AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Bandh: ಮಾರ್ಚ್ 22ಕ್ಕೆ ಕರ್ನಾಟಕ ಬಂದ್, ಈ ಕೆಲಸ ಮೊದಲೇ ಮುಗಿಸಿಕೊಳ್ಳಿ

ಮಹಾರಾಷ್ಟ್ರದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ ಮಾರ್ಚ್ 22ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲಾಗಿದೆ. ಈ ಹಿನ್ನಲೆಯಲ್ಲಿ ಓಲಾ, ಉಬರ್, ಆಟೋ, ಕೆಎಸ್‌ಆರ್‌ಟಿಸಿ ಮತ್ತು ಬಿಎಂಟಿಸಿ ನೌಕರರು ಬಂದ್‌ಗೆ ಬೆಂಬಲ ಸೂಚಿಸಿದ್ದಾರೆ. ಹೋಟೆಲ್‌ಗಳು ಮತ್ತು ಅಗತ್ಯ ಸೇವೆಗಳು ಎಂದಿನಂತೆ ಸಾಮಾನ್ಯವಾಗಿ ಕಾರ್ಯನಿರ್ವಹಿಸಲಿದೆ. ಆದರೆ ಮಾರ್ಚ್ 22 ರಂದು ಬಂದ್ ಇರುವ ಕಾರಣ ಈ ಕೆಲ ಕೆಲಸವನ್ನು ಇಂದೇ ಮಾಡಿ ಮುಗಿಸುವುದು ಒಳ್ಳೆಯದು, ಈ ಕುರಿತಾದ ಮಾಹಿತಿ ಇಲ್ಲಿದೆ.

Karnataka Bandh: ಮಾರ್ಚ್ 22ಕ್ಕೆ ಕರ್ನಾಟಕ ಬಂದ್, ಈ ಕೆಲಸ ಮೊದಲೇ ಮುಗಿಸಿಕೊಳ್ಳಿ
ಸಾಂದರ್ಭಿಕ ಚಿತ್ರ
ಸಾಯಿನಂದಾ
| Updated By: Digi Tech Desk|

Updated on:Mar 20, 2025 | 4:56 PM

Share

ಮಹಾರಾಷ್ಟ್ರ (Maharastra) ದಲ್ಲಿ ಕೆಎಸ್‌ಆರ್‌ಟಿಸಿ ಸಿಬ್ಬಂದಿ ಮೇಲಿನ ಹಲ್ಲೆಯನ್ನು ಖಂಡಿಸಿ, ಬೆಳಗಾವಿ ಗಡಿಯಲ್ಲಿ ಮರಾಠಿ ಸಂಘಟನೆಗಳ ಪುಂಡಾಟದ ವಿರುದ್ಧ ಧ್ವನಿ ಎತ್ತಿದೆ. ಈ ಹಿನ್ನಲೆಯಲ್ಲಿ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಮಾರ್ಚ್ 22ರಂದು ಅಖಂಡ ಕರ್ನಾಟಕ ಬಂದ್‌ಗೆ (Karnataka Bandh) ಕರೆ ನೀಡಲಾಗಿದೆ. ಈಗಾಗಲೇ ಈ ಬಂದ್​ಗೆ ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ನೌಕರರ ಸಂಘ ಸೇರಿದಂತೆ ಓಲಾ, ಉಬರ್, ಆಟೋ ಸಂಘಗಳು ಕೂಡ ಬಂದ್​​ಗೆ ಸಂಪೂರ್ಣವಾಗಿ ಬೆಂಬಲ ಸೂಚಿಸಿವೆ. ಹಾಗಾದ್ರೆ ನೀವೇನಾದ್ರು ಈ ಕೆಲ ಕೆಲಸಗಳನ್ನು ಶನಿವಾರಕ್ಕೆ ಮುಂದೂಡಿದ್ದರೆ ಇಂದು ನಾಳೆಯೊಳಗೆ ಕೆಲಸ ಮುಗಿಸಿಕೊಳ್ಳುವುದು ಒಳ್ಳೆಯದು.

ಸಾರಿಗೆ ವ್ಯವಸ್ಥೆ ಇರುವುದಿಲ್ಲ

ಮಾರ್ಚ್ 22 ರ ಶನಿವಾರದಂದು ಓಲಾ, ಉಬರ್, ಆಟೋ, ಸಾರಿಗೆ ವ್ಯವಸ್ಥೆಯನ್ನು ನಂಬಿ ರಸ್ತೆಗಿಳಿಯುವ ಮುನ್ನ ಜನರು ಯೋಚಿಸಬೇಕು. ಓಲಾ ಉಬರ್ ಚಾಲಕರು ಮತ್ತು ಮಾಲೀಕರ ಸಂಘದೊಂದಿಗೆ ಕ್ಯಾಬ್ ಚಾಲಕರು ಬಂದ್‌ಗೆ ಸಂಪೂರ್ಣ ಬೆಂಬಲ ಸೂಚಿಸಿದ್ದಾರೆ. ಹೀಗಾಗಿ ಯಾವುದಾದರೂ ಕೆಲಸಕ್ಕಾಗಿ ಅಥವಾ ದೈನಂದಿನ ಪ್ರಯಾಣಕ್ಕಾಗಿ ಓಲಾ, ಉಬರ್, ಆಟೋಗಳನ್ನು ಅವಲಂಬಿಸಿಕೊಂಡಿದ್ದರೆ ಸ್ವಂತ ವಾಹನದಲ್ಲಿ ತೆರಳುವುದು ಒಳ್ಳೆಯದು. ಸಾರಿಗೆ ಬಸ್ ಸಂಚಾರ ಇಲ್ಲದ ಕಾರಣ ಇದರಿಂದ ದೂರದ ಊರುಗಳಿಗೆ ತೆರಳುವವರಿಗೆ ಇದರಿಂದ ಸಮಸ್ಯೆಯಾಗಬಹುದು. ಹೀಗಾಗಿ ಬೇರೆ ಜಿಲ್ಲೆಗಳಿಗೆ ತೆರಳುವವರು ಶುಕ್ರವಾರ ಸಂಜೆಯೇ ತೆರಳುವುದು ಉತ್ತಮ.

ಬ್ಯಾಂಕ್ ಗಳು ತೆರೆದಿರುವುದಿಲ್ಲ

ಕರ್ನಾಟಕ ಬಂದ್ ಬಿಸಿ ಬ್ಯಾಂಕ್ ಗಳಿಗೆ ತಟ್ಟುವುದಿಲ್ಲವಾದರೂ ಕೂಡ ಮಾರ್ಚ್ 22 ನಾಲ್ಕನೇ ಶನಿವಾರವಾರ ಕಾರಣ ಬ್ಯಾಂಕ್ ಗಳು ತೆರೆದಿರುವುದಿಲ್ಲ. ಹೀಗಾಗಿ ಜನರು ತಮ್ಮ ಬ್ಯಾಂಕ್ ಕೆಲಸಗಳೇನಾದರೂ ಇದ್ದರೆ ಶುಕ್ರವಾರದೊಳಗೆ ಮಾಡಿ ಮುಗಿಸಿ.

ಇದನ್ನೂ ಓದಿ
Image
ಸುನಿತಾ ವಿಲಿಯಮ್ಸ್ ನಂತೆ ವಿಜ್ಞಾನಿಯಾಗಲು ಬಯಸುವಿರಾ? ಸಿದ್ದತೆ ಹೇಗಿರಬೇಕು?
Image
AI ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಹಲವು ಅವಕಾಶಗಳಿವೆ!
Image
9 ವಿವಿ ಮುಚ್ಚಲ್ಲ: ಬಿಎಸ್​​ವೈ ಮೊಮ್ಮಗನ ಉದಾಹರಣೆಯೊಂದಿಗೆ ಡಿಕೆಶಿ ಸ್ಪಷ್ಟನೆ
Image
SSLC ಪ್ರಶ್ನೆ ಪತ್ರಿಕೆ ಲೀಕ್: ಯೂಟ್ಯೂಬ್, ಇನ್​ಸ್ಟಾದಲ್ಲಿ ವೈರಲ್​!

ಇದನ್ನೂ ಓದಿ: ನಾಳೆಯಿಂದ ಎಸ್​​ಎಸ್​​ಎಲ್​​ಸಿ ಪರೀಕ್ಷೆ ಆರಂಭ, ಒಂದು ದಿನದ ಸಿದ್ಧತೆ ಹೀಗಿರಲಿ

ನ್ಯಾಯ ಬೆಲೆ ಅಂಗಡಿಗಳು ತೆರೆದಿರುತ್ತಾ?

ಪಡಿತರ ಚೀಟಿದಾರರು ಮಾರ್ಚ್ 22 ರಂದು ರೇಷನ್ ಅಕ್ಕಿ ತರಲು ಯೋಚಿಸಿಕೊಂಡಿದ್ದರೆ ಈ ಕೆಲಸವನ್ನು ಇಂದು ನಾಳೆಯೊಳಗೆ ಮುಗಿಸಿಕೊಳ್ಳುವುದು ಒಳ್ಳೆಯದು. ಇದೇ ಶನಿವಾರ ಕರ್ನಾಟಕ ಬಂದ್ ಇರುವ ಕಾರಣ ಈ ಬಂದ್ ಬಿಸಿ ನ್ಯಾಯ ಬೆಲೆ ಅಂಗಡಿಗಳ ಮೇಲೂ ತಟ್ಟಲಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:24 pm, Thu, 20 March 25

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ