AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ತಿಳಿದುಕೊಳ್ಳಲು ಜನರು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದಲ್ಲಿ ನಾವು ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ಹೇಳುತ್ತೇವೆ.

ಹಗಲಿನಲ್ಲಿ ಹಣ್ಣು, ರಾತ್ರಿ ರೊಟ್ಟಿ; ಇದು ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ ಅನುಸರಿಸುವ ಆಹಾರ ಕ್ರಮ
ಬಾಗೇಶ್ವರ ಧಾಮದ ಧೀರೇಂದ್ರ ಶಾಸ್ತ್ರಿ
Rakesh Nayak Manchi
Rakesh Nayak Manchi|

Updated on: Jul 16, 2023 | 6:10 AM

Share

ಛತ್ತರ್‌ಪುರದ ಬಾಗೇಶ್ವರ ಧಾಮದ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ (Dhirendra Krishna Shastri) ಅವರು ಭಾರತದಲ್ಲಿ ಮಾತ್ರವಲ್ಲದೆ ವಿದೇಶಗಳಲ್ಲೂ ಹೆಸರು ಪಡೆದವರು. ಧೀರೇಂದ್ರ ಶಾಸ್ತ್ರಿಯವರು ನಡೆಸುವ ಕಥಾ ಕಾರ್ಯಕ್ರಮಕ್ಕೆ ಲಕ್ಷಾಂತರ ಜನರು ಸೇರುತ್ತಾರೆ. 27ರ ಹರೆಯದ ಇವರು, ಚೀಟಿಯಲ್ಲಿ ಜನರ ಹೆಸರು ಬರೆದು ಅವರ ಸಮಸ್ಯೆಗಳನ್ನು ತಿಳಿಸಿ ಪರಿಹಾರ ನೀಡುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಕಾಣಬಹುದು.

ಇದೇ ಕಾರಣಕ್ಕೆ ಭಾರತದ ಹೊರಗೂ ಅವರ ಅಭಿಮಾನಿಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಇತ್ತೀಚೆಗೆ ಅವರು ಬೆಂಗಳೂರಿಗೂ ಆಗಮಿಸಿದ್ದರು. ಇಷ್ಟೇ ಅಲ್ಲ, ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಬಗ್ಗೆ ಜನರು ಪ್ರತಿಯೊಂದು ಸಣ್ಣ ವಿಷಯವನ್ನು ತಿಳಿದುಕೊಳ್ಳಲು ಪ್ರಯತ್ನಿಸುತ್ತಾರೆ. ಇಂದು ಈ ಲೇಖನದ ಮೂಲಕ ಪಂಡಿತ್ ಧೀರೇಂದ್ರ ಶಾಸ್ತ್ರಿಯವರ ಆಹಾರಕ್ರಮದ ಬಗ್ಗೆ ತಿಳಿಯೋಣ.

ಇದನ್ನೂ ಓದಿ: Holiday Destination: ಮಳೆಗಾಲದಲ್ಲಿ ಗೋವಾದ ಈ 7 ಸುಂದರ ಕಡಲತೀರಗಳಿಗೆ ಭೇಟಿ ನೀಡಿ

ಸರಳ ಆಹಾರ ಸೇವನೆ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಸರಳವಾದ ಆಹಾರವನ್ನು ಮಾತ್ರ ಸೇವನೆ ಮಾಡುತ್ತಾರೆ. ಈ ಬಗ್ಗೆ ಸ್ವತಃ ಅವರೇ ಅನೇಕ ಮಾಧ್ಯಮ ಸಂದರ್ಶನಗಳಲ್ಲಿ ಹೇಳಿದ್ದಾರೆ. ಅವರು ದಿನಕ್ಕೆ ಒಮ್ಮೆ ಮಾತ್ರ ರೊಟ್ಟಿ ಅಥವಾ ಊಟ ಮಾಡುತ್ತಾರೆ. ಹಗಲಿನಲ್ಲಿ ಹಣ್ಣುಗಳನ್ನು ಸೇವಿಸಿದರೆ ರಾತ್ರಿ ರೊಟ್ಟಿ ಅಥವಾ ಊಟ ಮಾಡುತ್ತಾರೆ.

ಚಹಾ ಪ್ರೇಮಿ ಧೀರೇಂದ್ರ ಶಾಸ್ತ್ರಿ

ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರಿಗೆ ಚಹಾ ಎಂದರೆ ತುಂಬಾ ಇಷ್ಟ. ಇದಲ್ಲದೇ ಸಮೋಸ ಕೂಡ ತಿನ್ನುತ್ತಾರೆ. ಇತ್ತೀಚೆಗಷ್ಟೇ ಟಿವಿ9 ಭಾರತವರ್ಷದೊಂದಿಗೆ ಮಾತನಾಡುವಾಗ ಈ ಬಗ್ಗೆ ಹೇಳಿದ್ದರು. ಪಂಡಿತ್ ಧೀರೇಂದ್ರ ಶಾಸ್ತ್ರಿ ಅವರು ಪ್ರಸ್ತುತ ಉತ್ತರ ಪ್ರದೇಶದ ನೋಯ್ಡಾದಲ್ಲಿದ್ದು, ಜುಲೈ 16 ರವರೆಗೆ ಕಥಾ ನಿರೂಪಿಸಲಿದ್ದಾರೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Rakesh Nayak Manchi
Rakesh Nayak Manchi

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮಂಚಿ ಗ್ರಾಮದವನಾದ ನಾನು, ಪದವಿ ಮುಗಿಸಿದ ನಂತರ ಏನು ಮಾಡಬೇಕು ಎಂಬ ಯೋಚನೆಯಲ್ಲಿದ್ದಾಗ ಪತ್ರಿಕೋದ್ಯಮ ಕ್ಷೇತ್ರದ ಮೇಲೆ ಕಣ್ಣುಬಿತ್ತು. ಅದರಂತೆ ಎಂಎ ಮುಗಿಸಿ ಕಳೆದ ನಾಲ್ಕು ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ. ದಿನ ಪತ್ರಿಕೆ, ನ್ಯೂಸ್ ಆ್ಯಪ್​ನಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಪ್ರಸ್ತುತ ಕಳೆದ ಒಂದೂವರೆ ವರ್ಷಗಳಿಂದ 'ಉತ್ತಮ ಸಮಾಜಕ್ಕಾಗಿ' ಟಿವಿ9 ಡಿಜಿಟಲ್​ನಲ್ಲಿ ಕೆಲಸ ಮಾಡುತ್ತಿದ್ದೇನೆ.

ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ತರಗತಿಯೊಳಗೆ ಮಗುವನ್ನು ಎತ್ತಿಕೊಂಡು ಬಂದು ಕುಳಿತ ವಿದ್ಯಾರ್ಥಿನಿ
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ