AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Olympic Day 2025: ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ದಿನಾಚರಣೆಯ ಇತಿಹಾಸ ಬಗ್ಗೆ ಗೊತ್ತಾ?

ಕ್ರೀಡೆಗಳು ನಮ್ಮನ್ನು ಫಿಟ್‌ ಮತ್ತು ಆರೋಗ್ಯಕರವಾಗಿರಿಸುವಲ್ಲಿ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ಕ್ರೀಡೆಗಳಿಂದ ಇಷ್ಟೆಲ್ಲಾ ಪ್ರಯೋಜನಗಳಿದ್ದರೂ, ಹೆಚ್ಚಿನವರು ಕ್ರೀಡೆಯಲ್ಲಿ ಆಸಕ್ತಿಯನ್ನು ಹೊಂದಿಲ್ಲ. ಆದ್ದರಿಂದ ಯುವ ಜನರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿಯನ್ನು ಬೆಳೆಸಲು ಪ್ರತಿವರ್ಷ ಜೂನ್‌ 23 ರಂದು ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ದಿನವನ್ನು ಆಚರಿಸಲಾಗುತ್ತದೆ. ಸ್ಪೋರ್ಟ್ಸ್‌ ಮತ್ತು ಫಿಟ್‌ನೆಸ್‌ಗೆ ಮೀಸಲಾಗಿರುವ ಈ ದಿನದ ಇತಿಹಾಸ ಏನೆಂಬುದನ್ನು ತಿಳಿಯೋಣ ಬನ್ನಿ.

International Olympic Day 2025: ಅಂತಾರಾಷ್ಟ್ರೀಯ ಒಲಿಂಪಿಕ್ಸ್‌ ದಿನಾಚರಣೆಯ ಇತಿಹಾಸ ಬಗ್ಗೆ ಗೊತ್ತಾ?
ಅಂತಾರಾಷ್ಟ್ರೀಯ ಒಲಿಂಪಿಕ್‌ ದಿನImage Credit source: Google
ಮಾಲಾಶ್ರೀ ಅಂಚನ್​
|

Updated on: Jun 22, 2025 | 9:03 PM

Share

ಕ್ರೀಡೆಗಳು (Sports) ನಮ್ಮ ಫಿಟ್‌ ಆಗಿರಿಸುವುದು ಮಾತ್ರವಲ್ಲದೆ ದೈಹಿಕ ಮತ್ತು ಆರೋಗ್ಯವನ್ನು ವೃದ್ಧಿಸಲು ಸಹಕಾರಿಯಾಗಿದೆ. ಹಾಗಾಗಿ ಪ್ರತಿಯೊಬ್ಬರೂ ಯಾವುದಾದರೊಂದು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವ ಮೂಲಕ ದೈಹಿಕವಾಗಿ ಸಧೃಡರಾಗಬೇಕು. ಹಾಗಾಗಿ ಯುವಜನರಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಬೆಳೆಸಲು , ಕ್ರೀಡಾ ಮೌಲ್ಯವನ್ನು ಬೆಳೆಸಲು, ಕ್ರೀಡಾಪಟುಗಳನ್ನು ಪ್ರೋತ್ಸಾಹಿಸಲು ಪ್ರತಿವರ್ಷ ಜೂನ್‌ 23 ರಂದು ಅಂತಾರಾಷ್ಟ್ರೀಯ ಒಲಿಂಪಿಕ್‌ (International Olympic Day)  ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ಅಂತಾರಾಷ್ಟ್ರೀಯ ಒಲಿಂಪಿಕ್ ದಿನದ ಇತಿಹಾಸ:

1894 ರ ಜೂನ್ 23 ರಂದು, ಒಲಿಂಪಿಕ್ ಕ್ರೀಡಾಕೂಟವನ್ನು ಆಯೋಜಿಸಲು ಸೋರ್ಬೊನ್ನೆ (ಪ್ಯಾರಿಸ್) ನಲ್ಲಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯನ್ನು ರಚಿಸಲಾಯಿತು. ಆಧುನಿಕ ಕ್ರೀಡೆಗಳನ್ನು ಸಂಘಟಿಸುವುದು, ಉತ್ತೇಜಿಸುವುದು ಈ ಸಮಿತಿಯ ಉದ್ದೇಶವಾಗಿತ್ತು. ಬಳಿಕ  ಆಧುನಿಕ ಒಲಿಂಪಿಕ್ ಕ್ರೀಡಾಕೂಟದ ಸ್ಥಾಪನೆಯ ಸ್ಮರಣಾರ್ಥವಾಗಿ ಅಂತಾರಾಷ್ಟ್ರೀಯ ಒಲಿಂಪಿಕ್‌ ಸಮಿತಿಯು ಅಂತಾರಾಷ್ಟ್ರೀಯ ಒಲಿಂಪಿಕ್ ದಿನವನ್ನು ಆಚರಿಸಲು ಮುಂದಾಯಿತು. 1948 ರಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಒಲಿಂಪಿಕ್‌ ದಿನವನ್ನು ಆಚರಿಸಲಾಯಿತು. ಅಂದಿನಿಂದ ಪ್ರತಿವರ್ಷ ಈ ದಿನವನ್ನು ಆಚರಿಸಲಾಗುತ್ತದೆ.

ಇದನ್ನೂ ಓದಿ: ಪರಿಸರ, ಆರೋಗ್ಯ ಎರಡಕ್ಕೂ ಪ್ರಯೋಜನಕಾರಿ ಸೈಕಲ್‌ ಸವಾರಿ; ವಿಶ್ವ ಬೈಸಿಕಲ್‌ ದಿನದ ಮಹತ್ವ ತಿಳಿಯಿರಿ

ಇದನ್ನೂ ಓದಿ
Image
ಭೂಮಿಯ ಶ್ವಾಸಕೋಶವೆಂದೇ ಕರೆಯಲ್ಪಡುವ ಮಳೆಕಾಡನ್ನು ಸಂರಕ್ಷಿಸೋಣ
Image
ಜೂನ್‌ 21 ರಂದೇ ಯೋಗ ದಿನಾಚರಣೆ ಆಚರಿಸುವುದರ ಹಿಂದಿದೆ ಅಚ್ಚರಿಯ ಕಾರಣ
Image
ಪಿಕ್ನಿಕ್‌ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು?
Image
ಪರಿಸರ, ಆರೋಗ್ಯ ಎರಡಕ್ಕೂ ಪ್ರಯೋಜನಕಾರಿ ಸೈಕಲ್‌ ಸವಾರಿ

ಅಂತಾರಾಷ್ಟ್ರೀಯ ಒಲಿಂಪಿಕ್ ದಿನದ ಮಹತ್ವ:

ಕ್ರೀಡಾ ಮನೋಭಾವವನ್ನು ಉತ್ತೇಜಿಸಲು ಅಂತಾರಾಷ್ಟ್ರೀಯ ಒಲಿಂಪಿಕ್ ದಿನವನ್ನು ಆಚರಿಸಲಾಗುತ್ತದೆ. ಕ್ರೀಡೆಗಳ ಮೂಲಕ, ನಾವು ಉತ್ತಮ ಭವಿಷ್ಯದತ್ತ ಸಾಗಬಹುದು ಹಾಗಾಗಿ ಈ ದಿನವು ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಉತ್ತೇಜಿಸುವ ಮತ್ತು ಏಕತೆ ಮತ್ತು ಸ್ನೇಹವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ. ಅಂತಾರಾಷ್ಟ್ರೀಯ ಒಲಿಂಪಿಕ್ ದಿನವು ಕ್ರೀಡೆಗಳ ಕಡೆಗೆ ಸಮರ್ಪಣೆ, ಗೌರವ ಮತ್ತು ಸಮಾನತೆಯ ಮನೋಭಾವವನ್ನು ಅಳವಡಿಸಿಕೊಳ್ಳಲು ನಮಗೆ ಸ್ಫೂರ್ತಿ ನೀಡುತ್ತದೆ. ಕ್ರೀಡೆ ಆರೋಗ್ಯಕರ ಜೀವನಶೈಲಿ ಮತ್ತು ಸಹೋದರತ್ವದ ಸಂಕೇತವಾಗಿದೆ. ಕ್ರೀಡೆಯ ಈ ಮಹತ್ವದ ಬಗ್ಗೆ ಈ ವಿಶೇಷ ದಿನದಂದು ಜಾಗೃತಿ ಮೂಡಿಸಲಾಗುತ್ತದೆ.

ಅಲ್ಲದೆ ಅಂತಾರಾಷ್ಟ್ರೀಯ ಒಲಿಂಪಿಕ್ ದಿನವು ಯುವ ಕ್ರೀಡಾಪಟುಗಳಿಗೆ ಸ್ಫೂರ್ತಿ ನೀಡಲು ಮತ್ತು ಅವರ ಸಾಧನೆಗಳನ್ನು ಆಚರಿಸಲು ಒಂದು ವೇದಿಕೆಯನ್ನು ಒದಗಿಸುತ್ತದೆ. ಮತ್ತು ಈ ದಿನವು ಯುವಜನರು ತಮ್ಮ ಕ್ರೀಡಾ ಕನಸುಗಳನ್ನು ಮುಂದುವರಿಸಲು ಪ್ರೋತ್ಸಾಹಿಸುತ್ತದೆ.

ಇನ್ನಷ್ಟು ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅರ್ಧಕ್ಕೆ ಕೈಕೊಟ್ಟ ಇಂಡಿಗೋ ವಿಮಾನ: ಅಯ್ಯಪ್ಪ ಮಾಲಾಧಾರಿಗಳು ಕಂಗಾಲು
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ