AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರತಿದಿನ ದೇವಸ್ಥಾನಕ್ಕೆ ಹೋಗೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ

ಕಷ್ಟ ಅಂತ ಬಂದಾಗ ಹೆಚ್ಚಿನವರು ದೇವಸ್ಥಾನಕ್ಕೆ ಹೋಗುತ್ತಾರೆ. ದೇವಾಲಯಕ್ಕೆ ಭೇಟಿ ನೀಡಿ ದೇವರಲ್ಲಿ ಪ್ರಾರ್ಥಿಸುತ್ತಾ ಮನಸ್ಸನ್ನು ನಿರಾಳ ಮಾಡಿಕೊಳ್ಳುತ್ತಾರೆ. ದೇವಾಲಯದಲ್ಲಿ ನಡೆಯುವ ಪೂಜೆ, ಹೋಮ-ಹವನ, ಗಂಟೆ ಸದ್ದು, ಮಂತ್ರ ಪಠಣೆ ಇವೆಲ್ಲವೂ ಮನಸ್ಸು ಮತ್ತು ದೇಹಕ್ಕೆ ಸಕಾರಾತ್ಮಕ ಚೈತನ್ಯವನ್ನು ತುಂಬುತ್ತದೆ. ಇದರಿಂದಾಗಿ ಮನಸ್ಸು ಹಗುರಾಗುತ್ತದೆ. ಅಲ್ಲದೆ ಪ್ರತಿನಿತ್ಯ ದೇವಾಲಯಕ್ಕೆ ಭೇಟಿ ನೀಡುವ ಮೂಲಕ ಈ ಎಲ್ಲಾ ಆರೋಗ್ಯ ಪ್ರಯೋಜನಗಳನ್ನು ಪಡೆಯಬಹುದು.

ಪ್ರತಿದಿನ ದೇವಸ್ಥಾನಕ್ಕೆ ಹೋಗೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳು ಲಭಿಸುತ್ತವೆ ನೋಡಿ
ಸಾಂದರ್ಭಿಕ ಚಿತ್ರ Image Credit source: Getty Images
ಮಾಲಾಶ್ರೀ ಅಂಚನ್​
|

Updated on: May 20, 2026 | 5:43 PM

Share

ಹಿಂದೂ ಧರ್ಮದಲ್ಲಿ ಪೂಜೆಗೆ ವಿಶೇಷ ಮಹತ್ವವಿದೆ. ಜನ ಮನೆಯಲ್ಲಿ ಪ್ರತಿನಿತ್ಯ ಪೂಜೆ ಮಾಡುವುದರ ಜೊತೆಗೆ ದೇವಸ್ಥಾನಗಳಿಗೆ ಹೋಗಿ ಅಲ್ಲಿನ ಪೂಜಾ ಕೈಂಕರ್ಯಗಳಲ್ಲಿ ಭಾಗವಹಿಸುತ್ತಾರೆ. ಕೆಲವರು ಕಷ್ಟ ಅಂತ ಬಂದಾಗ ದೇವರ ಬಳಿ ಹೋದ್ರೆ ಇನ್ನೂ ಕೆಲವರು ಪ್ರತಿನಿತ್ಯ ದೇವಸ್ಥಾನಕ್ಕೆ (temple) ಭೇಟಿ ನೀಡುತ್ತಾರೆ. ದೇವಾಲಯಕ್ಕೆ ಹೋಗುವುದು ಕೇವಲ ಧಾರ್ಮಿಕ ಚಟುವಟಿಕೆಯಲ್ಲ, ಇದರಿಂದ ಸಾಕಷ್ಟು ಪ್ರಯೋಜನಗಳು ಲಭಿಸುತ್ತವೆ. ಹೌದು ದೇವಸ್ಥಾನದ ಪ್ರಶಾಂತ ವಾತಾವರಣ, ಪೂಜೆ, ಹೋವ ಹವನ, ಗಂಟೆ ಸದ್ದು, ಮಂತ್ರ ಪಠಣೆ ಇವೆಲ್ಲವೂ ಮನಸ್ಸು ಮತ್ತು ದೇಹಕ್ಕೆ ಸಕಾರಾತ್ಮಕ ಚೈತನ್ಯವನ್ನು ತುಂಬುತ್ತದೆ. ಅಲ್ಲದೆ ನಿತ್ಯವೂ ದೇವಾಲಯಕ್ಕೆ ಭೇಟಿ ನೀಡುವುದರಿಂದ ಒಂದಷ್ಟು ಆರೋಗ್ಯ ಪ್ರಯೋಜನಗಳೂ ಲಭಿಸುತ್ತವೆ. ಅವು ಯಾವುವು ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ದೇವಸ್ಥಾನಕ್ಕೆ ಭೇಟಿ ನೀಡುವುದರಿಂದ ಲಭಿಸುವ ಪ್ರಯೋಜನಗಳೇನು?

ಮನಸ್ಸನ್ನು ಶಾಂತವಾಗಿಸುತ್ತದೆ: ದೇವಾಲಯದಲ್ಲಿ ಧೂಪದ್ರವ್ಯ ಮತ್ತು ದೀಪಗಳನ್ನು ಬೆಳಗಿಸಲಾಗುತ್ತದೆ, ಮತ್ತು ಶಂಖ ಮತ್ತು ಗಂಟೆಯ ಶಬ್ದವು ಸಹ ಕೇಳಿಬರುತ್ತದೆ, ಇದು ವಾತಾವರಣವನ್ನು ಶುದ್ಧೀಕರಿಸುತ್ತದೆ ಮತ್ತು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ. ಅಲ್ಲದೆ ದೇವಾಲಯದಲ್ಲಿನ ಸಕಾರಾತ್ಮಕ ವಾತಾವರಣವು ನಮ್ಮ ಮನಸ್ಸಿನ ನಕಾರಾತ್ಮಕತೆಯನ್ನು ಹೋಗಲಾಡಿಸಿ, ಸಕಾರಾತ್ಮಕತೆಯನ್ನು ತುಂಬುತ್ತದೆ, ಮನಸ್ಸನ್ನು ನಿರಾಳವಾಗಿಸುತ್ತದೆ.

ಅಧಿಕ ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ: ದೇವಾಲಯವನ್ನು ಪ್ರವೇಶಿಸುವಾಗ, ನಾವು ಬರಿಗಾಲಿನಲ್ಲಿ ನಡೆಯುತ್ತೇವೆ. ಬರಿಗಾಲಿನಲ್ಲಿ ನಡೆಯುತ್ತಾ ದೇವರಿಗೆ ಪ್ರದಕ್ಷಿಣೆ ಹಾಕುತ್ತೇವೆ. ಹೀಗೆ ಬರಿಗಾಲಿನಲ್ಲಿ ನಡೆದಾಗ ಪಾದಗಳಲ್ಲಿನ ಒತ್ತಡ ಬಿಂದುಗಳ ಮೇಲೆ ಒತ್ತಡ ಉಂಟಾಗುತ್ತದೆ, ಇದು ಅಧಿಕ ರಕ್ತದೊತ್ತಡವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ.

ಏಕಾಗ್ರತೆಯನ್ನು ಹೆಚ್ಚಿಸಲು ಸಹಕಾರಿ: ನಾವು ದೇವಸ್ಥಾನಕ್ಕೆ ಭೇಟಿ ನೀಡಿದಾಗ, ದೇವರ ವಿಗ್ರಹವನ್ನು ದಿಟ್ಟಿಸಿ ನೋಡುತ್ತೇವೆ, ಇದು ನಮ್ಮ ಮನಸ್ಸನ್ನು ಸ್ವಲ್ಪ ಸಮಯದವರೆಗೆ ಕೇಂದ್ರೀಕರಿಸಲು ಸಹಾಯ ಮಾಡುತ್ತದೆ. ಇದಲ್ಲದೆ, ದೇವರ ದರ್ಶನದ ನಂತರ, ಹಣೆಗೆ ತಿಲಕವನ್ನು ಹಾಕಲಾಗುತ್ತದೆ, ಇದು ಮೆದುಳಿನ ಒಂದು ನಿರ್ದಿಷ್ಟ ಭಾಗದ ಮೇಲೆ ಒತ್ತಡವನ್ನು ಬೀರುತ್ತದೆ. ಇದು ಏಕಾಗ್ರತೆಯನ್ನು ಹೆಚ್ಚಿಸುತ್ತದೆ.

ಶಕ್ತಿಯ ಮಟ್ಟವನ್ನು ಹೆಚ್ಚಿಸಲು ಸಹಕಾರಿ: ದೇವಾಲಯದಲ್ಲಿ ಗಂಟೆಗಳನ್ನು ಬಾರಿಸಲಾಗುತ್ತದೆ. ಅದರ ಶಬ್ದವು ನಮ್ಮ ಕಿವಿಗಳಲ್ಲಿ ಸ್ವಲ್ಪ ಸಮಯದವರೆಗೆ ಪ್ರತಿಧ್ವನಿಸುತ್ತದೆ. ಈ ಶಬ್ದವು ನಮ್ಮ ದೇಹದ ಕೆಲವು ಭಾಗಗಳನ್ನು ಸಕ್ರಿಯಗೊಳಿಸುತ್ತದೆ, ನಮ್ಮ ಶಕ್ತಿಯ ಮಟ್ಟವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ?

ಒತ್ತಡವನ್ನು ನಿವಾರಿಸುತ್ತದೆ:  ದೇವಾಲಯಕ್ಕೆ ಪ್ರವೇಶಿಸಿದ ಕೂಡಲೇ ಮಂತ್ರ ಪಠಣೆ ಮತ್ತು ಶಂಖ, ಗಂಟೆ ಶಬ್ದವು ನಮ್ಮ ಕಿವಿಗಳಲ್ಲಿ ಯಾವಾಗಲೂ ಪ್ರತಿಧ್ವನಿಸುತ್ತಿರುತ್ತದೆ. ಇದರಿಂದಾಗಿ ನಾವು ಜೀವನದ ಗದ್ದಲ ಮತ್ತು ಒತ್ತಡವನ್ನು ಮರೆತುಬಿಡುತ್ತೇವೆ. ಇದು ಒತ್ತಡವನ್ನು ನಿವಾರಿಸುತ್ತದೆ.

ಮನಸ್ಸಿನ ಚಂಚಲತೆಯನ್ನು ಕಡಿಮೆ ಮಾಡುತ್ತದೆ: ದೇವಾಲಯದ ವಾತಾವರಣವು ಮನಸ್ಸನ್ನು ಶಾಂತಗೊಳಿಸುತ್ತದೆ. ಇಲ್ಲಿಗೆ ಭೇಟಿ ನೀಡುವುದರಿಂದ ಚಡಪಡಿಕೆ ಕಡಿಮೆಯಾಗುತ್ತದೆ ಮತ್ತು ಶುದ್ಧ ಆಲೋಚನೆಗಳು ಬೆಳೆಯುತ್ತವೆ. ಸಕಾರಾತ್ಮಕ ಭಾವನೆಗಳು ಹೆಚ್ಚಾಗುತ್ತದೆ. ಅಲ್ಲದೆ ಮಕ್ಕಳನ್ನು ದೇವಾಲಯಕ್ಕೆ ಕರೆದುಕೊಂಡು ಹೋಗುವುದರಿಂದ ಅವರೂ ಸಹ ನಮ್ಮ ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು  ಅರ್ಥಮಾಡಿಕೊಳ್ಳುತ್ತಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಮಾಲಾಶ್ರೀ ಅಂಚನ್​
ಮಾಲಾಶ್ರೀ ಅಂಚನ್​

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನಲಪಾಡ್​ಗೆ ಮತ್ತೆ ಶಾಕ್: SIT ಚಾರ್ಜ್​ಶೀಟ್ ಬೆನ್ನಲ್ಲೇ ಇಡಿ 3ನೇ ಸಮನ್ಸ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ನನ್ನ ಮಗ ಕ್ಯಾಪ್ಟನ್: ಶ್ರೇಯಸ್ ಅಯ್ಯರ್ ತಂದೆಯ ಡ್ಯಾನ್ಸ್ ವಿಡಿಯೋ ವೈರಲ್
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಕೊಟ್ಟಿಯೂರು ದೇವಾಲಯದಲ್ಲಿ ಕನ್ನಡಿಗರ ಮೇಲೆ ದೌರ್ಜನ್ಯ: ಭಕ್ತರ ಅಸಮಾಧಾನ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಬೈಲಹೊಂಗಲದಲ್ಲಿ ವರುಣಾರ್ಭಟ: ಅಂಗಡಿಗಳಿಗೆ ಮಳೆನೀರು ನುಗ್ಗಿ ಅಪಾರ ನಷ್ಟ
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಡಿಕೆಶಿ ಸಂಪುಟದಲ್ಲಿ ನನಗೇನೂ ಬೇಡ: ರಾಜಣ್ಣ ಖಡಕ್ ಮಾತು
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಸೂರಜ್ ಹೆಗ್ಡೆ ಅಂತಿಮ ದರ್ಶನ ಪಡೆದ ರಾಹುಲ್​​ ಗಾಂಧಿ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಮುಗಿಯದ ಖಾತೆ ಕ್ಯಾತೆ: ದೆಹಲಿಗೆ ತೆರಳಿದ ಸಚಿವ ಕೃಷ್ಣ ಭೈರೇಗೌಡ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಲ್ಯಾಡಲ್ ಸ್ಫೋಟ: 25 ಲಕ್ಷ ರೂ. ಪರಿಹಾರ ಘೋಷಿಸಿದ ಹೆಚ್​ಡಿ ಕುಮಾರಸ್ವಾಮಿ
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
ಕರಗಿದ ಉಕ್ಕನ್ನು ಹೊತ್ತೊಯ್ಯುತ್ತಿದ್ದ ಲ್ಯಾಡಲ್ ಸ್ಫೋಟ, 8 ಮಂದಿ ಸಾವು
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ
‘ಕ್ಷೇತ್ರಪಾಲ’ ಸಿನಿಮಾದಲ್ಲಿ ದೈವದ ಕಥೆ? ವಿವರಿಸಿದ ತಂಡ