AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Museum Day 2025 :ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನದ ಇತಿಹಾಸ, ಮಹತ್ವ ತಿಳಿಯಿರಿ

ನಮ್ಮ ಪೂರ್ವಜರು ಬಳಕೆ ಮಾಡುತ್ತಿದ್ದ ವಸ್ತುಗಳು, ಗತಕಾಲದ ಉಲ್ಲೇಖಗಳು, ಪುರಾತನ ಕಾಲದ ಅಪರೂಪದ ವಸ್ತುಗಳು ಕಾಣಸಿಗುವುದೇ ಈ ಮ್ಯೂಸಿಯಂಗಳಲ್ಲಿ. ಈ ವಸ್ತು ಸಂಗ್ರಹಾಲಯದ ಮಹತ್ವವನ್ನು ಸಾರುವ ಸಲುವಾಗಿ ಪ್ರತಿ ವರ್ಷ ಮೇ 18 ರಂದು ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವವೇನು? ಎನ್ನುವ ಮಾಹಿತಿ ಇಲ್ಲಿದೆ.

International Museum Day 2025 :ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನದ ಇತಿಹಾಸ, ಮಹತ್ವ ತಿಳಿಯಿರಿ
ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನImage Credit source: Getty Images
ಸಾಯಿನಂದಾ
| Updated By: ಪ್ರೀತಿ ಭಟ್​, ಗುಣವಂತೆ|

Updated on:May 17, 2025 | 8:49 PM

Share

ಕೆಲವರಿಗೆ ಪೂರ್ವಜರು ಬಳಕೆ ಮಾಡುತ್ತಿದ್ದ ಹಳೆಯ ಕಾಲದ ವಸ್ತುಗಳು, ಗತಕಾಲದ ಉಲ್ಲೇಖಗಳು, ಪುರಾತನ ಕಾಲದ ಅಪರೂಪದ ವಸ್ತುಗಳನ್ನು ನೋಡುವುದದು, ಅದರ ಬಗ್ಗೆ ತಿಳಿದು ಕೊಳ್ಳುವುದೆಂದರೆ ಇಷ್ಟ. ಹೀಗಾಗಿ ಆ ಬಗ್ಗೆ ಹೆಚ್ಚು ಆಸಕ್ತಿಯಿರುವವರು, ಹೆಚ್ಚಿನ ಅಧ್ಯಯನಕ್ಕಾಗಿ ವಸ್ತು ಸಂಗ್ರಹಾಲಯ (museum) ದತ್ತ ಹೋಗುತ್ತಾರೆ. ಈ ವಸ್ತುಸಂಗ್ರಹಾಲಯವು ಸಾಂಸ್ಕೃತಿಕ, ವೈಜ್ಞಾನಿಕ, ಚಾರಿತ್ರಿಕ ಮೌಲ್ಯವುಳ್ಳ ವಸ್ತುಗಳನ್ನು ಸಂಗ್ರಹಿಸುವುದು, ರಕ್ಷಿಸುವುದು ಮಾತ್ರವಲ್ಲದೇ ಪ್ರದರ್ಶಿಸುತ್ತವೆ. ಈ ಮ್ಯೂಸಿಯಂಗಳ ಮಹತ್ವವನ್ನು ತಿಳಿಸುವ ಸಲುವಾಗಿ ವಸ್ತುಸಂಗ್ರಹಾಲಯ ದಿನವನ್ನು ಮೀಸಲಿಡಲಾಗಿದೆ. ಹೀಗಾಗಿ ಪ್ರತಿ ವರ್ಷ ಮೇ 18 ಜಾಗತಿಕ ಮಟ್ಟದಲ್ಲಿ ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನ (international museum day) ವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನದ ಇತಿಹಾಸ

1977 ರಲ್ಲಿ ಇಂಟರ್ನ್ಯಾಷನಲ್ ಕೌನ್ಸಿಲ್ ಆಫ್ ಮ್ಯೂಸಿಯಂ (ICOM) ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನದ ವಾರ್ಷಿಕ ದಿನವನ್ನು ಆಚರಿಸುವುದಾಗಿ ಘೋಷಿಸಿತು. ಅಂದು ರಷ್ಯಾದ ಮಾಸ್ಕೋದಲ್ಲಿ ನಡೆದ ICOM ಜನರಲ್ ಅಸೆಂಬ್ಲಿಯಲ್ಲಿ ಈ ದಿನದ ನಿರ್ಣಯವನ್ನು ಅಂಗೀಕರಿಸಲಾಯಿತು. ಈ ದಿನದ ನಿರ್ಣಯದ ಬಳಿಕ ಪ್ರತಿ ವರ್ಷ ಮೇ 18 ರಂದು ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ : 5 ಕೋಟಿ ರೂ, ಬಿಎಂಡಬ್ಲ್ಯೂ ಕಾರು ಬೇಕಂತೆ, ಪತಿಯ ಮುಂದೆ ವಧುದಕ್ಷಿಣೆ ಬೇಡಿಕೆಯಿಟ್ಟ ವಾಯುಪಡೆಯ ಮಹಿಳಾ ಅಧಿಕಾರಿ

ಅಂತಾರಾಷ್ಟ್ರೀಯ ವಸ್ತುಸಂಗ್ರಹಾಲಯ ದಿನ ಮಹತ್ವ

ಈ ವಸ್ತುಸಂಗ್ರಹಾಲಯಗಳ ಪ್ರಾಮುಖ್ಯತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಈ ವಸ್ತುಸಂಗ್ರಹಾಲಯಗಳು ಜನರಿಗೆ ಗೊತ್ತಿಲ್ಲದ ಎಷ್ಟೋ ವಿಷಯಗಳು, ಹಳೆಯ ಕಾಲದ ವಸ್ತುಗಳ ಬಗ್ಗೆ ಮಾಹಿತಿ ನಿಡುತ್ತದೆ. ಹೀಗಾಗಿ ಈ ವಸ್ತುಸಂಗ್ರಹಾಲಯಗಳು ವಹಿಸುವ ಪ್ರಮುಖ ಪಾತ್ರದ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶವನ್ನು ಹೊಂದಿದೆ. ಈ ಅಂತಾರಾಷ್ಟ್ರೀಯ ವಸ್ತು ಸಂಗ್ರಹಾಲಯದ ವಿಶೇಷ ದಿನದಂದು ವಸ್ತು ಪ್ರದರ್ಶನ, ಕಾರ್ಯಾಗಾರ, ಸೆಮಿನಾರ್, ವರ್ಕ್ ಶಾಪ್ ಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:06 pm, Sat, 17 May 25