AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

International Day of Persons with Disabilities 2025: ವಿಶೇಷ ಚೇತನರ ದಿನವನ್ನು ಆಚರಿಸುವ ಉದ್ದೇಶವೇನು?

ಪ್ರತಿ ವರ್ಷ ಡಿಸೆಂಬರ್ 3 ರಂದು ಅಂತಾರಾಷ್ಟ್ರೀಯ ವಿಶೇಷ ಚೇತನರ ದಿನವನ್ನು ಆಚರಿಸಲಾಗುತ್ತದೆ. ವಿಕಲಚೇತನರಿಗೆ ಅವರ ಹಕ್ಕುಗಳ ಬಗ್ಗೆ ತಿಳಿಸಲು, ಸಮಾಜದಲ್ಲಿ ಅವರಿಗೂ ಸಮಾನ ಬದುಕುವ ಅವಕಾಶವನ್ನು ಕಲ್ಪಿಸಲು ಮತ್ತು ಅಂಗವೈಕಲ್ಯದ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸುವುದು ಈ ದಿನದ ಆಚರಣೆಯ ಮುಖ್ಯ ಉದ್ದೇಶವಾಗಿದೆ.

International Day of Persons with Disabilities 2025: ವಿಶೇಷ ಚೇತನರ ದಿನವನ್ನು ಆಚರಿಸುವ ಉದ್ದೇಶವೇನು?
ಅಂತಾರಾಷ್ಟ್ರೀಯ ವಿಶೇಷ ಚೇತನರ ದಿನImage Credit source: vecteezy
ಮಾಲಾಶ್ರೀ ಅಂಚನ್​
|

Updated on: Dec 03, 2025 | 9:58 AM

Share

ಇಂದಿಗೂ ಈ ಸಮಾಜದಲ್ಲಿ ವಿಶೇಷ ಚೇತನರನ್ನು (Persons with Disabilities) ಪ್ರತ್ಯೇಕವಾಗಿ ಪರಿಗಣಿಸುವ, ಕಡೆಗಣಿಸುವ ಪರಿಪಾಠವಿದೆ.  ಇಂತಹ ಘಟನೆಗಳು ವಿಶೇಷಚೇತನರ ಆತ್ಮವಿಶ್ವಾಸವನ್ನು ಕುಗ್ಗಿಸುವುದಲ್ಲದೇ, ಅವರಲ್ಲಿ ನಮ್ಮಿಂದ ಏನು ಸಾಧಿಸಲು ಸಾಧ್ಯವಿಲ್ಲ ಎಂಬ ಭಾವನೆ ಬರುವಂತೆ ಮಾಡುತ್ತದೆ. ಈ ನಿಟ್ಟಿನಲ್ಲಿ ಈ ಸಮಾಜದಲ್ಲಿ ಸಾಮಾನ್ಯ ಜನರಂತೆ ವಿಶೇಷ ಚೇತನರಿಗೂ ಹೆಮ್ಮೆಯಿಂದ ಜೀವನ ನಡೆಸಲು ಅವಕಾಶವನ್ನು ನೀಡಬೇಕು, ವಿಶೇಷ ಚೇತನರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು ಎನ್ನುವ ಉದ್ದೇಶದಿಂದ  ಪ್ರತಿವರ್ಷ ಡಿಸೆಂಬರ್ 03 ರಂದು ಅಂತಾರಾಷ್ಟ್ರೀಯ ವಿಶೇಷ ಚೇತನರ ದಿನವನ್ನು ಆಚರಿಸಲಾಗುತ್ತದೆ.

ವಿಶೇಷ ಚೇತನರ ದಿನದ ಇತಿಹಾಸವೇನು?

1976 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 1981 ರ ವರ್ಷವನ್ನು ವಿಕಲಚೇತನರ ಅಂತಾರಾಷ್ಟ್ರೀಯ ವರ್ಷವೆಂದು ಘೋಷಿಸಿತು. ನಂತರ 1992 ರಲ್ಲಿ  ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 47/3 ರ ನಿರ್ಣಯದ  ಅಡಿಯಲ್ಲಿ ಡಿಸೆಂಬರ್ 3 ರಂದು ಅಂತಾರಾಷ್ಟ್ರೀಯ ವಿಶೇಷ ಚೇತನರ ದಿನವನ್ನು ಆಚರಿಸುವ ನಿರ್ಣಯವನ್ನು ಘೋಷಿಸಲಾಯಿತು. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವಿಕಲ ಚೇತನರ  ಹಕ್ಕುಗಳು ಮತ್ತು ಕಲ್ಯಾಣವನ್ನು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.

ಇದನ್ನೂ ಓದಿ: ಮಾಲಿನ್ಯದಿಂದ ಹದಗೆಡುತ್ತಿದೆ ಆರೋಗ್ಯ, ಪರಿಸರ

ವಿಶೇಷ ಚೇತನರ ದಿನದ ಮಹತ್ವವೇನು?

  • ವಿಶೇಷಚೇತನ ವ್ಯಕ್ತಿಗಳ ಬಗ್ಗೆ ಸಾಮಾಜಿಕ ಚಿಂತನೆಯನ್ನು ಬದಲಾಯಿಸುವುದು, ತಾರತಮ್ಯವನ್ನು ತೊಡೆದು ಹಾಕುವುದು ಮತ್ತು ಅವರ ಜೀವನದ ಗುಣಮಟ್ಟವನ್ನು ಸುಧಾರಿಸುವುದು ಈ ದಿನದ ಮುಖ್ಯ ಉದ್ದೇಶವಾಗಿದೆ.
  • ಈ ದಿನವು ವಿಶೇಷ ಚೇತನರ ಹಕ್ಕುಗಳು, ಸಮಾನತೆ ಮತ್ತು ಸಬಲೀಕರಣದ ಮೇಲೆ ಕೇಂದ್ರೀಕರಿಸುತ್ತದೆ.
  • ಈ ದಿನ ಆರ್ಥಿಕ, ಸಾಮಾಜಿಕ, ರಾಜಕೀಯ ಮತ್ತು ಸಾಂಸ್ಕೃತಿಕ ಹೀಗೆ ಪ್ರತಿಯೊಂದು ಕ್ಷೇತ್ರದಲ್ಲೂ ವಿಶೇಷ ಚೇತನರಿಗೆ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಲು ಅವಕಾಶವನ್ನು ನೀಡಲಾಗುತ್ತದೆ.  ಅಲ್ಲದೆ ಈ ದಿನ ವಿಶೇಷಚೇತನರ ಸಾಧನೆಗಳನ್ನು ಗೌರವಿಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
ಬಿಗ್ ಬಾಸ್ ಅಲ್ಲಿ ರಕ್ಷಿತಾ ಶೆಟ್ಟಿ ವಿರುದ್ಧ ತಿರುಗಿಬಿದ್ದ ಮನೆ ಮಂದಿ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
'ಕಣ್ಣೀರು ಸುರಿಸಬೇಡ, ನಿನ್ನ ಹಿಂದೆ ನಾನಿದ್ದೇನೆ'; ರಿಷಬ್​ಗೆ ದೈವದ ಅಭಯ
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ದೆಹಲಿ ವಿಮಾನ ನಿಲ್ದಾಣದಿಂದ ಒಂದೇ ಕಾರಿನಲ್ಲಿ ಪ್ರಯಾಣಿಸಿದ ಮೋದಿ-ಪುಟಿನ್
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಜಾತಕ ಇಲ್ಲದವರು ಏನು ಮಾಡಬೇಕು? ಏನೆಲ್ಲಾ ಪರಿಹಾರಗಳಿವೆ ಗೊತ್ತಾ?
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಇಂದು ಈ ರಾಶಿಯವರು ಮಾರ್ಗ ಬದಲಿಸುವುದು ಉತ್ತಮ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ಚಿನ್ನದಂಗಡಿ ದೋಚಿ ಬಸ್​​ ಸ್ಟ್ಯಾಂಡ್​​ನಲ್ಲಿ ಹಾಲು ಕುಡಿದಿದ್ದ; ದೃಶ್ಯ ಸೆರೆ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ದೇವರಿಗೆ ಮುಡಿಕೊಟ್ಟು ಪುಣೆಗೆ ತೆರಳುತ್ತಿದ್ದ ಹಂತಕ ಸಿಕ್ಕಿಬಿದ್ದಿದ್ದೇ ರೋಚಕ
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಇಂಡಿಗೋ ವಿಮಾನಗಳ ಸಂಚಾರದಲ್ಲಿ ವ್ಯತ್ಯಯ: ಪ್ರಯಾಣಿಕರ ಗೋಳಾಟ ನೋಡಿ!
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ
ಪುಟಿನ್ ಸ್ವಾಗತಕ್ಕೆ ಸುಂದರವಾಗಿ ಅಲಂಕೃತಗೊಂಡ ಪ್ರಧಾನಿ ನಿವಾಸ