International Education Day 2024: ಜಗತ್ತಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಅಗತ್ಯ

ಶಿಕ್ಷಣ ಎನ್ನುವುದು ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಪ್ರತಿಯೊಬ್ಬ ವ್ಯಕ್ತಿಗೂ ಶಿಕ್ಷಣವನ್ನು ಪಡೆಯುವುದರಿಂದ ದೇಶದ ಅಭಿವೃದ್ಧಿಯಲ್ಲಿ ಮಹತ್ವದ ಪಾತ್ರವಹಿಸುತ್ತದೆ. ಪ್ರಪಂಚದಾದ್ಯಂತ ಪ್ರತಿ ವರ್ಷ ಜನವರಿ 24 ರಂದು ಅಂತರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲಾಗುತ್ತದೆ. ಅಂತಾರಾಷ್ಟ್ರೀಯ ಶಿಕ್ಷಣ ದಿನ ಮಹತ್ವವೇನು? ಇಲ್ಲಿದೆ ಮಾಹಿತಿ.

International Education Day 2024: ಜಗತ್ತಿಗೆ ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸುವುದು ಅಗತ್ಯ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 23, 2024 | 3:02 PM

ಶಿಕ್ಷಣ ಪಡೆಯುವುದು ಪ್ರತಿಯೊಬ್ಬರ ಹಕ್ಕಾಗಿದ್ದರೂ ಪ್ರಪಂಚದಾದಂತ್ಯ ಇವತ್ತಿಗೂ ಕೂಡ ಕೆಲವು ಮಕ್ಕಳು ಶಿಕ್ಷಣದಿಂದ ವಂಚಿತರಾಗಿದ್ದಾರೆ. ಓದಲು ಬರೆಯಲು ಬಾರದ ಮಕ್ಕಳು ಕೂಡ ಇದ್ದಾರೆ. ಈ ಮಕ್ಕಳು ಶಿಕ್ಷಣದಿಂದ ವಂಚಿತರಾಗಲು ಮುಖ್ಯ ಕಾರಣವೇ ಬಡತನವಾಗಿದೆ. ಈ ಶಿಕ್ಷಣವು ಪ್ರತಿಯೊಬ್ಬ ವ್ಯಕ್ತಿಗೂ ಗೌರವವನ್ನು ತಂದುಕೊಡುತ್ತದೆ. ಆದರೆ ಶಿಕ್ಷಣ ಪಡೆಯದಿದ್ದರೆ ಬದುಕಿನುದ್ದಕ್ಕೂ ಹೋರಾಟದ ಹಾದಿಯಲ್ಲಿ ಸಾಗಬೇಕಾಗುತ್ತದೆ. ಹೀಗಾಗಿ ಶಿಕ್ಷಣವು ನಮ್ಮ ಜೀವನದ ಉತ್ತಮ ಬೆಳವಣಿಗೆಗೆ ಕಾರಣವಾಗುತ್ತದೆ. ಪ್ರತಿ ವರ್ಷ ಜನವರಿ 24 ಅನ್ನು ಅಂತಾರಾಷ್ಟ್ರೀಯ ಶಿಕ್ಷಣ ದಿನವನ್ನಾಗಿ ಆಚರಿಸಲಾಗುತ್ತದೆ. ಅಂತಾರಾಷ್ಟ್ರೀಯ ಶಿಕ್ಷಣ ದಿನವು ಜಾಗತಿಕ ಶಾಂತಿ ಮತ್ತು ಸುಸ್ಥಿರ ಅಭಿವೃದ್ಧಿಯ ಮೂಲ ಉದ್ದೇಶಗಳನ್ನು ಸಾಧಿಸುವಲ್ಲಿ ಶಿಕ್ಷಣದ ಪಾತ್ರ ಎನ್ನುವ ವಿಚಾರದ ಮೇಲೆ ಬೆಳಕು ಚೆಲ್ಲುತ್ತದೆ.

ಅಂತಾರಾಷ್ಟ್ರೀಯ ಶಿಕ್ಷಣ ದಿನದ ಇತಿಹಾಸ

ಅಂತಾರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸಲು, ಡಿಸೆಂಬರ್ 3, 2018 ರಂದು, ಯುನೈಟೆಡ್ ನೇಷನ್ಸ್ (UN) ಜನರಲ್ ಅಸೆಂಬ್ಲಿಯು ನೈಜೀರಿಯಾ ಹಾಗೂ 58 ಇತರ ಸದಸ್ಯ ರಾಷ್ಟ್ರಗಳಿಂದ ಸಹ ಈ ನಿರ್ಣಯಕ್ಕೆ ಒಪ್ಪಿಗೆ ಸೂಚಿಸಿತು. ಅಂದಿನಿಂದ ಪ್ರತಿ ವರ್ಷವು ಜನವರಿ 24 ರಂದು ಅಂತಾರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: 2024ರ ಶಿಕ್ಷಣ ಕ್ಷೇತ್ರದ ಮುಖ್ಯ ಅಭಿವೃದ್ಧಿಗಳು

ಅಂತಾರಾಷ್ಟ್ರೀಯ ಶಿಕ್ಷಣ ದಿನದ ಮಹತ್ವ

ಅಂತಾರಾಷ್ಟ್ರೀಯ ಶಿಕ್ಷಣ ದಿನವನ್ನು ಆಚರಿಸುವುದರ ಹಿಂದಿನ ಉದ್ದೇಶವು ಜಗತ್ತಿನಲ್ಲಿ ಶಿಕ್ಷಣದ ಮಹತ್ವವನ್ನು ಅರಿವು ಮೂಡಿಸುವುದು. ಶಾಂತಿ ಮತ್ತು ಅಭಿವೃದ್ಧಿಯು ಮಾನವ ಜೀವನದಲ್ಲಿ ಅತ್ಯಂತ ಮುಖ್ಯವಾದ ವಿಷಯವಾಗಿದ್ದು, ಅದನ್ನು ಸಾಧಿಸಲು ಶಿಕ್ಷಣವು ಏಕೈಕ ಮಾರ್ಗವಾಗಿದೆ. ಪ್ರತಿ ಮಗುವಿಗೂ ಉಚಿತ ಶಿಕ್ಷಣ ಸಿಗಲಿ ಎನ್ನುವುದನ್ನು ಒಳಗೊಂಡಿದೆ. ಜನರ ಜ್ಞಾನ, ಕೌಶಲ್ಯಗಳನ್ನು ಹೆಚ್ಚಿಸಲು ಹಾಗೂ ವ್ಯಕ್ತಿಯ ಒಟ್ಟಾರೆ ವ್ಯಕ್ತಿತ್ವವನ್ನು ರೂಪಿಸಲು ಸಹಾಯಕವಾಗಿದೆ. ಅದರೊಂದಿಗೆ ಶಿಕ್ಷಣವು ವ್ಯಕ್ತಿಗಳಿಗೆ ತಂತ್ರಜ್ಞಾನವನ್ನು ಉತ್ತಮ ರೀತಿಯಲ್ಲಿ ಬಳಸಲು ಹಾಗೂ ಪ್ರಬುದ್ಧರನ್ನಾಗಿ ಮಾಡಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: