AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಊಟದ ಬಳಿಕ ವೀಳ್ಯದೆಲೆ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?

ಬಹಳ ಹಿಂದಿನಿಂದಲೂ ಊಟದ ಬಳಿಕ ವೀಳ್ಯದೆಲೆ ತಿನ್ನುವ ಸಂಪ್ರದಾಯವಿದೆ. ಇದು ಬರೀ ಸಂಪ್ರದಾಯ ಮಾತ್ರವಲ್ಲ ಸಾಕಷ್ಟು ಪ್ರಯೋಜನಗಳನ್ನೂ ಹೊಂದಿದೆ. ಹೌದು ವೀಳ್ಯದ ಎಲೆಗಳು ನೈಸರ್ಗಿಕವಾಗಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದ್ದು, ಇವು ಹಲವು ಆರೋಗ್ಯ ಸಮಸ್ಯೆಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಹಾಗಿದ್ರೆ ವೀಳ್ಯದೆಲೆ ತಿನ್ನೋದ್ರಿಂದ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ನೋಡೋಣ ಬನ್ನಿ.

ಊಟದ ಬಳಿಕ ವೀಳ್ಯದೆಲೆ ತಿನ್ನೋದ್ರಿಂದ ಎಷ್ಟೆಲ್ಲಾ ಪ್ರಯೋಜನಗಳಿವೆ ಗೊತ್ತಾ?
ವೀಳ್ಯದೆಲೆImage Credit source: Pinterest
ಮಾಲಾಶ್ರೀ ಅಂಚನ್​
|

Updated on: Feb 18, 2026 | 4:19 PM

Share

ಭಾರತೀಯ ಸಂಸ್ಕೃತಿಯಲ್ಲಿ, ವೀಳ್ಯದೆಲೆ (betel leaves) ಬಹಳ ಪ್ರಾಮುಖ್ಯತೆಯಿದೆ. ಪೂಜೆ, ವಿವಾಹ ಸಮಾರಂಭವಾಗಿರಲಿ ಅಥವಾ ಯಾವುದೇ ಇತರ ಧಾರ್ಮಿಕ ಆಚರಣೆಯಾಗಿರಲಿ, ಪ್ರತಿ ಶುಭ ಸಂದರ್ಭದಲ್ಲಿಯೂ ವೀಳ್ಯದ ಎಲೆ ಇರಲೇಬೇಕು. ಧಾರ್ಮಿಕ ಮಹತ್ವ ಮಾತ್ರವಲ್ಲದೆ ಇದು ಆರೋಗ್ಯ ಪ್ರಯೋಜನಗಳನ್ನೂ ಹೊಂದಿವೆ. ವೀಳ್ಯದೆಲೆಗಳು ನೈಸರ್ಗಿಕವಾಗಿ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳಿಂದ ಸಮೃದ್ಧವಾಗಿದ್ದು , ಇದು ಆರೋಗ್ಯಕರ ಜೀರ್ಣಾಂಗ ವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ಬಾಯಿಯ ದುರ್ವಾಸನೆಯನ್ನು ನಿವಾರಿಸಲು, ದೇಹವನ್ನು ನಿರ್ವಿಷಗೊಳಿಸಲು ಸಹಾಯ ಮಾಡುತ್ತದೆ. ಇದೇ ಕಾರಣಕ್ಕಾಗಿ ಹಿರಿಯರು ಊಟದ ಬಳಿಕ ಎಲೆ ಅಡಿಕೆ ಜಗಿಯೋದು.  ಊಟದ ಬಳಿಕ ವೀಳ್ಯದೆಲೆ ತಿನ್ನುವುದರಿಂದ ಲಭಿಸುವ ಆರೋಗ್ಯ ಪ್ರಯೋಜನಗಳ ಕುರಿತ ಸಂಕ್ಷಿಪ್ತ ಮಾಹಿತಿ ಇಲ್ಲಿದೆ.

ವೀಳ್ಯದೆಲೆ ತಿನ್ನುವುದರಿಂದ ಲಭಿಸುವ ಪ್ರಯೋಜನಗಳು:

ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ವೀಳ್ಯದೆಲೆಗಳಲ್ಲಿರುವ ಪೋಷಕಾಂಶಗಳು ಜೀರ್ಣಕ್ರಿಯೆಗೆ ಅತ್ಯಂತ ಪ್ರಯೋಜನಕಾರಿ. ಅವುಗಳನ್ನು ತಿನ್ನುವುದು ಜೀರ್ಣಾಂಗ ವ್ಯವಸ್ಥೆ ಬಲಗೊಳ್ಳುತ್ತದೆ. ಅಲ್ಲದೆ ಇದು ಅಜೀರ್ಣ, ಗ್ಯಾಸ್, ಮಲಬದ್ಧತೆ, ಹೊಟ್ಟೆಯುಬ್ಬರ ಮತ್ತು ಆಮ್ಲೀಯತೆಯಂತಹ ಸಮಸ್ಯೆಗಳನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ.

ಒತ್ತಡವನ್ನು ಕಡಿಮೆ ಮಾಡುತ್ತದೆ: ಪ್ರತಿದಿನ ಊಟದ ನಂತರ ವೀಳ್ಯದೆಲೆ ತಿನ್ನುವುದರಿಂದ ಮನಸ್ಥಿತಿ ಸುಧಾರಣೆಯಾಗುತ್ತದೆ. ಇದು ನಿಮ್ಮ ಮನಸ್ಸನ್ನು ಶಾಂತಗೊಳಿಸಲು ಮತ್ತು ಮಾನಸಿಕ ಒತ್ತಡವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.

ರಕ್ತದಲ್ಲಿನ ಸಕ್ಕರೆ ಮಟ್ಟವು ನಿಯಂತ್ರಣದಲ್ಲಿಡುತ್ತದೆ: ಊಟದ ನಂತರ ವೀಳ್ಯದ ಎಲೆಯನ್ನು ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಇದು ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ ಮತ್ತು ಹುಣ್ಣುಗಳಂತಹ ಗಂಭೀರ ಸಮಸ್ಯೆಗಳಿಂದ ನಿಮ್ಮನ್ನು ರಕ್ಷಿಸುತ್ತದೆ.

ಬಾಯಿ ದುರ್ವಾಸನೆಯನ್ನು ತೆಗೆದುಹಾಕುತ್ತದೆ: ಬಾಯಿಯ ದುರ್ವಾಸನೆಯು ಅನೇಕ ಜನರನ್ನು ಕಾಡುವ ಒಂದು ಸಾಮಾನ್ಯ ಸಮಸ್ಯೆಯಾಗಿದೆ. ವೀಳ್ಯದ ಎಲೆಗಳನ್ನು ಅಗಿಯುವುದರಿಂದ ಬಾಯಿಯ ದುರ್ವಾಸನೆ ನಿವಾರಣೆಯಾಗುತ್ತದೆ. ಇದರ ಬ್ಯಾಕ್ಟೀರಿಯಾ ವಿರೋಧಿ ಗುಣಗಳು ಬಾಯಿಯ ದುರ್ವಾಸನೆಗೆ ಪ್ರಮುಖ ಕಾರಣವಾಗಿರುವ ಬಾಯಿಯಲ್ಲಿ ಬೆಳೆಯುವ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕಡಿಮೆ ಮಾಡುತ್ತದೆ. ಇದು ಅತ್ಯುತ್ತಮ ನೈಸರ್ಗಿಕ ಬಾಯಿಯ ಫ್ರೆಶ್ನರ್ ಆಗಿ ಕಾರ್ಯನಿರ್ವಹಿಸುತ್ತದೆ.

ದಂತ ಸಮಸ್ಯೆಗಳನ್ನು ಹೋಗಲಾಡಿಸುತ್ತದೆ: ಹಲ್ಲುನೋವು, ಒಸಡುಗಳಲ್ಲಿ ರಕ್ತಸ್ರಾವದಂತಹ ಸಮಸ್ಯೆಗಳಿಗೆ ವೀಳ್ಯದ ಎಲೆಗಳು ತುಂಬಾ ಪ್ರಯೋಜನಕಾರಿ. ವೀಳ್ಯದ ಎಲೆಗಳು ವಿಟಮಿನ್ ಸಿ ಅನ್ನು ಹೊಂದಿರುತ್ತವೆ ಮತ್ತು ವಿಶಿಷ್ಟವಾದ ಸುವಾಸನೆಯನ್ನು ಹೊಂದಿರುತ್ತವೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಅಗಿಯುವುದರಿಂದ ಒಸಡುಗಳು ಬಲಗೊಳ್ಳುತ್ತವೆ ಮತ್ತು ಹಲ್ಲಿನ ಸಮಸ್ಯೆಗಳು ನಿವಾರಣೆಯಾಗುತ್ತದೆ.

ಇದನ್ನೂ ಓದಿ: ಗ್ಲೋಯಿಂಗ್ ಸ್ಕಿನ್‌ ನಿಮ್ಮದಾಗಲು ತಪ್ಪದೇ ಆಹಾರಗಳನ್ನು ಸೇವನೆ ಮಾಡಿ

ದೇಹವನ್ನು ಆರೋಗ್ಯವಾಗಿಡುತ್ತದೆ: ವೀಳ್ಯದೆಲೆಗಳು ಟ್ಯಾನಿನ್‌ಗಳು ಮತ್ತು ಪ್ರೊಪೇನ್ ಅನ್ನು ಒಳಗೊಂಡಿರುತ್ತವೆ, ಇದು ದೇಹದಿಂದ ವಿಷವನ್ನು ಹೊರಹಾಕಲು ಮತ್ತು ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ.

ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ: ಅಮೇರಿಕನ್ ನ್ಯಾಷನಲ್ ಲೈಬ್ರರಿ ಆಫ್ ಮೆಡಿಸಿನ್ ಪ್ರಕಾರ, ವೀಳ್ಯದ ಎಲೆಗಳು ನೈಸರ್ಗಿಕ ಬ್ಯಾಕ್ಟೀರಿಯಾ ವಿರೋಧಿ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿವೆ. ಅವು ದೇಹದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತವೆ. ಶೀತ, ಕೆಮ್ಮು, ಗಂಟಲು ನೋವು ಮತ್ತು ಬಾಯಿಯ ದುರ್ವಾಸನೆಯಂತಹ ಸಾಮಾನ್ಯ ಸಮಸ್ಯೆಗಳಿಗೆ ಚಿಕಿತ್ಸೆ ನೀಡಲು ಶತಮಾನಗಳಿಂದ ಆಯುರ್ವೇದದಲ್ಲಿ ಇದನ್ನು ಬಳಸಲಾಗುತ್ತಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!