International Human Solidarity Day 2024: ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ
ಇತ್ತೀಚೆಗಿನ ದಿನಗಳಲ್ಲಿ ಸಮಾಜ ಮತ್ತು ದೇಶ ದೇಶಗಳ ನಡುವೆ ಸಣ್ಣ ಪುಟ್ಟ ವಿಷಯಕ್ಕೂ ಮನಸ್ತಾಪಗಳು ಹೆಚ್ಚಾಗುತ್ತಿದೆ. ಈ ಮನಸ್ತಾಪ ಕಡಿಮೆ ಮಾಡಿ ಜನರಲ್ಲಿ ಪರಸ್ಪರ ಸಹೋದರತ್ವವನ್ನು ಉತ್ತೇಜಿಸುವುದು, ವಿವಿಧೆತೆಯಲ್ಲಿ ಏಕತೆಯನ್ನು ಆಚರಿಸಲು ಹಾಗೂ ಒಗ್ಗಟ್ಟಿನ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಡಿಸೆಂಬರ್ 20ರಂದು ಜಾಗತಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.
ಒಗ್ಗಟ್ಟಿನಲ್ಲಿ ಬಲವಿದೆ ಎನ್ನುವ ಗಾದೆ ಮಾತಿದೆ.ನಮ್ಮಲ್ಲಿ ಒಗ್ಗಟ್ಟು ಇದ್ದರೆ ಯಾರಿಂದಲೂ ಏನನ್ನೂ ಮಾಡಲು ಸಾಧ್ಯವಿಲ್ಲ. ಹೌದು, ಇಂದು ಅಂತಾರಾಷ್ಟ್ರೀಯ ಒಗ್ಗಟ್ಟಿನ ದಿನ. ಈ ದಿನದಂದು ಜಾಗತಿಕ ಸಮುದಾಯದ ಯೋಗಕ್ಷೇಮವನ್ನು ಉತ್ತೇಜಿಸಲು, ಬಡತನ, ಹಸಿವು ಮತ್ತು ರೋಗಗಳನ್ನು ನಿರ್ಮೂಲನೆ ಮಾಡುವ ಪ್ರತಿಜ್ಞೆ ಮಾಡಲು ಇಡೀ ಸಮುದಾಯವೇ ಒಗ್ಗೂಡುವ ದಿನ. ಪ್ರತಿ ವರ್ಷ ಡಿಸೆಂಬರ್ 20 ರಂದು ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನದ ಇತಿಹಾಸ
ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನದ ಆಚರಣೆಯನ್ನು ಮೊದಲ ಬಾರಿಗೆ 2005 ರಲ್ಲಿ ಪ್ರಾರಂಭಿಸಲಾಯಿತು. ವಿಶ್ವದಲ್ಲಿ ಪರಸ್ಪರ ಸಹಕಾರ ಮತ್ತು ಸಾಮರಸ್ಯವನ್ನು ಉತ್ತೇಜಿಸಲು ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲು ಮುಂದಾಯಿತು. ತದನಂತರದಲ್ಲಿ 22 ಡಿಸೆಂಬರ್ 2005 ರಂದು 60/209 ನಿರ್ಣಯದ ಅಡಿಯಲ್ಲಿ ಡಿಸೆಂಬರ್ 20 ರಂದು ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್ 20 ರಂದು ಜಾಗತಿಕ ಮಟ್ಟದಲ್ಲಿ ಮಾನವ ಒಗ್ಗಟ್ಟಿನ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.
ಇದನ್ನೂ ಓದಿ: ತುಪ್ಪ ಅಥವಾ ತೆಂಗಿನ ಎಣ್ಣೆ: ಅಡುಗೆಗೆ ಆರೋಗ್ಯಕರ ಆಯ್ಕೆ ಯಾವುದು? ಇಲ್ಲಿದೆ ನೋಡಿ
ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟಿನ ದಿನದ ಮಹತ್ವ
ವಿವಿಧತೆಯಲ್ಲಿ ಏಕತೆಯನ್ನು ಆಚರಿಸುವುದು ಅಂತಾರಾಷ್ಟ್ರೀಯ ಒಪ್ಪಂದಗಳಿಗೆ ತಮ್ಮ ಬದ್ಧತೆಯನ್ನು ಗೌರವಿಸಲು ವಿವಿಧ ದೇಶ ಹಾಗೂ ಸರ್ಕಾರಗಳಿಗೆ ನೆನಪಿಸುವಂತಹ ದಿನವಾಗಿದೆ. ಬಡತನ, ಅನಕ್ಷರತೆ ಸೇರಿದಂತೆ ಇನ್ನಿತ್ತರ ಜಾಗತಿಕ ಸಮಸ್ಯೆಗಳನ್ನು ನಿರ್ಮೂಲನೆ ಮಾಡಲು ಹಾಗೂ ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗಾಗಿ ಒಗ್ಗಟ್ಟನ್ನು ಉತ್ತೇಜಿಸುವ ಮಾರ್ಗಗಳ ಕುರಿತು ಚರ್ಚೆಯನ್ನು ಉತ್ತೇಜಿಸಿ ಜಾಗೃತಿ ಮೂಡಿಸುವ ದಿನವಾಗಿದೆ. ಜಾಗತಿಕ ಮಟ್ಟದಲ್ಲಿ ಬಡತನವನ್ನು ಕೊನೆಗೊಳಿಸುವ ಗುರಿಗೆ ತಮ್ಮ ಬೆಂಬಲವನ್ನು ಸೂಚಿಸಲು ಮೂಲಕ ಈ ವಿಶೇಷ ದಿನದಂದು ಎಲ್ಲರೂ ಒಗ್ಗೂಡುತ್ತಾರೆ. ಈ ದಿನದಂದು ವಿಶೇಷ ಉಪನ್ಯಾಸ ಕಾರ್ಯಾಗಾರ ಹಾಗೂ ಅಭಿಯಾನಗಳು ಸೇರಿದಂತೆ ಇನ್ನಿತ್ತರ ಹಮ್ಮಿಕೊಳ್ಳಲಾಗುತ್ತದೆ.
ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ