ನಿಮ್ಮ ಮಗು 9 ತಾಸಿಗಿಂತ ಕಡಿಮೆ ನಿದ್ರೆ ಮಾಡುತ್ತಾ? ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡಬಹುದು

ನಿಮ್ಮ ಮಗು ಸರಿಯಾಗಿ ನಿದ್ರೆ ಮಾಡುತ್ತಿಲ್ಲವೇ?, ಅಥವಾ ನಿದ್ರೆ ಮಾಡಿದರೂ ಪದೇ ಪದೇ ಎಚ್ಚರಗೊಳ್ಳುತ್ತಿದೆಯೇ? ಈ ವಿಷಯವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಇದು ದೀರ್ಘಕಾಲದ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು.

ನಿಮ್ಮ ಮಗು 9 ತಾಸಿಗಿಂತ ಕಡಿಮೆ ನಿದ್ರೆ ಮಾಡುತ್ತಾ? ದೀರ್ಘಕಾಲದ ಆರೋಗ್ಯ ಸಮಸ್ಯೆಗಳು ಕಾಡಬಹುದು
Sleep
TV9kannada Web Team

| Edited By: Nayana Rajeev

Aug 01, 2022 | 2:58 PM

ನಿಮ್ಮ ಮಗು ಸರಿಯಾಗಿ ನಿದ್ರೆ ಮಾಡುತ್ತಿಲ್ಲವೇ?, ಅಥವಾ ನಿದ್ರೆ ಮಾಡಿದರೂ ಪದೇ ಪದೇ ಎಚ್ಚರಗೊಳ್ಳುತ್ತಿದೆಯೇ? ಈ ವಿಷಯವನ್ನು ಹಗುರವಾಗಿ ತೆಗೆದುಕೊಳ್ಳಬೇಡಿ ಇದು ದೀರ್ಘಕಾಲದ ಆರೋಗ್ಯ ಸಮಸ್ಯೆಗೆ ಕಾರಣವಾಗಬಹುದು.

ಹೊಸ ಅಧ್ಯಯನದ ಪ್ರಕಾರ, ಮಗು ದಿನಕ್ಕೆ ಒಂಭತ್ತು ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವುದು ಅರಿವಿನ ದುರ್ಬಲತೆ, ಮಾನಸಿಕ ಸಮಸ್ಯೆಗಳಿಗೆ ಕಾರಣವಾಗುತ್ತದೆ ಎಂದು ಹೇಳಿದೆ. ಲ್ಯಾನ್ಸೆಟ್ ಚೈಲ್ಡ್ ಅಂಡ್ ಅಡೋಲೆಸೆಂಟ್ ಹೆಲ್ತ್ ಜರ್ನಲ್‌ನಲ್ಲಿ ಪ್ರಕಟವಾದ ಅಧ್ಯಯನದ ಪ್ರಕಾರ, ಪ್ರಾಥಮಿಕ ಶಾಲಾ ವಯಸ್ಸಿನ ಮಕ್ಕಳು ರಾತ್ರಿಯಲ್ಲಿ 9 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡುವುದು ಮೆದುಳಿನ ಕೆಲವು ಭಾಗಗಳಲ್ಲಿ ಗಮನಾರ್ಹ ವ್ಯತ್ಯಾಸಗಳನ್ನು ಹೊಂದುತ್ತಾರೆ.

ಇದು ನೆನಪಿನ ಶಕ್ತಿ, ಬುದ್ಧಿವಂತಿಕೆ ಮತ್ತು ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಯೂನಿವರ್ಸಿಟಿ ಆಫ್ ಮೇರಿಲ್ಯಾಂಡ್ ಸ್ಕೂಲ್ ಆಫ್ ಮೆಡಿಸಿನ್ (UMSOM) ಸಂಶೋಧಕರ ನೇತೃತ್ವದ ಹೊಸ ಅಧ್ಯಯನದ ಪ್ರಕಾರ, ಮಗು ಪ್ರತಿ ರಾತ್ರಿ 9ರಿಂದ 12 ಗಂಟೆಗಳ ಕಾಲ ನಿದ್ರೆಯನ್ನು ಮಾಡಬೇಕು.

ನಿದ್ರೆಯ ಕೊರತೆ ಕಂಡು ಬಂದಾಗ ಖಿನ್ನತೆ, ಆತಂಕ ಮತ್ತು ಗಾಬರಿ ಸೇರಿದಂತೆ ಹೆಚ್ಚಿನ ಮಾನಸಿಕ ಆರೋಗ್ಯ ಸಮಸ್ಯೆಗಳು ಸೃಷ್ಟಿಯಾಗಬಹುದು ಎಂದು ಹೇಳಲಾಗಿದೆ. ಅಮೇರಿಕನ್ ಅಕಾಡೆಮಿ ಆಫ್ ಸ್ಲೀಪ್ ಮೆಡಿಸಿನ್ 6 ರಿಂದ 12 ವರ್ಷ ವಯಸ್ಸಿನ ಮಕ್ಕಳು ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿ ರಾತ್ರಿ 9 ರಿಂದ 12 ಗಂಟೆಗಳ ಕಾಲ ನಿದ್ರಿಸಬೇಕೆಂದು ಶಿಫಾರಸು ಮಾಡುತ್ತದೆ.

ಅಧ್ಯಯನದಲ್ಲಿ 9 ರಿಂದ 10 ವರ್ಷ ವಯಸ್ಸಿನ 8,300 ಕ್ಕೂ ಹೆಚ್ಚು ಮಕ್ಕಳು ಪಾಲ್ಗೊಂಡಿದ್ದರು. ಅಮೇರಿಕನ್ ಅಕಾಡೆಮಿ ಆಫ್ ಪೀಡಿಯಾಟ್ರಿಕ್ಸ್ ತಮ್ಮ ಮಕ್ಕಳಲ್ಲಿ ಉತ್ತಮ ನಿದ್ರೆಯ ಅಭ್ಯಾಸವನ್ನು ಉತ್ತೇಜಿಸಲು ಪೋಷಕರ ಬಳಿ ಮಕ್ಕಳಿಗೆ ಹಗಲಿನಲ್ಲಿ ದೈಹಿಕ ಚಟುವಟಿಕೆಗಳನ್ನು ನೀಡುವ ಕುರಿತು ಸಲಹೆ ನೀಡಿದೆ.

ಈ ಲೇಖನವು ಟಿವಿ9ನ ಅಧಿಕೃತ ಮಾಹಿತಿಯಅಗಿರುವುದಿಲ್ಲ, ಸಾಮಾನ್ಯ ಮಾಹಿತಿಯನ್ನು ಒಳಗೊಂಡಿರುತ್ತದೆ.

ತಾಜಾ ಸುದ್ದಿ

Follow us on

Related Stories

Most Read Stories

Click on your DTH Provider to Add TV9 Kannada