International Yoga Day 2024: ಜೂನ್‌ 21ರಂದೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವುದು ಏಕೆ?

ದಿನನಿತ್ಯ ಯೋಗ ಮಾಡುವುದರಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಹೀಗಾಗಿ ವಿಶ್ವಾದಾದ್ಯಂತ ಯೋಗವನ್ನು ಉತ್ತೇಜಿಸುವ ಮೂಲಕ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ. ಹಾಗಾದ್ರೆ ಈ ದಿನದ ಇತಿಹಾಸ ಹಾಗೂ ಮಹತ್ವದ ಕುರಿತಾದ ಸಂಪೂರ್ಣ ಮಾಹಿತಿಯೂ ಇಲ್ಲಿದೆ.

International Yoga Day 2024: ಜೂನ್‌ 21ರಂದೇ ಅಂತಾರಾಷ್ಟ್ರೀಯ ಯೋಗ ದಿನ ಆಚರಿಸುವುದು ಏಕೆ?
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: Digi Tech Desk

Updated on:Jun 20, 2024 | 10:48 AM

ಭಾರತೀಯ ಸಂಸ್ಕೃತಿಯೊಳಗೆ ಬಹಳ ವರ್ಷಗಳೇ ಹಿಂದೆಯೇ ಯೋಗವು ಬೆಸೆತು ಹೋಗಿದೆ. ಈ ಯೋಗವು ಆರೋಗ್ಯಕರ ಜೀವನವನ್ನು ನಡೆಸಲು ಸಹಾಯಕವಾಗಿದೆ. ಹೀಗಾಗಿ ದೈನಂದಿನ ಜೀವನದಲ್ಲಿ ಅಳವಡಿಸಿಕೊಂಡರೆ ದೈಹಿಕ ಹಾಗೂ ಮಾನಸಿಕ ಆರೋಗ್ಯವು ಸುಧಾರಿಸುತ್ತದೆ. ಯೋಗದ ಬಗ್ಗೆ ಹೆಚ್ಚು ಹೆಚ್ಚು ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿ ವರ್ಷ ಜೂನ್ 21 ಅನ್ನು ‘ಅಂತಾರಾಷ್ಟ್ರೀಯ ಯೋಗ ದಿನ‘ ಎಂದು ಆಚರಿಸಲಾಗುತ್ತದೆ.

ಅಂತಾರಾಷ್ಟ್ರೀಯ ಯೋಗ ದಿನದ ಇತಿಹಾಸ

2014 ರ ಯುನೈಟೆಡ್ ನೇಷನ್ಸ್ ಅಸೆಂಬ್ಲಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಬಗ್ಗೆ ಪ್ರಸ್ತಾಪ ಮಾಡಿದರು. ಈ ಪ್ರಸ್ತಾವನೆಗೆ 177 ಸದಸ್ಯ ರಾಷ್ಟ್ರಗಳಿಂದ ಅನುಮೋದನೆ ಸಿಕ್ಕಿತು. ಆ ಬಳಿಕ 2015 ರ ಜೂನ್ 21 ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಮೊದಲ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯಂದು ಪ್ರಧಾನಿ ಮೋದಿಯವರ ಉಪಸ್ಥಿತಿಯಲ್ಲಿ ಸರಿಸುಮಾರು 36000 ಉನ್ನತ ವ್ಯಕ್ತಿಗಳೊಂದಿಗೆ 35 ನಿಮಿಷಗಳ ಕಾಲ 21 ಯೋಗ ಆಸನಗಳನ್ನು ಪ್ರದರ್ಶಿಸಲಾಯಿತು. ಈ ಬಾರಿ ಜೂನ್ 21 ರಂದು ಹತ್ತನೇಯ ಅಂತರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಗುತ್ತಿದೆ.

ಜೂನ್ 21 ರಂದೇ ಯೋಗ ದಿನಾಚರಣೆ ಆಚರಿಸುವುದೇಕೆ?

ಜೂನ್21 ರಂದು ಸೂರತ್ ಉತ್ತರ ಗೋಳಾರ್ಧದಲ್ಲಿ ಹೆಚ್ಚು ಬೆಳಕು ಪ್ರವೇಶಿಸುತ್ತದೆ. ಈ ದಿನ 21 ದೀರ್ಘವಾಗಿದ್ದು ಸೂರ್ಯನು ಬೇಗನೆ ಉದಯಿಸಿ, ತಡವಾಗಿ ಅಸ್ತಮಿಸುತ್ತಾನೆ. ಈ ದಿನ ದೀರ್ಘವಾಗಿರುವ ಕಾರಣ ಸೂರ್ಯನಿಂದ ಬರುವ ಶಕ್ತಿಯು ಹೆಚ್ಚಾಗಿರುತ್ತದೆ.

ಅಂತರಾಷ್ಟ್ರೀಯ ಯೋಗ ದಿನದ ಥೀಮ್

ಅಂತಾರಾಷ್ಟ್ರೀಯ ಯೋಗ ದಿನವನ್ನು ಈ ಬಾರಿ “ಮಹಿಳಾ ಸಬಲೀಕರಣಕ್ಕಾಗಿ ಯೋಗ” ಎನ್ನುವ ಥೀಮ್ ನಡಿಯಲ್ಲಿ ಆಚರಿಸಲಾಗುತ್ತದೆ. ಮಹಿಳೆಯರ ಒಟ್ಟಾರೆ ಯೋಗಕ್ಷೇಮದಲ್ಲಿ ಯೋಗದ ಪಾತ್ರವನ್ನು ಒತ್ತಿ ಹೇಳುತ್ತದೆ.

ಇದನ್ನೂ ಓದಿ: ಯೋಗ ವಿಶ್ವಕ್ಕೆ ಭಾರತ ನೀಡಿದ ಶ್ರೇಷ್ಠ ಕೊಡುಗೆ: ನಾರ್ವೇಜಿಯನ್ ರಾಯಭಾರಿ

ಅಂತರಾಷ್ಟ್ರೀಯ ಯೋಗ ದಿನದ ಮಹತ್ವ ಹಾಗೂ ಆಚರಣೆ

ಅಂತಾರಾಷ್ಟ್ರೀಯ ಯೋಗ ದಿನವು ಯೋಗಾಭ್ಯಾಸದ ಹಲವಾರು ಪ್ರಯೋಜನಗಳ ಬಗ್ಗೆ ಅರಿವು ಮೂಡಿಸಲು ಮತ್ತು ಆರೋಗ್ಯಕರ ಜೀವನಶೈಲಿಯನ್ನು ಅಳವಡಿಸಿಕೊಳ್ಳಲು ಪ್ರಪಂಚದಾದ್ಯಂತ ಜನರನ್ನು ಯೋಗಭ್ಯಾಸಕ್ಕೆ ಉತ್ತೇಜಿಸುವ ಉದ್ದೇಶವನ್ನು ಹೊಂದಿದೆ. ಅದಲ್ಲದೇ, ದೈಹಿಕ ಆರೋಗ್ಯ ಮಾತ್ರವಲ್ಲದೇ ಮಾನಸಿಕ ಆರೋಗ್ಯವನ್ನು ಸುಧಾರಿಸಿ ರೋಗಗಳನ್ನು ದೂರವಾಗಿಸುತ್ತದೆ. ಈ ವಿಶೇಷ ದಿನದಂದು ವಿಶ್ವಾದ್ಯಂತ ವಿವಿಧ ಕಾರ್ಯಕ್ರಮಗಳು, ಕಾರ್ಯಾಗಾರಗಳನ್ನು ಆಯೋಜಿಸಲಾಗುತ್ತದೆ. ಎಲ್ಲಾ ವಯಸ್ಸಿನವರು ಈ ಯೋಗ ಚಟುವಟಿಕೆಯಲ್ಲಿ ಭಾಗವಹಿಸುತ್ತಾರೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 12:59 pm, Mon, 17 June 24