International Students Day 2024:ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಿನ ಏಕೆ ಆಚರಿಸಲಾಗುತ್ತದೆ? ಆಚರಣೆಯ ಹಿಂದಿನ ಕಥೆ

ವಿಶ್ವದಾದ್ಯಂತ ಇರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣದ ಮೌಲ್ಯವನ್ನು ಒತ್ತಿ ಹೇಳಲು ಹಾಗೂ ವಿದ್ಯಾರ್ಥಿಗಳಿಗಿರುವ ಎಲ್ಲಾ ಅಡೆತಡೆಗಳನ್ನು ನಿವಾರಿಸಲು, ಸಾಂಸ್ಕೃತಿಕ ವಿಭಾಗಗಳಾದ್ಯಂತ ಬಂಧಗಳನ್ನು ರಚಿಸಲು ಪ್ರತಿವರ್ಷ ನವೆಂಬರ್‌ 17 ರಂದು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಗುತ್ತಿದೆ. ಈ ವಿಶೇಷ ದಿನದ ಆಚರಣೆಯ ಹಿಂದಿನ ಕಥೆ ಮತ್ತು ಮಹತ್ವದ ಬಗ್ಗೆ ತಿಳಿಯೋಣ.

International Students Day 2024:ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಿನ ಏಕೆ ಆಚರಿಸಲಾಗುತ್ತದೆ? ಆಚರಣೆಯ ಹಿಂದಿನ ಕಥೆ
International Students Day 2024
Follow us
ಮಾಲಾಶ್ರೀ ಅಂಚನ್​
| Updated By: ಅಕ್ಷತಾ ವರ್ಕಾಡಿ

Updated on:Nov 17, 2024 | 12:08 PM

ಶಿಕ್ಷಣವು ಸಮಾಜವನ್ನು ಬದಲಾಯಿಸುವ ಪ್ರಮುಖ ಅಸ್ತ್ರವಾಗಿದೆ. ಹೌದು ನಾವು ನಮ್ಮ ಭವಿಷ್ಯವನ್ನು ಉತ್ತಮ ಮತ್ತು ಉಜ್ವಲವಾಗಿ ರೂಪಿಸಲು ಬಯಸಿದರೆ ಶಿಕ್ಷಣವನ್ನು ಪಡೆಯುವುದು ಬಹಳ ಮುಖ್ಯ. ಏಕೆಂದರೆ ಶಿಕ್ಷಣವು ವ್ಯಕ್ತಿಯ ಜೀವನ ಗುಣಮಟ್ಟವನ್ನು ಸುಧಾರಿಸುವುದು ಮಾತ್ರವಲ್ಲದೆ ಆತನ ಜ್ಞಾನ, ಕೌಶಲ್ಯ, ವ್ಯಕ್ತಿತ್ವವನ್ನು ಅಭಿವೃದ್ಧಿಪಡಿಸುತ್ತದೆ. ಅಷ್ಟೇ ಅಲ್ಲದೆ ದೇಶದ ಅಭಿವೃದ್ಧಿಯು ವಿದ್ಯಾರ್ಥಿಗಳ ಜ್ಞಾನವನ್ನೇ ಅವಲಂಬಿಸಿರುತ್ತದೆ. ಈ ನಿಟ್ಟಿನಲ್ಲಿ ಪ್ರಪಂಚದಾದ್ಯಂತ ಇರುವ ಎಲ್ಲಾ ವಿದ್ಯಾರ್ಥಿಗಳಿಗೆ ಶಿಕ್ಷಣದ ಮೌಲ್ಯವನ್ನು ಒತ್ತಿ ಹೇಳಲು ಪ್ರತಿವರ್ಷ ನವೆಂಬರ್‌ 17 ರಂದು ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ಆಚರಣೆಯ ಹಿಂದಿನ ಕಥೆಯ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲಿದೆ.

ಅಂತಾರಾಷ್ಟ್ರೀಯ ವಿದ್ಯಾರ್ಥಿಗಳ ದಿನವನ್ನು ಏಕೆ ಆಚರಿಸಲಾಗುತ್ತದೆ?

ಅಂತರಾಷ್ಟ್ರೀಯ ವಿದ್ಯಾರ್ಥಿಗಳ ದಿನವು ಪ್ರಪಂಚದಾದ್ಯಂತದ ವಿದ್ಯಾರ್ಥಿಗಳ ನಡುವಿನ ಬಹುಸಂಸ್ಕೃತಿ, ವೈವಿಧ್ಯತೆ ಮತ್ತು ಬೆಂಬಲದ ಆಚರಣೆಯಾಗಿದೆ. ಈ ದಿನದ ಇತಿಹಾಸವು ಜೆಕೊಸ್ಲೊವಾಕಿಯಾದ ರಾಜಧಾನಿ ಪ್ರೇಗ್‌ಗೆ ಸಂಬಂಧಿಸಿದೆ. 1939 ರಲ್ಲಿ, ಜೆಕೊಸ್ಲೊವಾಕಿಯಾದ ಕೆಲವು ಭಾಗಗಳನ್ನು ನಾಜಿಗಳು ಆಳುತ್ತಿದ್ದರು. ಆ ಸಮಯದಲ್ಲಿ ಇವರು ಪ್ರೇಗ್‌ ವಿಶ್ವವಿದ್ಯಾನಿಲಯದ ಮೇಲೂ ದಾಳಿಯನ್ನು ಮಾಡಿದ್ದರು. ಈ ಕಾರಣದಿಂದ ಈ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನಾಜಿಗಳ ವಿರುದ್ಧ ಪ್ರತಿಭಟನೆಯನ್ನು ಪ್ರದರ್ಶಿಸಿದರು. ಈ ಪ್ರತಿಭಟನೆಯ ಸಮಯದಲ್ಲಿ, ನಾಜಿಗಳು ಹಾರಿಸಿದ ಇವರುಗಳು ಮೇಲೆ ಗುಂಡಿನ ದಾಳಿಯನ್ನು ನಡೆಸಿದ್ದು, ಈ ದಾಳಿಯಲ್ಲಿ ಒಬ್ಬ ವಿದ್ಯಾರ್ಥಿ ಮೃತಪಟ್ಟನು. ಇದಾದ ನಂತರವೂ ಪ್ರತಿಭಟನೆ ಮುಂದುವರೆಯಿತು. ಪ್ರತಿಭಟನೆಯನ್ನು ಹತ್ತಿಕ್ಕಲು ನವೆಂಬರ್ 17, 1939 ರಂದು, ನಾಜಿ ಸೈನಿಕರು ಸುಮಾರು 1 ಸಾವಿರಷ್ಟು ವಿದ್ಯಾರ್ಥಿಗಳನ್ನು ಬಂಧಿಸಿದರು. ಈ ಪೈಕಿ ಒಂಬತ್ತು ವಿದ್ಯಾರ್ಥಿಗಳು ನೇಣಿಗೆ ಶರಣಾದರು. ಈ ಘಟನೆಯ ನಂತರ ಅಲ್ಲಿದ್ದ ಎಲ್ಲ ಶಿಕ್ಷಣ ಸಂಸ್ಥೆಗಳೂ ಬಂದ್ ಆಗಿದ್ದವು. ಹೀಗೆ 1939 ರಲ್ಲಿ ನಾಜಿಗಳ ದಾಳಿಯ ಸಂದರ್ಭದಲ್ಲಿ ಪ್ರೇಗ್‌ ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ತೋರಿದ ಶೌರ್ಯವನ್ನು ಸ್ಮರಿಸಲು ಅಂತರಾಷ್ಟ್ರೀಯ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ವಿದ್ಯಾರ್ಥಿಗಳ ದಿನದ ಇತಿಹಾಸ:

1939 ರಲ್ಲಿ ಪ್ರೇಗ್ ವಿಶ್ವವಿದ್ಯಾನಿಲಯದ ಮೇಲೆ ನಾಜಿ ದಾಳಿಯ ಸಂದರ್ಭದಲ್ಲಿ ಅಲ್ಲಿನ ವಿದ್ಯಾರ್ಥಿಗಳು ನಾಜಿಗಳ ವಿರುದ್ಧ ತೋರಿದ ಧೈರ್ಯ ಮತ್ತು ಶೌರ್ಯವನ್ನು ನೆನಪಿಟ್ಟುಕೊಳ್ಳಲು ನವೆಂಬರ್ 17 ರಂದು ಅಂತರಾಷ್ಟ್ರೀಯ ವಿದ್ಯಾರ್ಥಿ ದಿನವನ್ನು ಆಚರಿಸಲಾಗುತ್ತದೆ. ಮೊದಲು ಈ ವಿಶೇಷ ದಿನವನ್ನು 1941 ರಲ್ಲಿ ಲಂಡನ್‌ನ ಅಂತರಾಷ್ಟ್ರೀಯ ವಿದ್ಯಾರ್ಥಿ ಪರಿಷತ್ತಿನಲ್ಲಿ ಆಚರಿಸಲಾಯಿತು. ಇಲ್ಲಿ ವಿದ್ಯಾರ್ಥಿಗಳೇ ಅಂತರಾಷ್ಟ್ರೀಯ ವಿದ್ಯಾರ್ಥಿಗಳ ದಿನವನ್ನು ಪ್ರಾರಂಭಿಸಲು ನಿರ್ಧರಿಸಿದ್ದರು. ಅಂದಿನಿಂದ ಪ್ರತಿವರ್ಷ ಈ ವಿಶೇಷ ದಿನವನ್ನು ಪ್ರಪಂಚದಾದ್ಯಂತ ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಕನಕದಾಸರ ಜೀವನಸಾರ ಹೇಳುವ ಹೇಳಿಕೆಗಳನ್ನು ಹಂಚಿಕೊಂಡು ಶುಭಾಶಯ ತಿಳಿಸಿ

ಅಂತರಾಷ್ಟ್ರೀಯ ವಿದ್ಯಾರ್ಥಿಗಳ ದಿನದ ಮಹತ್ವ:

ವಿದ್ಯಾರ್ಥಿಗಳೇ ನಮ್ಮ ಭವಿಷ್ಯ. ವಿದ್ಯಾರ್ಥಿಗಳು ಭವಿಷ್ಯದಲ್ಲಿ ದೇಶ ಮತ್ತು ಜಗತ್ತನ್ನು ಮುನ್ನಡೆಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತಾರೆ. ಪ್ರತಿಯೊಂದು ದೇಶದ ಅಭಿವೃದ್ಧಿಯು ಅವರ ಜ್ಞಾನವನ್ನು ಅವಲಂಬಿಸಿರುತ್ತದೆ. ಈ ನಿಟ್ಟಿನಲ್ಲಿ ಶಿಕ್ಷಣದ ಮಹತ್ವದ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಲು ಅಂತರಾಷ್ಟ್ರೀಯ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು, ಪ್ರಪಂಚದಾದ್ಯಂತದ ವಿದ್ಯಾರ್ಥಿಗಳಿಂದ ವಿಶೇಷ ಕಾರ್ಯಕ್ರಮಗಳು ಮತ್ತು ಚಟುವಟಿಕೆಗಳನ್ನು ಮಾಡಲಾಗುತ್ತದೆ. ಈ ದಿನದಂದು ವಿದ್ಯಾರ್ಥಿಗಳ ಹಕ್ಕುಗಳ ಬಗ್ಗೆಯೂ ಮಾತನಾಡಲಾಗುತ್ತದೆ ಮತ್ತು ವಿದ್ಯಾರ್ಥಿಗಳಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ಕೂಡಾ ನಡೆಸಲಾಗುತ್ತದೆ. ಹೀಗೆ ವಿಶ್ವದಾದ್ಯಂತ ವಿದ್ಯಾರ್ಥಿಗಳ ನಡುವೆ ಸಾಂಸ್ಕೃತಿಕ ವಿಭಾಗಗಳಾದ್ಯಂತ ಬಂಧಗಳನ್ನು ಬೆಳೆಸಲು, ವಿದ್ಯಾರ್ಥಿಗಳ ಹಕ್ಕುಗಳ ಬಗ್ಗೆ ಅರಿವು ಮೂಡಿಸಲು ಅನೇಕ ಸಂಸ್ಥೆಗಳು ಮತ್ತು ಅಂತರಾಷ್ಟ್ರೀಯ ವಿದ್ಯಾರ್ಥಿ ಸಂಘಟನೆಗಳು ಈ ದಿನವನ್ನು ಆಚರಿಸುತ್ತದೆ. ಅಷ್ಟೇ ಅಲ್ಲದೆ ಈ ದಿನವು ಜೆಕ್ ರಿಪಬ್ಲಿಕ್ ಮತ್ತು ಸ್ಲೋವಾಕಿಯಾದಲ್ಲಿ ಸಾರ್ವಜನಿಕ ರಜಾದಿನವಾಗಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:07 pm, Sun, 17 November 24

ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಎಸ್​ಎಸ್​ಎಲ್​ಸಿಯಲ್ಲಿ ಫೇಲ್ ಆಗಿದ್ದಕ್ಕೆ ವಿಗ್ರಹ ವಿರೂಪಗೊಳಿಸಿದ ಬಾಲಕ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಪ್ರಧಾನಿ ಮೋದಿಯನ್ನು ಆತ್ಮೀಯತೆಯಿಂದ ಬರಮಾಡಿಕೊಂಡ ನೈಜೀರಿಯಾದ ಜನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಮಣಿಪುರ ಹಿಂಸಾಚಾರ, ಮುಖ್ಯಮಂತ್ರಿ, ಶಾಸಕರ ಮನೆಗೆ ನುಗ್ಗಲು ಯತ್ನ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ಪತಿ-ಪತ್ನಿ ಒಂದೇ ರಾಶಿಯವರಾಗಿದ್ದರೆ ಏನರ್ಥ? ವಿಡಿಯೋ ನೋಡಿ
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
ವಾರ ಭವಿಷ್ಯ: ನವೆಂಬರ್​ 18 ರಿಂದ 24ರವರೆಗೆ ವಾರ ಭವಿಷ್
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
Nithya Bhavishya: ಈ ರಾಶಿಯವರಿಗೆ ಇಂದು ನಿವೇಶನ ಖರೀದಿಸುವ ಯೋಗವಿದೆ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ರೇಷನ್‌ ಕಾರ್ಡ್ ರದ್ದಾಗಿರುವುದಕ್ಕೆ ಸರ್ಕಾರದ ವಿರುದ್ಧ ಮಹಿಳೆಯರು ಕಿಡಿ
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
ವಕ್ಫ್ ವಿವಾದದ ಬಗ್ಗೆ ಯಡಿಯೂರಪ್ಪ-ವಿಜಯೇಂದ್ರಗೆ ಕಾಳಜಿಯಿಲ್ಲ: ಯತ್ನಾಳ್
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
‘ಶ್... ಬಾಯ್ಮುಚ್ಚು‘: ಸುಳ್ಳು ಹೇಳಿದ ಚೈತ್ರಾ ಮೇಲೆ ಕಿಚ್ಚ ಕೆಂಡ
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್
ಸ್ಟಾರ್ ಪ್ರಚಾರಕ ಅಲ್ಲ, ಹಾಗಾಗೇ ಚನ್ನಪಟ್ಟಣದಲ್ಲಿ ಪ್ರಚಾರ ಮಾಡಿಲ್ಲ:ಯತ್ನಾಳ್