AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Zebra Day 2026: ಜೀಬ್ರಾ ದಿನವನ್ನು ಆಚರಿಸುವುದೇಕೆ? ಇದರ ಹಿಂದಿನ ಕಾರಣವನ್ನು ತಿಳಿಯಿರಿ

ಜೀಬ್ರಾಗಳು ಹೆಚ್ಚಾಗಿ ಆಫ್ರಿಕನ್ ಖಂಡದಾದ್ಯಂತ, ಕೀನ್ಯಾ ಮತ್ತು ಇಥಿಯೋಪಿಯಾದ ಅರೆ-ಮರುಭೂಮಿ ಪ್ರದೇಶಗಳಲ್ಲಿ ಮತ್ತು ನಮೀಬಿಯಾ, ಅಂಗೋಲಾ ಮತ್ತು ದಕ್ಷಿಣ ಆಫ್ರಿಕಾದ ಗುಡ್ಡಗಾಡು ಪ್ರದೇಶಗಳಲ್ಲಿ ಕಂಡುಬರುವ ಪ್ರಾಣಿಗಳಾಗಿದ್ದು, ಆವಾಸಸ್ಥಾನದ ನಷ್ಟ, ಬೇಟೆಯ ಕಾರಣದಿಂದ ಅಳಿವಿನಂಚಿಗೆ ತಲುಪಿವೆ. ಹಾಗಾಗಿ ಜೀಬ್ರಾಗಳ ರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜನವರಿ 31 ರಂದು ಅಂತಾರಾಷ್ಟ್ರೀಯ ಜೀಬ್ರಾ ದಿನವನ್ನು ಆಚರಿಸಲಾಗುತ್ತದೆ.

International Zebra Day 2026: ಜೀಬ್ರಾ ದಿನವನ್ನು ಆಚರಿಸುವುದೇಕೆ? ಇದರ ಹಿಂದಿನ ಕಾರಣವನ್ನು ತಿಳಿಯಿರಿ
ಅಂತಾರಾಷ್ಟ್ರೀಯ ಜೀಬ್ರಾ ದಿನImage Credit source: Unsplash
ಮಾಲಾಶ್ರೀ ಅಂಚನ್​
|

Updated on: Jan 31, 2026 | 10:14 AM

Share

ಕಪ್ಪು ಬಿಳುಪಿನ ಪಟ್ಟೆಗಳನ್ನು ಹೊಂದಿರುವ ಜೀಬ್ರಾಗಳನ್ನು (Zebra) ಪ್ರಾಣಿ ಸಾಮ್ರಾಜ್ಯದ ಅತ್ಯಂತ ಆಕರ್ಷಕ ಮತ್ತು ಬುದ್ಧಿವಂತ ಪ್ರಾಣಿಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಇವು ಈಕ್ವಿಡೇ ಕುದುರೆ ಕುಟುಂಬಕ್ಕೆ ಸೇರಿದ ಪ್ರಾಣಿಗಳಾಗಿದ್ದು, ಇವು ಹೆಚ್ಚಾಗಿ ಆಫ್ರಿಕನ್ ಖಂಡದಾದ್ಯಂತ, ಕೀನ್ಯಾ ಮತ್ತು ಇಥಿಯೋಪಿಯಾದ ಅರೆ-ಮರುಭೂಮಿ ಪ್ರದೇಶಗಳಲ್ಲಿ ಮತ್ತು ನಮೀಬಿಯಾ, ಅಂಗೋಲಾ ಮತ್ತು ದಕ್ಷಿಣ ಆಫ್ರಿಕಾದ ಪರ್ವತ ಪ್ರದೇಶಗಳಲ್ಲಿ ಕಂಡುಬರುತ್ತವೆ. ಗ್ರೆವಿಸ್ ಜೀಬ್ರಾ, ಪ್ಲೈನ್ಸ್ ಜೀಬ್ರಾ ಮತ್ತು ಮೌಂಟೇನ್ ಜೀಬ್ರಾ ಹೀಗೆ ಒಟ್ಟು ಮೂರು ವಿಧದ ಜೀಬ್ರಾಗಳಿದ್ದು, ಇಂದು ಇವು ಕಾಡಿನ ನಾಶ, ಆವಾಸಸ್ಥಾನದ ನಷ್ಟ, ಅಕ್ರಮ ಬೇಟೆಯ ಕಾರಣದಿಂದ ಅಳಿವಿನಂಚಿಗೆ ತಲುಪಿವೆ. ಹಾಗಾಗಿ ಈ ಸಾದು ಪ್ರಾಣಿಗಳ ರಕ್ಷಣೆಯ ಉದ್ದೇಶದಿಂದ ಅಂತಾರಾಷ್ಟ್ರೀಯ ಜೀಬ್ರಾ ದಿನವನ್ನು ಪ್ರತಿವರ್ಷ ಜನವರಿ 31 ರಂದು ಆಚರಿಸಲಾಗುತ್ತದೆ. ಈ ದಿನದ ಇತಿಹಾಸ ಮತ್ತು ಮಹತ್ವದ ಸಂಪೂರ್ಣ ಮಾಹಿತಿಯನ್ನು ತಿಳಿಯಿರಿ.‌

ಅಂತಾರಾಷ್ಟ್ರೀಯ ಜೀಬ್ರಾ ದಿನದ ಇತಿಹಾಸವೇನು?

ಸ್ಮಿತ್ಸೋನಿಯನ್ ರಾಷ್ಟ್ರೀಯ ಮೃಗಾಲಯ ಹಾಗೂ ಕನ್ಸರ್ವೇಶನ್ ಬಯಾಲಜಿ ಇನ್‌ಸ್ಟಿಟ್ಯೂಟ್‌ ನಂತಹ ಸಂರಕ್ಷಣಾ ಸಂಸ್ಥೆಗಳ ಒಕ್ಕೂಟವು ಈ ಅಂತಾರಾಷ್ಟ್ರೀಯ ಜೀಬ್ರಾ ದಿನವನ್ನು ಆಚರಿಸಲು ಆರಂಭಿಸಿತು. ಆವಾಸಸ್ಥಾನ ಸ್ಥಾನದ ನಷ್ಟ ಬೇಟೆ ಇವೆಲ್ಲದರ ಕಾರಣದಿಂದ ಕಳೆದ ಮೂರು ದಶಕಗಳಲ್ಲಿ ಜೀಬ್ರಾ ಸಂತತಿಗಳು ದೊಡ್ಡ ಪ್ರಮಾಣದಲ್ಲಿ ಅವನತಿಯತ್ತ ತಲುಪಿದ್ದು, ಹಾಗಾಗಿ ಜೀಬ್ರಾ ಸಂತತಿಯನ್ನು ರಕ್ಷಣೆ ಮಾಡಬೇಕು ಎಂಬ ಉದ್ದೇಶದಿಂದ ಈ ಸಂಸ್ಥೆಗಳು ಒಟ್ಟುಗೂಡಿ ಅಂತಾರಾಷ್ಟ್ರೀಯ ಜೀಬ್ರಾ ದಿನವನ್ನು ಆಚರಿಸುವ ಪರಿಕಲ್ಪನೆಯನ್ನು ಜಾರಿಗೆ ತಂದಿತು. ಇಂದು ಪ್ರತಿವರ್ಷ ಜನವರಿ 31 ರಂದು ಈ ವಿಶೇಷ ಜಾಗೃತಿ ದಿನವನ್ನು ಆಚರಿಸಲಾಗುತ್ತಿದೆ.

ಇದನ್ನೂ ಓದಿ: ಜನವರಿ 30 ರಂದು ಹುತಾತ್ಮರ ದಿನವನ್ನು ಆಚರಿಸುವುದೇಕೆ? ಇಲ್ಲಿದೆ ಮಾಹಿತಿ

ಅಂತಾರಾಷ್ಟ್ರೀಯ ಜೀಬ್ರಾ ದಿನದ ಮಹತ್ವವೇನು?

  • ಜೀಬ್ರಾಗಳ  ಸಂತತಿಯನ್ನು ಸಂರಕ್ಷಿಸುವುದು, ಅವುಗಳ ಬಗ್ಗೆ ಕಾಳಜಿ ವಹಿಸುವುದು ಅಂತಾರಾಷ್ಟ್ರೀಯ ಜೀಬ್ರಾ ದಿನದ ಮುಖ್ಯ ಉದ್ದೇಶವಾಗಿದೆ.
  • ಭೂಮಿಯ ಮೇಲೆ  ಎಲ್ಲಾ ಜೀವಿಗಳಿಗೂ ಸ್ವತಂತ್ರವಾಗಿ ಜೀವಿಸುವ ಹಕ್ಕಿದ. ಅಂತರರಾಷ್ಟ್ರೀಯ ಜೀಬ್ರಾ ದಿನವು ಎಲ್ಲಾ ಜೀವಿಗಳ ಶಾಂತಿಯುತ ಸಹಬಾಳ್ವೆಯನ್ನು ಉತ್ತೇಜಿಸುತ್ತದೆ.
  • ಈ ದಿನದಂದು ಹಲವಾರು ಕಾರ್ಯಕ್ರಮಗಳನ್ನು ಆಯೋಜಿಸಿ, ಈ ಪ್ರಾಣಿಗಳನ್ನು ರಕ್ಷಣೆ ಮಾಡುವುದರಿಂದ ಪರಿಸರ ಸಮತೋಲನಕ್ಕೆ ಹೇಗೆ ಸಹಕಾರಿಯಾಗಲಿದೆ ಎನ್ನುವುದರ ಬಗ್ಗೆ ಅರಿವು ಮೂಡಿಸಲಾಗುತ್ತದೆ. ಹಾಗೆಯೇ ಅನೇಕ ಕಡೆಗಳಲ್ಲಿ ಜಾಗೃತಿ ಅಭಿಯಾನಗಳು ಮತ್ತು ದೇಣಿಗೆ ಅಭಿಯಾನಗಳನ್ನು ಹಮ್ಮಿಕೊಳ್ಳಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ