AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Mother Language Day 2026: ಮಾತೃಭಾಷಾ ದಿನವನ್ನು ಆಚರಿಸುವುದೇಕೇ ಗೊತ್ತಾ?

ಇಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನ. ಈ ವಿಶೇಷ ದಿನವನ್ನು ಪ್ರಪಂಚದಾದ್ಯಂತ ಮಾತೃಭಾಷೆಗಳ ಸಂರಕ್ಷಣೆ ಮತ್ತು ಅಭಿವೃದ್ಧಿಗೆ ಸಮರ್ಪಿಸಲಾಗಿದೆ. ಈ ವಿಶೇಷ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು, ವಿಶ್ವ ಮಾತೃಭಾಷಾ ದಿನದ ಆಚರಣೆಯ ಹಿನ್ನೆಲೆ ಮತ್ತು ಉದ್ದೇಶವೇನು ಎಂಬುದರ ಸಂಕ್ಷಿಪ್ತ ಮಾಹಿತಿಯನ್ನು ತಿಳಿಯೋಣ ಬನ್ನಿ

International Mother Language Day 2026: ಮಾತೃಭಾಷಾ ದಿನವನ್ನು ಆಚರಿಸುವುದೇಕೇ ಗೊತ್ತಾ?
ಅಂತಾರಾಷ್ಟ್ರೀಯ ಮಾತೃಭಾಷಾ ದಿನImage Credit source: Pinterest
ಮಾಲಾಶ್ರೀ ಅಂಚನ್​
|

Updated on:Feb 21, 2026 | 10:05 AM

Share

ಮಾತೃ ಭಾಷೆ (Mother Language) ಕೇವಲ ಸಂವಹನ ಸಾಧನವಲ್ಲ, ಅದು ಸಂಸ್ಕೃತಿ  ಭಾವನೆಗಳ ಪ್ರತೀಕವಾಗಿದೆ. ಈ ಪ್ರಪಂಚದಾದ್ಯಂತ ಹಲವು ಭಾಷೆಗಳಿದ್ದು, ಪ್ರದೇಶದಿಂದ ಪ್ರದೇಶಕ್ಕೆ ವಿಭಿನ್ನ ಭಾಷೆಗಳನ್ನು ಮಾತನಾಡಲಾಗುತ್ತದೆ. ಆದರೆ ಇಂದು ಇಂಗ್ಲಿಷ್‌ ಭಾಷೆಗೆ ಮಾತ್ರ ಹೆಚ್ಚಿನ ಮಹತ್ವವನ್ನು ನೀಡಲಾಗುತ್ತಿದೆ. ಯುನೆಸ್ಕೋ ಪ್ರಕಾರ, ವಿಶ್ವಾದ್ಯಂತ ಸುಮಾರು 7,000 ಭಾಷೆಗಳಿದ್ದು, ಔಪಚಾರಿಕ ಶಿಕ್ಷಣದಲ್ಲಿ ಕೇವಲ 351 ಭಾಷೆಗಳನ್ನು ಮಾತ್ರ ಬಳಸಲಾಗುತ್ತದೆ. ಇನ್ನೂ ಜಾಗತೀಕರಣ, ನಗರೀಕರಣ ಮತ್ತು ಬದಲಾಗುತ್ತಿರುವ ಸಾಮಾಜಿಕ ರಚನೆಗಳಿಂದಾಗಿ, ಹೆಚ್ಚಿನ ಸಂಖ್ಯೆಯ ಭಾಷೆಗಳು ಅಳಿವಿನಂಚಿಗೆ ಸಾಗುತ್ತಿವೆ. ಹಾಗಾಗಿ ತಾಯ್ನುಡಿಯನ್ನು ರಕ್ಷಣೆ ಮಾಡಬೇಕು ಎನ್ನುವ ಉದ್ದೇಶದಿಂದ ಪ್ರತಿವರ್ಷ ಫೆಬ್ರವರಿ 21 ರಂದು ಅಂತಾರಾಷ್ಟ್ರೀಯ ಮಾತೃಭಾಷಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ಅಂತಾರಾಷ್ಟ್ರೀಯ ಮಾತೃಭಾಷಾ ದಿನದ ಇತಿಹಾಸವೇನು?

ಅಂತಾರಾಷ್ಟ್ರೀಯ ಮಾತೃಭಾಷಾ ದಿನವನ್ನು ನವೆಂಬರ್ 1999 ರಲ್ಲಿ ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ (UNESCO) ಸಾಮಾನ್ಯ ಸಭೆಯು ಘೋಷಿಸಿತು. ಬಾಂಗ್ಲಾದೇಶದ ಮಾತೃಭಾಷೆ ಬಂಗಾಳಿಯನ್ನು ಆಡಳಿತ ಭಾಷೆಯನ್ನಾಗಿ ಮಡಬೇಕೆಂದು ತಮ್ಮ ಪ್ರಾಣವನ್ನು ಮುಡಿಪಾಗಿಟ್ಟ ವಿದ್ಯಾರ್ಥಿಗಳ ನೆನಪಿಗಾಗಿ ಈ ದಿನದ ಆಚರಣೆ ಪ್ರಾರಂಭವಾಯಿತು.

ಅಂತಾರಾಷ್ಟ್ರೀಯ ಮಾತೃಭಾಷಾ ದಿನವನ್ನು ಏಕೆ ಆಚರಿಸಲಾಗುತ್ತದೆ?

ಅಂತಾರಾಷ್ಟ್ರೀಯ ಮಾತೃಭಾಷಾ ದಿನದ ಕಲ್ಪನೆಯು ಫೆಬ್ರವರಿ 21, 1952 ರಂದು ಬಂಗಾಳಿ ಭಾಷೆಯ ಮಾನ್ಯತೆಗಾಗಿ ನಡೆದ ಹೋರಾಟದಿಂದ ಹುಟ್ಟಿಕೊಂಡಿತು. ಬಾಂಗ್ಲಾದೇಶಿಗಳ ಹೋರಾಟವನ್ನು ಗುರುತಿಸಿ, ಭಾಷಾ ವೈವಿಧ್ಯತೆ ಮತ್ತು ಬಹುಭಾಷಾವಾದವನ್ನು ಉತ್ತೇಜಿಸಲು ಯುನೆಸ್ಕೋ 1999 ರಲ್ಲಿ ಫೆಬ್ರವರಿ 21 ಅನ್ನು ಅಂತರರಾಷ್ಟ್ರೀಯ ಮಾತೃಭಾಷಾ ದಿನವೆಂದು ಘೋಷಿಸಿತು. ವಿಶ್ವಸಂಸ್ಥೆಯು 2002 ರಲ್ಲಿ ಇದನ್ನು ಅನುಮೋದಿಸಿತು. ಅಂದಿನಿಂದ ಈ ವಿಶೇಷ ದಿನವನ್ನು ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ವಿಶ್ವ ಸಾಮಾಜಿಕ ನ್ಯಾಯ ದಿನದ ಆಚರಣೆ ಶುರುವಾದದ್ದು ಯಾವಾಗ? ಇಲ್ಲಿದೆ ಮಾಹಿತಿ

ಅಂತಾರಾಷ್ಟ್ರೀಯ ಮಾತೃಭಾಷಾ ದಿನದ ಮಹತ್ವವೇನು?

  • ಭಾಷೆಗಳ ಸಂರಕ್ಷಣೆ ಮತ್ತು ಪ್ರಚಾರವನ್ನು ಉತ್ತೇಜಿಸುವುದು.
  • ಬಹುಭಾಷಾ ಶಿಕ್ಷಣವನ್ನು ಪ್ರೋತ್ಸಾಹಿಸುವುದು ಮತ್ತು ಮಾತೃಭಾಷೆಯಲ್ಲಿ ಬೋಧನೆಯನ್ನು ಬಲಪಡಿಸುವುದು.
  • ಸ್ಥಳೀಯ ಭಾಷೆಗಳು ಮತ್ತು ಭಾಷಾ ಹಕ್ಕುಗಳ ರಕ್ಷಣೆಯನ್ನು ಖಚಿತಪಡಿಸುವುದು.
  • ಸಾಂಸ್ಕೃತಿಕ ಮತ್ತು ಭಾಷಾ ವೈವಿಧ್ಯತೆಗೆ ಗೌರವವನ್ನು ಉತ್ತೇಜಿಸುವುದು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:03 am, Sat, 21 February 26

ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಚಪ್ಪಾಳೆ ತಟ್ಟುವುದು ಯಾಕೆ? ಇದರ ಹಿಂದಿನ ರಹಸ್ಯವೇನು?
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಲ್ಲಿ ಮನ್ನಣೆ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
‘ಸೀತಾ ಪಯಣ’ ಸಿನಿಮಾ ನೋಡಿ ಎಳೆಎಳೆಯಾಗಿ ವಿಮರ್ಶೆ ತಿಳಿಸಿದ ಶಿವಣ್ಣ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಕನ್ನಡ ಚಿತ್ರರಂಗಕ್ಕೆ ಹೊಸ ವಿಲನ್ ಕಾರ್ತಿಕ್ ಮಹೇಶ್; ತನಿಷಾಗೆ ಖುಷಿಯೋ ಖುಷಿ
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಮುಡಾ ಬೆನ್ನತ್ತಿದ್ದ ಸ್ನೇಹಮಯಿ ಕೃಷ್ಣ ಅರೆಸ್ಟ್: ಮನೆಯಲ್ಲಿ ಏನೇನು ಸಿಕ್ತು?
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ಸಿಗರೇಟ್ ಸೇದಬೇಡಿ ಎಂದಿದ್ದಕ್ಕೆ ತನ್ನ ಬೈಕ್​​ಗೇ ಬೆಂಕಿ ಹಚ್ಚಿದ ಯುವಕ!
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ವಿಧವೆ ಮಹಿಳೆ ನೇಣಿಗೆ ಶರಣು, ಡೆತ್​​ನೋಟ್​​​ನಲ್ಲಿ ಪೊಲೀಸಪ್ಪನ ಕೃತ್ಯ ಬಯಲು
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಟ್ರಂಪ್ 'ಸ್ಟಾಂಡ್​ಅಪ್' ಕಾಮಿಡಿ; ಮುಜುಗರಕ್ಕೀಡಾದ ಪಾಕಿಸ್ತಾನದ ಪ್ರಧಾನಿ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಪುತ್ರಿಯ ಸಿನಿಮಾ ನೋಡಿ ಖುಷಿ ಪಟ್ಟ ಅರ್ಜುನ್ ಸರ್ಜಾ ದಂಪತಿ: ವಿಡಿಯೋ
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು
ಶಿವಾಜಿ ಜಯಂತಿಯಲ್ಲಿ ಕಲ್ಲು ತೂರಾಟ: ಶಾಂತಿ ಸಭೆಗೆ ಬಾರದ ಮುಸ್ಲಿಂ ಮುಖಂಡರು