Sign In

By signing in or creating an account, you agree with Associated Broadcasting Company's Terms & Conditions and Privacy Policy.

International Womens Day 2025: ಮಾರ್ಚ್ 8 ರಂದೇ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸುವುದು ಏಕೆ?

ಮಾರ್ಚ್ 8 ಮಹಿಳೆಯರಿಗಾಗಿ ಮೀಸಲಾದ ದಿನ. ಪ್ರತಿ ವರ್ಷ ಈ ದಿನದಂದು ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದಂದು ಲಿಂಗ ಸಮಾನತೆ ಹಾಗೂ ಜಗತ್ತಿನಾದ್ಯಂತ ಮಹಿಳೆಯರ ಕೊಡುಗೆಗಳನ್ನು ಗೌರವಿಸಲಾಗುತ್ತದೆ. ಹೌದು, ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆ ಮಾಡಿದ ಮಹಿಳೆಯರನ್ನು ಜಾಗತಿಕ ಮಟ್ಟದಲ್ಲಿ ಗುರುತಿಸಲಾಗುತ್ತದೆ. ಹಾಗಾದ್ರೆ ಮಹಿಳಾ ದಿನಾಚರಣೆ ಆರಂಭವಾದದ್ದು ಯಾವಾಗ? ಈ ದಿನದ ಇತಿಹಾಸ ಹಾಗೂ ಮಹತ್ವವೇನು? ಎನ್ನುವ ಮಾಹಿತಿ ಇಲ್ಲಿದೆ.

International Womens Day 2025: ಮಾರ್ಚ್ 8 ರಂದೇ ಅಂತಾರಾಷ್ಟ್ರೀಯ ಮಹಿಳಾ ದಿನ ಆಚರಿಸುವುದು ಏಕೆ?
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Mar 07, 2025 | 3:44 PM

ಹೆಣ್ಣು ಸಂಸಾರದ ಕಣ್ಣು, ಹೆಣ್ಣೆಂದರೆ ಮನೆಯ ಬೆಳಗುವ ದೀಪ. ನಾಲ್ಕು ಗೋಡೆಗೆ ಸೀಮಿತವಾಗಿದ್ದ ಹೆಣ್ಣು ಇಂದು ಕೈಯಾಡಿಸದ ಕ್ಷೇತ್ರವಿಲ್ಲ. ಎಲ್ಲಾ ಕ್ಷೇತ್ರದಲ್ಲಿ ಗಂಡಿಗೆ ಸಮಾನವಾಗಿ ನಿಂತಿದ್ದಾಳೆ. ತನ್ನದೇ ಛಾಪು ಮೂಡಿಸಿ ತಾನು ಯಾರಿಗೂ ಕಡಿಮೆ ಇಲ್ಲ ಎನ್ನುವುದನ್ನು ಸಾಭೀತು ಪಡಿಸಿದ್ದಾಳೆ. ವಿವಿಧ ಕ್ಷೇತ್ರಗಳಲ್ಲಿ ಮಹಿಳೆಯರ ಸಾಧನೆಗಳನ್ನು ಗುರುತಿಸುವ ಮತ್ತು ಲಿಂಗ ಸಮಾನತೆಯನ್ನು ಎತ್ತಿ ಹಿಡಿಯುವ ಉದ್ದೇಶದಿಂದ ಪ್ರತಿವರ್ಷ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನ (International Womens Day)ವನ್ನು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಮಹಿಳಾ ದಿನದ ಇತಿಹಾಸ

ಅಂತಾರಾಷ್ಟ್ರೀಯ ಮಹಿಳಾ ದಿನವು 20ನೇ ಶತಮಾನದ ಆರಂಭದಲ್ಲಿ ಶುರುವಾಯಿತು. ಉತ್ತರ ಅಮೆರಿಕಾ ಮತ್ತು ಯುರೋಪ್​ನಲ್ಲಿ ಕಾರ್ಮಿಕ ಚಳುವಳಿಗಳಿಂದ ಈ ದಿನದ ಆಚರಣೆಯೂ ಹುಟ್ಟಿಕೊಂಡಿತು. ಮೊದಲ ರಾಷ್ಟ್ರೀಯ ಮಹಿಳಾ ದಿನವನ್ನು ಫೆಬ್ರವರಿ 28, 1909ರಂದು ಯುನೈಟೆಡ್ ಸ್ಟೇಟ್​ನಲ್ಲಿ ಆಚರಿಸಲಾಯಿತು. ನ್ಯೂಯಾರ್ಕ್​ನಲ್ಲಿ 1908ರ ಗಾರ್ಮೆಂಟ್ ಕಾರ್ಮಿಕರ ಮುಷ್ಕರವನ್ನು ಸ್ಮರಣಾರ್ಥವಾಗಿ ಸಮಾಜವಾದಿ ಪಕ್ಷ ಆಫ್ ಅಮೇರಿಕಾ ಆಯೋಜಿಸಿತು.

ನ್ಯೂಯಾರ್ಕ್‌ನಲ್ಲಿ ಸಮಾಜವಾದಿ ಮಹಿಳೆಯರು ಮತ್ತು ಜವಳಿ ಮಹಿಳಾ ಕಾರ್ಮಿಕರು ಕಡಿಮೆ ಗಂಟೆಗಳ ಕೆಲಸ, ಹೆಚ್ಚಿನ ವೇತನ ಮತ್ತು ಮತದಾನದ ಅವಕಾಶಕ್ಕೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು. ಹೀಗೆ ಮಹಿಳಾ ದಿನಾಚರಣೆ ಆರಂಭವಾಯಿತಂತೆ. ಹೌದು, ಯುರೋಪಿಯನ್ ಕಾರ್ಯಕರ್ತರು ಮಹಿಳೆಯರಿಗೆ ಪ್ರತ್ಯೇಕ ದಿನವನ್ನು ನಿಗದಿ ಮಾಡಬೇಕೆಂದು ಅಭಿಯಾನ ಪ್ರಾರಂಭಿಸಿದರು. ಸಮಾನ ವೇತನ ಮತ್ತು ಕೆಲಸದ ಹಕ್ಕುಗಳಿಗಾಗಿ ಮತದಾನ ಮತ್ತು ಮುನ್ನಡೆಸುವ ಹಕ್ಕನ್ನು ಒತ್ತಾಯಿಸಿದರು. ಈ ವೇಳೆ ಒಂದು ದಶಲಕ್ಷಕ್ಕೂ ಹೆಚ್ಚು ಜನರು ಈ ರ್ಯಾಲಿಗಳಲ್ಲಿ ಭಾಗವಹಿಸಿದ್ದರು. ನಂತರ 1910ರಲ್ಲಿ ಕೋಪನ್ ಹೇಗನ್ ನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ಸಮ್ಮೇಳನದಲ್ಲಿ ಕ್ಲಾರಾ ಜೆಟ್ಕಿನ್ ಅಂತಾರಾಷ್ಟ್ರೀಯ ಮಹಿಳಾ ದಿನವನ್ನು ಪ್ರಸ್ತಾಪಿಸಿದ್ದು, ಈ ಕಲ್ಪನೆಯನ್ನು ಅನುಮೋದಿಸಲಾಯಿತು.

ಇದನ್ನೂ ಓದಿ
Image
ವಿಡಿಯೋ ಕಾಲ್‌ ಮೂಲಕ ಪಾಕ್ ಸ್ನೇಹಿತೆಯ ಮದುವೆಯಲ್ಲಿ ಭಾಗಿಯಾದ ಭಾರತೀಯ ಯುವತಿ
Image
ಕ್ಯಾಬೇಜ್ ಗೋಬಿಗೆ 50 ರೂ., ಹೂಕೋಸು ಗೋಬಿಗೆ 70 ರೂ
Image
ಮರಿಮೊಮ್ಮಗಳ ಜೊತೆ ಮಕ್ಕಳಂತೆ ಆಟವಾಡಿದ ಮುತ್ತಾತ
Image
UPPSC ಪರೀಕ್ಷೆಯಲ್ಲಿ 6 ನೇ ರ‍್ಯಾಂಕ್‌ ಗಳಿಸಿ ಡಿಎಸ್ಪಿ ಆದ ಸುಂದರಿ ಇವ್ರೇ ನ

1911ರಲ್ಲಿ ಹಲವಾರು ಯುರೋಪಿಯನ್ ದೇಶಗಳಲ್ಲಿ ಮೊದಲ ಬಾರಿಗೆ ಈ ದಿನವನ್ನು ಆಚರಣೆ ಮಾಡಲಾಯಿತು. ಆದರೆ, ವಿಶ್ವಸಂಸ್ಥೆಯು 1975ರಲ್ಲಿ ಮಹಿಳಾ ದಿನವನ್ನು ಆಚರಿಸಲು ಪ್ರಾರಂಭಿಸಿತು. ಎರಡು ವರ್ಷಗಳ ಬಳಿಕ 1977ರಲ್ಲಿ ವಿಶ್ವ ಸಂಸ್ಥೆ ಜನರಲ್ ಅಸೆಂಬ್ಲಿ ಮಾರ್ಚ್ 8 ಅನ್ನು ಮಹಿಳಾ ಹಕ್ಕುಗಳು ಮತ್ತು ವಿಶ್ವ ಶಾಂತಿಗಾಗಿ ವಿಶ್ವ ಸಂಸ್ಥೆಯ ದಿನವೆಂದು ಘೋಷಿಸಲು ಸದಸ್ಯ ರಾಷ್ಟ್ರಗಳನ್ನು ಆಹ್ವಾನಿಸಿತು. ಹೀಗೆ ಮಾರ್ಚ್ 8 ರಂದು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಅಧಿಕೃತವಾಗಿ ಘೋಷಿಸಲಾಯಿತು. ಅಂದಿನಿಂದ ಈ ವಿಶೇಷ ಮಹಿಳಾ ದಿನವನ್ನು ಆಚರಿಸಿಕೊಂಡು ಬರಲಾಗುತ್ತಿದೆ.

ಇದನ್ನೂ ಓದಿ: ಎಸಿ ಬೇಕಿಲ್ಲ, ಬೇಸಿಗೆಯಲ್ಲಿ ಮನೆಯನ್ನು ತಂಪಾಗಿಡಲು ಇಲ್ಲಿದೆ ನೈಸರ್ಗಿಕ ಮಾರ್ಗಗಳು

ಅಂತಾರಾಷ್ಟ್ರೀಯ ಮಹಿಳಾ ದಿನದ ಥೀಮ್ ಹಾಗೂ ಮಹತ್ವ

ಪ್ರತಿ ವರ್ಷ ಮಹಿಳಾ ದಿನವನ್ನು ಒಂದು ಧ್ಯೇಯವಾಕ್ಯದೊಂದಿಗೆ ಆಚರಿಸಲಾಗುತ್ತದೆ. ಈ ವರ್ಷದ ಥೀಮ್ ಕ್ರಿಯಾಶೀಲತೆಯಾಗಿದೆ. ಈ ವರ್ಷದ ಥೀಮ್ ಮಹಿಳೆಯರು ಮತ್ತು ಹುಡುಗಿಯರ ಹಕ್ಕುಗಳು, ಸಮಾನತೆ ಮತ್ತು ಸಬಲೀಕರಣವನ್ನು ಆಧರಿಸಿದೆ. ಅದಲ್ಲದೇ, ಮಹಿಳೆಯರ ಜೀವನವನ್ನು ಸುಧಾರಿಸಲು ಹಾಗೂ ತ್ವರಿತ ಪ್ರಗತಿಗೆ ಕರೆ ನೀಡುತ್ತದೆ. ಜನರು, ಸರ್ಕಾರಗಳು ಮತ್ತು ಸಂಸ್ಥೆಗಳು ಮಹಿಳೆಯರ ಉನ್ನತಿಗೆ, ಸಮಾನ ಅವಕಾಶಗಳನ್ನು ಒದಗಿಸಲು ಮತ್ತು ತಾರತಮ್ಯವನ್ನು ತೊಡೆದುಹಾಕಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಪ್ರೇರೇಪಿಸುತ್ತದೆ. ಮಹಿಳೆಯರ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ಸಾಧನೆಗಳನ್ನು ಗುರುತಿಸುವುದಾಗಿದೆ. ಅಲ್ಲದೆ, ಈ ದಿನವು ಮಹಿಳೆಯರ ಹಕ್ಕುಗಳು ಮತ್ತು ಸಮಾನತೆಯ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಈ ದಿನವು ಮಹತ್ವದ್ದಾಗಿದೆ. ಹೀಗಾಗಿ ಮಹಿಳಾ ದಿನದಂದು ಸರ್ಕಾರ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳು ಜಾಗೃತಿ ಕಾರ್ಯಕ್ರಮ, ಅಭಿಯಾನಗಳು ಸೇರಿದಂತೆ ಇನ್ನಿತ್ತರ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತವೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಶಾಸಕರ ಪರವಾಗಿ ಕ್ಷಮೆ ಕೇಳಿದ ಅಜಯ್ ರಾವ್, ಕಾರಣ?
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಬಿಜ್ನೋರ್ ವ್ಯಸನ ಮುಕ್ತಿ ಕೇಂದ್ರದಲ್ಲಿ ಯುವಕನ ಕತ್ತು ಹಿಸುಕಿ ಕೊಲೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಅಪ್ಪುನ್ ಜಾತ್ರಿಯಲ್ಲಿ ಕಬ್ಬಿನ ಜ್ಯೂಸ್, ಐಸ್ ಕ್ಯಾಂಡಿಗೆ ಭರ್ಜರಿ ಬೇಡಿಕೆ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಶಾಸಕರನ್ನೂ ಬಿಡದ ಕಳ್ಳರು: ಬಿಜೆಪಿ ಎಂಎಲ್​ಎ ಕಚೇರಿಗೆ ನುಗ್ಗಿ ಕಳ್ಳತನ
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಮುಟ್ಟಲು ಹೋದರೆ ಆಕಾಶ-ಭೂಮಿ ಒಂದಾಗುವ ಹಾಗೆ ಅರಚುತ್ತಾಳೆ: ಶ್ರೀಕಾಂತ್
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸುನೀತಾ ವಿಲಿಯಮ್ಸ್ ಭೂಮಿಗೆ ಮರಳುತ್ತಿದ್ದಂತೆ ಜೂಲಾಸನ್‌ನಲ್ಲಿ ಸಂಭ್ರಮಾಚರಣೆ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಸೋಂಕಿತ ಸೂಜಿ ಚುಚ್ಚುವ ಪ್ರಯತ್ನ ಯಾರಿಂದ ನಡೆದಿತ್ತು ಅಂತ ರಂಗನಾಥ್ ಹೇಳಲ್ಲ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಒಂದು ರಾತ್ರಿ ಮಲಗಲು 5000 ರೂ.: ಪತ್ನಿಯ ಕರಾಳ ಮುಖ ಬಿಚ್ಚಿಟ್ಟ ಪತಿ
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಫೋಟೋ ತೆಗೆಸಿಕೊಳ್ಳುವ ಭರದಲ್ಲಿ ಗೌಡರನ್ನು ನೂಕಿದ ಅಭಿಮಾನಿಗಳು
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!
ಲೋಡ್‌ ಶೆಡ್ಡಿಂಗ್‌: ವಿದ್ಯುತ್​ ಇಲ್ಲದೇ ರೈತರು, ವಿದ್ಯಾರ್ಥಿಗಳು ಪರದಾಟ!