ಅಡುಗೆ ಮನೆಗೆ ಸೀಮಿತವಾಗಿದ್ದ ಹೆಣ್ಣೊಬ್ಬಳು ಇಂದು ಎಲ್ಲಾ ಕ್ಷೇತ್ರದಲ್ಲಿಯೂ ಕೈಯಾಡಿಸುತ್ತಿದ್ದಾಳೆ. ಪುರುಷ ಪ್ರಧಾನ ವ್ಯವಸ್ಥೆಯ ಕಟ್ಟುಪಾಡುಗಳನ್ನು ಮೀರಿ ಇಂದು ಬದುಕು ಕಟ್ಟಿಕೊಂಡಿದ್ದಾಳೆ. ಈಗಾಗಲೇ ಮಹಿಳೆಯರು ತಮ್ಮ ಹಕ್ಕುಗಳಿಗಾಗಿ ಹೋರಾಟ ನಡೆಸಿ ಆರ್ಥಿಕವಾಗಿ ತನ್ನ ಕಾಲ ಮೇಲೆ ನಿಂತುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರತಿಯೊಂದು ಕ್ಷೇತ್ರದಲ್ಲಿ ಮಹಿಳೆಯೂ ಗುರುತಿಸಿಕೊಂಡಿದ್ದರೂ ಕೆಲ ಕ್ಷೇತ್ರದಲ್ಲಿ ಕೆಲವೇ ಕೆಲವು ಮಹಿಳೆಯರಷ್ಟೇ ಕಾಣಸಿಗುತ್ತಾರೆ. ರಾಜತಾಂತ್ರಿಕತೆಯಲ್ಲಿ ಮಹಿಳೆಯೂ ಸ್ಥಾನ ಪಡೆದುಕೊಂಡಿದ್ದಾಳಾದರೂ, ಈ ಮಹಿಳೆಯರ ಸಂಖ್ಯೆಗೆ ಹೋಲಿಸಿದರೆ ಪುರುಷರ ರಾಜತಾಂತ್ರಿಕ ಶ್ರೇಣಿಯೂ ಹೆಚ್ಚಿದೆ. ಹೀಗಾಗಿ ಮಹಿಳೆಯರನ್ನು ಪ್ರೋತ್ಸಾಹಿಸಿ, ಗೌರವಿಸುವ ನಿಟ್ಟಿನಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿ ಜೂನ್ 24 ರಂದು ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ವಿಶ್ವಸಂಸ್ಥೆಯ ಜನರಲ್ ಅಸೆಂಬ್ಲಿಯ 76 ನೇ ಅಧಿವೇಶನದಲ್ಲಿ, ಸಾಮಾನ್ಯ ಸಭೆಯಲ್ಲಿ ಪ್ರತಿ ವರ್ಷ ಜೂನ್ 24 ಅನ್ನು ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕ ದಿನವೆಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷವು ಜೂನ್ 24 ರಂದು ಅಂತಾರಾಷ್ಟ್ರೀಯ ಮಹಿಳಾ ರಾಜತಾಂತ್ರಿಕರ ದಿನವನ್ನು ಆಚರಿಸಲಾಗುತ್ತಿದೆ. ಈ ನಿರ್ಣಯದಂತೆ ಅಸೆಂಬ್ಲಿಯ ಎಲ್ಲಾ ಸದಸ್ಯ ರಾಷ್ಟ್ರಗಳು, ವಿಶ್ವಸಂಸ್ಥೆಯ ಸಂಸ್ಥೆಗಳು, ಸರ್ಕಾರೇತರ ಗುಂಪುಗಳು, ಶೈಕ್ಷಣಿಕ ಸಂಸ್ಥೆಗಳು ಮತ್ತು ಮಹಿಳಾ ರಾಜತಾಂತ್ರಿಕರ ಸಂಘಗಳು ಈ ದಿನವನ್ನು ಆಚರಿಸುತ್ತವೆ.
ಇದನ್ನೂ ಓದಿ: ಅಂತಾರಾಷ್ಟ್ರೀಯ ಒಲಿಂಪಿಕ್ ದಿನವು ಶುರುವಾದದ್ದು ಹೇಗೆ? ಇಲ್ಲಿದೆ ಕುತೂಹಲಕಾರಿ ಸಂಗತಿ
ಮಹಿಳಾ ರಾಜತಾಂತ್ರಿಕರ ಕೊಡುಗೆಗಳನ್ನು ಗುರುತಿಸುವುದು ಹಾಗೂ ಲಿಂಗ ತಾರತಮ್ಯವನ್ನು ಮರೆತು ಮಹಿಳೆಯರನ್ನು ಬೆಂಬಲಿಸುವ ಉದ್ದೇಶದಿಂದ ಈ ದಿನವು ಮಹತ್ವಕಾರಿಯಾಗಿದೆ. ಈಗಾಗಲೇ ಪ್ರಪಂಚದಾದ್ಯಂತದ ದೇಶಗಳು ರಾಜತಾಂತ್ರಿಕತೆಯಲ್ಲಿ ಮಹಿಳೆಯರ ಸಾಧನೆಗಳನ್ನು ಗೌರವಿಸುವ ಕೆಲಸವನ್ನು ಮಾಡುತ್ತವೆ.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: