ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಜನ್ಮದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುವುದು ಏಕೆ?

| Updated By: ಅಕ್ಷಯ್​ ಪಲ್ಲಮಜಲು​​

Updated on: Dec 28, 2024 | 6:31 PM

Kuvempu Birth Anniversary 2024 :ಡಿಸೆಂಬರ್ 29 ರಂದು ರಾಷ್ಟ್ರಕವಿ ಕುವೆಂಪುರವರ ಜನ್ಮದಿನ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್‌ 29, 1904ರಲ್ಲಿ ಜನಿಸಿದರು. ಕುವೆಂಪುರವರ ಜನ್ಮ ದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸಲಾಗುತ್ತದೆ. ಮನುಜಪಥ ವಿಶ್ವಪಥ ಸಂದೇಶವನ್ನು ಸಾರಿದ ಶ್ರೇಷ್ಠ ವಿಶ್ವ ಮಾನವ ಕುವೆಂಪುರವರರವರ ಬಗೆಗಿನ ಇನ್ನಷ್ಟು ಆಸಕ್ತಿದಾಯಕ ವಿಚಾರಗಳು ಇಲ್ಲಿದೆ

ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕುವೆಂಪುರವರ ಜನ್ಮದಿನವನ್ನು ವಿಶ್ವ ಮಾನವ ದಿನವನ್ನಾಗಿ ಆಚರಿಸುವುದು ಏಕೆ?
ಕುವೆಂಪು
Follow us on

ಕನ್ನಡ ಭಾಷೆ ಎಂದಾಗ ಮೊದಲು ನೆನಪಾಗುವುದು ರಸ ಋಷಿ ಕುವೆಂಪು. ಹೌದು, ಡಿಸೆಂಬರ್ 29 ರಂದು ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ, ಕನ್ನಡ ನಾಡು ನುಡಿಗೆ ತನ್ನ ಪ್ರಾಣವನ್ನೇ ಮುಡಿಪಾಗಿಸಿಟ್ಟ ಸಾಹಿತಿ ಕುವೆಂಪುರವರ ಜನ್ಮದಿನ. ಇವರ ಪೂರ್ಣ ಹೆಸರು ಕುಪ್ಪಳ್ಳಿ ವೆಂಕಟಪ್ಪ ಪುಟ್ಟಪ್ಪ. 20ನೇ ಶತಮಾನದಲ್ಲಿ ಅವರು ಬೋಧಿಸಿದ ಮನುಜಪಥ ವಿಶ್ವಪಥ ಸಂದೇಶವನ್ನು ಗೌರವಿಸುವ ಸಲುವಾಗಿ ಪ್ರತೀ ವರ್ಷ ಅವರ ಜನ್ಮ ದಿನವಾದ ಡಿಸೆಂಬರ್‌ 29 ಅನ್ನು ವಿಶ್ವ ಮಾನವ ದಿನ ಎಂದು ಆಚರಿಸುತ್ತ ಬರಲಾಗುತ್ತಿದೆ. ಈ ವಿಶೇಷ ದಿನದಂದು ಕುವೆಂಪುರವರು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ ಕೊಡುಗೆಗಳನ್ನು ನೆನಪಿಸಿಕೊಳ್ಳಲಾಗುತ್ತದೆ. ಅವರ ಜನ್ಮದಿನದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ಆಯೋಜಿಸಲಾಗುತ್ತದೆ.

ಕುವೆಂಪು ಅವರು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನ ಹಿರೇಕೊಡಿಗೆ ಎಂಬಲ್ಲಿ ಡಿಸೆಂಬರ್‌ 29, 1904ರಲ್ಲಿ ಜನಿಸಿದರು. ತಂದೆ ವೆಂಕಟಪ್ಪಗೌಡ, ತಾಯಿ ಸೀತಮ್ಮ. ಮೈಸೂರಿನ ಮಹಾರಾಜ ಕಾಲೇಜಿನಿಂದ ಬಿ.ಎ ಹಾಗೂ ಕನ್ನಡದಲ್ಲಿ ಎಂ.ಎ. ಪದವಿಯನ್ನು ಪಡೆದರು. ಮೈಸೂರಿನ ಮಹಾರಾಜ ಕಾಲೇಜಿನ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರೂ ಕೂಡ ಆಗಿ ಸೇವೆ ಸಲ್ಲಿಸಿದರು. ತದನಂತರದಲ್ಲಿ ಮೈಸೂರು ವಿಶ್ವವಿದ್ಯಾನಿಲಯದ ಉಪಕುಲಪತಿಗಳಾದರು. ತಮ್ಮ ಕಲ್ಪನೆಯ ಕೂಸಾಗಿದ್ದ ಮಾನಸಗಂಗೋತ್ರಿಯನ್ನು ಕಟ್ಟಿ ಬೆಳೆಸಿ ಕೀರ್ತಿಗೆ ಇವರಿಗೆ ಸಲ್ಲಿಸುತ್ತದೆ.

ಇದನ್ನೂ ಓದಿ: ಕುಟುಂಬದಲ್ಲಿ ಸುಖ ಸಮೃದ್ಧಿ ನೆಲೆಸಲು ಮನೆಯಿಂದ ಈ ವಸ್ತುಗಳನ್ನು ಹೊರಗಿಡಿ

ಕುವೆಂಪು ಅವರು ಕವಿ ಯಾಗಿ, ಕಾದಂಬರಿಕಾರರಾಗಿ ಸಾಹಿತ್ಯದ ವಿವಿಧ ಮಜಲುಗಳಲ್ಲಿ ಕೃಷಿ ಮಾಡಿದ, ಇಡೀ ಪ್ರಪಂಚಕ್ಕೆ ವಿಶ್ವ ಮಾನವ ಸಂದೇಶ ನೀಡಿದ ಮಹಾನ್ ವ್ಯಕ್ತಿಯಾಗಿದ್ದಾರೆ. ಕನ್ನಡ ಸಾಹಿತ್ಯ ಲೋಕಕ್ಕೆ ಇವರು ನೀಡಿದ ಕೊಡುಗೆ ಅಪಾರವಾಗಿದೆ. ಶ್ರೀರಾಮಾಯಣ ದರ್ಶನಂ ’ಕಾನೂರು ಹೆಗ್ಗಡತಿ’ ಹಾಗೂ ’ಮಲೆಗಳಲ್ಲಿ ಮದುಮಗಳು’ ಸೇರಿದಂತೆ ವಿವಿಧ ಕೃತಿ ಹಾಗೂ ಕಾದಂಬರಿಗಳನ್ನು ಕನ್ನಡ ಸಾಹಿತ್ಯ ಲೋಕಕ್ಕೆ ನೀಡಿದ್ದಾರೆ. ಇವರು ಸಾಹಿತ್ಯ ಸೇವೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪದ್ಮಭೂಷಣ, ಕರ್ನಾಟಕ ರತ್ನ ಪ್ರಶಸ್ತಿ, ರಾಷ್ಟ್ರಕವಿ, ಶ್ರೀ ರಾಮಾಯಣ ದರ್ಶನಂ ಮಹಾಕಾವ್ಯಕ್ಕೆ ಭಾರತೀಯ ಜ್ಞಾನಪೀಠ ಪ್ರಶಸ್ತಿ, ಪಂಪ ಪ್ರಶಸ್ತಿ ಹಾಗೂ ಪದ್ಮವಿಭೂಷಣ ಸೇರಿದಂತೆ ವಿವಿಧ ಪ್ರಶಸ್ತಿಗಳು ಲಭಿಸಿದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ