Sign In

By signing in or creating an account, you agree with Associated Broadcasting Company's Terms & Conditions and Privacy Policy.

International Women’s Day 2023: ಭಾರತೀಯ ಮಹಿಳೆಯರಿಗಿರುವ 5 ಮೂಲಭೂತ ಹಕ್ಕುಗಳು; ಪ್ರತಿ ಮಹಿಳೆಗೂ ಇದು ತಿಳಿದಿರಬೇಕು

ಮಹಿಳೆಯರ ಸ್ಥಾನಮಾನವನ್ನು ಬಲಪಡಿಸಲು ಮತ್ತು ಅವರಿಗೆ ಸುರಕ್ಷಿತ ವಾತಾವರಣವನ್ನು ನೀಡುವ ಸಲುವಾಗಿ, ಭಾರತೀಯ ಸಂವಿಧಾನದಲ್ಲಿ ಮಹಿಳೆಯರಿಗೆ ಕೆಲವು ಹಕ್ಕುಗಳನ್ನು ನೀಡಿದೆ.ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಭಾರತೀಯ ಸಂವಿಧಾನದಲ್ಲಿ ಒಳಗೊಂಡಿರುವ ಕೆಲವು ಪ್ರಮುಖ ಮಹಿಳಾ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ, ಇದನ್ನು ಪ್ರತಿಯೊಬ್ಬ ಮಹಿಳೆ ತಿಳಿದುಕೊಳ್ಳಬೇಕು.

International Women's Day 2023: ಭಾರತೀಯ ಮಹಿಳೆಯರಿಗಿರುವ 5 ಮೂಲಭೂತ ಹಕ್ಕುಗಳು; ಪ್ರತಿ ಮಹಿಳೆಗೂ ಇದು ತಿಳಿದಿರಬೇಕು
International Women's Day 2023Image Credit source: People Matters
Follow us
ನಯನಾ ಎಸ್​ಪಿ
|

Updated on: Mar 07, 2023 | 3:14 PM

ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಪ್ರತಿ ವರ್ಷ ಮಾರ್ಚ್ 8 ರಂದು ಪ್ರಪಂಚದಾದ್ಯಂತ ಆಚರಿಸಲಾಗುತ್ತದೆ. ಮಹಿಳೆಯರು ಸಮಾಜದ ಅವಿಭಾಜ್ಯ ಅಂಗವಾಗಿದ್ದು, ರಾಷ್ಟ್ರ ನಿರ್ಮಾಣಕ್ಕೆ ಅಭೂತಪೂರ್ವ ಕೊಡುಗೆ ನೀಡುತ್ತಿದ್ದಾರೆ. ಮಹಿಳೆಯರಿಗೆ ಸಮಾನ ಹಕ್ಕು, ಪ್ರಗತಿ ಹೊಂದಲು ಸಮಾನ ಅವಕಾಶ ಮತ್ತು ಎಲ್ಲಾ ಕ್ಷೇತ್ರಗಳಲ್ಲಿ ಮಹಿಳೆಯರ ಭಾಗವಹಿಸುವಿಕೆಯನ್ನು ಹೆಚ್ಚಿಸುವ ಉದ್ದೇಶದಿಂದ ವಿಶ್ವದ ಎಲ್ಲಾ ದೇಶಗಳಲ್ಲಿ ಅಂತರರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಮಹಿಳೆಯರ ಸ್ಥಾನಮಾನವನ್ನು ಬಲಪಡಿಸಲು ಮತ್ತು ಅವರಿಗೆ ಸುರಕ್ಷಿತ ವಾತಾವರಣವನ್ನು ನೀಡುವ ಸಲುವಾಗಿ, ಭಾರತೀಯ ಸಂವಿಧಾನದಲ್ಲಿ ಮಹಿಳೆಯರಿಗೆ ಕೆಲವು ಹಕ್ಕುಗಳನ್ನು ನೀಡಿದೆ. ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಸಂದರ್ಭದಲ್ಲಿ, ಭಾರತೀಯ ಸಂವಿಧಾನದಲ್ಲಿ ಒಳಗೊಂಡಿರುವ ಕೆಲವು ಪ್ರಮುಖ ಮಹಿಳಾ ಹಕ್ಕುಗಳ ಬಗ್ಗೆ ಮಾಹಿತಿಯನ್ನು ನೀಡಲಾಗುತ್ತಿದೆ, ಇದನ್ನು ಪ್ರತಿಯೊಬ್ಬ ಮಹಿಳೆ ತಿಳಿದುಕೊಳ್ಳಬೇಕು.

ಸಮಾನ ವೇತನದ ಹಕ್ಕು

ಕೂಲಿ ಕಾರ್ಮಿಕರಿಂದ ಹಿಡಿದು ನೌಕರಿ ಮಾಡುವವರವರೆಗೂ ಪುರುಷ ಮತ್ತು ಮಹಿಳೆಯ ವೇತನದಲ್ಲಿ ವ್ಯತ್ಯಾಸ ಕಂಡುಬರುತ್ತದೆ. ಮಹಿಳೆಯರಿಗೆ ಪುರುಷರಿಗಿಂತ ಕಡಿಮೆ ವೇತನ ನೀಡಲಾಗುತ್ತದೆ. ಸಂವಿಧಾನವು ಮಹಿಳೆಯರಿಗೆ ಸಮಾನ ಸಂಭಾವನೆ ಪಡೆಯುವ ಹಕ್ಕನ್ನು ನೀಡಿದೆ. ಸಮಾನ ಸಂಭಾವನೆ ಕಾಯಿದೆಯಡಿ, ಲಿಂಗದ ಆಧಾರದ ಮೇಲೆ ಸಂಬಳ ಅಥವಾ ವೇತನದಲ್ಲಿ ಯಾವುದೇ ತಾರತಮ್ಯ ಮಾಡುವಂತಿಲ್ಲ. ಸಮಾನ ಕೆಲಸಕ್ಕೆ ಪುರುಷ ಮತ್ತು ಮಹಿಳೆಯರಿಗೆ ಸಮಾನ ವೇತನ ನೀಡಬೇಕು.

ಮಾತೃತ್ವ ರಜೆ ಪ್ರತಿ ಮಹಿಳೆಯ ಹಕ್ಕು

ಉದ್ಯೋಗದಲ್ಲಿರುವ ಮಹಿಳೆಯರು ಹೆರಿಗೆ ಸಂಬಂಧಿತ ಪ್ರಯೋಜನಗಳು ಮತ್ತು ಸೌಲಭ್ಯಗಳನ್ನು ಪಡೆಯುವ ಹಕ್ಕನ್ನು ಪಡೆಯುತ್ತಾರೆ. ಹೆರಿಗೆ ಪ್ರಯೋಜನ ಕಾಯ್ದೆಯಡಿ, ಹೆರಿಗೆಯ ನಂತರ ಮಹಿಳೆಯರು 6 ತಿಂಗಳ ರಜೆ ತೆಗೆದುಕೊಳ್ಳಬಹುದು ಮತ್ತು ಈ ಅವಧಿಯಲ್ಲಿ ಅವರ ಸಂಬಳದಲ್ಲಿ ಯಾವುದೇ ಕಡಿತ ಇರುವುದಿಲ್ಲ. ನಂತರ ಅವರು ಕೆಲಸಕ್ಕೆ ಮರಳುವ ಹಕ್ಕನ್ನು ಸಹ ಹೊಂದಿರುತ್ತಾರೆ.

ಹೆಸರು ಮತ್ತು ಗುರುತನ್ನು ಗೌಪ್ಯವಾಗಿಡುವ ಹಕ್ಕು

ಮಹಿಳೆಯರ ಅಪರಾಧದ ಮೇಲು ಮಹಿಳೆಯರಿಗೆ ಕೆಲವು ಹಕ್ಕುಗಳಿವೆ. ಭಾರತದಲ್ಲಿ ಲೈಂಗಿಕ ದೌರ್ಜನ್ಯದ ಸಂದರ್ಭದಲ್ಲಿ, ಸಂತ್ರಸ್ತೆ ತನ್ನ ಹೆಸರು ಮತ್ತು ಗುರುತನ್ನು ಗೌಪ್ಯವಾಗಿಡುವ ಹಕ್ಕನ್ನು ಹೊಂದಿರುತ್ತಾಳೆ. ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ಗೌಪ್ಯತೆಯನ್ನು ಕಾಪಾಡಿಕೊಳ್ಳಲು, ಮಹಿಳಾ ಪೊಲೀಸ್ ಅಧಿಕಾರಿಯ ಸಮ್ಮುಖದಲ್ಲಿ ತನ್ನ ಹೇಳಿಕೆಯನ್ನು ದಾಖಲಿಸುವ ಹಕ್ಕು ಮಹಿಳೆಯರಿಗೆ ಮಾತ್ರ ನೀಡಲಾಗಿದೆ. ಮಹಿಳೆಯರು ತಮ್ಮ ದೂರುಗಳನ್ನು ನೇರವಾಗಿ ಜಿಲ್ಲಾಧಿಕಾರಿಗಳ ಮುಂದೆ ದಾಖಲಿಸಬಹುದು. ಅಲ್ಲದೆ, ಮಹಿಳೆಯ ಗುರುತನ್ನು ಬಹಿರಂಗಪಡಿಸುವ ಹಕ್ಕು ಪೊಲೀಸರಿಗೆ, ಮಾಧ್ಯಮಗಳಿಗೆ ಮತ್ತು ಅಧಿಕಾರಿಗಳಿಗೆ ಇಲ್ಲ.

ಉಚಿತ ಕಾನೂನು ನೆರವಿನ ಹಕ್ಕು

ಭಾರತದ ಸಂವಿಧಾನವು ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಮಹಿಳೆಯರಿಗೆ ಉಚಿತ ಕಾನೂನು ನೆರವು ನೀಡುವ ಹಕ್ಕನ್ನು ನೀಡುತ್ತದೆ. ನೊಂದ ಮಹಿಳೆ ಪೊಲೀಸ್ ಠಾಣೆಯಲ್ಲಿ ಸ್ಟೇಷನ್ ಹೌಸ್ ಆಫೀಸರ್ (SHO) ನಿಂದ ಸಹಾಯ ಪಡೆಯಬಹುದು ಮತ್ತು SHO ಅವರು ವಕೀಲರನ್ನು ವ್ಯವಸ್ಥೆ ಮಾಡಲು ಕಾನೂನು ಪ್ರಾಧಿಕಾರಕ್ಕೆ ತಿಳಿಸುತ್ತಾರೆ.

ಮಹಿಳೆಯರನ್ನು ರಾತ್ರಿ ಬಂಧಿಸುವಂತಿಲ್ಲ

ಸೂರ್ಯಾಸ್ತದ ನಂತರ ಅಥವಾ ಮುಸ್ಸಂಜೆಯ ನಂತರ ಮಹಿಳೆಯನ್ನು ಬಂಧಿಸುವಂತಿಲ್ಲ ಎಂದು ಕಾನೂನು ಹೇಳುತ್ತದೆ. ಮಹಿಳೆಯ ಅಪರಾಧ ಗಂಭೀರವಾಗಿದ್ದರೂ ಅಥವಾ ವಿಶೇಷ ಪ್ರಕರಣವಾಗಿದ್ದರೂ ಸಹ ಪ್ರಥಮ ದರ್ಜೆ ಮ್ಯಾಜಿಸ್ಟ್ರೇಟ್ ಆದೇಶವಿಲ್ಲದೆ ಪೊಲೀಸರು ಮಹಿಳೆಯನ್ನು ಸಂಜೆಯಿಂದ ಸೂರ್ಯೋದಯದವರೆಗೆ ಬಂಧಿಸಲು ಅವಕಾಶವಿರುವುದಿಲ್ಲ.

Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
Weekly Horoscope: ಮಾರ್ಚ್ 30 ರಿಂದ ಏಪ್ರಿಲ್ 6 ರವರೆಗಿನ ವಾರ ಭವಿಷ್ಯ
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
IPL 2025: ಕನ್ನಡಿಗನ ಕರಾರುವಾಕ್ ದಾಳಿಗೆ ತತ್ತರಿಸಿದ ಮುಂಬೈ ಇಂಡಿಯನ್ಸ್
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Devotional: ಯುಗಾದಿ ಆಚರಣೆ ಹಾಗೂ ಅದರ ಮಹತ್ವ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
Daily Horoscope: ಯುಗಾದಿಯಂದು ದ್ವಾದಶ ರಾಶಿಗಳ ಫಲಾಫಲ ತಿಳಿಯಿರಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
ರಾಜಸ್ಥಾನದ ರಾಜ್ಯಪಾಲ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ನಲ್ಲಿ ಬೆಂಕಿ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
‘ಕೆಡಿ’ ಸಿನಿಮಾದ ನಿಜವಾದ ‘ಹೀರೋ’ ಅನ್ನು ಕೊಂಡಾಡಿದ ಧ್ರುವ ಸರ್ಜಾ
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಹೊಸ ಚೆಂಡಿನಲ್ಲಿ ನಾನೇ ಬೆಸ್ಟ್; ರೋಹಿತ್​ಗೆ ಸಿರಾಜ್ ತಿರುಗೇಟು
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
ಮಹಿಳೆಯರನ್ನು ಕೋಟ್ಯಾಧಿಪತಿ ಮಾಡುತ್ತೇವೆ;WITT ಶೃಂಗಸಭೆಯಲ್ಲಿ ಸ್ಮೃತಿ ಇರಾನಿ
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
2025 ಅಂತ್ಯದೊಳಗೆ ದೇಶಿ ಸೆಮಿಕಂಡಕ್ಟರ್ ಚಿಪ್, ಎಐ ಆರಂಭ;ಅಶ್ವಿನಿ ವೈಷ್ಣವ್
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು
ಹೋಟೆಲ್​ನವರು ಚೆನ್ನಾಗಿ ನೋಡಿಕೊಂಡರು: ಬ್ಯಾಂಕಾಕ್​ನಿಂದ ವಾಪಸ್ಸಾದವರು