ಸಂಸ್ಥೆಗಳು, ಸರ್ಕಾರೇತರ ಗುಂಪುಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಮಹಿಳಾ ರಾಜತಾಂತ್ರಿಕರ ಸಂಘಗಳು ಈ ದಿನವನ್ನು ಆಚರಿಸುತ್ತವೆ.

ಇದನ್ನೂ ಓದಿ: ಅಂತಾರಾಷ್ಟ್ರೀಯ ಒಲಿಂಪಿಕ್ ದಿನವು ಶುರುವಾದದ್ದು ಹೇಗೆ? ಇಲ್ಲಿದೆ ಕುತೂಹಲಕಾರಿ ಸಂಗತಿ

ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕ ದಿನದ ಮಹತ್ವ

ಮಹಿಳಾ ರಾಜತಾಂತ್ರಿಕರ ಕೊಡುಗೆಗಳನ್ನು ಗುರುತಿಸುವುದು ಹಾಗೂ ಲಿಂಗ ತಾರತಮ್ಯವನ್ನು ಮರೆತು ಮಹಿಳೆಯರನ್ನು ಬೆಂಬಲಿಸುವ ಉದ್ದೇಶದಿಂದ ಈ ದಿನವು ಮಹತ್ವಕಾರಿಯಾಗಿದೆ. ಈಗಾಗಲೇ ಪ್ರಪಂಚದಾದ್ಯಂತದ ದೇಶಗಳು ರಾಜತಾಂತ್ರಿಕತೆಯಲ್ಲಿ ಮಹಿಳೆಯರ ಸಾಧನೆಗಳನ್ನು ಗೌರವಿಸುವ ಕೆಲಸವನ್ನು ಮಾಡುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು