AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Tea Day 2025: ಇಂದು ಅಂತಾರಾಷ್ಟ್ರೀಯ ಚಹಾ ದಿನ; ಈ ದಿನದ ಆಚರಣೆಯ ಉದ್ದೇಶವನ್ನು ತಿಳಿಯಿರಿ

ನಮ್ಮಲ್ಲಿ ಹಲವರ ದಿನ ಶುರುವಾಗೋದೇ ಒಂದು ಕಪ್‌ ಚಹಾದೊಂದಿದೆ. ಟೀ ಕುಡಿಲಿಲ್ಲ ಅಂದ್ರೆ ದಿನವೇ ಮುಂದೆ ಸಾಗದು ಎಂದು ಹಲವರು ಹೇಳುತ್ತಿರುತ್ತಾರೆ. ಇದು ಎನರ್ಜಿ ನೀಡುವುದು ಮಾತ್ರವಲ್ಲದೆ ಸೀಮಿತ ಪ್ರಮಾಣದಲ್ಲಿ ಚಹಾ ಕುಡಿಯುವುದರಿಂದ ಹಲವು ಪ್ರಯೋಜನಗಳು ಕೂಡ ಇವೆ. ಈ ಪ್ರಯೋಜನಗಳ ಬಗ್ಗೆ ತಿಳಿಸಲು, ಚಹಾ ಬೆಳೆಯನ್ನು ಉತ್ತೇಜಿಸಲು, ಚಹಾದ ಇತಿಹಾಸ, ಸಂಸ್ಕೃತಿ ಮತ್ತು ಅದರ ಆರ್ಥಿಕ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಮೇ 21 ರಂದು ಅಂತಾರಾಷ್ಟ್ರೀಯ ಚಹಾ ದಿನವನ್ನು ಆಚರಿಲಾಗುತ್ತದೆ.

International Tea Day 2025: ಇಂದು ಅಂತಾರಾಷ್ಟ್ರೀಯ ಚಹಾ ದಿನ; ಈ ದಿನದ ಆಚರಣೆಯ ಉದ್ದೇಶವನ್ನು ತಿಳಿಯಿರಿ
ಅಂತಾರಾಷ್ಟ್ರೀಯ ಚಹಾ ದಿನImage Credit source: Getty Images
ಮಾಲಾಶ್ರೀ ಅಂಚನ್​
|

Updated on: May 21, 2025 | 9:33 AM

Share

ಚಹಾ (Tea) ಅಂದ್ರೆ ಬಹುತೇಕ ಎಲ್ಲರಿಗೂ ಇಷ್ಟ. ಹಲವರ ದಿನ ಪ್ರಾರಂಭವಾಗುವುದೇ ಒಂದು ಕಪ್‌ ಬಿಸಿ ಬಿಸಿ ಟೀ ಕುಡಿಯುವುದರೊಂದಿಗೆ. ಹೌದು ಚಹಾ ಕುಡಿದ ಮೇಲೆಯೇ ಇಡೀ ದೇಹ ಹಾಗೂ ಮನಸ್ಸಿಗೆ ಒಂದು ಆಹ್ಲಾದ ಬರೋದು. ಇದೇ ಕಾರಣಕ್ಕೆ ಹೆಚ್ಚಿನವರು ಬೆಳಗ್ಗೆ ಎದ್ದ ತಕ್ಷಣ ಒಂದು ಕಪ್‌ ಟೀ ಕುಡಿಯೋದು. ಚಹಾ ಕುಡಿಯುವುದರಿಂದ ಹಲವು ಆರೋಗ್ಯ ಪ್ರಯೋಜನಗಳು ಸಿಗುವುದರ ಜೊತೆಗೆ ಈ ಚಹಾದಿಂದ ಅನೇಕರು ತಮ್ಮ ಬದುಕು ಕಟ್ಟಿಕೊಟ್ಟಿದ್ದಾರೆ. ಒಟ್ಟಾರೆಯಾಗಿ ಚಹಾದ ಇತಿಹಾಸ, ಸಂಸ್ಕೃತಿ ಮತ್ತು ಅದರ ಆರ್ಥಿಕ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮೇ 21 ರಂದು ಅಂತಾರಾಷ್ಟ್ರೀಯ ಚಹಾ (International Tea Day) ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ಅಂತಾರಾಷ್ಟ್ರೀಯ ಚಹಾ ದಿನದ ಇತಿಹಾಸ:

ಅಂತಾರಾಷ್ಟ್ರೀಯ ಚಹಾ ದಿನದ ಮೊದಲ ಆಚರಣೆಯು 2005 ರಲ್ಲಿ ಪ್ರಾರಂಭವಾಯಿತು, ಇದನ್ನು ಏಷ್ಯಾ ಮತ್ತು ಆಫ್ರಿಕಾದ ಕಾರ್ಮಿಕ ಸಂಘಗಳು, ಸಣ್ಣ ಚಹಾ ಉತ್ಪಾದಕರು ಮತ್ತು ಸಾಮಾಜಿಕ ಸಂಸ್ಥೆಗಳು ಬೆಂಬಲಿಸಿದವು. ಚಹಾ ಉತ್ಪಾದಕರಿಗೆ ನ್ಯಾಯಯುತ ಬೆಲೆ ಮತ್ತು ಕಾರ್ಮಿಕರ ಜೀವನಮಟ್ಟ ಮತ್ತು ವೇತನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅದರ ಗುರಿಯಾಗಿತ್ತು. ನಂತರ 2015 ರಲ್ಲಿ, ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು ವಿಶ್ವಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಚಹಾ ದಿನವನ್ನು ಆಚರಿಸಲು ಅಧಿಕೃತವಾಗಿ ಪ್ರಸ್ತಾಪಿಸಿತು. ಆ ಬಳಿಕ ಅಂತರರಾಷ್ಟ್ರೀಯ ಚಹಾ ದಿನವನ್ನು ಮೊದಲ ಬಾರಿಗೆ ಮೇ 21, 2020 ರಂದು ಆಚರಿಸಲಾಯಿತು. ಅಂದಿನಿಂದ ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸುವುದ ಹಿಂದಿನ ಕಾರಣವೇನು?

ಇದನ್ನೂ ಓದಿ
Image
ಭಯೋತ್ಪಾದನಾ ವಿರೋಧಿ ದಿನವನ್ನು ಆಚರಿಸುವುದ ಹಿಂದಿನ ಕಾರಣವೇನು?
Image
ಸಾರಾ ತೆಂಡೂಲ್ಕರ್ ಕೇಶ ಸೌಂದರ್ಯದ ರಹಸ್ಯ ಏನು ಗೊತ್ತಾ?
Image
ಪ್ರತಿದಿನ ಈ 6 ಆಹಾರ ಸೇವನೆ ಮಾಡಿ, ಹೃದಯಕ್ಕೆ ರಕ್ಷಣೆಯಾಗಿ ನಿಲ್ಲುತ್ತದೆ
Image
ಈ ಆಪ್ಟಿಕಲ್‌ ಇಲ್ಯೂಷನ್‌ ಚಿತ್ರ ನೋಡಿ ನಿಮ್ಮ ರಹಸ್ಯ ವ್ಯಕ್ತಿತ್ವ ತಿಳಿಯಿರಿ

ಅಂತಾರಾಷ್ಟ್ರೀಯ ಚಹಾ ದಿನದ ಮಹತ್ವ:

ಚಹಾವು ದೀರ್ಘ ಇತಿಹಾಸವನ್ನು ಹೊಂದಿದೆ ಮತ್ತು ಇದು  ವಿವಿಧ ದೇಶಗಳ ಸಂಸ್ಕೃತಿಗಳಲ್ಲಿ ಆಳವಾಗಿ ಬೇರೂರಿದೆ.  ಚಹಾ ಜನಪ್ರಿಯ ಪಾನೀಯ ಮಾತ್ರವಲ್ಲದೆ, ಭಾರತದಂತಹ ದೇಶಗಳಲ್ಲಿ ಸಾಮಾಜಿಕ ಪದ್ಧತಿಗಳು, ಸಮಾರಂಭಗಳು ಮತ್ತು ಆತಿಥ್ಯದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಪ್ರಪಂಚದಾದ್ಯಂತ, ವಿಶೇಷವಾಗಿ ಚಹಾ ಬೆಳೆಯುವ ಪ್ರದೇಶಗಳಲ್ಲಿ ಲಕ್ಷಾಂತರ ಜನರಿಗೆ ಚಹಾ ಉದ್ಯಮವು ಜೀವನೋಪಾಯದ ಪ್ರಮುಖ ಮೂಲವಾಗಿದ್ದು, ಚಹಾ ಕ್ಷೇತ್ರದ ಆರ್ಥಿಕ ಮೌಲ್ಯವನ್ನು ಗುರುತಿಸುವ ಮತ್ತು ಸುಸ್ಥಿರ ಚಹಾ ಉತ್ಪಾದನೆ, ಚಹಾ ವ್ಯಾಪಾರದ ಸುಸ್ಥಿರತೆ, ಉತ್ಪಾದನೆ, ಕಾರ್ಮಿಕರಿಗೆ ನ್ಯಾಯಯುತ ವೇತನವನ್ನು ಖಚಿತಪಡಿಸುವುದು ಮತ್ತು ಚಹಾ ಬೆಳೆಯುವ ಪ್ರದೇಶಗಳಲ್ಲಿ ಸಾಮಾಜಿಕ ಅಭಿವೃದ್ಧಿಯನ್ನು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿದೆ. ಅಲ್ಲದೆ ಈ ದಿನ ಚಹಾ ಸೇವನೆಯ ಸಂಭಾವ್ಯ ಆರೋಗ್ಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ