Kannada Rajyotsava 2024 : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ಬಂದದ್ದು ಹೇಗೆ? ಈ ಹೆಸರಿನ ಒಳ ಅರ್ಥವೇನು? ಇಲ್ಲಿದೆ ಅಸಲಿ ವಿಚಾರ

ಕನ್ನಡನಾಡು ನುಡಿ, ಆಚಾರ ವಿಚಾರ, ಸಂಸ್ಕೃತಿ ಹಾಗೂ ಪರಂಪರೆಯನ್ನು ನೆನಪಿಸಿಕೊಂಡಾಗಲೆಲ್ಲಾ ಮೈ ಮನವೆಲ್ಲಾ ರೋಮಾಂಚನವಾಗುತ್ತದೆ. ವಿವಿಧ ಭಾಗಗಳಾಗಿ ಹರಡಿ ಹೋಗಿದ್ದ ಕನ್ನಡಿಗರನ್ನು ಒಂದಾಗಿಸಿದ ದಿನವಾಗಿದೆ. ಹೀಗಾಗಿ ಪ್ರತಿಯೊಬ್ಬ ಕನ್ನಡಿಗನಿಗೂ ನವೆಂಬರ್ 1 ವಿಶೇಷವಾದ ದಿನವಾಗಿದ್ದು ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವವೆಂದು ಆಚರಿಸುತ್ತೇವೆ. ಹಾಗಾದ್ರೆ ಈ ದಿನದ ಹಿನ್ನಲೆ ಹಾಗೂ ಮಹತ್ವ ಕುರಿತಂತೆ ಇನ್ನಿತ್ತರ ಸಂಪೂರ್ಣ ಮಾಹಿತಿ ಇಲ್ಲಿದೆ.

Kannada Rajyotsava 2024 : ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂಬ ಹೆಸರು ಬಂದದ್ದು ಹೇಗೆ? ಈ ಹೆಸರಿನ ಒಳ ಅರ್ಥವೇನು? ಇಲ್ಲಿದೆ ಅಸಲಿ ವಿಚಾರ
ಕನ್ನಡ ರಾಜ್ಯೋತ್ಸವ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on: Oct 31, 2024 | 11:03 AM

ಎಲ್ಲಾದರು ಇರು ಎಂತಾದರು ಇರು, ಎಂದೆಂದಿಗೂ ನೀ ಕನ್ನಡವಾಗಿರು ಕನ್ನಡವೇ ಸತ್ಯ, ಕನ್ನಡವೇ ನಿತ್ಯ ಕವಿ ಕುವೆಂಪುರವರ ಈ ಸಾಲುಗಳನ್ನು ಕೇಳಿದಾಗ ಪ್ರತಿಯೊಬ್ಬ ಕನ್ನಡಿಗ ಮೈಮನವೆಲ್ಲಾ ರೋಮಾಂಚನವಾಗುತ್ತದೆ. ನವೆಂಬರ್ 1 ಬಂತೆಂದರೆ ಸಾಕು, ಕನ್ನಡಿಗರ ಪಾಲಿಗೆ ಸಂತಸದ ದಿನ. ಹೀಗಾಗಿ ನವೆಂಬರ್ ತಿಂಗಳು ಪೂರ್ತಿ ಕನ್ನಡಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಒಂದು ತಿಂಗಳುಗಳ ಕಾಲ ಕನ್ನಡ ರಾಜ್ಯೋತ್ಸವದ ಸಂಭ್ರಮವು ಮನೆ ಮಾಡುತ್ತದೆ.

ಕನ್ನಡ ರಾಜ್ಯೋತ್ಸವ ದಿನದ ಇತಿಹಾಸ

ಕರ್ನಾಟಕ ರಾಜ್ಯಕ್ಕೆ ಮೊದಲು ಇದ್ದ ಹೆಸರು ಮೈಸೂರು. 1905ರಲ್ಲಿ ಕರ್ನಾಟಕ ಏಕೀಕರಣ ಚಳುವಳಿ ಆರಂಭವಾಯಿತು. 1950 ರಲ್ಲಿ ಭಾರತವು ಗಣರಾಜ್ಯವಾಯಿತು. ಬಳಿಕ ಅಲ್ಲಲ್ಲಿ ಚದುರಿ ಹೋಗಿದ್ದ ನಿರ್ದಿಷ್ಟ ಪ್ರದೇಶದಲ್ಲಿ ಮಾತನಾಡುವ ಭಾಷೆಯ ಆಧಾರದ ಮೇಲೆ ವಿವಿಧ ರಾಜ್ಯಗಳನ್ನು ರಚನೆ ಮಾಡಲಾಯಿತು. ಕನ್ನಡ ಮಾತನಾಡುವ ಪ್ರಾಂತ್ಯಗಳು ಸೇರಿ, ಮೈಸೂರು ರಾಜ್ಯವು ಉದಯವಾಯಿತು. 1956 ರ ನವೆಂಬರ್ 1 ರಂದು, ಮದ್ರಾಸ್, ಬಾಂಬೆ, ಹೈದರಬಾದ್ ಪ್ರಾಂತ್ಯದ ಕನ್ನಡ ಮಾತನಾಡುವ ಪ್ರದೇಶಗಳು ವಿಲೀನಗೊಂಡು ಮೈಸೂರು ರಾಜ್ಯವಾಯಿತು.

ಇತ್ತ ಉತ್ತರ ಕರ್ನಾಟಕ, ಮಲೆನಾಡು ಮತ್ತು ಹಳೆಯ ಮೈಸೂರು ಎಂಬುದಾಗಿ ಹೊಸದಾಗಿ ರೂಪು ಗೊಂಡ ಮೈಸೂರು ರಾಜ್ಯವನ್ನು ಮೂರು ಪ್ರದೇಶಗಳಲ್ಲಿ ಗುರುತಿಸಲಾಯಿತು. ಹೊಸದಾಗಿ ಏಕೀಕೃತಗೊಂಡ ರಾಜ್ಯದ ಆರಂಭದಲ್ಲಿ ಹೊಸ ಘಟಕದ ಕೋರ್ ರೂಪುಗೊಂಡು ಮುಂಚಿನ ರಾಜ್ಯದ ಹೆಸರು ಇರಲೆಂದು “ಮೈಸೂರು” ಹೆಸರನ್ನು ಉಳಿಸಿಕೊಂಡರು. 1973ರ ನವೆಂಬರ್‌ 1ರಂದು ರಾಜ್ಯದ ಹೆಸರನ್ನು ಕರ್ನಾಟಕ ಎಂದು ಮರು ನಾಮಕರಣ ಮಾಡಲಾಯಿತು. ಕರ್ನಾಟಕ ರಾಜ್ಯ ರೂಪುಗೊಂಡಾಗ ಒಟ್ಟು 19 ಜಿಲ್ಲೆಗಳನ್ನು ಒಳಗೊಂಡಿತ್ತು. ಇದೀಗ ಕರ್ನಾಟಕದಲ್ಲಿ 31 ಜಿಲ್ಲೆಗಳಿವೆ. ಅಂದಿನಿಂದ ಪ್ರತಿ ವರ್ಷ ಕನ್ನಡಿಗರು ನವೆಂಬರ್ 1 ರಂದು ಕನ್ನಡ ರಾಜ್ಯೋತ್ಸವ ದಿನವನ್ನು ಆಚರಿಸುತ್ತ ಬರುತ್ತಿದ್ದಾರೆ.

ಕರ್ನಾಟಕ ಎಂಬ ಹೆಸರು ಬಂದದ್ದು ಹೇಗೆ?

1973ರ ನವೆಂಬರ್‌ 1ರಂದು ಮೈಸೂರು ಇದ್ದ ಹೆಸರನ್ನು ಕರ್ನಾಟಕ ಎಂದು ಮರು ನಾಮಕರಣ ಮಾಡಲಾಯಿತು. ಈ ಕರ್ನಾಟಕವನ್ನು ಕರುನಾಡು ಎಂದು ಕೂಡ ಕರೆಯಲಾಗುತ್ತದೆ. “ಎತ್ತರದ ಭೂಮಿ” ಎಂಬ ಅರ್ಥವಿರುವ ಕಾರಣ ಕರುನಾಡು ಪದದಿಂದ ಉಗಮವಾಗಿದೆ ಎನ್ನಲಾಗಿದೆ. ಕರು ಎಂದರೆ ಕಪ್ಪು, ನಾಡು ಎಂದರೆ ಪ್ರದೇಶ ಎನ್ನಲಾಗಿದ್ದು, ಬಯಲು ಸೀಮೆಯ ಕಡು ಕಪ್ಪು ಹತ್ತಿ ಮಣ್ಣಿನಿಂದಾಗಿ ಹೆಸರು ಬಂದಿದೆ ಎನ್ನುವ ಅಭಿಪ್ರಾಯಗಳು ಇವೆ. ಅದಲ್ಲದೇ, ಕೃಷ್ಣಾ ನದಿಯ ದಕ್ಷಿಣಕ್ಕೆ ಎರಡೂ ಕಡೆ ಜಲಾವೃತವಾದ ಪ್ರದೇಶವಾಗಿರುವುದರಿಂದ ಬ್ರಿಟೀಷರ ಕಾಲದಲ್ಲಿ ಕಾರ್ನಾಟಿಕ್ ಅಥವಾ ಕರ್ನಾಟಕ ಹೆಸರು ಬಳಕೆಗೆ ಬಂತು ಎನ್ನುವ ಅಭಿಪ್ರಾಯವು ಇದೆ. ಆದರೆ, ಸಾಹಿತಿ ಚದುರಂಗ ಅವರ ಅಭಿಪ್ರಾಯದಂತೆ ಆಲೂರು ವೆಂಕಟರಾಯರು ಬರೆದ ಕರ್ನಾಟಕ ಗಥ ವೈಭವ ಪುಸ್ತಕದ ಆಧಾರದಲ್ಲಿ ಕರ್ನಾಟಕ ಪದವನ್ನು ಅಂತಿಮವಾಗಿ ಆಯ್ಕೆ ಮಾಡಲಾಯಿತು ಎನ್ನಲಾಗಿದೆ.

ಇದನ್ನೂ ಓದಿ: ಕನ್ನಡ ರಾಜ್ಯೋತ್ಸವಕ್ಕೆ ನಿಮ್ಮ ಪ್ರೀತಿ ಪಾತ್ರರಿಗೆ ಶುಭಕೋರಲು ಇಲ್ಲಿದೆ ಸಂದೇಶಗಳು

ಕನ್ನಡ ರಾಜ್ಯೋತ್ಸವ ದಿನದ ಮಹತ್ವ ಹಾಗೂ ಆಚರಣೆ

ವಿವಿಧ ಭಾಗಗಳಾಗಿ ಹರಡಿ ಹೋಗಿದ್ದ ಕನ್ನಡಿಗರನ್ನು ಒಂದಾಗಿಸಿದ ದಿನವಾಗಿದೆ. ಹೀಗಾಗಿ ಕನ್ನಡ ನಾಡು ಉದಯವಾದ ಈ ದಿನವನ್ನು ಸಂಭ್ರಮಿಸುವ ಸಲುವಾಗಿ ಈ ದಿನವನ್ನು ಆಚರಿಸಲಾಗುತ್ತದೆ. ಕನ್ನಡ ರಾಜ್ಯದ ಏಕೀಕರಣಕ್ಕಾಗಿ ಹೋರಾಡಿದ ಮಹಾತ್ಮರನ್ನು ಸ್ಮರಿಸಿ, ಗೌರವಿಸಲಾಗುತ್ತದೆ. ಈ ದಿನದಂದು ಕನ್ನಡಾಂಬೆಯ ಫೋಟೊ ಇಟ್ಟು ಪೂಜೆ ಸಲ್ಲಿಸಲಾಗುತ್ತದೆ. ಶಾಲಾ–ಕಾಲೇಜುಗಳು, ಸಂಘ–ಸಂಸ್ಥೆಗಳು, ಕಚೇರಿಗಳಲ್ಲಿ ಧ್ವಜಾರೋಹಣದ ಜೊತೆಗೆ ಕನ್ನಡಕ್ಕೆ ಸಂಬಂಧಿಸಿದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನೂ ಆಯೋಜಿಸಲಾಗುತ್ತದೆ. ಅದಲ್ಲದೇ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ಅನೇಕರಿಗೆ ರಾಜ್ಯೋತ್ಸವ ಪ್ರಶಸ್ತಿಗಳನ್ನೂ ನೀಡಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ
‘ನಿಮ್ಮ ಗುಣವೇ ಸರಿಯಿಲ್ಲ’; ಮಂಜು-ಭವ್ಯಾ ಮಧ್ಯೆ ನಡೆಯಿತು ಜಗಳ
Daily Devotional: ಅಭ್ಯಂಜನ ಸ್ನಾನದ ಮಹತ್ವ ಹಾಗೂ ಪ್ರಯೋಜನ ತಿಳಿಯಿರಿ
Daily Devotional: ಅಭ್ಯಂಜನ ಸ್ನಾನದ ಮಹತ್ವ ಹಾಗೂ ಪ್ರಯೋಜನ ತಿಳಿಯಿರಿ
Nithya Bhavishya: ನರಕ ಚತುರ್ದಶಿ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನರಕ ಚತುರ್ದಶಿ ದಿನದ ರಾಶಿ ಭವಿಷ್ಯ ತಿಳಿಯಿರಿ
ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು
ಜಾಮೀನು ಪಡೆದು ಬಳ್ಳಾರಿಯಿಂದ ಹೊರಟ ದರ್ಶನ್ ಕಾರಿಗೆ ಮುಗಿಬಿದ್ದ ಅಭಿಮಾನಿಗಳು
ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ
ಪ್ರಚಾರಕ್ಕೆ ಹೋದ ಜನಾರ್ದನ ರೆಡ್ಡಿ, ಶ್ರೀರಾಮುಲುಗೆ ತರಾಟೆಗೆ ತೆಗೆದುಕೊಂಡ ಜನ
‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್​ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್
‘ಕಾಟೇರ’ ಶೂಟಿಂಗ್ ವೇಳೆಯೇ ದರ್ಶನ್​ಗೆ ಬೆನ್ನು ನೋವು ಇತ್ತು: ತರುಣ್ ಸುಧೀರ್
ಅಯೋಧ್ಯೆಯ ಸರಯೂ ನದಿ ದಡದಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು
ಅಯೋಧ್ಯೆಯ ಸರಯೂ ನದಿ ದಡದಲ್ಲಿ ಪ್ರಜ್ವಲಿಸಿದ ಲಕ್ಷಾಂತರ ದೀಪಗಳು
ಜೈಲಿಂದ ಆಚೆ ಬರುವ ಮೊದಲು ದರ್ಶನ್ ಟಿ-ಶರ್ಟ್ ಬದಲಾಯಿಸಿದರು
ಜೈಲಿಂದ ಆಚೆ ಬರುವ ಮೊದಲು ದರ್ಶನ್ ಟಿ-ಶರ್ಟ್ ಬದಲಾಯಿಸಿದರು
ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ
ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ
ದರ್ಶನ್ ನಿಜವಾದ ಅಭಿಮಾನಿಗಳು ಜೈಲು ಮುಂದೆ ನೆರೆದು ನಟನಿಗಾಗಿ ಕಾಯ್ತಿದ್ದಾರೆ
ದರ್ಶನ್ ನಿಜವಾದ ಅಭಿಮಾನಿಗಳು ಜೈಲು ಮುಂದೆ ನೆರೆದು ನಟನಿಗಾಗಿ ಕಾಯ್ತಿದ್ದಾರೆ