AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sleep Deprivation: ನಿದ್ದೆ ಹೃದಯದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ತಿಳಿದಿದೆಯೇ?

ಸ್ಲೀಪ್ ಫೌಂಡೇಶನ್​​ನ ಅಧ್ಯಯನವೊಂದರ ಪ್ರಕಾರ, ಸಮಯಕ್ಕೆ ಸರಿಯಾಗಿ ನಿದ್ರಿಸುವುದರಿಂದ ಶೇಕಡಾ 20ರಷ್ಟು ರಕ್ತದೊತ್ತಡ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ತಿಳಿದು ಬಂದಿದೆ.

Sleep Deprivation: ನಿದ್ದೆ ಹೃದಯದ ಆರೋಗ್ಯದ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂದು ತಿಳಿದಿದೆಯೇ?
ನಿದ್ರಾಹೀನತೆImage Credit source: Scientific American
Follow us
ಅಕ್ಷತಾ ವರ್ಕಾಡಿ
|

Updated on:Mar 12, 2023 | 2:59 PM

ನಿಮ್ಮ ಹೃದಯದ ಆರೋಗ್ಯವನ್ನು ಕಾಪಾಡುವಲ್ಲಿ ದಿನದಲ್ಲಿ 6 ರಿಂದ 8 ಗಂಟೆಗಳ ಕಾಲ ಸರಿಯಾದ ನಿದ್ರೆ ಅತ್ಯಗತ್ಯ. ಇದು ಹೃದಯದ ಆರೋಗ್ಯವನ್ನು ಕಾಪಾಡುವುದರ ಜೊತೆಗೆ ನಿಮ್ಮ ಆರೋಗ್ಯವನ್ನು ಸುಧಾರಿಸುತ್ತದೆ. ನಿದ್ರೆಯ ಕೊರತೆಯು ಹೃದಯ ಸೇರಿದಂತೆ ದೇಹದ ಮೇಲೆ ಹಲವಾರು ಅಡ್ಡಪರಿಣಾಮಗಳನ್ನು ಉಂಟುಮಾಡಬಹುದು. ನೀವು ನಿದ್ದೆ ಮಾಡಿದ ಸಮಯದಲ್ಲಿ ಹೃದಯ ಬಡಿತ ನಿಧಾನವಾಗುತ್ತದೆ ಮತ್ತು ರಕ್ತದೊತ್ತಡ ಕಡಿಮೆಯಾಗುತ್ತದೆ. ಇದ್ದರಿಂದಾಗಿ ಆರೋಗ್ಯದ ಮೇಲೆ ಸಾಕಷ್ಟು ಪ್ರಯೋಜನಗಳನ್ನು ಕಾಣಬಹುದು. ಸ್ಲೀಪ್ ಫೌಂಡೇಶನ್​​ನ ಅಧ್ಯಯನವೊಂದರ ಪ್ರಕಾರ, ಸಮಯಕ್ಕೆ ಸರಿಯಾಗಿ ನಿದ್ರಿಸುವುದರಿಂದ ಶೇಕಡಾ 20ರಷ್ಟು ರಕ್ತದೊತ್ತಡ ಸಮಸ್ಯೆಯನ್ನು ಬಗೆಹರಿಸಬಹುದು ಎಂದು ತಿಳಿದು ಬಂದಿದೆ.

ನಿದ್ರೆಯ ಕೊರತೆಯು ಹೃದಯದ ಮೇಲೆ ಹಲವು ವಿಧಗಳಲ್ಲಿ ಪರಿಣಾಮ ಬೀರಬಹುದು. ಪ್ರಮುಖವಾಗಿ ರಕ್ತದೊತ್ತಡ, ಇದು ಹೃದಯ ಕಾಯಿಲೆ ಮತ್ತು ಹೃದಯಾಘಾತಕ್ಕೆ ಕಾರಣವಾಗುತ್ತದೆ. ಜೊತೆಗೆ ಸ್ಥೂಲಕಾಯತೆ ಮತ್ತು ಅಧಿಕ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತದೆ ಎಂದು ಫರಿದಾಬಾದ್​​ನ ಕಾರ್ಡಿಯಾಲಜಿ ವಿಭಾಗ ನಿರ್ದೇಶಕರಾದ ಡಾ ಗಜಿಂದರ್ ಗೋಯಲ್ ಹಿಂದೂಸ್ಥಾನ್​​​ ಟೈಮ್ಸ್​​​ ಸಂದರ್ಶನದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಮುಖದ ಮೇಲೆ ಒಂದೇ ಭಾಗದಲ್ಲಿ, ಪದೇ ಪದೇ ಮೊಡವೆಗಳು ಹುಟ್ಟುತ್ತಿದೆಯಾ? ಕಾರಣ ತಿಳಿದುಕೊಳ್ಳಿ

ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆಯ ಡಾ.ಪವನ್ ಕುಮಾರ್​​ರವರ ಪ್ರಕಾರ ನಿದ್ರೆಯ ಕೊರತೆಯು ಹೃದಯದ ಮೇಲೆ ಈ ಕೆಳಗಿನ 5 ವಿಧಗಳಲ್ಲಿ ಪರಿಣಾಮ ಬೀರುತ್ತದೆ ಎಂದು ಹೇಳುತ್ತಾರೆ.

  • ಹೃದಯಾಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.
  • ಹೃದಯ ವೈಫಲ್ಯದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.
  • ಅಧಿಕ ರಕ್ತದೊತ್ತಡ, ಅಧಿಕ ಸಕ್ಕರೆ ಮತ್ತು ಅಧಿಕ ಕೊಲೆಸ್ಟ್ರಾಲ್‌ನಂತಹ ಹೃದಯ ಕಾಯಿಲೆಗಳಿಗೆ ಇತರ ಅಪಾಯಕಾರಿ ಸಮಸ್ಯೆಗೆ ಕಾರಣವಾಗುತ್ತದೆ.
  • ಮೊದಲೇ ಹೃದಯದ ಕಾಯಿಲೆಯಿಂದ ಬಳಲುತ್ತಿರುವವರ ಆರೋಗ್ಯವನ್ನು ಮತ್ತಷ್ಟು ಹದಗೆಡಿಸುತ್ತದೆ.
  • ಜಡ ಜೀವನಶೈಲಿ ಮತ್ತು ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ: 

Published On - 2:59 pm, Sun, 12 March 23

ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ಉಗ್ರರ ದಾಳಿ ನಡುವೆಯೂ ಕಾಶ್ಮೀರದಲ್ಲಿ ನಿಲ್ಲದ ಪ್ರವಾಸಿಗರ ಭೇಟಿ
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ನಟ ಶ್ರೀಮುರಳಿ ಕಂಠದಲ್ಲಿ ‘ನೀಡು ಶಿವ ನೀಡದಿರು ಶಿವ..’ ಹಾಡು ಕೇಳಿ..
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ಶಾಸಕಾಂಗ, ಕಾರ್ಯಾಂಗ ಮತ್ತು ನ್ಯಾಯಾಂಗ ಸಮನ್ವಯತೆಯಿಂದ ಕೆಲಸ ಮಾಡಬೇಕು: ಸಿಎಂ
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ