Apple Omelette: ಇದು ಆಪಲ್ ಆಮ್ಲೆಟ್ ಅಂತೆ! ರೆಸಿಪಿ ವಿಡಿಯೋ ನೋಡಿ ನೆಟ್ಟಿಗರು ಫುಲ್ ಗರಂ

ಇತ್ತೀಚೆಗಿನ ದಿನಗಳಲ್ಲಿ ಆಹಾರ ಪ್ರಿಯರ ಗಮನ ಸೆಳೆಯಲು ವಿಶಿಷ್ಟವಾದ ಆಹಾರಗಳನ್ನು ತಯಾರಿಸುತ್ತಿದ್ದಾರೆ. ಈ ವಿಯರ್ಡ್ ಕಾಂಬಿನೇಷನ್ ಫುಡ್ ಟ್ರೆಂಡ್ ಆಗಿ ಬಿಟ್ಟಿವೆ. ಮ್ಯಾಗಿ ಆಮ್ಲೆಟ್, ಒರಿಯೊ ಬಜ್ಜಿ, ಗುಲಾಬ್ ಜಾಮೂನ್ ದೋಸೆ, ಇಡ್ಲಿ ಸಾಂಬಾರ್ ಐಸ್ ಕ್ರೀಮ್ ಹೀಗೆ ವಿಶಿಷ್ಟವಾದ ಫುಡ್​​ಗಳ ತಯಾರಿಯ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಆದರೆ ಇದೀಗ ಭಾರತೀಯ ಬೀದಿ ಬದಿ ವ್ಯಾಪಾರಿಯೊಬ್ಬರು 'ಆಪಲ್ ಆಮ್ಲೆಟ್' ತಯಾರಿಸುವ ವಿಡಿಯೋವೊಂದು ವೈರಲ್ ಆಗಿದೆ.

Apple Omelette: ಇದು ಆಪಲ್ ಆಮ್ಲೆಟ್ ಅಂತೆ! ರೆಸಿಪಿ ವಿಡಿಯೋ ನೋಡಿ ನೆಟ್ಟಿಗರು ಫುಲ್ ಗರಂ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Jan 29, 2024 | 4:32 PM

ದಿನಕ್ಕೊಂದು ಸೇಬು ವೈದ್ಯರನ್ನು ದೂರವಿರಿಸುವುದು” ಎನ್ನುವ ಮಾತಿದೆ. ಹೀಗಾಗಿ ಈ ಸೇಬು ಆರೋಗ್ಯಕ್ಕೆ ಬಹಳ ಒಳ್ಳೆಯದು ಎನ್ನುವುದು ಎಲ್ಲರಿಗೂ ತಿಳಿದಿರುವ ಸಂಗತಿ. ಈ ಸೇಬು ಹಣ್ಣಿನಲ್ಲಿ ಪಾಲಿಫಿನಾಲ್​ ಹೇರಳವಾಗಿದ್ದು, ಕಾರ್ಬೋಹೈಡ್ರೇಟ್‌ಗಳು, ಪ್ರೋಟೀನ್ ಫೈಬರ್​​​​ಗಳು ಸಮೃದ್ಧವಾಗಿದ್ದು, ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿ ದೇಹವನ್ನು ಆರೋಗ್ಯವಾಗಿಡುತ್ತದೆ. ಆದರೆ ಇದೀಗ ಬೀದಿ ಬದಿಯ ವ್ಯಾಪಾರಿಯೊಬ್ಬರು ಸೇಬು ಹಣ್ಣನ್ನು ಬಳಸಿಕೊಂಡು ಆಮ್ಲೆಟ್ ತಯಾರಿಸಿದ್ದಾರೆ. ಸದ್ಯಕ್ಕೆ ಈ ಆಪಲ್ ಆಮ್ಲೆಟ್ ತಯಾರಿಸುವ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ.

ವೈರಲ್ ಆಗಿರುವ ವೀಡಿಯೊದಲ್ಲಿ, ಆಪಲ್ ಆಮ್ಲೆಟ್ ತಯಾರಿಕೆಯ ಪ್ರಕ್ರಿಯೆಯೂ ಸೇಬನ್ನು ಸಣ್ಣ ತುಂಡುಗಳಾಗಿ ಕತ್ತರಿಸುವುದರೊಂದಿಗೆ ಪ್ರಾರಂಭವಾಗಿದೆ. ಆ ಬಳಿಕ ಸಿಜ್ಲಿಂಗ್ ಪ್ಯಾನ್‌ನಲ್ಲಿ ಬೆಣ್ಣೆಯನ್ನು ಹಾಕಿ, ಸೇಬಿನ ಆಮ್ಲೆಟ್ “ನೀವು ಹಿಂದೆಂದೂ ಪ್ರಯತ್ನಿಸದ ವಿಷಯ” ಎಂದು ಹೇಳಿದ್ದಾನೆ. ಒಂದು ಬಟ್ಟಲಿನಲ್ಲ ಎರಡು ಮೊಟ್ಟೆಗಳನ್ನು ಒಡೆದು ಈರುಳ್ಳಿ , ಮೆಣಸಿನಕಾಯಿ, ಕೊತ್ತಂಬರಿ ಸೊಪ್ಪು, ಟೊಮ್ಯಾಟೊ, ಉಪ್ಪು, ಒಂದು ಚಿಟಿಕೆ ಮೆಣಸಿನ ಪುಡಿ ಮತ್ತು ವಿಶೇಷ ಮಸಾಲಾದೊಂದಿಗೆ ಬೆರೆಸಿ, ಬಾಣಲೆಯ ಮೇಲೆ ಹಾಕಿದ್ದಾನೆ.

ವಿಡಿಯೋ ಇಲ್ಲಿದೆ ನೋಡಿ:

View this post on Instagram

A post shared by Rohit Dhand (@eatloindiaa)

ಅದಕ್ಕೆ ಕತ್ತರಿಸಿದ ಆಪಲ್ ತುಂಡುಗಳನ್ನು ಹಾಕಿ, ಕಲರ್ ಫುಲ್ ಆಗಿ ಕಾಣುವಂತೆ ಮಾಡಿದ್ದಾನೆ. ರುಚಿ ಹೆಚ್ಚಿಸಲು ಬೇಯಿಸಿದ ಮೊಟ್ಟೆಯ ತುಂಡುಗಳನ್ನು ಸೇರಿಸಿದ್ದಾನೆ. ಕೊನೆಗೆ ಕೊತ್ತಂಬರಿ ಸೊಪ್ಪು, ತಂದೂರಿ ಮೇಯನೇಸ್, ಬೇಯಿಸಿದ ಮೊಟ್ಟೆಯ ತುಂಡುಗಳಿಂದ ಅಲಂಕರಿಸಿದ್ದಾನೆ. ಆಹಾರ ಪ್ರಿಯರಂತೂ ಆಪಲ್ ಆಮ್ಲೆಟ್ ನೋಡಿ ಖುಷಿಯಾಗಿಲ್ಲ, ಬದಲಾಗಿ ಗರಂ ಆಗಿದ್ದಾರೆ.

ಇದನ್ನೂ ಓದಿ: ಅಡುಗೆಗೆ ಮಾತ್ರವಲ್ಲ ಆರೋಗ್ಯಕ್ಕೂ ಬಹುಪಯೋಗಿ ಶುಂಠಿ

ಈ ವಿಡಿಯೋವನ್ನು ನೋಡಿದ ನೆಟ್ಟಿಗರು ನಾನಾ ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸಿದ್ದಾರೆ. ಬಳಕೆದಾರರೊಬ್ಬರು “ಅವನಿಗೆ ಮೊಟ್ಟೆಗಳನ್ನು ಸರಬರಾಜು ಮಾಡುವುದನ್ನು ನಿಲ್ಲಿಸಿ” ಎಂದು ಕಾಮೆಂಟ್ ಮಾಡಿದ್ದಾರೆ. ಮತ್ತೊಬ್ಬ ಬಳಕೆದಾರರು, “ಆಮ್ಲೆಟ್ ಮಾಡುವ ನೆಪದಲ್ಲಿ ನಮ್ಮನ್ನು ಇಲ್ಲಿ ಮೂರ್ಖರನ್ನಾಗಿ ಮಾಡಲಾಗುತ್ತಿದೆ” ಎಂದು ಬರೆದುಕೊಂಡಿದ್ದಾರೆ. ಇನ್ನೊಬ್ಬ ಬಳಕೆದಾರರು, “ನಾನು ಈ ಸಂಯೋಜನೆಯ ಬಗ್ಗೆ ಎಂದಿಗೂ ಕನಸು ಕಾಣಲು ಸಾಧ್ಯವಿಲ್ಲ” ಎಂದಿದ್ದಾರೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾರಾಮಾರಿ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಕಾರು, ಸಿಟಿವಿಯಲ್ಲಿ ಭೀಕರ ದೃಶ್ಯ ಸೆರೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಕೊತ್ವಾಲನ ಶಿಷ್ಯರು ವಿಧಾನಸೌಧಕ್ಕೆ ಬಂದ್ಮೇಲೆ ಕುಲಗೆಟ್ಟಿದ್ದು: ಹೆಚ್​ಡಿಕೆ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಸ್ಯಾಮ್​ಸಂಗ್ ಎಲೆಕ್ಟ್ರಾನಿಕ್ಸ್ ಹಬ್ಬದ ವಿಶೇಷ ಮಾರಾಟ ಕೊಡುಗೆ ಆರಂಭ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ
ಶಿವಣ್ಣ-ಉಪ್ಪಿ ನಟನೆಯ ‘45’ ಚಿತ್ರದ ಸುದ್ದಿಗೋಷ್ಠಿ ಲೈವ್ ನೋಡಿ