AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾಯಿಲೆಗಳಿಂದ ದೂರವಿರಲು ಯಾವ ಸಮಯದಲ್ಲಿ ಸ್ನಾನ ಮಾಡುವುದು ಸೂಕ್ತ?

ಬೇಸಿಗೆಯಲ್ಲಿ ಮತ್ತು ಮಳೆಗಾಲದಲ್ಲಿ ರಾತ್ರಿಯ ಹೊತ್ತಿನಲ್ಲೂ ಸ್ನಾನ ಮಾಡಿ ನಂತರ ಮಲಗುವುದು ಒಳ್ಳೆಯದು.

ಖಾಯಿಲೆಗಳಿಂದ ದೂರವಿರಲು ಯಾವ ಸಮಯದಲ್ಲಿ ಸ್ನಾನ ಮಾಡುವುದು ಸೂಕ್ತ?
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Aug 06, 2021 | 7:10 AM

Share

ಪ್ರತಿನಿತ್ಯ ಸ್ನಾನ ಮಾಡುವುದರಿಂದ ಅನೇಕ ರೋಗಗಳಿಂದ ದೂರವಿರಬಹುದು. ದೇಹ ಸ್ವಚ್ಛವಾಗಿದ್ದರೆ ಮನಸ್ಸು ಕೂಡಾ ಸ್ವಚ್ಛವಾಗಿರುತ್ತದೆ ಎಂಬ ಮಾತಿದೆ. ಶರೀರದ ಜತೆಗೆ ಮಾನಸಿಕ ನೆಮ್ಮದಿಗೆ ಪ್ರತಿನಿತ್ಯ ಸ್ನಾನ ಮಾಡುವ ಅಭ್ಯಾಸ ಒಳ್ಳೆಯದು. ಬೆಳಗ್ಗೆ ಎದ್ದ ತಕ್ಷಣ ಮನಸ್ಸಿನ ಏಕಾಗ್ರತೆ ಮತ್ತು ನಿಯಂತ್ರಣಕ್ಕೆ ಶರೀರ ಶುದ್ಧವಾಗಬೇಕು. ಹಾಗಾಗಿ ಬೆಳಿಗ್ಗೆ ಸ್ನಾನ ಮಾಡುವುದು ಒಳ್ಳೆಯದು. ಜತೆಗೆ ಸಂಜೆ ಹೊತ್ತಿನಲ್ಲಿ ಸ್ನಾನ ಮಾಡುವುದರಿಂದ ದೇಹದಲ್ಲಿನ ಧೂಳು, ವೈರಸ್​ಗಳು ನಾಶವಾಗುತ್ತದೆ. ಇದರಿಂದ ಆರೋಗ್ಯವೂ ಸಹ ಸುಧಾರಿಸುತ್ತದೆ.

ಸಂಜೆಯ ಹೊತ್ತಿನಲ್ಲಿ ಸ್ನಾನ ಮಾಡುವುದರಿಂದ ಆರೋಗ್ಯಕ್ಕೆ ಹೆಚ್ಚು ಪ್ರಯೋಜನಗಳಿವೆ ಎಂಬ ಅಭಿಪ್ರಾಯಗಳಿವೆ. ರಾತ್ರಿ ಸ್ನಾನ ಮಾಡುವುದರಿಂದ ಚರ್ಮದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅದರಲ್ಲಿಯೂ ಬೇಸಿಗೆಯಲ್ಲಿ ಮತ್ತು ಮಳೆಗಾಲದಲ್ಲಿ ರಾತ್ರಿಯ ಹೊತ್ತಿನಲ್ಲೂ ಸ್ನಾನ ಮಾಡಿ ನಂತರ ಮಲಗುವುದು ಒಳ್ಳೆಯದು.

ಬೆಳಗ್ಗೆ ಎದ್ದ ತಕ್ಷಣ ಸ್ನಾನ ಮಾಡುವುದರಿಂದ ಮನಸ್ಸು ನಿರಾಳವೆನಿಸುತ್ತದೆ. ಶರೀರ ಚಟುವಟಿಕೆಯಿಂದ ಕೂಡಿರಲು ಸಹಾಯಕವಾಗಿದೆ. ಜತೆಗೆ ಸಂಜೆ ಹೊತ್ತಿನಲ್ಲಿ ಸ್ನಾನ ಮಾಡುವುದರಿಂದ ಬೆಳಗ್ಗಿನಿಂದ ದೇಹಕ್ಕೆ ಅಂಟಿಕೊಂಡ ಬೆವರು, ಧೂಳು, ವೈರಸ್​ಗಳು ನಾಶವಾಗುತ್ತವೆ. ಇದರಿಂದ ರಾತ್ರಿ ಹೊತ್ತು ಒಳ್ಳೆಯ ನಿದ್ರೆ ಬರುತ್ತದೆ. ಹಾಗಾಗಿ ಬೆಳ್ಳಿಗ್ಗೆ ಮತ್ತು ಸಂಜೆ ಎರಡೂ ಹೊತ್ತಿನಲ್ಲಿ ಸ್ನಾನ ಮಾಡುವುದು ತಪ್ಪಲ್ಲ. ಆರೋಗ್ಯದ ದೃಷ್ಟಿಯಿಂದ ಇದು ಹೆಚ್ಚು ಪರಿಣಾಮಕಾರಿ.

ಪ್ರತಿನಿತ್ಯ ಸ್ನಾನ ಮಾಡುವುದರಿಂದ ರಕ್ತದೊತ್ತಡದಂತಹ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು. ಜತೆಗೆ ದೇಹದ ಉಷ್ಣತೆ, ಅತಿಯಾದ ಶಾಖದಿಂದ ದೇಹ ಸಮತೋಲನ ಸ್ಥಿತಿಯಲ್ಲಿರಲು ಸಹಾಯಕವಾಗಿದೆ. ಉತ್ತಮ ನಿದ್ರೆಗೆ ಸಹಾಯಕವಾಗಿದೆ. ಹೀಗಿರುವಾಗ ನಿಮ್ಮ ಆರೋಗ್ಯದ ದೃಷ್ಟಿಯಿಂದ ದಿನಕ್ಕೆ ಎರಡು ಬಾರಿ ಸ್ನಾನ ಮಾಡುವುದು ಉತ್ತಮ. ಜತೆಗೆ ಆರೋಗ್ಯವನ್ನು ಸುಧಾರಿಸಿಕೊಳ್ಳಬಹುದು.

ಇದನ್ನೂ ಓದಿ:

ಸ್ನಾನಗೃಹ ಅಲಂಕಾರಕ್ಕೆ ಇಲ್ಲಿವೆ 6 ವಿವಿಧ ಗಿಡಗಳು

ಅಭ್ಯಂಗ ಸ್ನಾನ ಮಾಡುವುದು ಹೇಗೆ? ಇದರ ಫಲಗಳೇನು?

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು