International Tiger Day 2025: ಹುಲಿ ಸಂರಕ್ಷಣೆ ನಮ್ಮೆಲ್ಲರ ಹೊಣೆ; ಹುಲಿ ದಿನದ ಆಚರಣೆಯ ಬಗ್ಗೆ ನಿಮ್ಗೊತ್ತಾ?

ಹುಲಿ, ಚಿರತೆ, ಸಿಂಹಗಳಂತಹ ಪ್ರಾಣಿಗಳು ಕಾಡು ಮತ್ತು ಅಭಯಾರಣ್ಯದ ಪ್ರಮುಖ ಆಕರ್ಷಣೆಗಳಾಗಿವೆ. ಆದರೆ ಇಂದು ಹಲವಾರು ಕಾರಣಗಳಿಂದ ಹುಲಿಗಳ ಸಂಖ್ಯೆ ಕುಸಿಯುತ್ತಿದೆ. ಆದ್ದರಿಂದ ಹುಲಿಗಳ ಮಹತ್ವ, ಅವುಗಳ ರಕ್ಷಣೆ, ಹುಲಿಗಳ ನೈಸರ್ಗಿಕ ಆವಾಸಸ್ಥಾನವನ್ನು ರಕ್ಷಿಸುವ ಉದ್ದೇಶದಿಂದ ಪ್ರತಿವರ್ಷ ಜುಲೈ 29 ರಂದು ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

International Tiger Day 2025: ಹುಲಿ ಸಂರಕ್ಷಣೆ ನಮ್ಮೆಲ್ಲರ ಹೊಣೆ; ಹುಲಿ ದಿನದ ಆಚರಣೆಯ ಬಗ್ಗೆ ನಿಮ್ಗೊತ್ತಾ?
ಅಂತಾರಾಷ್ಟ್ರೀಯ ಹುಲಿ ದಿನ
Image Credit source: Getty Images

Updated on: Jul 28, 2025 | 7:30 PM

ಭಾರತದ ರಾಷ್ಟ್ರೀಯ ಪ್ರಾಣಿಯಾದ ಹುಲಿ (Tiger) ಆತ್ಮವಿಶ್ವಾಸ ಮತ್ತು ಗಾಂಭೀರ್ಯದ ನಡಿಗೆಗೆ ಹೆಸರುವಾಸಿಯಾದ ಪ್ರಾಣಿ. ಅಲ್ಲದೆ ಹುಲಿಗಳು ಪರಿಸರ ವ್ಯವಸ್ಥೆಯನ್ನು ಆರೋಗ್ಯಕರವಾಗಿಡುಲ್ಲಿ ಮತ್ತು ಅದರ ವೈವಿಧ್ಯತೆಯನ್ನು ಕಾಪಾಡಿಕೊಳ್ಳುವಲ್ಲಿ ಬಹು ಮುಖ್ಯ ಪಾತ್ರ ವಹಿಸುತ್ತವೆ.  ಆದರೆ ಇಂದು ಹುಲಿಯ ಸಂತತಿ ಅಲಿವಿನಂಚಿಗೆ ತಲುಪಿದೆ. ಇತ್ತೀಚಿಗೆ ಹನೂರು ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿ ವಿಭಾಗದ ಹೂಗ್ಯಂ ವಲಯದಲ್ಲಿ ವಿಷ ಪ್ರಾಶನದಿಂದಾಗಿ 5 ಹುಲಿಗಳು ಸಾವನ್ನಪ್ಪಿದಂತಹ ಘಟನೆ ನಡೆದಿತ್ತು. ಹೀಗೆ ಅಕ್ರಮ ಬೇಟೆ, ಆವಸಸ್ಥಾನದ ನಾಶ ಇಂತಹ ಹತ್ತು ಹಲವು ಕಾರಣಗಳಿಂದ ಹುಲಿಗಳ ಸಂತತಿ  ವಿನಾಶದತ್ತ ತಲುಪಿದೆ. ಜಾಗತಿಕ ಮಟ್ಟದಲ್ಲಿ ಹುಲಿಗಳು ಹಾಗೂ ಅವುಗಳ ಆವಾಸಸ್ಥಾನವನ್ನು ರಕ್ಷಿಸುವ ಸಲುವಾಗಿ ಪ್ರತಿವರ್ಷ ಜುಲೈ 29 ರಂದು ಅಂತಾರಾಷ್ಟ್ರೀಯ ಹುಲಿ (International Tiger Day) ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು ಎಂಬುದನ್ನು ನೋಡೋಣ ಬನ್ನಿ.

ಅಂತಾರಾಷ್ಟ್ರೀಯ ಹುಲಿ ದಿನದ ಆಚರಣೆ ಹೇಗೆ ಪ್ರಾರಂಭವಾಯಿತು?

ಅಂತಾರಾರಾಷ್ಟ್ರೀಯ ಹುಲಿ ದಿನದ ಆಚರಣೆ 2010 ರಲ್ಲಿ ಪ್ರಾರಂಭವಾಯಿತು. ರಷ್ಯಾದ ಪೀಟರ್ಸ್‌ಬರ್ಗ್‌ನಲ್ಲಿ ನಡೆದ ಅಂತಾರಾಷ್ಟ್ರೀಯ ಸಮ್ಮೇಳನದಲ್ಲಿ, ಜುಲೈ 29 ರಂದು ವಿಶ್ವ ಹುಲಿ ದಿನವನ್ನು ಆಚರಿಸಲು ನಿರ್ಧರಿಸಲಾಯಿತು. ಪ್ರಪಂಚದಾದ್ಯಂತದ ಸುಮಾರು 13 ದೇಶಗಳು ಈ ಸಮ್ಮೇಳನದಲ್ಲಿ ಭಾಗವಹಿಸಿದ್ದವು.  ನಂತರ ಈ ದಿನವನ್ನು ಪ್ರತಿ ವರ್ಷವೂ ಆಚರಿಸುತ್ತಾ ಬರಲಾಗುತ್ತಿದೆ.

ಇದನ್ನೂ ಓದಿ: ಕಾರ್ಗಿಲ್ ಯುದ್ಧ ನಡೆದದ್ದು ಯಾಕಾಗಿ? ಈ ದಿನವನ್ನು ಆಚರಿಸುವುದು ಏಕೆ? ಇಲ್ಲಿದೆ ಮಾಹಿತಿ

ಇದನ್ನೂ ಓದಿ
ಕಾರ್ಗಿಲ್ ವಿಜಯ್ ದಿವಸದ ಇತಿಹಾಸ, ಮಹತ್ವವೇನು? ಇಲ್ಲಿದೆ ಮಾಹಿತಿ
ರಾಷ್ಟ್ರೀಯ ಧ್ವಜ ದಿನವನ್ನು ಏಕೆ ಆಚರಿಸಲಾಗುತ್ತದೆ ಗೊತ್ತಾ?
ಕಾನೂನಿನ ಮುಂದೆ ಎಲ್ಲರೂ ಸಮಾನರು
ವಿಶ್ವ ಯುವ ಕೌಶಲ್ಯ ದಿನವನ್ನು ಆಚರಿಸುವ ಉದ್ದೇಶವನ್ನು ತಿಳಿಯಿರಿ

ಅಂತಾರಾಷ್ಟ್ರೀಯ ಹುಲಿ ದಿನವನ್ನು ಆಚರಿಸುವ ಉದ್ದೇಶ:

ಹುಲಿಗಳ ಸಂರಕ್ಷಣೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದರ ಜೊತೆಗೆ, ಅವುಗಳ ಆವಾಸಸ್ಥಾನವನ್ನು ಹೇಗೆ ರಕ್ಷಿಸುವುದು ಮತ್ತು ಅವುಗಳ ಸಂಖ್ಯೆಯನ್ನು ಹೆಚ್ಚಿಸುವುದು ಹೇಗೆ ಎಂಬುದರ ಕುರಿತು ಜನರಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಪರಿಸರ ಹಾನಿ, ಹವಾಮಾನ ಬದಲಾವಣೆ ಮತ್ತು ಅಕ್ರಮ ಬೇಟೆಯಂತಹ ಹಲವು ಕಾರಣಗಳಿಂದ  ಇಂದು ಹುಲಿಗಳ ಸಂಖ್ಯೆ ನಿರಂತರವಾಗಿ ಕಡಿಮೆಯಾಗುತ್ತಿದೆ. ಹಾಗಾಗಿ ಹುಲಿಗಳನ್ನು ರಕ್ಷಿಸುವ ಉದ್ದೇಶದಿಂದ ಈ ದಿನವನ್ನು ಆಚರಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ