Krishna Janmashtami 2024 : ಕೃಷ್ಣನಿಗೆ ಬಲು ಪ್ರಿಯ ಈ ಅವಲಕ್ಕಿ ಲಡ್ಡು, ರೆಸಿಪಿ ಮಾಡೋದು ಸುಲಭ

ಕೃಷ್ಣ ಜನ್ಮಾಷ್ಟಮಿಗೆ ಇನ್ನೇನು ಕೆಲವೇ ಕೆಲವು ದಿನಗಳಷ್ಟೇ ಬಾಕಿಯಿವೆ. ಈ ಬಾರಿ ಆಗಸ್ಟ್ 26 ರಂದು ಕೃಷ್ಣ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ಈ ಜನ್ಮಾಷ್ಟಮಿಯ ದಿನದಂದು ಶ್ರೀಕೃಷ್ಣನಿಗೆ ವಿವಿಧ ಬಗೆಯ ತಿಂಡಿ ತಿನಿಸುಗಳನ್ನು ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಕೃಷ್ಣನಿಗೆ ಪ್ರಿಯವಾದ ಅವಲಕ್ಕಿ ಲಡ್ಡನ್ನು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದು. ಹಾಗಾದ್ರೆ ಈ ರೆಸಿಪಿ ಮಾಡೋದು ಹೇಗೆ ಎನ್ನುವುದರ ಸಂಪೂರ್ಣ ಮಾಹಿತಿ ಇಲ್ಲಿದೆ.

Krishna Janmashtami 2024 : ಕೃಷ್ಣನಿಗೆ ಬಲು ಪ್ರಿಯ ಈ ಅವಲಕ್ಕಿ ಲಡ್ಡು, ರೆಸಿಪಿ ಮಾಡೋದು ಸುಲಭ
ಅವಲಕ್ಕಿ ಲಡ್ಡು
Follow us
ಸಾಯಿನಂದಾ
| Updated By: ಅಕ್ಷಯ್​ ಪಲ್ಲಮಜಲು​​

Updated on: Aug 23, 2024 | 6:27 PM

ಶ್ರೀ ಕೃಷ್ಣ ಜನ್ಮಾಷ್ಟಮಿ ಎಂದಾಕ್ಷಣ ನೆನಪಾಗುವುದು ಶ್ರೀ ಕೃಷ್ಣ, ಯಶೋದೆಯರ ವೇಷಧಾರಿಗಳು, ಮೊಸರು ಕುಡಿಕೆ, ಕೃಷ್ಣ ದೇವಾಲಯಗಳಲ್ಲಿ ವಿಶೇಷ ಪೂಜೆ, ಹಬ್ಬದ ಸಂಭ್ರಮ ಹಾಗೂ ಅಷ್ಟಮಿಯಂದು ತಯಾರಿಸಲಾಗುವ ಬಗೆ ಬಗೆಯ ಖಾದ್ಯಗಳು. ಈ ದಿನ ಕೃಷ್ಣನಿಗೆ ಪ್ರಿಯವಾದ ಉಂಡೆಗಳು, ಚಕ್ಕುಲಿ, ನಿಪ್ಪಟ್ಟು ಇಂತಹ ತಿನಿಸುಗಳನ್ನು ತಯಾರಿಸಿ ನೈವೇದ್ಯವಾಗಿ ಇಡಲಾಗುತ್ತದೆ. ಆದರೆ ಕೃಷ್ಣನಿಗೆ ಅವಲಕ್ಕಿ ಲಡ್ಡು ಪ್ರಿಯವಾಗಿದ್ದು, ಈ ಕೆಲವು ಐಟಂಗಳಿದ್ದರೆ ಮನೆಯಲ್ಲೇ ಸುಲಭವಾಗಿ ಈ ತಿನಿಸನ್ನು ಮಾಡಬಹುದಾಗಿದೆ.

ಅವಲಕ್ಕಿ ಲಡ್ಡು ಮಾಡಲು ಬೇಕಾಗಿರುವ ಸಾಮಾಗ್ರಿಗಳು

* 200 ಗ್ರಾಂ ಅವಲಕ್ಕಿ

* 100 ಗ್ರಾಂ ಬೆಲ್ಲ

* ಕಾಲು ಕಪ್ ಒಣ ತೆಂಗಿನಕಾಯಿ ತುರಿ

* ಗೋಡಂಬಿ ಮತ್ತು ಒಣ ದ್ರಾಕ್ಷಿ

* ಏಲಕ್ಕಿ ಪುಡಿ

* ತುಪ್ಪ

ಇದನ್ನೂ ಓದಿ: ಭಾರತಕ್ಕೆ ಹೆಮ್ಮೆ ತಂದ ಇಸ್ರೋ, ಈ ಸಾಹಸದ ಹಿಂದಿದೆ ಹಲವು ವಿಜ್ಞಾನಿಗಳ ಶ್ರಮ

ಅವಲಕ್ಕಿ ಲಡ್ಡು ತಯಾರಿಸುವ ಸುಲಭ ವಿಧಾನ

* ಮೊದಲಿಗೆ ಗ್ಯಾಸ್ ಮೇಲೆ ಒಂದು ಪ್ಯಾನ್ ಇಟ್ಟು ಅದಕ್ಕೆ ಅವಲಕ್ಕಿ ಹಾಕಿ ಸ್ವಲ್ಪ ಹುರಿದುಕೊಳ್ಳಿ, ನಂತರ ಒಣ ತೆಂಗಿನಕಾಯಿ ತುರಿಯನ್ನು ಹುರಿದುಕೊಂಡು ತಣ್ಣಗಾಗಲು ಬಿಡಿ.

* ಈ ಮಿಶ್ರಣ ತಣ್ಣಗಾದ ಬಳಿಕ ಮಿಕ್ಸಿ ಜಾರಿಗೆ ಹಾಕಿ, ಬೆಲ್ಲವನ್ನು ತುರಿದುಕೊಂಡು ಹಾಕಿ ತರಿತರಿಯಾಗಿ ರುಬ್ಬಿಕೊಳ್ಳಿ.

* ಒಂದು ಬಾಣಲೆಯಲ್ಲಿ ತುಪ್ಪವನ್ನು ಬಿಸಿ ಮಾಡಿಕೊಂಡು ಅದರಲ್ಲಿ ಗೋಡಂಬಿ ಮತ್ತು ಒಣದ್ರಾಕ್ಷಿಯನ್ನು ಹುರಿದುಕೊಳ್ಳಿ.

* ನಂತರ ಪ್ಯಾನ್ ಗೆ ಸ್ವಲ್ಪ ತುಪ್ಪವನ್ನು ಹಾಕಿ, ರುಬ್ಬಿಟ್ಟ ಬೆಲ್ಲ ಮತ್ತು ಅವಲಕ್ಕಿಯ ಮಿಶ್ರಣ, ಏಲಕ್ಕಿ ಪುಡಿ, ಹುರಿದಿಟ್ಟ ಒಣದ್ರಾಕ್ಷಿ ಮತ್ತು ಗೋಡಂಬಿಯನ್ನು ಸೇರಿಸಿಕೊಂಡು ಚೆನ್ನಾಗಿ ಮಿಶ್ರಣ ಮಾಡಿಕೊಳ್ಳಿ.

* ಆ ಬಳಿಕ ಅಂಗೈಗೆ ಸಲ್ಪ ತುಪ್ಪವನ್ನು ಸವರಿಕೊಂಡು ಅವಲಕ್ಕಿ ಮಿಶ್ರಣದಿಂದ ಸಣ್ಣ ಸ್ಣಣ ಲಡ್ಡುಗಳನ್ನು ಮಾಡಿಕೊಂಡರೆ ಕೃಷ್ಣನಿಗೆ ಪ್ರಿಯವಾದ ನೈವೇದ್ಯ ಪ್ರಸಾದ ಸಿದ್ಧವಾಗುತ್ತದೆ.

ಇನ್ನಷ್ಟು ಆರೋಗ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ