Kitchen Hack: ಬೆಳ್ಳುಳ್ಳಿ ಕೊಳೆತು, ಒಣಗದಂತೆ ಕಾಪಾಡಲು ಈ ರೀತಿ ಮಾಡಿ ನೋಡಿ

ಬೆಳ್ಳುಳ್ಳಿಯನ್ನು ಹೆಚ್ಚು ಕಾಲ ಸಂಗ್ರಹಿಸಿಡಲು ಬೆಳ್ಳುಳ್ಳಿಯ ಎಸಳನ್ನು, ಅದರ ಸಿಪ್ಪೆ ಸುಲಿದು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಆದರೆ, ಅದಕ್ಕೆ ನೀರು ಸೇರಿಸಬೇಡಿ.

Kitchen Hack: ಬೆಳ್ಳುಳ್ಳಿ ಕೊಳೆತು, ಒಣಗದಂತೆ ಕಾಪಾಡಲು ಈ ರೀತಿ ಮಾಡಿ ನೋಡಿ
ಬೆಳ್ಳುಳ್ಳಿ
Follow us
ಸುಷ್ಮಾ ಚಕ್ರೆ
|

Updated on: Jan 24, 2023 | 6:45 PM

ಬೆಳ್ಳುಳ್ಳಿ ನೈಸರ್ಗಿಕ ಉತ್ಪನ್ನವಾಗಿದ್ದು, ಇದು ವಿವಿಧ ರೋಗಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಊಟದ ಸುವಾಸನೆಯನ್ನು ಹೆಚ್ಚಿಸುವ ಬೆಳ್ಳುಳ್ಳಿಯನ್ನು (Garlic) ವಿವಿಧ ರೀತಿಯ ಉಪ್ಪಿನಕಾಯಿ, ಅಡುಗೆಯಲ್ಲಿ ಬಳಸಲಾಗುತ್ತದೆ. ಬೆಳ್ಳುಳ್ಳಿ ವಿಟಮಿನ್ ಸಿ, ಕೆ, ಫೋಲೇಟ್, ನಿಯಾಸಿನ್ ಮತ್ತು ಥಯಾಮಿನ್‌ನ ಉತ್ತಮ ಮೂಲವಾಗಿದೆ. ಬೆಳ್ಳುಳ್ಳಿ ಬೇಗ ಒಣಗಿ, ಕೊಳೆತು ಹಾಳಾಗುವುದನ್ನು ತಡೆಯಲು ಕೆಲವು ಉಪಾಯಗಳು ಇಲ್ಲಿವೆ.

ಬೆಳ್ಳುಳ್ಳಿಯನ್ನು ಹೆಚ್ಚು ಕಾಲ ಸಂಗ್ರಹಿಸಿಡಲು ಬೆಳ್ಳುಳ್ಳಿಯ ಎಸಳನ್ನು, ಅದರ ಸಿಪ್ಪೆ ಸುಲಿದು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಿ. ಆದರೆ, ಅದಕ್ಕೆ ನೀರು ಸೇರಿಸಬೇಡಿ. ಆ ಪೇಸ್ಟ್​ ಅನ್ನು ಫ್ರಿಡ್ಜ್​​ನಲ್ಲಿಡಿ. ಬೆಳ್ಳುಳ್ಳಿಯನ್ನು ಪೇಸ್ಟ್​ ಮಾಡುವಾಗ ನೀವು ತಾಜಾ ಗಿಡಮೂಲಿಕೆಗಳನ್ನು ಸಹ ಬಳಸಬಹುದು.

ಇದನ್ನೂ ಓದಿ: Health Benefits of Garlic: ಬೆಳ್ಳುಳ್ಳಿಯಿಂದ ಎಷ್ಟೆಲ್ಲಾ ಆರೋಗ್ಯ ಪ್ರಯೋಜನಗಳಿವೆ ಎಂದು ತಿಳಿದಿದೆಯೇ?

ಬೊಜ್ಜನ್ನು ಕಡಿಮೆ ಮಾಡಲು ಬೆಳ್ಳುಳ್ಳಿ ಸೇವನೆ ಸಹಕಾರಿಯಾಗಿದೆ. ಬೆಳ್ಳುಳ್ಳಿಯ ನಿಯಮಿತ ಬಳಕೆಯೊಂದಿಗೆ ದೇಹದ ತೂಕ ಇಳಿಕೆಯಾಗುತ್ತದೆ. ಬೆಳ್ಳುಳ್ಳಿಯನ್ನು ತಿನ್ನಲು ಉತ್ತಮ ಸಮಯವೆಂದರೆ ಮಲಗುವ ಮುನ್ನ ಅಥವಾ ಬೆಳಿಗ್ಗೆ ಹೊಟ್ಟೆಯಲ್ಲಿ ಸೇವಿಸಬೇಕು. ಬ್ಯಾಕ್ಟೀರಿಯಾಗಳು ಹೆಚ್ಚು ದುರ್ಬಲವಾದ ಈ ಸಮಯದಲ್ಲಿ ಬೆಳ್ಳುಳ್ಳಿ ತಿನ್ನುವುದು ಪ್ರಯೋಜನಕಾರಿ. ಬೆಳ್ಳುಳ್ಳಿ ಕೇವಲ ಆಹಾರದ ರುಚಿಯನ್ನು ಹೆಚ್ಚಿಸುವುದಿಲ್ಲ. ಇದು ದೇಹದ ಅನೇಕ ಭಾಗಗಳಿಗೂ ಪ್ರಯೋಜನವನ್ನು ನೀಡುತ್ತದೆ. ಬೆಳ್ಳುಳ್ಳಿ ವಿಟಮಿನ್ ಬಿ1, ಬಿ6, ಕ್ಯಾಲ್ಸಿಯಂ, ತಾಮ್ರ, ಸೆಲೆನಿಯಮ್ ಮತ್ತು ಮ್ಯಾಂಗನೀಸ್ ಅನ್ನು ಹೊಂದಿದೆ.

ಬೆಳ್ಳುಳ್ಳಿಯನ್ನು ನುಣ್ಣಗೆ ರುಬ್ಬಿ ಅದಕ್ಕೆ ವಿನೇಗರ್ ಬೆರೆಸಿ ಮುಖಕ್ಕೆ ಹಚ್ಚಿಕೊಳ್ಳಿ. ಇದಲ್ಲದೆ, ತಣ್ಣೀರಿನ ಜೊತೆಗೆ ಬೆಳ್ಳುಳ್ಳಿಯ ಎಸಳನ್ನು ತಿನ್ನುವುದು ಸಹ ಪ್ರಯೋಜನಕಾರಿಯಾಗಿದೆ. ಬೆಳ್ಳುಳ್ಳಿಯಿಂದ ತಲೆಹೊಟ್ಟು ಕೂಡ ಸಮಸ್ಯೆ ನಿವಾರಣೆಯಾಗುತ್ತದೆ. ಬೆಳ್ಳುಳ್ಳಿಯ ಎಸಳನ್ನು ಪೇಸ್ಟ್​ ಮಾಡಿ. ಅದಕ್ಕೆ 1 ಚಮಚ ಜೇನುತುಪ್ಪವನ್ನು ಸೇರಿಸಿ. ನಂತರ ಅದನ್ನು ತಲೆಗೆ ಹಚ್ಚಿ ಮಸಾಜ್ ಮಾಡಿ. ಅದಾಗಿ 15 ನಿಮಿಷಗಳ ನಂತರ ತೊಳೆಯಿರಿ. ಇದನ್ನು ವಾರಕ್ಕೆ ಎರಡು ಬಾರಿ ಹಚ್ಚಿದರೆ ತಲೆಹೊಟ್ಟು ದೂರವಾಗುತ್ತದೆ.

ಇದನ್ನೂ ಓದಿ: Garlic benefits: ಮಲಗುವ ಮುನ್ನ ದಿಂಬಿನ ಕೆಳಗೆ ಬೆಳ್ಳುಳ್ಳಿ ಎಸಳುಗಳನ್ನು ಇಡುವುದರಿಂದಾಗುವ ಅದ್ಭುತ ಪ್ರಯೋಜನಗಳ ತಿಳಿಯಿರಿ

ಇದಲ್ಲದೆ ಬೆಳ್ಳುಳ್ಳಿಯು ಹಲವಾರು ಪ್ರಯೋಜನಗಳನ್ನು ಹೊಂದಿದೆ. ಬೊಜ್ಜು ಕಡಿಮೆ ಮಾಡುತ್ತದೆ. ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ ಗ್ಯಾಸ್, ಮಲಬದ್ಧತೆ, ರೋಗನಿರೋಧಕ ಶಕ್ತಿಯನ್ನು ಕಡಿಮೆ ಮಾಡುತ್ತದೆ. ನೋವನ್ನು ಕಡಿಮೆ ಮಾಡುತ್ತದೆ ಮಧುಮೇಹವನ್ನು ನಿಯಂತ್ರಿಸುತ್ತದೆ. ಬೆಳ್ಳುಳ್ಳಿಯನ್ನು ಸೇವಿಸುವುದರಿಂದ ಸೋಂಕುಗಳು ಹತ್ತಿರ ಸುಳಿಯುವುದಿಲ್ಲ. ಇದು ಆ್ಯಂಟಿ ವೈರಲ್ ಮತ್ತು ಆ್ಯಂಟಿಫಂಗಲ್ ಗುಣಲಕ್ಷಣಗಳನ್ನು ಹೊಂದಿದೆ.

ಇನ್ನಷ್ಟು ಜೀವನಶೈಲಿಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು