International Tiger Day 2024 : ಹುಲಿ ಸಂತತಿಯನ್ನು ಉಳಿಸಿ, ಪ್ರಕೃತಿಯನ್ನು ರಕ್ಷಿಸಿ

ಪ್ರಕೃತಿಯೂ ಸ್ಥಿರವಾಗಿರಬೇಕಾದರೆ ಪ್ರತಿಯೊಂದು ಪ್ರಾಣಿ ಪಕ್ಷಿಗಳು ಈ ಪರಿಸರ ವ್ಯವಸ್ಥೆಯಲ್ಲಿ ಇರಲೇಬೇಕು. ಆದರೆ ಅತೀ ವೇಗವಾಗಿ ಕ್ಷೀಣಿಸುತ್ತಿರುವ ಹುಲಿಗಳ ಸಂತತಿಯನ್ನು ರಕ್ಷಿಸುವ ಸಲುವಾಗಿ ಪ್ರತಿ ವರ್ಷ ಜುಲೈ 29 ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಹಾಗಾದ್ರೆ ಈ ದಿನದ ಕುರಿತಾದ ಇನ್ನಷ್ಟು ಮಾಹಿತಿಯೂ ಇಲ್ಲಿದೆ.

International Tiger Day 2024 : ಹುಲಿ ಸಂತತಿಯನ್ನು ಉಳಿಸಿ, ಪ್ರಕೃತಿಯನ್ನು ರಕ್ಷಿಸಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Jul 29, 2024 | 9:22 AM

ಹುಲಿ ನಮ್ಮ ರಾಷ್ಟ್ರೀಯ ಪ್ರಾಣಿಯಾಗಿದ್ದು, ಆದರೆ ಅವುಗಳ ಸಂತತಿ ಯೂ ಅಳಿವಿನಂಚಿನಲ್ಲಿ ಸಾಗುತ್ತಿದೆ. ಮಾನವನು ತನ್ನ ಸ್ವಾರ್ಥಕ್ಕಾಗಿ ಕಾಡುಗಳನ್ನು ನಾಶ ಮಾಡುತ್ತಿದ್ದು, ಅದುವೇ ಈ ಹುಲಿಗಳ ಸಂಖ್ಯೆಯೂ ಇಳಿಮುಖವಾಗಲು ಕಾರಣವಾಗುತ್ತಿದೆ. ಕಳೆದ 2010ರಿಂದ ಹುಲಿಯನ್ನು ಅಳಿವಿನಂಚಿನಲ್ಲಿರುವ ಪ್ರಾಣಿಯೆಂದೇ ಗುರುತಿಸಲಾಗಿದೆ. ಈ ಜಗತ್ತಿನ ಕೇವಲ ಹದಿಮೂರು ರಾಷ್ಟ್ರಗಳಲ್ಲಿ ಮಾತ್ರ ಹುಲಿಗಳು ಕಾಣಲು ಸಿಗುತ್ತಿದ್ದು, 3,200 ಹುಲಿಗಳು ಮಾತ್ರ ಇವೆ ಎನ್ನಲಾಗಿದೆ. ಹೀಗಾಗಿ ಈ ರಾಷ್ಟ್ರೀಯ ಪ್ರಾಣಿಯ ರಕ್ಷಣೆ ಮತ್ತು ಅದರ ಕುರಿತಾಗಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜುಲೈ 29ರಂದು ಅಂತಾರಾಷ್ಟ್ರೀಯ ಹುಲಿ ದಿನ ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಹುಲಿ ದಿನದ ಇತಿಹಾಸ

2010 ರಲ್ಲಿ ಸೇಂಟ್ ಪೀಟರ್ಸ್‌ ಬರ್ಗ್ ಹುಲಿ ಶೃಂಗಸಭೆಯ ಸಮಯದಲ್ಲಿ ಸ್ಥಾಪಿಸಲಾಯಿತು. ರಷ್ಯಾದ ಸೇಂಟ್ ಪೀಟರ್ಸ್‌ ಬರ್ಗ್‌ ನಲ್ಲಿ ನಡೆದ ಈ ಶೃಂಗಸಭೆಯನ್ನು ಗ್ಲೋಬಲ್ ಟೈಗರ್ ಇನಿಶಿಯೇಟಿವ್ ಆಯೋಜಿಸಿತ್ತು. ಹುಲಿ ಸಂರಕ್ಷಣೆ ಮತ್ತು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುವುದು ಎಂದು ಘೋಷಿಸಲಾಯಿತು. ಅಂದಿನಿಂದ ಪ್ರತಿ ವರ್ಷ ಜುಲೈ 29 ಅನ್ನು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ವಿಶ್ವ ಪ್ರಕೃತಿ ಸಂರಕ್ಷಣಾ ದಿನ; ಮನುಷ್ಯನ ದುರಾಸೆಗೆ ಬರಿದಾಗದಿರಲಿ ಪ್ರಕೃತಿ

ಅಂತಾರಾಷ್ಟ್ರೀಯ ಹುಲಿ ದಿನಾಚರಣೆಯ ಮಹತ್ವ ಹಾಗೂ ಆಚರಣೆ

ಮಾನವನ ವಿಪರೀತ ಚಟುವಟಿಕೆಗಳು ಸಸ್ಯ ಸಂಪತ್ತು ಹಾಗೂ ಪ್ರಾಣಿ ಸಂಪತ್ತುಗಳ ಮೇಲೆ ಗಂಭೀರವಾದ ಪರಿಣಾಮ ಬೀರುತ್ತಿದೆ. ಕಾಡುಗಳ ನಾಶದಿಂದಾಗಿ ಶೇಕಡಾ 97% ರಷ್ಟು ಹುಲಿಗಳು ಕಣ್ಮರೆಯಾಗಿವೆ. ಹೀಗಾಗಿ ಜಾಗತಿಕ ಮಟ್ಟದಲ್ಲಿ ಹುಲಿಗಳ ಸಂರಕ್ಷಣೆಗಾಗಿ ಜಾಗೃತಿ ಕಾರ್ಯಗಳನ್ನು ರೂಪಿಸುವುದು ಮತ್ತು ಹುಲಿಗಳ ಅಳಿವಿನಂಚಿನಲ್ಲಿರುವ ಪ್ರಭೇದಗಳನ್ನು ಉಳಿಸಲು ಕ್ರಮಗಳನ್ನು ಕೈಗೊಳ್ಳುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ವರ್ಲ್ಡ್ ವೈಡ್ ಫಂಡ್ ಫಾರ್ ನೇಚರ್, ಇಂಟರ್ ನ್ಯಾಷನಲ್ ಫಂಡ್ ಫಾರ್ ಅನಿಮಲ್ ವೆಲ್ಫೇರ್ ಸೇರಿದಂತೆ ಅನೇಕ ಅಂತರಾಷ್ಟ್ರೀಯ ಸಂಸ್ಥೆಗಳು ವಿಶ್ವ ಹುಲಿ ದಿನವನ್ನು ಆಚರಿಸುತ್ತಿದ್ದೂ, ಜಾಗೃತಿ ಕಾರ್ಯಕ್ರಮಗಳು, ವಿಚಾರ ಸಂಕಿರಣಗಳು ಹಾಗೂ ಅಭಿಯಾನಗಳನ್ನು ಹಮ್ಮಿಕೊಳ್ಳುತ್ತವೆ.

ಜೀವನಶೈಲಿಗೆ ಸಂಬಂಧಿಸಿದ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ದಲಿತ ಸಮುದಾಯದ ಸಮಸ್ಯೆಗಳ ಚರ್ಚೆಗೆ ಮೀಟಿಂಗ್ ಕರೆದಿದ್ದಾರೆ: ಮಹಾದೇವಪ್ಪ
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಕಾಂಗ್ರೆಸ್ 135 ಸ್ಥಾನ ಪಡೆಯುವಲ್ಲಿ ಶಿವಕುಮಾರ್ ಪಾತ್ರ ದೊಡ್ಡದು: ವಿಶ್ವನಾಥ್
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಚುನಾಯಿತ ಪ್ರತಿನಿಧಿಗಳ ಅನುಪಸ್ಥಿತಿಯಲ್ಲಿ ಪಾಲಿಕೆ ಅಧಿಕಾರಿಗಳದ್ದೇ ಪಾರಮ್ಯ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್