AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Tea Day 2026: ಚಹಾದ ಹಿತಮಿತ ಸೇವನೆಯಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ನೋಡಿ

ಟೀ ಅಂದ್ರೆ ಬಹುತೇಕ ಹೆಚ್ಚಿನವರಿಗೆ ಸಖತ್‌ ಇಷ್ಟ. ಅನೇಕರು ರಿಫ್ರೆಶ್‌ಮೆಂಟ್‌ಗೆಂದು ಪ್ರತಿನಿತ್ಯ ಬೆಳಗ್ಗೆ, ಸಂಜೆ ತಪ್ಪದೆ ಟೀ ಸೇವನೆ ಮಾಡುತ್ತಾರೆ. ಒಂದು ಕಪ್‌ ಚಹಾ ಎನರ್ಜಿ ನೀಡುವುದು ಮಾತ್ರವಲ್ಲದೆ, ಇದರ ಹಿತಮಿತ ಸೇವನೆಯಿಂದ ಸಾಕಷ್ಟು ಆರೋಗ್ಯ ಪ್ರಯೋಜನಗಳೂ ಇವೆ. ಟೀ ಯ ಈ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಸಲು, ಚಹಾದ ಇತಿಹಾಸ, ಸಂಸ್ಕೃತಿ ಮತ್ತು ಅದರ ಆರ್ಥಿಕ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಪ್ರತಿವರ್ಷ ಮೇ 21 ರಂದು ಅಂತಾರಾಷ್ಟ್ರೀಯ ಚಹಾ ದಿನವನ್ನು ಆಚರಿಸಲಾಗುತ್ತದೆ.

International Tea Day 2026: ಚಹಾದ ಹಿತಮಿತ ಸೇವನೆಯಿಂದ ಏನೆಲ್ಲಾ ಆರೋಗ್ಯ ಪ್ರಯೋಜನಗಳು ಲಭಿಸುತ್ತವೆ ನೋಡಿ
ಅಂತಾರಾಷ್ಟ್ರೀಯ ಚಹಾ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: May 21, 2026 | 10:13 AM

Share

ಚಹಾ (tea) ಎಂದರೆ ಬಹುತೇಕರಿಗೆ ಅಮೃತವಿದ್ದಂತೆ. ಈ ಟೀ ಇಲ್ಲದೆ ಅವರ ದಿನವೇ ಆರಂಭವಾಗೋದಿಲ್ಲ. ಒಂದು ಕಪ್‌ ಚಹಾ ಕುಡಿಯುವುದರಿಂದ ನಮ್ಮ ಮನಸ್ಸು ಮತ್ತು ದೇಹ ಉಲ್ಲಾಸಗೊಳ್ಳುತ್ತದೆ. ಅದಕ್ಕಾಗಿಯೇ ಹೆಚ್ಚಿನವರು ಪ್ರತಿನಿತ್ಯ ಟೀ ಕುಡಿಯುತ್ತಾರೆ. ಈ ಟೀ ಮನಸ್ಸು ದೇಹವನ್ನು ರಿಫ್ರೆಶ್‌ ಮಾಡೋದು ಮಾತ್ರವಲ್ಲ, ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ಹೀಗೆ ದೀರ್ಘ ಇತಿಹಾಸವನ್ನು ಹೊಂದಿರುವ ಹಾಗೂ ವಿವಿಧ ದೇಶಗಳ ಸಂಸ್ಕೃತಿಗಳಲ್ಲಿ ಆಳವಾಗಿ ಬೇರೂರಿರುವ  ಚಹಾದ ಇತಿಹಾಸ ಸಂಸ್ಕೃತಿ ಮತ್ತು ಅದರ ಆರ್ಥಿಕ ಮಹತ್ವ ಹಾಗೂ ಚಹಾದ ಆರೋಗ್ಯ ಪ್ರಯೋಜನಗಳ ಬಗ್ಗೆ ಜನರಿಗೆ ತಿಳಿಸಲು ಪ್ರತಿವರ್ಷ ಮೇ 21 ರಂದು ಅಂತಾರಾಷ್ಟ್ರೀಯ ಚಹಾ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ಅಂತಾರಾಷ್ಟ್ರೀಯ ಚಹಾ ದಿನದ ಇತಿಹಾಸವೇನು?

ಅಂತಾರಾಷ್ಟ್ರೀಯ ಚಹಾ ದಿನದ ಮೊದಲ ಆಚರಣೆಯು 2005 ರಲ್ಲಿ ಪ್ರಾರಂಭವಾಯಿತು, ಇದನ್ನು ಏಷ್ಯಾ ಮತ್ತು ಆಫ್ರಿಕಾದ ಕಾರ್ಮಿಕ ಸಂಘಗಳು, ಸಣ್ಣ ಚಹಾ ಉತ್ಪಾದಕರು ಮತ್ತು ಸಾಮಾಜಿಕ ಸಂಸ್ಥೆಗಳು ಬೆಂಬಲಿಸಿದವು. ಚಹಾ ಉತ್ಪಾದಕರಿಗೆ ನ್ಯಾಯಯುತ ಬೆಲೆ ಮತ್ತು ಕಾರ್ಮಿಕರ ಜೀವನಮಟ್ಟ ಮತ್ತು ವೇತನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ಅದರ ಗುರಿಯಾಗಿತ್ತು. ನಂತರ 2015 ರಲ್ಲಿ, ವಿಶ್ವಸಂಸ್ಥೆಯ ಆಹಾರ ಮತ್ತು ಕೃಷಿ ಸಂಸ್ಥೆಯು ವಿಶ್ವಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಚಹಾ ದಿನವನ್ನು ಆಚರಿಸಲು ಅಧಿಕೃತವಾಗಿ ಪ್ರಸ್ತಾಪಿಸಿತು. ಆ ಬಳಿಕ ಅಂತರರಾಷ್ಟ್ರೀಯ ಚಹಾ ದಿನವನ್ನು ಮೊದಲ ಬಾರಿಗೆ ಮೇ 21, 2020 ರಂದು ಆಚರಿಸಲಾಯಿತು. ಅಂದಿನಿಂದ ಈ ದಿನವನ್ನು ಪ್ರತಿ ವರ್ಷ ಆಚರಿಸಲಾಗುತ್ತಿದೆ.

ಅಂತಾರಾಷ್ಟ್ರೀಯ ಚಹಾ ದಿನವನ್ನು ಮೇ 21 ರಂದೇ ಏಕೆ ಆಚರಿಸಲಾಗುತ್ತದೆ?

ವಿಶ್ವಸಂಸ್ಥೆಯು ಪ್ರತಿ ವರ್ಷ ಮೇ 21 ರಂದು ಅಂತಾರಾಷ್ಟ್ರೀಯ ಚಹಾ ದಿನವನ್ನು ಆಚರಿಸುತ್ತದೆ. ವಾಸ್ತವವಾಗಿ, ಹೆಚ್ಚಿನ ದೇಶಗಳಲ್ಲಿ ಮೇ ತಿಂಗಳಲ್ಲಿ ಚಹಾ ಉತ್ಪಾದನೆ ಪ್ರಾರಂಭವಾಗುವುದರಿಂದ ಮೇ 21 ರಂದು ಈ ವಿಶೇಷ ದಿನವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಚಹಾ ದಿನದ ಮಹತ್ವವೇನು?

  • ಚಹಾದ ಆರ್ಥಿಕ ಮತ್ತು ಸಾಂಸ್ಕೃತಿಕ ಮಹತ್ವವನ್ನು ಜಗತ್ತಿಗೆ ಎತ್ತಿ ತೋರಿಸುವುದು ಮತ್ತು ಚಹಾ ಉದ್ಯಮದಲ್ಲಿ ತೊಡಗಿರುವ ರೈತರು ಮತ್ತು ಕಾರ್ಮಿಕರ ಸ್ಥಿತಿಗತಿಗಳನ್ನು ಸುಧಾರಿಸುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ.
  • ಈ ದಿನ ಸುಸ್ಥಿರ ಚಹಾ ಉತ್ಪಾದನೆ ಮತ್ತು ನ್ಯಾಯಯುತ ವ್ಯಾಪಾರ ಪದ್ಧತಿಗಳನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.
  • ಚಹಾವು ಆರೋಗ್ಯ ಮತ್ತು ಯೋಗಕ್ಷೇಮದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಚಹಾ ಸೇವನೆಯ ಈ ಸಂಭಾವ್ಯ ಆರೋಗ್ಯ ಪ್ರಯೋಜನಗಳ ಬಗ್ಗೆ ಜಾಗೃತಿ ಮೂಡಿಸಲು ಅಂತರರಾಷ್ಟ್ರೀಯ ಚಹಾ ದಿನವನ್ನು ಸಹ ಆಚರಿಸಲಾಗುತ್ತದೆ.

ಇದನ್ನೂ ಓದಿ: ವಿಶ್ವ ದೂರಸಂಪರ್ಕ ದಿನದ ಇತಿಹಾಸ, ಮಹತ್ವವನ್ನು ತಿಳಿದುಕೊಳ್ಳಿ

ಚಹಾ ಸೇವನೆಯಿಂದ ಲಭಿಸುವ ಆರೋಗ್ಯ ಪ್ರಯೋಜನಗಳೇನು?

  • ಗ್ರೀನ್‌ ಟೀಯಲ್ಲಿ ಆಂಟಿ ಆಕ್ಸಿಡೆಂಟ್‌ ಪೋಷಕಾಂಶಗಳಿದ್ದು, ಇದು ಆಕ್ಸಿಡೇಟಿವ್‌ ಒತ್ತಡದಿಂದ ರಕ್ಷಿಸುತ್ತದೆ. ಗ್ರೀನ್‌ ಟೀ ಕುಡಿಯುವುದರಿಂದ ಕೆಲವು ರೀತಿಯ ಕ್ಯಾನ್ಸರ್‌ ಬರುವುದನ್ನು ತಡೆಯಬಹುದು ಎಂದು ಅಧ್ಯಯನಗಳು ಸಾಬೀತುಪಡಿಸಿವೆ.
  • ತುಳಸಿ ಟೀ ಕುಡಿಯುವುದರಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಅಲ್ಲದೆ ಇದು ಇದು ಶೀತ, ಗಂಟಲು ನೋವು ಸಮಸ್ಯೆಯನ್ನು ನಿವಾರಿಸಲು ಸಹಕಾರಿಯಾಗಿದೆ.
  • ದಿನವಿಡೀ ಕೆಲಸ ಮಾಡಿ ದಣಿದಿದ್ದರೆ ಲ್ಯಾವೆಂಡರ್‌ ಟೀ ನಿಮಗೆ ಶಕ್ತಿಯನ್ನು ನೀಡುತ್ತದೆ. ನೀವು ಚೆನ್ನಾಗಿ ನಿದ್ದೆ ಮಾಡಲು ಈ ಟೀ ಸಹಕಾರಿಯಾಗಿದೆ. ಇದಲ್ಲದೆ ಇದು ಚರ್ಮದ ಆರೋಗ್ಯಕ್ಕೂ ಒಳ್ಳೆಯದು.
  • ಟೀಯಲ್ಲಿ ಕ್ಯಾಟೆಚಿನ್‌ ಮತ್ತು ಫ್ಲೇವನಾಯ್ಡ್‌ಗಳಂತಹ ಉತ್ಕರ್ಷಣ ನಿರೋಧಕಗಳಿದ್ದು, ಈ ಸಂಯುಕ್ತಗಳು ಆಕ್ಸಿಡೇಟಿವ್‌ ಒತ್ತಡವನ್ನು ನಿವಾರಿಸಲು ಸಹಕಾರಿಯಾಗಿದೆ.
  • ಶುಂಠಿ, ಪುದೀನಾ ಮತ್ತು ಕ್ಯಾಮೊಮೈಲ್‌ನಂತಹ ಗಿಡಮೂಲಿಕೆ ಚಹಾಗಳು ಅಜೀರ್ಣ, ಹೊಟ್ಟೆ ಉಬ್ಬರ ಮತ್ತು ವಾಕರಿಕೆಯಂತಹ ಹೊಟ್ಟೆ ಸಂಬಂಧಿ ಕಾಯಿಲೆಗಳನ್ನು ನಿವಾರಿಸುವಲ್ಲಿ ಪರಿಣಾಮಕಾರಿ.
  • ಟೀ ಕುಡಿಯುವುದರಿಂದ ದೇಹಕ್ಕೆ ವಿಶ್ರಾಂತಿ ಲಭಿಸುತ್ತದೆ. ಅಲ್ಲದೆ ಟೆನ್ಶನ್‌ ಆದಾಗ ಒಂದು ಕಪ್‌ ಟೀ ಕುಡಿದರೆ ಮನಸ್ಸು ನಿರಾಳವಾಗುತ್ತದೆ. ಒತ್ತಡ ಕಡಿಮೆಯಾಗುತ್ತದೆ.
  • ಚಹಾವು ಫ್ಲೋರೈಡ್‌ ಮತ್ತು ಟ್ಯಾನಿನ್‌ಗಳನ್ನು ಹೊಂದಿರುತ್ತದೆ. ಇದು ಬಾಯಿಯ ಆರೋಗ್ಯಕ್ಕೆ ಪ್ರಯೋಜನಕಾರಿಯಾಗಿದೆ.
  • ವಿಶೇಷವಾಗಿ ಗಿಡಮೂಲಿಕೆ ಚಹಾಗಳು ದೇಹದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಕಾರಿಯಾಗಿದೆ.
  • ಚಹಾದಲ್ಲಿರುವ ಉತ್ಕರ್ಷಣ ನಿರೋಧಕ ಅಂಶಗಳು ಚರ್ಮದ ಆರೋಗ್ಯವನ್ನು ಉತ್ತೇಜಿಸುತ್ತದೆ.
  • ಚಹಾವು ಉರಿಯೂತ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳನ್ನು ಹೊಂದಿದ್ದು, ಇವು ಹೃದ್ರೋಗ ಬಾರದಂತೆ ತಡೆಯುತ್ತವೆ ಮತ್ತು ರಕ್ತದೊತ್ತಡವನ್ನು ನಿಯಂತ್ರಿಸುತ್ತವೆ.
  • ಚಹಾದಲ್ಲಿನ ಕೆಲವು ಸಂಯುಕ್ತಗಳಾದ ಕ್ಯಾಟೆಚಿನ್‌ಗಳು ಮತ್ತು ಕೆಫೀನ್‌ ಅಂಶವು ಚಯಾಪಚಯವನ್ನು ಹೆಚ್ಚಿಸಲು ಮತ್ತು ತೂಕ ನಿರ್ವಹಣೆಗೆ ಸಹಾಯ ಮಾಡುತ್ತದೆ.
  • ಚಹಾವು ಚಣ್ಣ ಪ್ರಮಾಣದಲ್ಲಿ ಕೆಫೀನ್‌ ಅಂಶವನ್ನು ಹೊಂದಿದ್ದು, ಇದು ಗಮನ ಮತ್ತು ಏಕಾಗ್ರತೆಯನ್ನು ಸುಧಾರಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More