ಮಕ್ಕಳ ಮೇಲಿನ ಒತ್ತಡವೇ ಹೃದಯಾಘಾತಕ್ಕೆ ಕಾರಣವಾಗುತ್ತಿದೆಯೇ? ಹೆತ್ತವರು ಈ ಬಗ್ಗೆ ಗಮನ ಕೊಡಿ

ಇತ್ತೀಚೆಗಿನ ದಿನಗಳಲ್ಲಿ ಜೀವನ ಶೈಲಿ ಹಾಗೂ ಆಹಾರ ಕ್ರಮದಲ್ಲಿಯಾಗುವ ಬದಲಾವಣೆಗಳು ಅನೇಕ ಆರೋಗ್ಯ ಸಮಸ್ಯೆಗಳು ಬಾಧಿಸುತ್ತಿದೆ. ಹೀಗಾಗಿ ಸಣ್ಣ ವಯಸ್ಸಿನಲ್ಲಿಯೇ ಅನೇಕ ರೀತಿಯ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯುತ್ತಿರುವವರ ಸಂಖ್ಯೆಗೇನು ಕೊರತೆಯಿಲ್ಲ. ಈ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆಯು ಹೆಚ್ಚಾಗುತ್ತಿದ್ದು, ಮಕ್ಕಳು ಹೃದಯಾಘಾತಕ್ಕೆ ಒಳಗಾಗುತ್ತಿದ್ದಾರೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಹೃದಯಾಘಾತಕ್ಕೆ ಕಾರಣಗಳು ಹಲವಾದರೂ ಪೋಷಕರು ಹೆಚ್ಚು ಜಾಗ್ರತೆ ವಹಿಸುವುದು ಅಗತ್ಯ.

ಮಕ್ಕಳ ಮೇಲಿನ ಒತ್ತಡವೇ ಹೃದಯಾಘಾತಕ್ಕೆ ಕಾರಣವಾಗುತ್ತಿದೆಯೇ? ಹೆತ್ತವರು ಈ ಬಗ್ಗೆ ಗಮನ ಕೊಡಿ
ಸಾಂದರ್ಭಿಕ ಚಿತ್ರ
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Feb 16, 2024 | 6:06 PM

ಕಳೆದ ಮೂರು ನಾಲ್ಕು ವರ್ಷಗಳಿಂದಿಚೆಗೆ ಗಟ್ಟಿಮುಟ್ಟಾಗಿರುವ ಆರೋಗ್ಯವಂತರೂ ಕೂಡ ಏಕಾಏಕಿ ಹೃದಯಘಾತದಿಂದ ಸಾವನ್ನಪ್ಪುತ್ತಿದ್ದಾರೆ. ಈ ಹಿಂದೆ ವಯಸ್ಸಾದವರಲ್ಲಿ ಅಥವಾ ಮಧ್ಯ ವಯಸ್ಕರಲ್ಲಿ ಈ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಳ್ಳುತ್ತಿತ್ತು. ಆದರೆ ಇದೀಗ ಹಿರಿಯರು ಮಾತ್ರವಲ್ಲ, ಮಕ್ಕಳು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿದ್ದು, ಇದು ಹೆತ್ತವರ ಆತಂಕಕ್ಕೆ ಕಾರಣವಾಗಿದೆ.

ಮಕ್ಕಳಲ್ಲಿ ಸಂಭವಿಸುವ ಹೃದಯಾಘಾತಕ್ಕೆ ಕಾರಣಗಳು ಇವು

* ಆಹಾರ ಕ್ರಮದಲ್ಲಿನ ಬದಲಾವಣೆ: ಇತ್ತೀಚೆಗಿನ ದಿನಗಳಲ್ಲಿ ಮಕ್ಕಳು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಇದಕ್ಕೆ ಮುಖ್ಯ ಕಾರಣ ಮಕ್ಕಳ ಜೀವನ ಶೈಲಿ ಹಾಗೂ ಆಹಾರ ಕ್ರಮದಲ್ಲಿನ ಬದಲಾವಣೆಗಳು. ಜಂಕ್‌ಫುಡ್‌, ಬೇಕರಿ ಫುಡ್‌ ಗಳ ಅತಿಯಾದ ಸೇವನೆಯಿಂದಾಗಿ ಮಕ್ಕಳಲ್ಲಿ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಿದೆ.

* ದೈಹಿಕ ವ್ಯಾಯಾಮದ ಕೊರತೆ : ಮಕ್ಕಳು ಹೆಚ್ಚಾಗಿ ಮೊಬೈಲ್‌ ಗೇಮ್‌ಗಳನ್ನು ಹೆಚ್ಚಾಗಿ ಆಡುತ್ತಿದ್ದು, ದೈಹಿಕವಾಗಿ ಆಡುವ ಆಟಗಳಿಗೆ ಗಮನ ಹರಿಸುತ್ತಿಲ್ಲ. ಹೀಗಾಗಿ ಮಕ್ಕಳಲ್ಲಿ ಅತಿಯಾದ ತೂಕದ ಸಮಸ್ಯೆಯು ಕಾಡುತ್ತಿದೆ. ಇದರಿಂದಾಗಿ ದೈಹಿಕ ಆರೋಗ್ಯದಲ್ಲಿ ಏರುಪೇರಾಗಿ ಹೃದಯಾಘಾತ ಸಮಸ್ಯೆಗಳನ್ನು ತಂದೊಡ್ದುತ್ತಿದೆ.

* ಹೃದಯದ ಮೇಲೆ ಒತ್ತಡ : ಶಿಶುವಿಗೆ ಬ್ರಾಂಕೈಟಿಸ್ ಅಥವಾ ನ್ಯುಮೋನಿಯಾದಂತಹ ಕಾಯಿಲೆಗಳಿದ್ದರೆ, ಏಕಾಏಕಿ ಈ ರೋಗಲಕ್ಷಣಗಳು ಹೆಚ್ಚಾದಾಗ ಹೃದಯಕ್ಕೆ ಒತ್ತಡವಾಗಿ ಹೃದಯಾಘಾತವಾಗುವ ಸಾಧ್ಯತೆಯೇ ಹೆಚ್ಚು. ಹೀಗಾಗಿ ಹುಟ್ಟಿದ ಮಕ್ಕಳು ಕೂಡ ಹೃದಯಾಘಾತಕ್ಕೆ ಒಳಗಾಗುತ್ತಿದೆ.

* ಹುಟ್ಟುತ್ತಲೇ ಕಾಡುವ ಹೃದಯ ಸಂಬಂಧಿ ಕಾಯಿಲೆ : ಕೆಲವು ಮಕ್ಕಳಲ್ಲಿ ಹುಟ್ಟುತ್ತಲೇ ಹೃದಯ ಸಂಬಂಧಿ ಕಾಯಿಲೆಗಳು ಇರುತ್ತದೆ. ಉಸಿರಾಟ ತೊಂದರೆ, ಹೃದಯಕ್ಕೆ ಸರಿಯಾಗಿ ರಕ್ತಪೂರೈಕೆ ಆಗದೇ ಇರುವುದು ಈ ರೀತಿಯ ಕಾಯಿಲೆಯಿಂದಾಗಿ ಹೃದಯ ಸ್ತಂಭನ ಆಗುವ ಅಪಾಯದ ಮಟ್ಟ ಹೆಚ್ಚಿರುತ್ತದೆ.

* ಮಕ್ಕಳ ಮೇಲೆ ಪೋಷಕರ ಒತ್ತಡ : ಮಕ್ಕಳ ಮೇಲೆ ಪೋಷಕರು ಓದಿನ ವಿಚಾರದಲ್ಲಿ ಒತ್ತಡ ಹಾಕುತ್ತಿದ್ದಾರೆ. ತಮ್ಮ ಮಕ್ಕಳನ್ನು ಉಳಿದ ಮಕ್ಕಳೊಂದಿಗೆ ಹೋಲಿಕೆ ಮಾಡುವ ಪ್ರವೃತ್ತಿಯಿಂದ ಮಕ್ಕಳು ತೀರಾ ಕುಗ್ಗಿ ಹೋಗುತ್ತಿದ್ದಾರೆ. ಅದಲ್ಲದೇ ಹೆತ್ತವರ ನಡವಳಿಕೆಯಿಂದ ಮಕ್ಕಳು ಒತ್ತಡವನ್ನು ಅನುಭವಿಸುತ್ತಿದ್ದಾರೆ. ಇದು ಕೂಡ ಹೃದಯ ಸ್ತಂಭನವಾಗಲು ಕಾರಣವಾಗುತ್ತಿದೆ.

ಇದನ್ನೂ ಓದಿ: ಮಂಗಳಕರವೆಂದು ಪರಿಗಣಿಸುವ ವೀಳ್ಯದೆಲೆಯ ಆರೋಗ್ಯ ಪ್ರಯೋಜನಗಳೇನು?

ಹೆತ್ತವರೇ ಮಕ್ಕಳ ವಿಚಾರದಲ್ಲಿ ಈ ಮುನ್ನೇಚ್ಚರಿಕೆಯ ಕ್ರಮಗಳನ್ನು ಅನುಸರಿಸಿ:

* ಮಕ್ಕಳಿಗೆ ಜಂಕ್‌ ಫ‌ುಡ್‌ ಗಳನ್ನು ಹೆಚ್ಚಾಗಿ ನೀಡಬೇಡಿ.

* ಮಕ್ಕಳನ್ನು ಮೊಬೈಲ್, ಕಂಪ್ಯೂಟರ್‌ನಿಂದ ದೂರವಿರಿಸುತ್ತ ಗಮನ ಕೊಡಿ.

* ದೈಹಿಕವಾಗಿ ಆಡುವ ಆಟಗಳತ್ತ ಮಕ್ಕಳಲ್ಲಿ ಒಲವು ಬೆಳೆಯುವತ್ತ ನೋಡಿಕೊಳ್ಳಿ.

* ಓದಿನ ವಿಷಯದಲ್ಲಿ ಅತಿಯಾದ ಒತ್ತಡ ಹಾಕಬೇಡಿ. ತಡರಾತ್ರಿಯವರೆಗೆ ಮಕ್ಕಳನ್ನು ಓದಿಸುವುದು, ಬರೆಸುವುದು ಅಭ್ಯಾಸವಿದ್ದರೆ ಆದಷ್ಟು ಕಡಿಮೆ ಮಾಡಿ.

* ದಿನಕ್ಕೆ 6 ರಿಂದ 7 ಗಂಟೆಗಳ ಕಾಲವಾದರೂ ಮಕ್ಕಳು ಚೆನ್ನಾಗಿ ನಿದ್ದೆ ಮಾಡಲಿ.

* ಮಕ್ಕಳಿಗೆ ಈಗಾಗಲೇ ಹೃದಯಕ್ಕೆ ಸಂಬಂಧ ಪಟ್ಟ ಸಮಸ್ಯೆಗಳು ಅಥವಾ ಉಸಿರಾಟದ ತೊಂದರೆಯಿದ್ದರೆ ವೈದ್ಯರಿಗೆ ತೋರಿಸಿ ಸರಿಯಾದ ಚಿಕಿತ್ಸೆ ನೀಡಿ.

ಇನ್ನಷ್ಟು ವೈರಲ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಕ್ಯಾಚ್ ಕೈಚೆಲ್ಲಿದ ಪಂತ್: ಸಿಟ್ಟಿನಲ್ಲಿ ಗುರಾಯಿಸಿದ ಬುಮ್ರಾ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣ ಉಪ ಚುನಾವಣೆಯಲ್ಲಿ ನಿಖಿಲ್​ಗೆ ಸೋಲಾಗೋದು ಹೆಚ್ಚು ಕಡಿಮೆ ಖಚಿತ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್ ವಿಜಯೋತ್ಸವಕ್ಕೆ ಅಭಿಮಾನಿಗಳಿಂದ ಸಿದ್ಧತೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಎರಡು ಕುಟುಂಬಗಳಿಗೆ ಚನ್ನಪಟ್ಟಣ ಚುನಾವಣಾ ಫಲಿತಾಂಶ ಪ್ರತಿಷ್ಠೆಯ ಪ್ರಶ್ನೆ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
ಪ್ರಧಾನಿ ಮೋದಿ ನಾಯಕತ್ವದ ಎನ್​ಡಿಎ ಮಹಾರಾಷ್ಟ್ರ, ಜಾರ್ಖಂಡ್ ಗೆಲ್ಲಲಿದೆ:ಸಚಿವ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
‘ನನಗೂ ಹೊಟ್ಟೆ ಉರಿಯುತ್ತಿದೆ’; ಕಳಪೆ ಪಡೆದ ರಜತ್​ನಿಂದ ಮನೆಯವರಿಗೆ ಕಿರಿಕಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Devotional: ದೇವಾಲಯದ ಅನ್ನ ಪ್ರಸಾದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
Daily Horoscope: ಈ ರಾಶಿಯವರಿಗೆ ಇಂದು ಆರ್ಥಿಕವಾಗಿ ಲಾಭವಾಗಲಿದೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಸುಸ್ಥಿರ ಅಭಿವೃದ್ಧಿಗೆ ಈ ಸಮಿಟ್ ಒಂದು​ ರೋಡ್​ ಮ್ಯಾಪ್: ಮೋದಿ ಶ್ಲಾಘನೆ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ
ಭಾರತೀಯ ಕಂಪನಿಗಳ ಅಭಿವೃದ್ಧಿಯಲ್ಲಿ ಬೆಂಜ್ ಪಾತ್ರ ಮಹತ್ವದ್ದು; ಬಾಬಾ ಕಲ್ಯಾಣಿ