AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತರಾಷ್ಟ್ರೀಯ ಯೋಗ ದಿನ: ಯೋಗ ದಿನದ ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ ಮಾಹಿತಿ

2015 ರ ಜೂನ್ 21ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ವಿಶೇಷ ದಿನದಂದು ಪ್ರಧಾನಿ ಮೋದಿಯವರ ಉಪಸ್ಥಿತಿಯಲ್ಲಿ ಸುಮಾರು 36000 ಉನ್ನತ ವ್ಯಕ್ತಿಗಳೊಂದಿಗೆ 35 ನಿಮಿಷಗಳ ಕಾಲ 21 ಯೋಗ ಆಸನಗಳನ್ನು ಪ್ರದರ್ಶಿಸಲಾಯಿತು.

ಅಂತರಾಷ್ಟ್ರೀಯ ಯೋಗ ದಿನ: ಯೋಗ ದಿನದ ಇತಿಹಾಸ, ಮಹತ್ವದ ಬಗ್ಗೆ ಇಲ್ಲಿದೆ  ಮಾಹಿತಿ
International Yoga DayImage Credit source: TIME
TV9 Web
| Edited By: |

Updated on:Jun 13, 2023 | 3:23 PM

Share

ಯೋಗ ಪ್ರಾಚೀನ ಕಲೆ. ಇದು 5000 ವರ್ಷಗಳ ಆಳವಾದ ಬೇರೂರಿರುವ ಇತಿಹಾಸವನ್ನು ಹೊಂದಿದೆ. ದೈಹಿಕ ಭಂಗಿಗಳೊಂದಿಗೆ (ಆಸನಗಳು) ಉಸಿರಾಟದ ವ್ಯಾಯಾಮಗಳ (ಪ್ರಾಣಾಯಾಮ) ಸಂಯೋಜನೆಯ ಮೂಲಕ ಮನಸ್ಸು ಮತ್ತು ದೇಹದ ಆಧ್ಯಾತ್ಮಿಕ, ಭಾವನಾತ್ಮಕ ಮತ್ತು ಮಾನಸಿಕ ಯೋಗಕ್ಷೇಮಕ್ಕೆ ಇದು ಸಮಗ್ರ ವಿಧಾನವಾಗಿದೆ. ಅಂತರಾಷ್ಟ್ರೀಯ ಯೋಗ ದಿನವು ಯೋಗ ಮಾಡುವುದರಿಂದಾಗುವ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಯಾವ ರೀತಿ ಪ್ರಯೋಜನಗಳನ್ನು ಹೊಂದಿದೆ ಹಾಗೂ ಯೋಗವನ್ನು ವಿಶ್ವಾದ್ಯಂತ ಉತ್ತೇಜಿಸುವ ಗುರಿಯನ್ನು ಹೊಂದಿದೆ.

ಭಾರತ ಮತ್ತು ಯೋಗದ ನಡುವಿನ ವಿಶಿಷ್ಟ ಸಂಪರ್ಕ:

ಭಾರತ ಮತ್ತು ಯೋಗವು ಪ್ರಪಂಚದ ಇತರ ದೇಶಗಳಿಗಿಂತ ವಿಶೇಷವಾದ ಸಂಬಂಧವನ್ನು ಹೊಂದಿದೆ. ಆಧ್ಯಾತ್ಮಿಕ ಭಾರತಕ್ಕೆ ತೆರೆದುಕೊಳ್ಳಲು ಮತ್ತು ಆಳವಾದ ಪರಿಕಲ್ಪನೆಗಳನ್ನು ಅರ್ಥಮಾಡಿಕೊಳ್ಳಲು ಇದು ಅತ್ಯುತ್ತಮ ಮಾರ್ಗವಾಗಿದೆ. ಯೋಗದ ಮೂಲಕ್ಕೆ ಯಾವುದೇ ಬಲವಾದ ಪುರಾವೆಗಳಿಲ್ಲ. ಆದಾಗ್ಯೂ, ಅನೇಕ ಪುರಾತತ್ವಶಾಸ್ತ್ರಜ್ಞರು ಬುದ್ಧನ ಕಾಲದಲ್ಲಿ ಯೋಗವು ಭಾರತದಲ್ಲಿ ಹುಟ್ಟಿಕೊಂಡಿರಬೇಕು ಎಂದು ಬಲವಾಗಿ ಪ್ರತಿಪಾದಿಸುತ್ತಾರೆ. ವಿಪರ್ಯಾಸವೆಂದರೆ, ಅಂತರರಾಷ್ಟ್ರೀಯ ಮಟ್ಟದಲ್ಲಿ ಯೋಗಕ್ಕಾಗಿ ಒಂದು ದಿನವನ್ನು ಮೀಸಲಿಡುವ ಕ್ರಮಗಳನ್ನು ಪ್ರಾರಂಭಿಸುವ ದೇಶ ಭಾರತವಾಗಿದೆ.

ಇದನ್ನೂ ಓದಿ: ಭವ್ಯವಾದ ಪ್ರಭೇದಗಳ ದುರಂತ ಅಳಿವು: ಕಳೆದ 100 ವರ್ಷಗಳಲ್ಲಿ ಅಳಿದುಹೋದ ಪ್ರಾಣಿಗಳು ಇವು

2014 ರ ಯುನೈಟೆಡ್ ನೇಷನ್ಸ್ ಅಸೆಂಬ್ಲಿಯಲ್ಲಿ ಭಾರತದ ಪ್ರಧಾನಿ ನರೇಂದ್ರ ಮೋದಿಯವರು ತಮ್ಮ ಭಾಷಣದಲ್ಲಿ ಅಂತಾರಾಷ್ಟ್ರೀಯ ಯೋಗ ದಿನದ ಕಲ್ಪನೆಯನ್ನು ಪ್ರಸ್ತಾಪಿಸಿದರು. ಈ ಪ್ರಸ್ತಾವನೆಗೆ 177 ಸದಸ್ಯ ರಾಷ್ಟ್ರಗಳಿಂದ ಅನುಮೋದನೆ ಸಿಕ್ಕಿತ್ತು. ವಿಶ್ವ ರಾಷ್ಟ್ರಗಳಿಂದ ಅತ್ಯಧಿಕ ಬೆಂಬಲವನ್ನು ಪಡೆದಿರುವ ಪ್ರಸ್ತಾವನೆ ಇದಾಗಿದ್ದು, ನಂತರ, ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನವೆಂದು ಆಚರಣೆಗೆ ತರಲಾಯಿತು.

2015 ರ ಜೂನ್ 21ರಂದು ಮೊದಲ ಬಾರಿಗೆ ಅಧಿಕೃತವಾಗಿ ಅಂತರರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಈ ವಿಶೇಷ ದಿನದಂದು ಪ್ರಧಾನಿ ಮೋದಿಯವರ ಉಪಸ್ಥಿತಿಯಲ್ಲಿ ಸುಮಾರು 36000 ಉನ್ನತ ವ್ಯಕ್ತಿಗಳೊಂದಿಗೆ 35 ನಿಮಿಷಗಳ ಕಾಲ 21 ಯೋಗ ಆಸನಗಳನ್ನು ಪ್ರದರ್ಶಿಸಿದರು. ಅಂದಿನಿಂದ ಇಂದಿನವರೆಗೂ ಅದನ್ನು ಅನುಸರಿಸಿಕೊಂಡು ಬರಲಾಗುತ್ತಿದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ; 

Published On - 1:12 pm, Tue, 13 June 23

ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
‘45’ ಸಿನಿಮಾಕ್ಕೆ ಪೈರಸಿ ಕಾಟ: ನಿರ್ಮಾಪಕ ಹೇಳಿದ್ದೇನು?
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಚಿತ್ರದುರ್ಗ ಬಸ್ ದುರಂತಕ್ಕೆ ಬಿಗ್​​​ ಟ್ವಿಸ್ಟ್
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಶಾಲೆ ಮಕ್ಕಳಿಗೆ ವಿಮಾನದಲ್ಲಿ ಪ್ರವಾಸ: ಮುಖ್ಯ ಶಿಕ್ಷಕರದ್ದೇ ಎಲ್ಲ ಖರ್ಚು!
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಮೆಟ್ರೋನಲ್ಲಿ ಮೈಮುಟ್ಟಿ ಅಸಭ್ಯ ವರ್ತನೆ: ಕಾಮುಕನ ಕಿರುಕುಳ ಬಿಚ್ಚಿಟ್ಟ ಯುವತಿ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
ಹನಿಮೂನ್ ಟ್ರಿಪ್ ಅರ್ಧದಲ್ಲೇ ವಾಪಸ್ಸಾಗಿ ನವವಧು ಆತ್ಮಹತ್ಯೆ
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
'ಫಸ್ಟ್​​ ನೈಟ್​​ ದಿನ ಗೊತ್ತಾಯಿತು ಅವನು ಗಂಡಸೇ ಅಲ್ಲ'
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಇಕ್ಬಾಲ್ ಹುಸೇನ್ ವಿರುದ್ಧ ರೊಚ್ಚಿಗೆದ್ದ ನಗರಸಭೆ ಅಧ್ಯಕ್ಷ! ವಿಡಿಯೋ ನೋಡಿ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ
ಬಣ ಬಡಿದಾಟದ ನಡುವೆಯೂ ಒಂದೇ ಹೆಲಿಕಾಪ್ಟರ್​ನಲ್ಲಿ ಸಿಎಂ-ಡಿಸಿಎಂ ಪ್ರಯಾಣ