AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತೀ ರಾತ್ರಿ ಮಕ್ಕಳಿಗೆ ಕೇಸರಿ ಹಾಲು ಏಕೆ ನೀಡಬೇಕು?;ಪ್ರಯೋಜನಗಳನ್ನು ತಿಳಿದುಕೊಳ್ಳಿ

ಮಕ್ಕಳ ಬೆಳವಣಿಗೆಯ ಹಂತದಲ್ಲಿ ಪ್ರತೀ ದಿನ ಮಲಗುವ ಗಂಟೆಗೂ ಮುನ್ನ ಕೇಸರಿ ಹಾಲು ನೀಡಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದರೆ ಕೇಸರಿಯಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್-ಸಿ, ರಂಜಕದಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ಇನ್ನಷ್ಟು ಪ್ರಯೋಜನಗಳನ್ನು ಈ ಲೇಖನದಲ್ಲಿ ತಿಳಿದುಕೊಳ್ಳಿ.

ಪ್ರತೀ ರಾತ್ರಿ ಮಕ್ಕಳಿಗೆ ಕೇಸರಿ ಹಾಲು ಏಕೆ ನೀಡಬೇಕು?;ಪ್ರಯೋಜನಗಳನ್ನು ತಿಳಿದುಕೊಳ್ಳಿ
Kesar milk for children
ಅಕ್ಷತಾ ವರ್ಕಾಡಿ
|

Updated on: Aug 24, 2023 | 12:37 PM

Share

ಪ್ರಾಚೀನ ಕಾಲದಿಂದಲೂ ಕೇಸರಿ(Kesar) ಯನ್ನು ವಿವಿಧ ರೀತಿಯ ಭಕ್ಷ್ಯಗಳಲ್ಲಿ ಸೇರಿಸಲಾಗುತ್ತದೆ. ಇದು ಅಡುಗೆಯ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಸಾಕಷ್ಟು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಮಕ್ಕಳ ಬೆಳವಣಿಗೆಯ ಹಂತದಲ್ಲಿ ಕೇಸರಿ ಹಾಲು (Kesar Milk) ನೀಡಿ ಎಂದು ಆರೋಗ್ಯ ತಜ್ಞರು ಸಲಹೆ ನೀಡುತ್ತಾರೆ. ಯಾಕೆಂದರೆ ಕೇಸರಿಯಲ್ಲಿ ಕಬ್ಬಿಣ, ಕ್ಯಾಲ್ಸಿಯಂ, ವಿಟಮಿನ್-ಸಿ, ರಂಜಕದಂತಹ ಪೋಷಕಾಂಶಗಳು ಸಮೃದ್ಧವಾಗಿವೆ. ರಾತ್ರಿ ಮಲಗುವ ಮುನ್ನ ಮಕ್ಕಳಿಗೆ ಕೇಸರಿ ಹಾಲು ನೀಡುವುದು ಮಾನಸಿಕ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ಕ್ಯಾನ್ಸರ್ ಕೋಶಗಳ ವಿರುದ್ಧ ಹೋರಾಡುವಲ್ಲಿ ಸಹಾಯಕವಾಗಿದೆ. ಇದಲ್ಲದೇ ಜೀರ್ಣಕ್ರಿಯೆಯನ್ನು ಸುಧಾರಿಸುವುದರಿಂದ ಉರಿಯೂತದ ಮತ್ತು ಉತ್ಕರ್ಷಣ ನಿರೋಧಕ ಗುಣಲಕ್ಷಣಗಳವರೆಗೆ, ಬಹಳಷ್ಟು ಆರೋಗ್ಯ ಪ್ರಯೋಜನಗಳನ್ನು ಕಾಣಬಹುದು.

ಮಕ್ಕಳು ಕೇಸರಿ ಹಾಲು ಕುಡಿಯುವುದರಿಂದಾಗುವ ಪ್ರಯೋಜನಗಳು:

ಮೆದುಳಿನ ಆರೋಗ್ಯಕ್ಕೆ ಒಳ್ಳೆಯದು:

ಕೇಸರಿ, ಕ್ರೋಕಸ್ ಹೂವಿನ ಒಂದು ಅಮೂಲ್ಯವಾದ ಮಸಾಲೆಯಾಗಿದೆ. ಇದರ ಕೆಂಪು ಬಣ್ಣ ಮತ್ತು ವಿಭಿನ್ನ ಸುವಾಸನೆಯಿಂದ ಪಾಕ ಪದ್ಧತಿಯಲ್ಲಿ ಬಳಸುವುದುಂಟು. ಈ ಮಸಾಲೆಯು ಕ್ರೋಸಿನ್ ಮತ್ತು ಸಫ್ರಾನಾಲ್ ಸೇರಿದಂತೆ ಪ್ರಬಲವಾದ ಉತ್ಕರ್ಷಣ ನಿರೋಧಕಗಳಿಂದ ಸಮೃದ್ಧವಾಗಿದೆ, ಇದು ಉರಿಯೂತದ ಮತ್ತು ಮೆದುಳಿನ ಆರೋಗ್ಯವನ್ನು ವೃದ್ಧಿಸುವ ಗುಣಲಕ್ಷಣಗಳನ್ನು ಹೊಂದಿದೆ ಎಂದು ತಿಳಿದುಬಂದಿದೆ. ಈ ಉತ್ಕರ್ಷಣ ನಿರೋಧಕಗಳು ದೇಹವನ್ನು ಆಕ್ಸಿಡೇಟಿವ್ ಒತ್ತಡದಿಂದ ರಕ್ಷಿಸುವಲ್ಲಿ ಪ್ರಮುಖ ಪಾತ್ರವಹಿಸುತ್ತವೆ, ಹೀಗಾಗಿ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ ಮತ್ತು ಒಟ್ಟಾರೆ ಆರೋಗ್ಯವನ್ನು ಉತ್ತೇಜಿಸುತ್ತದೆ.

ನಿದ್ರಾಹೀನತೆಯನ್ನು ಹೋಗಲಾಡಿಸುತ್ತದೆ:

ಮಕ್ಕಳಲ್ಲಿ ಕಂಡು ಬರುವ ಇನ್ನೊಂದು ಸಮಸ್ಯೆಯೆಂದರೆ ನಿದ್ರಾಹೀನತೆ. ಆಗಾಗ ಎಚ್ಚರಗೊಳ್ಳುವುದು, ಮಧ್ಯರಾತ್ರಿ ಎದ್ದು ಅಳುವುದು ಈ ಎಲ್ಲಾ ಸಮಸ್ಯೆಗಳಿಗೂ ಕೇಸರಿ ಹಾಲು ಉತ್ತಮ ಔಷಧಿಯಾಗಿದೆ. ಕೇಸರಿಯಲ್ಲಿರುವ ಸಂಯುಕ್ತಗಳು ಸಿರೊಟೋನಿನ್ ಉತ್ಪಾದನೆಯನ್ನು ಉತ್ತೇಜಿಸುತ್ತದೆ . ಇದು ಮನಸ್ಥಿತಿ ಮತ್ತು ನಿದ್ರೆಯನ್ನು ನಿಯಂತ್ರಿಸುವ ನರಪ್ರೇಕ್ಷಕ. ಮಲಗುವ ಮುನ್ನ ಬೆಚ್ಚಗಿನ ಕೇಸರಿ ಹಾಲು ಕುಡಿಯುವುದು ಮನಸ್ಸಿಗೆ ವಿಶ್ರಾಂತಿ ನೀಡಲು ಸಹಾಯ ಮಾಡುತ್ತದೆ. ಇದು ಮಕ್ಕಳನ್ನು ಶಾಂತಿಯುತ ನಿದ್ರೆಗೆ ತಳ್ಳಲು ಅನುವು ಮಾಡಿಕೊಡುತ್ತದೆ.

ಇದನ್ನೂ ಓದಿ: ಅರಿಶಿನ, ಗಿಡಮೂಲಿಕೆಗಳಿಂದ ಸ್ಕ್ರಬ್ ತಯಾರಿಸುವುದು ಹೇಗೆ? ನಿಮ್ಮ ಚರ್ಮಕ್ಕೆ ಕಾಂತಿ ನೀಡಲು ಇಲ್ಲಿದೆ ಸರಳ ಉಪಾಯ!

ಮೂಳೆಯ ಆರೋಗ್ಯ ಮತ್ತು ಬೆಳವಣಿಗೆಯನ್ನು ಹೆಚ್ಚಿಸುತ್ತದೆ:

ಮೂಳೆ ಬೆಳವಣಿಗೆ ಬಾಲ್ಯದಲ್ಲಿ ನಿರ್ಣಾಯಕ ಹಂತವಾಗಿದೆ. ಈ ಸಮಯದಲ್ಲಿ ಸಾಕಷ್ಟು ಕ್ಯಾಲ್ಸಿಯಂ ಸೇವನೆಯು ಅತ್ಯಗತ್ಯವಾಗಿರುತ್ತದೆ ಮತ್ತು ಕೇಸರಿ ಹಾಲು ಮಗುವಿನ ಕ್ಯಾಲ್ಸಿಯಂ ಅವಶ್ಯಕತೆಗಳಿಗೆ ಗಣನೀಯವಾಗಿ ಕೊಡುಗೆ ನೀಡುತ್ತದೆ. ಹಾಲು ಈಗಾಗಲೇ ಕ್ಯಾಲ್ಸಿಯಂನ ಪ್ರಸಿದ್ಧ ಮೂಲವಾಗಿದೆ. ಕೇಸರಿನ ಮೈಕ್ರೊನ್ಯೂಟ್ರಿಯೆಂಟ್‌ಗಳಾದ ಮ್ಯಾಂಗನೀಸ್, ವಿಟಮಿನ್ ಸಿ ಮತ್ತು ವಿಟಮಿನ್ ಎಗಳೊಂದಿಗೆ ಸಂಯೋಜಿಸಿದಾಗ, ಕೇಸರಿ ಹಾಲು ಮೂಳೆಯ ಆರೋಗ್ಯ ಮತ್ತು ಬೆಳವಣಿಗೆಗೆ ಪ್ರಬಲವಾದ ಅಮೃತವಾಗುತ್ತದೆ. ಈ ಪೋಷಕಾಂಶಗಳು ಬಲವಾದ ಮೂಳೆಗಳ ರಚನೆಯನ್ನು ಬೆಂಬಲಿಸಲು ಸಾಮರಸ್ಯದಿಂದ ಕೆಲಸ ಮಾಡುತ್ತವೆ, ಮಕ್ಕಳು ತಮ್ಮ ಸಂಪೂರ್ಣ ಬೆಳವಣಿಗೆಯ ಸಾಮರ್ಥ್ಯವನ್ನು ತಲುಪಲು ಸಹಾಯ ಮಾಡುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?