International Mine Awareness Day 2024 : ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!

ಇತ್ತೀಚೆಗಿನ ದಿನಗಳಲ್ಲಿ ಅಕ್ರಮ ಗಣಿಗಾರಿಕೆಯಂತಹ ಸುದ್ದಿಗಳನ್ನು ಕೇಳುತ್ತಿದ್ದೇವೆ. ಇದೊಂದು ಬೆಟ್ಟ ಗುಡ್ಡಗಳನ್ನು ಕೊರೆತು ವಿವಿಧ ಲೋಹಗಳನ್ನು ಹೊರ ತೆಗೆಯುವ ಚಟುವಟಿಕೆಯಾಗಿದ್ದು, ಈ ಗಣಿಗಾರಿಕೆಯಂತಹ ಸರ್ಕಾರಕ್ಕೆ ಆದಾಯವೇನು ಬರುತ್ತಿದೆ. ಆದರೆ ಲಾಭಕ್ಕಿಂತ ಸುತ್ತಮುತ್ತಲಿನ ಜನರಿಗೆ ತೊಂದರೆಯೇ ಹೆಚ್ಚು. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿ ವರ್ಷ ಏಪ್ರಿಲ್ 4 ರಂದು ಅಂತರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಹಿಂದಿನ ಇತಿಹಾಸ ಹಾಗೂ ಮಹತ್ವದ ಬಗೆಗಿನ ಮಾಹಿತಿಯು ಇಲ್ಲಿದೆ.

International Mine Awareness Day 2024 : ಭೂ ಗರ್ಭದ ಸ್ಫೋಟ, ಜನರ ಜೀವಕ್ಕೆ ಆಪತ್ತು ಖಚಿತ!
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Apr 04, 2024 | 10:46 AM

ಗಣಿಗಾರಿಕೆಯಂತಹ ಕೆಲವು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿ ಲಾಭಗಳಿಸಿರುವವರು ಸಂಖ್ಯೆಯು ಅಧಿಕವಾಗಿದೆ. ಹೀಗಾಗಿ ಗಣಿಗಾರಿಕೆ ಸಂಬಂಧಪಟ್ಟ ಸುದ್ದಿಗಳನ್ನು ಆಗಾಗ ಕೇಳುತ್ತಿರುತ್ತೇವೆ. ಭೂಮಿಯ ಒಡಲಲ್ಲಿ ಇರುವ ವಿವಿಧ ಲೋಹಗಳನ್ನು ಅಗೆದು ಹೊರತೆಗೆಯುವ ಪ್ರಕ್ರಿಯೆಯು ಇದಾಗಿದೆ. ಈ ಲೋಹಗಳನ್ನು ಹೊರ ತೆಗೆಯಲು ಗಣಿಯನ್ನು ಸ್ಫೋಟಿಸುವಂತಹ ವಿಧಾನಗಳನ್ನು ಬಳಸುತ್ತಾರೆ. ಇದರಿಂದಾಗಿ ಶಬ್ದ ಮಾಲಿನ್ಯ ಹಾಗೂ ಪರಿಸರ ಮಾಲಿನ್ಯದಿಂದ ಅಲ್ಲಿ ವಾಸಿಸುತ್ತಿರುವ ಸುತ್ತ ಮುತ್ತಲಿನ ಜನರು ತೊಂದರೆಗೆ ಈಡಾಗುತ್ತಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಂತರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ಗಣಿ ಜಾಗೃತಿ ದಿನದ ಇತಿಹಾಸ

ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2005 ಡಿಸೆಂಬರ್ 8 ರಂದು ಅಂತಾರಾಷ್ಟ್ರೀಯ ಗಣಿಗಾರಿಕೆ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಿತು. ಈ ನಿರ್ಣಯದಂತೆ 2006 ಏಪ್ರಿಲ್ 4 ರಂದು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಣಿಗಾರಿಕೆ ಜಾಗೃತಿ ದಿನವನ್ನು ಆಚರಿಸಿತು. ಅಂದಿನಿಂದ ಪ್ರತಿ ವರ್ಷವು ಅಂತರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ವಿಪರೀತ ಗಂಟಲು ಕೆರೆತವೇ, ಈ ಪದಾರ್ಥ ಸೇವಿಸಿದರೆ ನೋವೆಲ್ಲವು ಮಾಯಾ!

ಅಂತರಾಷ್ಟ್ರೀಯ ಗಣಿ ಜಾಗೃತಿ ದಿನದ ಮಹತ್ವ

ಅಂತರಾಷ್ಟ್ರೀಯ ಗಣಿ ಜಾಗೃತಿ ದಿನದ ಆಚರಣೆಯ ಹಿಂದಿನ ಮುಖ್ಯ ಉದ್ದೇಶವೇನೆಂದರೆ, ಗಣಿಗಾರಿಕೆಯಂತಹ ಚಟುವಟಿಕೆಗಳಿಂದ ಸುತ್ತ ಮುತ್ತಲಿನ ಜನರಿಗೆ ಆಗುವ ಸಮಸ್ಯೆಗಳು ಹಾಗೂ ಪರಿಸರಕ್ಕೆ ಆಗುವ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಗಣಿ ಜಾಗೃತಿ ದಿನದಂದು ಈ ಬಗ್ಗೆ ಅರಿವು ಮೂಡಿಸುವ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ದೇಗುಲದಲ್ಲಿ ಭಕ್ತನಂತೆ ಕೈ ಮುಗಿದು ಕುಳಿತು ಆಂಜನೇಯನ ಕಿರೀಟವನ್ನೇ ಕದ್ದ ಕಳ್ಳ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ಹೊಸವರ್ಷದ ಆಗಮನಕ್ಕಾಗಿ ಎಲ್ಲೆಡೆ ಶುರುವಾಗಿದೆ ಕ್ಷಣಗಣನೆ
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ರಜತ್​ಗೆ ರಿವರ್ಸ್​, ಧನರಾಜ್​-ಹನುಮಂತುಗೆ ಫಾಸ್ಟ್ ಫಾರ್ವರ್ಡ್
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಕೇಕ್ ಕತ್ತರಿಸಿ, ಪಟಾಕಿ ಸಿಡಿಸಿ ಹೊಸ ವರ್ಷ ಬರಮಾಡಿಕೊಂಡ ಆಕ್ಲೆಂಡ್ ಜನರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಮೈಸೂರು ಅರಮನೆಯ ವಿದ್ಯುದ್ದೀಪ ಅಲಂಕಾರ ಇನ್ನೂ ಚೆಂದ: ರೈತರು
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಈ ವರ್ಷದ ಕೊನೆಯ ಸೂರ್ಯಾಸ್ತ: ಕ್ಯಾಮರಾ ಕಣ್ಣಲ್ಲಿ ಸೆರೆಯಾಯ್ತು ಮನಮೋಹಕ ದೃಶ್ಯ
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಸಂಘದ ಸದಸ್ಯನಾಗಲು ಕುಡುಕನಾಗಿರುವುದು ಬೇಸಿಕ್ ಅರ್ಹತೆ ಮತ್ತು ಅನಿವಾರ್ಯತೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!
ಬೇಕರಿ ಮಾಲೀಕ ಹೇಳುವಂತೆ ಕೇಕ್ ಕಟ್ ಮಾಡುವ ಕ್ರೇಜ್ ಕಡಿಮೆಯಾಗಿದೆ!