ಗಣಿಗಾರಿಕೆಯಂತಹ ಕೆಲವು ಅಕ್ರಮ ಚಟುವಟಿಕೆಗಳಲ್ಲಿ ತೊಡಗಿ ಲಾಭಗಳಿಸಿರುವವರು ಸಂಖ್ಯೆಯು ಅಧಿಕವಾಗಿದೆ. ಹೀಗಾಗಿ ಗಣಿಗಾರಿಕೆ ಸಂಬಂಧಪಟ್ಟ ಸುದ್ದಿಗಳನ್ನು ಆಗಾಗ ಕೇಳುತ್ತಿರುತ್ತೇವೆ. ಭೂಮಿಯ ಒಡಲಲ್ಲಿ ಇರುವ ವಿವಿಧ ಲೋಹಗಳನ್ನು ಅಗೆದು ಹೊರತೆಗೆಯುವ ಪ್ರಕ್ರಿಯೆಯು ಇದಾಗಿದೆ. ಈ ಲೋಹಗಳನ್ನು ಹೊರ ತೆಗೆಯಲು ಗಣಿಯನ್ನು ಸ್ಫೋಟಿಸುವಂತಹ ವಿಧಾನಗಳನ್ನು ಬಳಸುತ್ತಾರೆ. ಇದರಿಂದಾಗಿ ಶಬ್ದ ಮಾಲಿನ್ಯ ಹಾಗೂ ಪರಿಸರ ಮಾಲಿನ್ಯದಿಂದ ಅಲ್ಲಿ ವಾಸಿಸುತ್ತಿರುವ ಸುತ್ತ ಮುತ್ತಲಿನ ಜನರು ತೊಂದರೆಗೆ ಈಡಾಗುತ್ತಿದ್ದಾರೆ. ಈ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಅಂತರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಆಚರಿಸಲಾಗುತ್ತದೆ.
ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 2005 ಡಿಸೆಂಬರ್ 8 ರಂದು ಅಂತಾರಾಷ್ಟ್ರೀಯ ಗಣಿಗಾರಿಕೆ ಜಾಗೃತಿ ದಿನವನ್ನು ಆಚರಿಸಲು ನಿರ್ಧರಿಸಿತು. ಈ ನಿರ್ಣಯದಂತೆ 2006 ಏಪ್ರಿಲ್ 4 ರಂದು ಮೊದಲ ಬಾರಿಗೆ ಅಂತಾರಾಷ್ಟ್ರೀಯ ಗಣಿಗಾರಿಕೆ ಜಾಗೃತಿ ದಿನವನ್ನು ಆಚರಿಸಿತು. ಅಂದಿನಿಂದ ಪ್ರತಿ ವರ್ಷವು ಅಂತರಾಷ್ಟ್ರೀಯ ಗಣಿ ಜಾಗೃತಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.
ಇದನ್ನೂ ಓದಿ: ವಿಪರೀತ ಗಂಟಲು ಕೆರೆತವೇ, ಈ ಪದಾರ್ಥ ಸೇವಿಸಿದರೆ ನೋವೆಲ್ಲವು ಮಾಯಾ!
ಅಂತರಾಷ್ಟ್ರೀಯ ಗಣಿ ಜಾಗೃತಿ ದಿನದ ಆಚರಣೆಯ ಹಿಂದಿನ ಮುಖ್ಯ ಉದ್ದೇಶವೇನೆಂದರೆ, ಗಣಿಗಾರಿಕೆಯಂತಹ ಚಟುವಟಿಕೆಗಳಿಂದ ಸುತ್ತ ಮುತ್ತಲಿನ ಜನರಿಗೆ ಆಗುವ ಸಮಸ್ಯೆಗಳು ಹಾಗೂ ಪರಿಸರಕ್ಕೆ ಆಗುವ ಹಾನಿಯ ಬಗ್ಗೆ ಜಾಗೃತಿ ಮೂಡಿಸುವುದಾಗಿದೆ. ಗಣಿ ಜಾಗೃತಿ ದಿನದಂದು ಈ ಬಗ್ಗೆ ಅರಿವು ಮೂಡಿಸುವ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತದೆ.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ