International Volunteer Day 2024: ಅಂತಾರಾಷ್ಟ್ರೀಯ ಸ್ವಯಂ ಸೇವಕರ ದಿನವನ್ನು ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ

| Updated By: ಅಕ್ಷಯ್​ ಪಲ್ಲಮಜಲು​​

Updated on: Dec 05, 2024 | 10:57 AM

ಸಮಾಜಕ್ಕಾಗಿ ಹಾಗೂ ಕಷ್ಟದಲ್ಲಿರುವವರಿಗೆ ಸಹಾಯ ಮಾಡುವುದರಲ್ಲಿ ಸಿಗುವ ಸಂತೋಷವು ಮತ್ಯಾವುದರಲ್ಲೂ ಸಿಗುವುದಿಲ್ಲ ಎನ್ನುವ ಮಾತಿದೆ. ಹೀಗಾಗಿ ವಿಶ್ವದಾದಂತ್ಯ ಅದೆಷ್ಟು ಜನರು ಸ್ವಯಂ ಸೇವಕರಾಗಿ ನಿಸ್ವಾರ್ಥ ಸೇವೆ ಮಾಡುತ್ತಿದ್ದಾರೆ. ಅಂತಹವರಿಗಾಗಿಯೇ ಅಂತಾರಾಷ್ಟ್ರೀಯ ಸ್ವಯಂ ಸೇವಕರ ದಿನವನ್ನು ಮೀಸಲಿಡಲಾಗಿದೆ. ಈ ದಿನದ ಆಚರಣೆಯನ್ನು 1985 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ಕಡ್ಡಾಯಗೊಳಿಸಿತು. ಅಂದಿನಿಂದ ಪ್ರತಿ ವರ್ಷ ಡಿಸೆಂಬರ್ 5 ರಂದು ಅಂತಾರಾಷ್ಟ್ರೀಯ ಸ್ವಯಂಸೇವಕರ ದಿನವನ್ನು ಆಚರಿಸಲಾಗುತ್ತಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿ ಇಲ್ಲಿದೆ.

International Volunteer Day 2024: ಅಂತಾರಾಷ್ಟ್ರೀಯ ಸ್ವಯಂ ಸೇವಕರ ದಿನವನ್ನು ಆಚರಿಸುವುದು ಏಕೆ? ಏನಿದರ ಮಹತ್ವ? ಇಲ್ಲಿದೆ ಮಾಹಿತಿ
ಸಾಂದರ್ಭಿಕ ಚಿತ್ರ
Follow us on

ನಾವು ಜಗತ್ತನ್ನು ಬದಲಾಯಿಸಲು ಬಯಸಿದರೆ, ನಾವು ನಮ್ಮಿಂದಲೇ ಪ್ರಾರಂಭಿಸಬೇಕು. ಇದಕ್ಕಾಗಿ ಸ್ವಯಂಸೇವಕತ್ವಕ್ಕಿಂತ ಉತ್ತಮ ಮಾರ್ಗವಿಲ್ಲ. ವಿಶ್ವಸಂಸ್ಥೆಯು ಪ್ರತಿ ವರ್ಷ ಡಿಸೆಂಬರ್ 5 ರಂದು ಅಂತಾರಾಷ್ಟ್ರೀಯ ಸ್ವಯಂಸೇವಕರ ದಿನವನ್ನು ಆಚರಿಸುತ್ತಿದೆ. ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಗುರಿಗಳನ್ನು ಸಾಧಿಸುವಲ್ಲಿ ಸ್ವಯಂಸೇವಕರು ಹೆಚ್ಚು ಪ್ರಭಾವ ಬೀರುತ್ತಾರೆ. ಈ ದಿನವು ಸ್ವಯಂಸೇವಕರ ಕೊಡುಗೆಗಳನ್ನು ಗುರುತಿಸಲು, ಸ್ವಯಂಸೇವಕತೆಯನ್ನು ಉತ್ತೇಜಿಸಲು ಹಾಗೂ ಸ್ವಯಂಸೇವಕರ ಪ್ರಯತ್ನಗಳನ್ನು ಬೆಂಬಲಿಸಲು ಸರ್ಕಾರಗಳನ್ನು ಪ್ರೋತ್ಸಾಹಿಸುವ ಉದ್ದೇಶವನ್ನು ಹೊಂದಿದೆ. ಬಡತನ, ಶಿಕ್ಷಣ, ಆರೋಗ್ಯ, ಹವಾಮಾನ ಬದಲಾವಣೆ ಮತ್ತು ವಿಪತ್ತು ಪರಿಹಾರದಂತಹ ನಿರ್ಣಾಯಕ ಸಮಸ್ಯೆಗಳನ್ನು ಪರಿಹರಿಸುವಲ್ಲಿ ಸ್ವಯಂಸೇವಕರ ಕೊಡುಗೆಗಳನ್ನು ಗೌರವಿಸಲಾಗುತ್ತದೆ.

ಅಂತಾರಾಷ್ಟ್ರೀಯ ಸ್ವಯಂ ಸೇವಕರ ದಿನದ ಇತಿಹಾಸ

1985 ರಲ್ಲಿ ಯುನೈಟೆಡ್ ನೇಷನ್ಸ್ ಜನರಲ್ ಅಸೆಂಬ್ಲಿಯು ವಾರ್ಷಿಕವಾಗಿ ಡಿಸೆಂಬರ್ 5 ರಂದು ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಗಾಗಿ ಅಂತಾರಾಷ್ಟ್ರೀಯ ಸ್ವಯಂಸೇವಕರ ದಿನವನ್ನು ಆಚರಿಸಲು ಸರ್ಕಾರಗಳನ್ನು ಆಹ್ವಾನಿಸಿತು. ಈ ವೇಳೆ ಯಲ್ಲಿ ಸ್ವಯಂಸೇವಕ ಸೇವೆಯ ಬಗ್ಗೆ ಜಾಗೃತಿ ಮೂಡಿಸಲು ಅವರನ್ನು ಒತ್ತಾಯಿಸಿತು. ಸಾಮಾನ್ಯ ಸಭೆಯಲ್ಲಿ ನವೆಂಬರ್ 20, 1997 ರ ನಿರ್ಣಯ 52/17 ರಲ್ಲಿ ಸ್ವಯಂಸೇವಕರನ್ನು ಮತ್ತಷ್ಟು ಗುರುತಿಸಲು, ಅವರ ಕೆಲಸವನ್ನು ಸುಗಮಗೊಳಿಸಲು, ಸಂವಹನ ಜಾಲವನ್ನು ರಚಿಸಲು ಮತ್ತು ಸ್ವಯಂಸೇವಾ ಸೇವೆಯ ಪ್ರಯೋಜನಗಳನ್ನು ಉತ್ತೇಜಿಸಲು 2001 ಅನ್ನು ಸ್ವಯಂಸೇವಕರ ಅಂತಾರಾಷ್ಟ್ರೀಯ ವರ್ಷ ಎಂದು ಘೋಷಿಸಿತು. ಅಂದಿನಿಂದ ಅಂತಾರಾಷ್ಟ್ರೀಯ ಸ್ವಯಂ ಸೇವಕರ ದಿನದ ಆಚರಣೆಯೂ ಚಾಲ್ತಿಯಲ್ಲಿದೆ.

ಇದನ್ನೂ ಓದಿ: ಮಣ್ಣಿನಿಂದಲೇ ಬದುಕು, ಮಣ್ಣೇ ಸಕಲ ಜೀವಿಗಳ ಉಳಿವಿನ ಕೊಂಡಿ

ಅಂತಾರಾಷ್ಟ್ರೀಯ ಸ್ವಯಂ ಸೇವಕರ ದಿನದ ಮಹತ್ವ ಹಾಗೂ ಆಚರಣೆ

ಇತರರ ಜೀವನವನ್ನು ಸುಧಾರಿಸಲು ಮತ್ತು ಅಗತ್ಯವಿರುವವರಿಗೆ ಸಹಾಯ ಮಾಡಲು ತಮ್ಮ ಸಮಯ ಮತ್ತು ಶಕ್ತಿಯನ್ನು ವಿನಿಯೋಗಿಸುವ ಸ್ವಯಂಸೇವಕರನ್ನು ಗೌರವಿಸುವ ದಿನವಾಗಿದೆ. ಸ್ವಯಂಸೇವಕ ಸಂಸ್ಥೆಗಳು ಮತ್ತು ವೈಯಕ್ತಿಕ ಸ್ವಯಂಸೇವಕರನ್ನು ಉತ್ತೇಜಿಸಲು, ಸ್ವಯಂಸೇವಕ ಪ್ರಯತ್ನಗಳನ್ನು ಬೆಂಬಲಿಸಲು, ಸರ್ಕಾರಗಳನ್ನು ಪ್ರೋತ್ಸಾಹಿಸಲು ಮತ್ತು ಸ್ಥಳೀಯ, ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುಸ್ಥಿರ ಅಭಿವೃದ್ಧಿ ಗುರಿಗಳ ಸಾಧನೆಗೆ ಸ್ವಯಂಸೇವಕರ ಕೊಡುಗೆಗಳನ್ನು ಗುರುತಿಸುವ ಸಲುವಾಗಿ ಈ ದಿನವು ಮಹತ್ವದ್ದಾಗಿದೆ. ಈ ವಿಶೇಷ ದಿನದಂದು ವಿಶ್ವಸಂಸ್ಥೆ ಸೇರಿದಂತೆ ಸರ್ಕಾರಗಳು, ವಿವಿಧ ಸಂಘ ಸಂಸ್ಥೆಗಳು ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ. ಅದಲ್ಲದೇ ದಾನ, ಸೇವೆ ಮತ್ತು ಸಹಾಯದ ರೂಪದಲ್ಲಿ ಸ್ವಯಂಸೇವಕತೆಯನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಮತ್ತಷ್ಟು ಆಧ್ಯಾತ್ಮ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ