AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Literacy Day 2025: ಸಾಕ್ಷರತೆಯಿಂದ ದೇಶದ ಅಭಿವೃದ್ಧಿ ಸಾಧ್ಯ; ಸಾಕ್ಷರತಾ ದಿನಾಚರಣೆಯ ಉದ್ದೇಶವನ್ನು ತಿಳಿಯಿರಿ

ಸಂಪೂರ್ಣ ಸಾಕ್ಷರತೆಯಿಂದ ಬಡತನ ನಿರ್ಮೂಲನೆ, ಆರ್ಥಿಕ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯ, ದೇಶದ ಅಭಿವೃದ್ಧಿಗೆ ಸಾಕ್ಷರತೆ ಬಹಳ ಮುಖ್ಯ. ಈ ನಿಟ್ಟಿನಲ್ಲಿ ಜಗತ್ತಿನಲ್ಲಿ ಶಿಕ್ಷಣವನ್ನು ಉತ್ತೇಜಿಸಲು ಪ್ರತಿವರ್ಷ ಸೆಪ್ಟೆಂಬರ್‌ 08 ರಂದು ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು? ಇದರ ಇತಿಹಾಸ ಮತ್ತು ಮಹತ್ವವೇನು ಎಂಬುದನ್ನು ತಿಳಿಯೋಣ ಬನ್ನಿ.

International Literacy Day 2025: ಸಾಕ್ಷರತೆಯಿಂದ ದೇಶದ ಅಭಿವೃದ್ಧಿ ಸಾಧ್ಯ; ಸಾಕ್ಷರತಾ ದಿನಾಚರಣೆಯ ಉದ್ದೇಶವನ್ನು ತಿಳಿಯಿರಿ
ಅಂತಾರಾಷ್ಟ್ರೀಯ ಸಾಕ್ಷರತಾ ದಿನImage Credit source: Google
ಮಾಲಾಶ್ರೀ ಅಂಚನ್​
|

Updated on:Sep 08, 2025 | 10:02 AM

Share

ಶಿಕ್ಷಣವು (education) ಸುಸಂಸ್ಕೃತ, ಸಮರ್ಥ ಮತ್ತು ಬಲಿಷ್ಠ ಸಮಾಜದ ಅಡಿಪಾಯವಾಗಿದೆ. ಯಾವುದೇ ಒಂದು ದೇಶದ ಸಮೃದ್ಧಿ ಮತ್ತು ಅಭಿವೃದ್ಧಿಯು ಅಲ್ಲಿ ವಾಸಿಸುವ ಜನರು ಎಷ್ಟು ವಿದ್ಯಾವಂತರು ಎಂಬುದರ ಮೇಲೆ ಅವಲಂಬಿತವಾಗಿರುತ್ತದೆ. ಹೌದು ಒಂದು ದೇಶದ ಹೆಚ್ಚು ಜನರು ಶಿಕ್ಷಣ ಪಡೆದಷ್ಟು, ದೇಶದ ಪ್ರತಿಯೊಬ್ಬ ಪ್ರಜೆಯೂ ಸಾಕ್ಷರದಾದಷ್ಟು ಆ ದೇಶದ ಭವಿಷ್ಯ, ಅಭಿವೃದ್ಧಿ ಮುಂದಿರುತ್ತದೆ. ಸಾಕ್ಷರತೆಯಿಂದ ಬಡತನ ನಿರ್ಮೂಲನೆ, ಆರ್ಥಿಕ ಅಭಿವೃದ್ಧಿ ಮತ್ತು ಸುಸ್ಥಿರ ಅಭಿವೃದ್ಧಿ ಸಾಧ್ಯ. ಈ ನಿಟ್ಟಿನಲ್ಲಿ ಶಿಕ್ಷಣವನ್ನು ಉತ್ತೇಜಿಸಲು, ಸಾಕ್ಷರತೆಯ ಬಗ್ಗೆ ಜನರಿಗೆ ಅರಿವು ಮೂಡಿಲು ಪ್ರತಿವರ್ಷ ಸೆಪ್ಟೆಂಬರ್‌ 8 ರಂದು ಅಂತಾರಾಷ್ಟ್ರೀಯ ಸಾಕ್ಷರತಾ (International Literacy Day) ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಆಚರಣೆಯ ಇತಿಹಾಸ ಮತ್ತು ಮಹತ್ವವನ್ನು ತಿಳಿಯಿರಿ.

ಅಂತಾರಾಷ್ಟ್ರೀಯ ಸಾಕ್ಷರತಾ ದಿನ ಆಚರಣೆ ಹೇಗೆ ಪ್ರಾರಂಭವಾಯಿತು?

ಯುನೆಸ್ಕೋ ಮೊದಲ ಬಾರಿಗೆ ನವೆಂಬರ್‌ 7, 1965 ರಲ್ಲಿ ಅಂತಾರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಬೇಕೆಂದು ನಿರ್ಧರಿಸಿತು. ಪ್ರಪಂಚದಿಂದ ಅನಕ್ಷರತೆಯ ಪ್ರತಿಯೊಂದು ಕುರುಹುಗಳನ್ನು ತೆಗೆದುಹಾಕುವ ನಿಟ್ಟಿನಲ್ಲಿ ಹಾಗೂ ಪ್ರತಿಯೊಂದು ದೇಶದ ಅಭಿವೃದ್ಧಿಗೆ ಶಿಕ್ಷಣದ ಮಹತ್ವ ಎಷ್ಟು ಮುಖ್ಯ ಎಂಬುದನ್ನು ಗಮನದಲ್ಲಿಟ್ಟುಕೊಂಡು ವಿಶ್ವ ಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (UNESCO) ಅಕ್ಟೋಬರ್ 26, 1966 ರಂದು ಇರಾನ್‌ನ ಟೆಹ್ರಾನ್‌ನಲ್ಲಿ ನಡೆದ ತನ್ನ 14 ನೇ ಸಾಮಾನ್ಯ ಸಮ್ಮೇಳನದಲ್ಲಿ ಪ್ರತಿವರ್ಷ  ಸೆಪ್ಟೆಂಬರ್ 8 ರಂದು ಅಂತರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಗುವುದು ಎಂದು ಘೋಷಿಸಿತು. ಇದರ ನಂತರ ಸೆಪ್ಟೆಂಬರ್ 8, 1966 ರಂದು ವಿಶ್ವವು ಮೊದಲ ಬಾರಿಗೆ ಅಂತರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಯಿತು. ಜಗತ್ತಿನ ಹಲವು ದೇಶಗಳು ಇದರಲ್ಲಿ ಪಾಲ್ಗೊಂಡು ಜನಸಾಮಾನ್ಯರಿಗೆ ಶಿಕ್ಷಣ ನೀಡುವ ಪ್ರತಿಜ್ಞೆ ಸ್ವೀಕರಿಸಿದರು. ಅಂದಿನಿಂದ ಪ್ರತಿವರ್ಷ ಈ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಗುರುಭ್ಯೋ ನಮಃ; ಶಿಕ್ಷಕರ ದಿನದ ಆಚರಣೆಯ ಹಿನ್ನೆಲೆಯ ಬಗ್ಗೆ ತಿಳಿಯಿರಿ

ಇದನ್ನೂ ಓದಿ
Image
ಶಿಕ್ಷಕರ ದಿನದ ಆಚರಣೆಯ ಹಿನ್ನೆಲೆಯ ಬಗ್ಗೆ ತಿಳಿಯಿರಿ
Image
ತೆಂಗು ದಿನದ ಆಚರಣೆಯ ಹಿನ್ನೆಲೆ, ಮಹತ್ವದ ಬಗ್ಗೆ ನಿಮ್ಗೊತ್ತಾ?
Image
ರಾಷ್ಟ್ರೀಯ ಪೌಷ್ಟಿಕಾಂಶ ಸಪ್ತಾಹದ ಇತಿಹಾಸ, ಮಹತ್ವ ತಿಳಿಯಿರಿ
Image
ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಇತಿಹಾಸ, ಮಹತ್ವ ತಿಳಿಯಿರಿ

ಅಂತಾರಾಷ್ಟ್ರೀಯ ಸಾಕ್ಷರತಾ ದಿನದ ಮಹತ್ವ:

ಯುನೆಸ್ಕೋ ಪ್ರಕಾರ, ‘ಸಾಕ್ಷರತೆಯು ಅತ್ಯುತ್ತಮ ಚಿಕಿತ್ಸೆ ಮತ್ತು ಪ್ರತಿಯೊಬ್ಬ ವ್ಯಕ್ತಿಯು ಶಿಕ್ಷಣದ ಹಕ್ಕನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳುವ ಕೀಲಿಯಾಗಿದೆ’. ಹಾಗಾಗಿ ಜನರನ್ನು ಸಾಕ್ಷರರನ್ನಾಗಿಸಲು ಮತ್ತು ಸಾಮಾಜಿಕ, ಮಾನವ ಅಭಿವೃದ್ಧಿಗಾಗಿ ಅವರ ಹಕ್ಕುಗಳ ಬಗ್ಗೆ ಜನರಿಗೆ ಅರಿವು ಮೂಡಿಸಲು ಯುನೆಸ್ಕೋ ಈ ದಿನವನ್ನು ಆಚರಿಸುತ್ತದೆ. ಸಾಕ್ಷರತೆಯು ಜನರು ಉತ್ತಮ ಜೀವನವನ್ನು ನಡೆಸಲು ಸಹಾಯ ಮಾಡುತ್ತದೆ ಅದರೊಂದಿಗೆ ಬಡತನ ನಿರ್ಮೂಲನೆ ಮಾಡಲು, ಜನಸಂಖ್ಯೆಯನ್ನು ನಿಯಂತ್ರಿಸಲು ಮತ್ತು ಮಕ್ಕಳ ಮರಣವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಉತ್ತಮ ಶಿಕ್ಷಣಕ್ಕಾಗಿ ಜನರನ್ನು ಪ್ರೋತ್ಸಾಹಿಸಲು ಈ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು ಜನರಿಗೆ ಶಿಕ್ಷಣದ ಬಗ್ಗೆ ಅರಿವು ಮೂಡಿಸಲು ಯುನೆಸ್ಕೋ ಹಾಗೂ ಅನೇಕ ದೇಶಗಳ ಸರ್ಕಾರಿ ಮತ್ತು ಸರ್ಕಾರೇತರ ಸಂಸ್ಥೆಗಳು ಶಾಲೆಗಳು ಕಾಲೇಜುಗಳು ಮತ್ತು ಊರುಗಳಲ್ಲಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:01 am, Mon, 8 September 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ