Karnataka Literacy Rate: ಕರ್ನಾಟಕದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ಜಿಲ್ಲೆ ಯಾವುದು ಗೊತ್ತಾ?
ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆಯ ಪ್ರಮಾಣವನ್ನು ಹೊಂದಿರುವ ರಾಜ್ಯ ಕೇರಳ ಅಂತ ಬಹುತೇಕ ಹೆಚ್ಚಿನವರಿಗೆ ಗೊತ್ತೇ ಇದೆ. ಆದ್ರೆ ನಮ್ಮ ರಾಜ್ಯದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ಜಿಲ್ಲೆ ಯಾವುದು ಮತ್ತು ಅತೀ ಕಡಿಮೆ ಸಾಕ್ಷರತೆಯನ್ನು ಹೊಂದಿರುವ ಜಿಲ್ಲೆ ಯಾವುದು ಎಂಬುದು ನಿಮಗೆ ಗೊತ್ತಾ? ಈ ಕುರಿತ ಕುತೂಹಲಕಾರಿ ಮಾಹಿತಿಯನ್ನು ತಿಳಿಯಿರಿ.

ಯಾವುದೇ ದೇಶ, ರಾಜ್ಯದ ಸುಸ್ಥಿರ ಅಭಿವೃದ್ಧಿಗೆ ಸಾಕ್ಷರತೆ ಅತ್ಯಂತ ನಿರ್ಣಾಯಕವಾಗಿದೆ. ಹೌದು ಉತ್ತಮ ಶಿಕ್ಷಣ ಪಡೆದವರು ರಾಷ್ಟ್ರದ ಅಭಿವೃದ್ಧಿಗೆ ಪೂರಕ ಕೊಡುಗೆ ನೀಡುತ್ತಾರೆ. ಹಿಂದಿನ ಕಾಲಕ್ಕೆ ಹೋಲಿಸಿದರೆ ಈಗಿನ ಕಾಲದ ಜನ ಹೆಚ್ಚು ಸಾಕ್ಷರರಾಗಿದ್ದಾರೆ. ಹೀಗಿದ್ದರೂ ಕೂಡಾ ರಾಜ್ಯದಿಂದ ರಾಜ್ಯಕ್ಕೆ ಜಿಲ್ಲೆಯಿಂದ ಜಿಲ್ಲೆಗೆ ಸಾರಕ್ಷರತೆಯ ಪ್ರಮಾಣದಲ್ಲಿ ಬದಲಾವಣೆಗಳು ಇದ್ದೇ ಇವೆ. ನಮ್ಮ ಭಾರತದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ರಾಜ್ಯ ಕೇರಳ (Kerala) ಅನ್ನುವಂತಹದ್ದು ಬಹುತೇಕ ಎಲ್ಲರಿಗೂ ಗೊತ್ತೇ ಇದೆ. ಆದ್ರೆ ನಮ್ಮ ಕರ್ನಾಟಕದಲ್ಲಿ (Karnataka) ಯಾವ ಜಿಲ್ಲೆ ಸಾಕ್ಷರತೆಯ ಪ್ರಮಾಣದಲ್ಲಿ (literacy rate) ಮೊದಲ ಸ್ಥಾನದಲ್ಲಿದೆ ಗೊತ್ತಾ? ಈ ಕುರಿತ ಇಂಟರೆಸ್ಟಿಂಗ್ ಮಾಹಿತಿ ಇಲ್ಲಿದೆ.
ಕರ್ನಾಟಕದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ಜಿಲ್ಲೆ ಯಾವುದು?
ನಮ್ಮ ಕರ್ನಾಟಕದಲ್ಲಿ ಅತಿ ಹೆಚ್ಚು ಸಾಕ್ಷರತೆಯನ್ನು ಹೊಂದಿರುವ ಜಿಲ್ಲೆ ಯಾವುದು ಎಂಬ ಮಾಹಿತಿಯನ್ನು ಜಾರ್ ಆಪ್ ಕನ್ನಡ (jarapp.kannada) ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ತಿಳಿಸಿಕೊಡಲಾಗಿದೆ. ಈ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ ಅತಿ ಹೆಚ್ಚು ಸಾಕ್ಷರತೆ ಇರುವ ಟಾಪ್ 5 ಜಿಲ್ಲೆ ಯಾವುದು ಎಂಬ ಮಾಹಿತಿಯನ್ನು ನೀಡಲಾಗಿದೆ.
ವಿಡಿಯೋ ಇಲ್ಲಿದೆ ನೋಡಿ:
View this post on Instagram
ಬುದ್ಧಿವಂತರ ಜಿಲ್ಲೆಯೆಂದೇ ಕರೆಯಲ್ಪಡುವ ಹಾಗೂ ಅತಿ ಹೆಚ್ಚು ಪ್ರತಿಷ್ಠಿತ ಶಾಲಾ-ಕಾಲೇಜುಗಳನ್ನು ಹೊಂದಿರುವ ದಕ್ಷಿಣ ಕನ್ನಡ ಜಿಲ್ಲೆ ಕರ್ನಾಟಕದಲ್ಲಿ ಅತಿ ಹೆಚ್ಚು ಸಾಕ್ಷರತೆ ಪ್ರಮಾಣವನ್ನು ಹೊಂದಿರುವ ಜಿಲ್ಲೆಯಾಗಿದೆ. ಇಲ್ಲಿನ ಸಾಕ್ಷರತೆ ಪ್ರಮಾಣ ಶೇ. 88.57% ರಷ್ಟಿದೆ. ಎರಡನೇ ಸ್ಥಾನದಲ್ಲಿ ಬೆಂಗಳೂರು ನಗರವಿದ್ದು, ಇಲ್ಲಿನ ಸಾಕ್ಷರತೆ ಪ್ರಮಾಣ ಶೇ. 87.67% ರಷ್ಟಿದೆ. ಇನ್ನೂ ಮೂರನೇ ಸ್ಥಾನದಲ್ಲಿ ಉಡುಪಿ ಇದ್ದು, ಇಲ್ಲಿನ ಸಾಕ್ಷರತೆ ಪ್ರಮಾಣ ಶೇ. 86.24% ರಷ್ಟಿದೆ. ಉತ್ತರ ಕನ್ನಡ ಜಿಲ್ಲೆ ನಾಲ್ಕನೇ ಸ್ಥಾನದಲ್ಲಿದ್ದು, ಇಲ್ಲಿನ ಸಾಕ್ಷರತೆ ಪ್ರಮಾಣ ಶೇ. 84. 06% ರಷ್ಟಿದೆ. ಐದನೇ ಸ್ಥಾನವನ್ನು ಕೊಡಗು ಜಿಲ್ಲೆ ಪಡೆದುಕೊಂಡಿದ್ದು, ಇಲ್ಲಿ ಶೇ. 82.61% ರಷ್ಟು ಸಾಕ್ಷರತೆ ಪ್ರಮಾಣವಿದೆ.
ಇದನ್ನೂ ಓದಿ: ನಿಮ್ಮ ಪಾದ ಚಪ್ಪಟೆಯಾಗಿದ್ಯಾ? ಹಾಗಿದ್ರೆ ನಿಮ್ಮ ವ್ಯಕ್ತಿತ್ವ, ಸ್ವಭಾವ ಹೀಗಿರುತ್ತೆ ನೋಡಿ
ಅತಿ ಕಡಿಮೆ ಸಾಕ್ಷರತೆ ಇರುವ ಜಿಲ್ಲೆಗಳು ಯಾವುದೆಂದರೆ:
ಯಾದಗಿರಿ ಅತೀ ಕಡಿಮೆ ಸಾಕ್ಷರತೆ ಪ್ರಮಾಣವನ್ನು ಹೊಂದಿರುವ ಜಿಲ್ಲೆಯಾಗಿದೆ. ಈ ಜಿಲ್ಲೆಯ ಸಾಕ್ಷರತೆ ಪ್ರಮಾಣ 51.83%. ರಾಯಚೂರು ಕೂಡ ಕಡಿಮೆ ಸಾಕ್ಷರತೆ ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಸಾಕ್ಷರತೆ ಪ್ರಮಾಣ ಶೇ. 59.56% ರಷ್ಟಿದೆ. ಚಾಮರಾಜ ನಗರದ ಸಾಕ್ಷರತೆ ಪ್ರಮಾಣ 61.43% ರಷ್ಟಿದೆ. ಗುಲ್ಬರ್ಗ ಕೂಡಾ ಕಡಿಮೆ ಸಾಕ್ಷರತೆ ಪ್ರಮಾಣವನ್ನು ಹೊಂದಿರುವ ಜಿಲ್ಲೆಯಾಗಿದ್ದು, ಇಲ್ಲಿನ ಸಾಕ್ಷರತೆ ಪ್ರಮಾಣ ಶೇ. 64.85% ರಷ್ಟಿದೆ.
ಅತೀ ಹೆಚ್ಚು ಸಾಕ್ಷರತೆ ಪ್ರಮಾಣವನ್ನು ಹೊಂದಿರುವ ಜಿಲ್ಲೆ ದಕ್ಷಿಣ ಕನ್ನಡವಾದರೆ, ಕರ್ನಾಟಕದಲ್ಲಿ ಅತೀ ಕಡಿಮೆ ಸಾಕ್ಷರತೆಯನ್ನು ಹೊಂದಿರುವ ಜಿಲ್ಲೆ ಯಾದಗಿರಿ. ಹೀಗೆ ಒಟ್ಟಾರೆಯಾಗಿ ಕರ್ನಾಟಕದಲ್ಲಿ ಸಾಕ್ಷರತೆಯ ಪ್ರಮಾಣ ಶೇ. 75.36% ರಷ್ಟಿದೆ.
ಈ ಲಿಂಕ್ ಕ್ಲಿಕ್ ಮಾಡುವ ಮೂಲಕ ನಿಮ್ಮ ಜಿಲ್ಲೆ ಸಾಕ್ಷರತೆಯ ಪ್ರಮಾಣದಲ್ಲಿ ಎಷ್ಟನೇ ಸ್ಥಾನದಲ್ಲಿದೆ ಎಂಬುದನ್ನು ತಿಳಿಯಿರಿ:
https://www.indiacensus.net/states/karnataka/literacy
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ