International Youth Day 2025: ಅಂತಾರಾಷ್ಟ್ರೀಯ ಯುವ ದಿನ; ರಾಷ್ಟ್ರ ನಿರ್ಮಾಣದಲ್ಲಿ ಯುವ ಶಕ್ತಿಯ ಪಾತ್ರ ಅಪಾರ
ರಾಷ್ಟ್ರ ನಿರ್ಮಾಣದಲ್ಲಿ ಯುವ ಶಕ್ತಿಯ ಪಾತ್ರ ಮಹತ್ತರವಾದದ್ದು. ಯಾವುದೇ ಒಂದು ದೇಶದ ಅಭಿವೃದ್ಧಿಯಲ್ಲಿ ಆ ದೇಶದ ಯುವ ಶಕ್ತಿಯ ಕೊಡುಗೆ ಹೆಚ್ಚಿರುತ್ತದೆ. ಹಾಗಾಗಿ ದೇಶದ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಎಷ್ಟು ಮುಖ್ಯ ಎಂಬುದನ್ನು ಸಾರಲು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ವಿಷಯಗಳಲ್ಲಿ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರತಿವರ್ಷ ಆಗಸ್ಟ್ 11 ರಂದು ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವವನ್ನು ತಿಳಿಯೋಣ ಬನ್ನಿ.

ಯಾವುದೇ ದೇಶದ ಪ್ರಗತಿ, ಅಭಿವೃದ್ಧಿಯಲ್ಲಿ, ರಾಷ್ಟ್ರ ನಿರ್ಮಾಣದ ಕಾರ್ಯದಲ್ಲಿ ಆ ದೇಶದ ಯುವಶಕ್ತಿಯ (Youth’s) ಪಾತ್ರ ಮಹತ್ವದ್ದಾಗಿದೆ. ದೇಶದ ಜನಸಂಖ್ಯೆಯಲ್ಲಿ ಬಹುಪಾಲು ಯುವಕರಿದ್ದರೆ, ಆ ದೇಶದ ಅಭಿವೃದ್ಧಿ ಅತ್ಯಂತ ವೇಗವಾಗಿ ಸಾಗುತ್ತದೆ. ಹೌದು ಯುವ ಜನತೆಯ ಸಾಮಾಜಿಕ, ಆರ್ಥಿಕ, ರಾಜಕೀಯ, ತಾಂತ್ರಿಕ ಜ್ಞಾನದಿಂದಾಗಿ ದೇಶ ಪ್ರಗತಿಯತ್ತ ಸಾಗುತ್ತದೆ. ಇದೇ ಕಾರಣಕ್ಕೆ ಯುವಕರೇ ರಾಷ್ಟ್ರದ ಶಕ್ತಿ ಎಂದು ಹೇಳುವುದು. ಹಾಗಾಗಿ ಸಮಾಜವು ಸುಸ್ಥಿರ ಅಭಿವೃದ್ಧಿಯತ್ತ ಸಾಗಲು ಯುವಕರ ಪಾತ್ರ ಎಷ್ಟು ಮುಖ್ಯ ಎಂದು ಸಾರಲು, ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ವಿಷಯಗಳಲ್ಲಿ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸಲು ಪ್ರತಿವರ್ಷ ಆಗಸ್ಟ್ 11 ರಂದು ಅಂತಾರಾಷ್ಟ್ರೀಯ ಯುವ (International Youth Day) ದಿನವನ್ನು ಆಚರಿಸಲಾಗುತ್ತದೆ. ಈ ವಿಶೇಷ ದಿನದ ಹಿನ್ನೆಲೆ ಏನೆಂಬುದನ್ನು ನೋಡೋಣ ಬನ್ನಿ.
ಅಂತಾರಾಷ್ಟ್ರೀಯ ಯುವ ದಿನದ ಇತಿಹಾಸ:
1999 ರಲ್ಲಿ ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಬೇಕು ಎಂಬ ನಿರ್ಣಯವನ್ನು ವಿಶ್ವ ಸಂಸ್ಥೆಯ ಸಅಮಾನ್ಯ ಸಭೆ ಘೋಷಿಸಿತು. 1998 ರಲ್ಲಿ, ಪೋರ್ಚುಗಲ್‌ನ ಲಿಸ್ಬನ್‌ನಲ್ಲಿ ವಿಶ್ವ ಯುವ ಸಮ್ಮೇಳನವನ್ನು ಆಯೋಜಿಸಲಾಗಿತ್ತು. ಇದರಲ್ಲಿ ವಿವಿಧ ದೇಶಗಳ ಪ್ರತಿನಿಧಿಗಳು ಭಾಗವಹಿಸಿದ್ದರು. ಈ ಸಮ್ಮೇಳನದಲ್ಲಿ, ಭಾಗವಹಿಸಿದ್ದ ಪ್ರತಿನಿಧಿಗಳು ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸುವ ಪ್ರಸ್ತಾಪವನ್ನು ಮಾಡಿದರು. ನಂತರ ಡಿಸೆಂಬರ್ 17, 1999 ರಂದು, ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು ಈ ಪ್ರಸ್ತಾಪವನ್ನು ಅನುಮೋದಿಸಿತು. ಅಂದಿನಿಂದ, ಪ್ರತಿ ವರ್ಷ ಆಗಸ್ಟ್ 12 ರಂದು ಅಂತಾರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತಿದೆ.
ಅಂತಾರಾಷ್ಟ್ರೀಯ ಯುವ ದಿನದ ಉದ್ದೇಶ:
ಯುವ ದಿನದ ಮಹತ್ವವೆಂದರೆ ಯುವಕರನ್ನು ಒಗ್ಗೂಡಿಸುವುದು ಮತ್ತು ಸಾಮಾಜಿಕ, ಆರ್ಥಿಕ ಮತ್ತು ಎಲ್ಲಾ ರೀತಿಯ ಅಭಿವೃದ್ಧಿಯಲ್ಲಿ ಅವರು ಕೊಡುಗೆಯನ್ನು ಗುರುತಿಸುವುದು ಮತ್ತು ಎಲ್ಲಾ ಕ್ಷೇತ್ರದಲ್ಲೂ ಅವರ ಭಾಗವಹಿಸುವಿಕೆಯನ್ನು ಉತ್ತೇಜಿಸುವುದಾಗಿದೆ. ಒಟ್ಟಿನಲ್ಲಿ ಸಾಮಾಜಿಕ, ಆರ್ಥಿಕ, ರಾಜಕೀಯ ಸೇರಿದಂತೆ ಎಲ್ಲಾ ಕ್ಷೇತ್ರಗಳಲ್ಲೂ ಯುವಕರ ಭಾಗವಹಿಸುವಿಕೆಯನ್ನು ಹೆಚ್ಚಿಸುವುದು ಮತ್ತು ಯುವಕರನ್ನು ಪ್ರೋತ್ಸಾಹಿಸುವುದು ಅಂತಾರಾಷ್ಟ್ರೀಯ ಯುವ ದಿನದ ಆಚರಣೆಯ ಉದ್ದೇಶವಾಗಿದೆ. ಅಲ್ಲದೆ ಪ್ರಪಂಚದಾದ್ಯಂತ ಯುವಕರು ಎದುರಿಸುತ್ತಿರುವ ಸವಾಲುಗಳನ್ನು ಗುರುತಿಸುವುದು ಮತ್ತು ಅವುಗಳಿಗೆ ಪರಿಹಾರಗಳನ್ನು ಕಂಡುಕೊಳ್ಳುವುದು, ಯುವಕರನ್ನು ಸಬಲೀಕರಣಗೊಳಿಸುವುದು ಮತ್ತು ದೇಶದ ಪ್ರಗತಿಯಲ್ಲಿ ಅವರ ಪಾತ್ರವನ್ನು ಖಚಿತಪಡಿಸಿಕೊಳ್ಳುವುದು ಈ ದಿನದ ಆಚರಣೆಯ ಉದ್ದೇಶಗಳಲ್ಲಿ ಒಂದಾಗಿದೆ.
ಇದನ್ನೂ ಓದಿ: ಯುವಕರು ದೇಶದ ಭವಿಷ್ಯ; ವಿಶ್ವ ಯುವ ಕೌಶಲ್ಯ ದಿನವನ್ನು ಆಚರಿಸುವ ಉದ್ದೇಶವನ್ನು ತಿಳಿಯಿರಿ
ಈ ದಿನದಂದು ದೇಶ ವಿದೇಶಗಳಲ್ಲಿ ಯುವಕರಿಗಾಗಿ ಅನೇಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತದೆ. ಇದರಲ್ಲಿ ಸರ್ಕಾರ ಹಾಗೂ ಸರ್ಕಾರೇತರ ಸಂಸ್ಥೆಗಳು ಭಾಗವಹಿಸುತ್ತದೆ. ಯುವಜನರನ್ನು ಮುಖ್ಯ ವಾಹಿನಿಯೊಂದಿಗೆ ಹೇಗೆ ಸಂಪರ್ಕಿಸುವುದು ಮತ್ತು ರಾಷ್ಟ್ರ ನಿರ್ಮಾಣ, ಅಭಿವೃದ್ಧಿಯಲ್ಲಿ ಅವರ ಸಕಾರಾತ್ಮಕ ಶಕ್ತಿಯನ್ನು ಹೇಗೆ ಬಳಸುವುದು ಎಂಬುದರ ಚರ್ಚೆಯನ್ನು ನಡೆಸಲಾಗುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ








