ಪ್ರತಿದಿನ ಒಂದು ನೆಲ್ಲಿಕಾಯಿ ತಿನ್ನುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಗೊತ್ತಾ?
ಬೆಟ್ಟದ ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಆಂಟಿ ಆಕ್ಸಿಡೆಂಟ್, ಫೈಟೊಕೆಎಮಿಕಲ್, ಕ್ಯಾಲ್ಸಿಯಂ, ರಂಜಕ, ಕಬ್ಬಿಣ ಮತ್ತು ಇತರೆ ಪೋಷಕಾಂಶಗಳು ಸಮೃದ್ಧವಾಗಿದ್ದು, ಪ್ರತಿದಿನ ಒಂದು ನೆಲ್ಲಿಕಾಯಿ ಸೇವನೆ ಮಾಡುವ ಮೂಲಕ ನೀವು ಹಲವಾರು ಆರೋಗ್ಯ ಪ್ರಯೋಜನಗಳನ್ನು ಪಡೆದುಕೊಳ್ಳಬಹುದು. ಹಾಗಾದ್ರೆ ನೆಲ್ಲಿಕಾಯಿಯ ಹಿತಮಿತ ಸೇವನೆಯಿಂದ ಯಾವೆಲ್ಲಾ ಪ್ರಯೋಜನಗಳು ದೇಹಕ್ಕೆ ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಹೇರಳ ಪೋಷಕಾಂಶಗಳು, ಔಷಧೀಯ ಗುಣಗಳನ್ನು ಹೊಂದಿರುವ ನೆಲ್ಲಿಕಾಯಿಯನ್ನು (gooseberry) ಆಯುರ್ವೇದ ಔಷಧಗಳಲ್ಲಿ ಅಮೃತವೆಂದು ಪರಿಗಣಿಸಲಾಗುತ್ತದೆ. ಹೌದು ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ, ಟ್ಯಾನಿನ್, ರಂಜಕ, ಕಬ್ಬಿಣ ಮತ್ತು ಕ್ಯಾಲ್ಸಿಯಂ ಹೇರಳವಾಗಿದ್ದು, ಇದು ಆರೋಗ್ಯಕ್ಕೆ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ದಿನಕ್ಕೊಂದರಂತೆ ಹಿತಮಿತವಾಗಿ ನೆಲ್ಲಿಕಾಯಿಯನ್ನು ಸೇವನೆ ಮಾಡುವ ಮೂಲಕ ಸಾಕಷ್ಟು ಪ್ರಯೋಜನಗಳನ್ನು ನಿಮ್ಮದಾಗಿಸಿಕೊಳ್ಳಬಹುದು. ಹಾಗಿದ್ರೆ ನೆಲ್ಲಿಕಾಯಿ ಸೇವನೆಯಿಂದ ಲಭಿಸುವ ಆರೋಗ್ಯ ಪ್ರಯೋಜನಗಳು ಯಾವುವು ಎಂಬುದನ್ನು ನೋಡೋಣ ಬನ್ನಿ.
ನೆಲ್ಲಿಕಾಯಿಯ ಆರೋಗ್ಯ ಪ್ರಯೋಜನಗಳೇನು?
ರೋಗನಿರೋಧಕ ಶಕ್ತಿಯ ಹೆಚ್ಚಳ: ಕಿತ್ತಳೆಗಿಂತ ಹಲವು ಪಟ್ಟು ಹೆಚ್ಚು ನೆಲ್ಲಿಕಾಯಿಯಲ್ಲಿ ವಿಟಮಿನ್ ಸಿ ಇದೆ. ಖಾಲಿ ಹೊಟ್ಟೆಯಲ್ಲಿ ಒಂದು ನೆಲ್ಲಿಕಾಯಿಯನ್ನು ಸೇವಿಸಿದಾಗ, ದೇಹವು ಅದನ್ನು ಸಂಪೂರ್ಣವಾಗಿ ಹೀರಿಕೊಳ್ಳುತ್ತದೆ. ಇದು ದೇಹದ ಪ್ರತಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ, ಬದಲಾಗುತ್ತಿರುವ ಹವಾಮಾನದಿಂದ ಉಂಟಾಗುವ ಶೀತ, ಕೆಮ್ಮು ಮತ್ತು ಜ್ವರಕ್ಕೆ ಕಡಿಮೆ ಒಳಗಾಗುವಂತೆ ಮಾಡುತ್ತದೆ.
ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ: ನೀವು ಆಗಾಗ್ಗೆ ಗ್ಯಾಸ್, ಮಲಬದ್ಧತೆ ಅಥವಾ ಆಮ್ಲೀಯತೆಯಿಂದ ಬಳಲುತ್ತಿದ್ದರೆ ಪ್ರತಿನಿತ್ಯ ಒಂದು ನೆಲ್ಲಿಕಾಯಿಯನ್ನು ಸೇವನೆ ಮಾಡಿ. ಫೈಬರ್‌ನಿಂದ ಸಮೃದ್ಧವಾಗಿರುವ ನೆಲ್ಲಿಕಾಯಿಯನ್ನು ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಸೇವನೆ ಮಾಡುವುದರಿಂದ ಹೊಟ್ಟೆ ಮತ್ತು ಕರುಳುಗಳು ಶುದ್ಧವಾಗುತ್ತವೆ. ಅಲ್ಲದೆ ಇದು ಜೀರ್ಣಾಂಗ ವ್ಯವಸ್ಥೆಯನ್ನು ಬಲಪಡಿಸುತ್ತದೆ ಇದರಿಂದ ನೀವು ದಿನವಿಡೀ ಏನು ತಿಂದರೂ ಅದು ಸುಲಭವಾಗಿ ಜೀರ್ಣವಾಗುತ್ತದೆ.
ತೂಕ ಇಳಿಕೆಗೆ ಸಹಕಾರಿ: ನೀವು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಿದ್ದರೆ, ಪ್ರತಿನಿತ್ಯ ಒಂದು ಎನಲ್ಲಿಕಾಯಿಯನ್ನು ಸೇವನೆ ಮಾಡಿ. ಅಥವಾ ಖಾಲಿ ಹೊಟ್ಟೆಯಲ್ಲಿ ನೆಲ್ಲಿಕಾಯಿ ಜ್ಯೂಸ್ ಕೂಡ ಸೇವನೆ ಮಾಡಬಹುದು. ಇದು ಚಯಾಪಚಯಕ್ರಿಯೆಯನ್ನು ಹೆಚ್ಚಿಸುತ್ತದೆ, ದೇಹದಿಂದ ವಿಷವನ್ನು ಹೊರಹಾಕುತ್ತದೆ ಮತ್ತು ಕೊಬ್ಬನ್ನು ಕರಗಿಸಲು ಸಹಾಯ ಮಾಡುತ್ತದೆ.
ಚರ್ಮಕ್ಕೆ ಪ್ರಯೋಜನಕಾರಿ: ನೆಲ್ಲಿಕಾಯಿ ನೈಸರ್ಗಿಕವಾಗಿ ರಕ್ತವನ್ನು ಶುದ್ಧೀಕರಿಸುತ್ತದೆ. ಮೊಡವೆಗಳನ್ನು ಕಡಿಮೆ ಮಾಡುತ್ತದೆ ಮತ್ತು ಇದರ ಉತ್ಕರ್ಷಣ ನಿರೋಧಕಗಳು ನಿಮ್ಮ ಚರ್ಮವನ್ನು ಸದಾ ಯೌವ್ವನದಿಂದ ಇಡುತ್ತವೆ ಮತ್ತು ನಿಮ್ಮ ಮುಖಕ್ಕೆ ನೈಸರ್ಗಿಕ ಹೊಳಪನ್ನು ನೀಡುತ್ತವೆ. ಹಾಗಾಗಿ ಪ್ರತಿನಿತ್ಯ ಒಂದು ನೆಲ್ಲಿಕಾಯಿ ಸೇವನೆ ಮಾಡಿ.
ಕೂದಲಿಗೆ ಪ್ರಯೋಜನಕಾರಿ: ಆಮ್ಲಾ ವಿಟಮಿನ್ ಸಿ ಯ ನಿಧಿಯಾಗಿದ್ದು, ನಮ್ಮ ದೇಹದಲ್ಲಿ ಕಾಲಜನ್ ಅನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಕಾಲಜನ್ ನಮ್ಮ ಚರ್ಮ ಮತ್ತು ಕೂದಲಿಗೆ ಅಗತ್ಯವಾದ ಪ್ರೋಟೀನ್ ಆಗಿದೆ. ಇದು ಕೂದಲನ್ನು ಬೇರಿನಿಂದ ಬಲಪಡಿಸುತ್ತದೆ, ಕೂದಲು ಉದುರುವುದನ್ನು ಮತ್ತು ಹೊಸ ಕೂದಲಿನ ಬೆಳವಣಿಗೆಯನ್ನು ಉತ್ತೇಜಿಸುತ್ತದೆ.
ಇದನ್ನೂ ಓದಿ: ಊಟ ಮಾಡಿದ ತಕ್ಷಣ ನೀರು ಕುಡಿಯುವ ಅಭ್ಯಾಸ ಎಷ್ಟು ಡೇಂಜರ್ ನೋಡಿ
ದೃಷ್ಟಿ ಸುಧಾರಿಸುತ್ತದೆ: ನೆಲ್ಲಿಕಾಯಿ ಕಣ್ಣುಗಳಿಗೆ ಅತ್ಯಂತ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಇದರಲ್ಲಿ ವಿಟಮಿನ್ ಎ ಮತ್ತು ಕ್ಯಾರೊಟಿನಾಯ್ಡ್‌ಗಳಿದ್ದು, ಇದು ರೆಟಿನಾದ ಆರೋಗ್ಯಕ್ಕೆ ಅತ್ಯಗತ್ಯ. ನಿಯಮಿತವಾಗಿ ನೆಲ್ಲಿಕಾಯಿ ಸೇವಿಸುವುದರಿಂದ ಕಣ್ಣಿನ ಪೊರೆಗಳಂತಹ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡಬಹುದು ಮತ್ತು ದೃಷ್ಟಿ ಸುಧಾರಿಸಬಹುದು.
ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ: ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವಲ್ಲಿ ನೆಲ್ಲಿಕಾಯಿ ಪ್ರಮುಖ ಪಾತ್ರ ವಹಿಸುತ್ತದೆ. ಇದು ಇನ್ಸುಲಿನ್ ಸೂಕ್ಷ್ಮತೆಯನ್ನು ಸುಧಾರಿಸುತ್ತದೆ, ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಗಮನಾರ್ಹವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ.
ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ: ನಿಯಮಿತವಾಗಿ ನೆಲ್ಲಿಕಾಯಿ ಸೇವನೆ ಮಾಡುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತದೆ ಮತ್ತು ಇದು ಅಪಧಮನಿಗಳಲ್ಲಿ ಪ್ಲೇಕ್ ನಿರ್ಮಾಣದ ಅಪಾಯವನ್ನು ಕಡಿಮೆ ಮಾಡುತ್ತದೆ, ಒಟ್ಟಾರೆ ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ.
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ




