
ಇಂದಿಗೂ ಈ ಸಮಾಜದಲ್ಲಿ ವಿಶೇಷ ಚೇತನರನ್ನು (Persons with Disabilities) ಪ್ರತ್ಯೇಕವಾಗಿ ಪರಿಗಣಿಸುವ, ಕಡೆಗಣಿಸುವ ಪರಿಪಾಠವಿದೆ. ಇಂತಹ ಘಟನೆಗಳು ವಿಶೇಷಚೇತನರ ಆತ್ಮವಿಶ್ವಾಸವನ್ನು ಕುಗ್ಗಿಸುವುದಲ್ಲದೇ, ಅವರಲ್ಲಿ ನಮ್ಮಿಂದ ಏನು ಸಾಧಿಸಲು ಸಾಧ್ಯವಿಲ್ಲ ಎಂಬ ಭಾವನೆ ಬರುವಂತೆ ಮಾಡುತ್ತದೆ. ಈ ನಿಟ್ಟಿನಲ್ಲಿ ಈ ಸಮಾಜದಲ್ಲಿ ಸಾಮಾನ್ಯ ಜನರಂತೆ ವಿಶೇಷ ಚೇತನರಿಗೂ ಹೆಮ್ಮೆಯಿಂದ ಜೀವನ ನಡೆಸಲು ಅವಕಾಶವನ್ನು ನೀಡಬೇಕು, ವಿಶೇಷ ಚೇತನರಿಗೆ ಅವರ ಹಕ್ಕುಗಳ ಬಗ್ಗೆ ಅರಿವು ಮೂಡಿಸಬೇಕು ಎನ್ನುವ ಉದ್ದೇಶದಿಂದ ಪ್ರತಿವರ್ಷ ಡಿಸೆಂಬರ್ 03 ರಂದು ಅಂತಾರಾಷ್ಟ್ರೀಯ ವಿಶೇಷ ಚೇತನರ ದಿನವನ್ನು ಆಚರಿಸಲಾಗುತ್ತದೆ.
1976 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯು 1981 ರ ವರ್ಷವನ್ನು ವಿಕಲಚೇತನರ ಅಂತಾರಾಷ್ಟ್ರೀಯ ವರ್ಷವೆಂದು ಘೋಷಿಸಿತು. ನಂತರ 1992 ರಲ್ಲಿ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 47/3 ರ ನಿರ್ಣಯದ ಅಡಿಯಲ್ಲಿ ಡಿಸೆಂಬರ್ 3 ರಂದು ಅಂತಾರಾಷ್ಟ್ರೀಯ ವಿಶೇಷ ಚೇತನರ ದಿನವನ್ನು ಆಚರಿಸುವ ನಿರ್ಣಯವನ್ನು ಘೋಷಿಸಲಾಯಿತು. ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ವಿಕಲ ಚೇತನರ ಹಕ್ಕುಗಳು ಮತ್ತು ಕಲ್ಯಾಣವನ್ನು ಉತ್ತೇಜಿಸುವುದು ಇದರ ಮುಖ್ಯ ಉದ್ದೇಶವಾಗಿತ್ತು.
ಇದನ್ನೂ ಓದಿ: ಮಾಲಿನ್ಯದಿಂದ ಹದಗೆಡುತ್ತಿದೆ ಆರೋಗ್ಯ, ಪರಿಸರ
ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ