Event Calendar September 2023: ಸೆಪ್ಟೆಂಬರ್​​ನಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ದಿನಾಚರಣೆಗಳು ಇಲ್ಲಿದೆ

ಸಪ್ಟೆಂಬರ್ ತಿಂಗಳು ವಿವಿಧ  ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಆಚರಣೆಗಳಿಂದ ತುಂಬಿದ ತಿಂಗಳು. ಈ ಪ್ರಮುಖ ದಿನಾಚರಣೆಗಳನ್ನು ನಿರ್ದಿಷ್ಟ ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಆಚರಿಸಲಾಗುತ್ತದೆ.  ಈ ತಿಂಗಳಿನಲ್ಲಿ ಆಚರಿಸಲಾಗುವ ಪ್ರಮುಖ ದಿನಾಚರಣೆಗಳ ಮಾಹಿತಿ ಇಲ್ಲಿದೆ.

Event Calendar September 2023: ಸೆಪ್ಟೆಂಬರ್​​ನಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ದಿನಾಚರಣೆಗಳು ಇಲ್ಲಿದೆ
ಸಾಂದರ್ಭಿಕ ಚಿತ್ರ
Follow us
| Updated By: ಅಕ್ಷಯ್​ ಪಲ್ಲಮಜಲು​​

Updated on:Aug 30, 2023 | 5:31 PM

ಸೆಪ್ಟೆಂಬರ್  (September) ಒಟ್ಟು 30 ದಿನಗಳನ್ನು ಹೊಂದಿರುವ ವರ್ಷದ ಒಂಭತ್ತನೇ ತಿಂಗಳು. ಸಪ್ಟೆಂಬರ್ ತಿಂಗಳು ವಿವಿಧ  ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಆಚರಣೆಗಳಿಂದ ತುಂಬಿದ ತಿಂಗಳು. ಈ ಪ್ರಮುಖ ದಿನಾಚರಣೆಗಳನ್ನು ನಿರ್ದಿಷ್ಟ ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಆಚರಿಸಲಾಗುತ್ತದೆ. ಶಿಕ್ಷಕರ ದಿನಾಚರಣೆ, ವಿಶ್ವ ಹೃದಯ ದಿನ,  ವಿಶ್ವ ಓಝೋನ್ ದಿನ ಮುಂತಾದ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ದಿನಾಚರಣೆಗಳನ್ನು ಸಪ್ಟೆಂಬರ್ ತಿಂಗಳಿನಲ್ಲಿ ಆಚರಿಸಲಾಗುತ್ತದೆ.

ಸಪ್ಟೆಂಬರ್ ತಿಂಗಳಲ್ಲಿನ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ದಿನಗಳ ಪಟ್ಟಿ

ರಾಷ್ಟ್ರೀಯ ಪೌಷ್ಟಿಕಾಂಶ ವಾರ:

ಪೌಷ್ಟಿಕಾಂಶದ ಪ್ರಾಮುಖ್ಯತೆ ಮತ್ತು ಮಾನವನ ದೇಹಕ್ಕೆ ಅದರ ಪೂರೈಕೆಯ ಬಗ್ಗೆ ಜಾಗೃತಿ ಮೂಡಿಸಲು ಸೆಪ್ಟೆಂಬರ್ 1ರಿಂದ ಸೆಪ್ಟೆಂಬರ್ 7ರ ವರೆಗೆ ರಾಷ್ಟ್ರೀಯ ಪೌಷ್ಟಿಕಾಂಶ ವಾರವನ್ನು ಭಾರತದಲ್ಲಿ ಆಚರಿಸಲಾಗುತ್ತದೆ.

ವಿಶ್ವ ತೆಂಗು ದಿನ:

ತೆಂಗಿನಕಾಯಿ ಮತ್ತು ಎಳನೀರಿನ ಪ್ರಯೋಜನಗಳ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಪ್ರತಿವರ್ಷ ಸೆಪ್ಟೆಂಬರ್ 2ರಂದು ವಿಶ್ವ ತೆಂಗು ದಿನವನ್ನು ಆಚರಿಸಲಾಗುತ್ತದೆ.

ಗಗನಚುಂಬಿ ಕಟ್ಟಡಗಳ ದಿನ:

ಗಗನಚುಂಬಿ ಕಟ್ಟಡಗಳ ನಿರ್ಮಾಣದ ಹಿಂದಿರುವ ವಿಜ್ಞಾನ ಮತ್ತು ಕಲೆಗಾರಿಕೆಗಳ ಕುರಿತು ಹಾಗೂ ಎಂಜಿನಿಯರ್ ಮತ್ತು ಕಟ್ಟಡ ಕಾರ್ಮಿಕರ ಶ್ರಮದ ಬಗ್ಗೆ ಜನಸಾಮಾನ್ಯರಿಗೆ ಅರಿವು ಮೂಡಿಸಲು  ಸೆಪ್ಟೆಂಬರ್ 3ರಂದು ಗಗನಚುಂಚಿ ಕಟ್ಟಡ ದಿನವನ್ನು ಆಚರಿಸಲಾಗುತ್ತದೆ.

ಶಿಕ್ಷಕರ ದಿನಾಚರಣೆ

ಭಾರತದ ಎರಡನೇ ರಾಷ್ಟ್ರಪತಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನದ ನೆನಪಿಗಾಗಿ ಭಾರತದಲ್ಲಿ ಪ್ರತಿವರ್ಷ ಸೆಪ್ಟೆಂಬರ್ 5ರಂದು ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.

ಬ್ರೆಜಿಲಿಯನ್ ಸ್ವಾತಂತ್ರ್ಯ ದಿನ:

ಬ್ರೆಜಿಲ್​​​ನಲ್ಲಿ ಸ್ವಾತಂತ್ರ್ಯ ದಿನವನ್ನು ಪ್ರತಿವರ್ಷ ಸೆಪ್ಟೆಂಬರ್ 7 ರಂದು ಆಚರಿಸಲಾಗುತ್ತದೆ. ಸೆಪ್ಟೆಂಬರ್ 7, 1822 ರಂದು ಬ್ರೆಜಿಲ್ ಪೋರ್ಚುಗೀಸರಿಂದ ಸ್ವಾತಂತ್ರ್ಯ ಪಡೆಯಿತು.

ಅಂತರಾಷ್ಟ್ರೀಯ ಸಾಕ್ಷರತಾ ದಿನ:

ಸಾಕ್ಷರತೆಯ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸಲು ಪ್ರತಿವರ್ಷ ಸೆಪ್ಟೆಂಬರ್ 8 ರಂದು ಅಂತರಾಷ್ಟ್ರೀಯ ಸಾಕ್ಷರತಾ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಆತ್ಮಹತ್ಯೆ ತಡೆ ದಿನ:

ಆತ್ಮಹತ್ಯೆಯ ಪ್ರಕರಣಗಳನ್ನು ತಡೆಗಟ್ಟಲು ಜಾಗೃತಿ ಮೂಡಿಸುವ ಸಲುವಾಗಿ ಸಪ್ಟೆಂಬರ್ 10 ರಂದು ವಿಶ್ವ ಆತ್ಮಹತ್ಯೆ ತಡೆ ದಿನವನ್ನು ಆಚರಿಸಲಾಗುತ್ತದೆ. ಈ ದಿನವನನು ಇಂಟರ್ ನ್ಯಾಷನಲ್ ಅಸೋಸಿಯೇಷನ್ ಫಾರ್ ಸುಸೈಡ್ ಪ್ರಿವೆನ್ಷನ್ ಸಂಘಟನೆ ಆಯೋಜಿಸಿದೆ.

ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನ:

ಭಾರತದಲ್ಲಿ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನವನ್ನು ವಾರ್ಷಿಕವಾಗಿ ಸೆಪ್ಟೆಂಬರ್ 11ರಂದು ರಾಷ್ಟ್ರದ ಜೀವವೈವಿಧ್ಯತೆ, ಕಾಡುಗಳು ಮತ್ತು ಕಾಡುಗಳನ್ನು ರಕ್ಷಿಸಲು ತಮ್ಮ ಪ್ರಾಣವನ್ನು ಅರ್ಪಿಸಿದವರ ಗೌರವಾರ್ಥವಾಗಿ ಆಚರಿಸಲಾಗುತ್ತದೆ.

ವಿಶ್ವ ಪ್ರಥಮ ಚಿಕಿತ್ಸಾ ದಿನ:

ಈ ದಿನವನ್ನು ಸೆಪ್ಟೆಂಬರ್ ಎರಡನೇ ಶನಿವಾರದಂದು ಆಚರಿಸಲಾಗುತ್ತದೆ. ಈ ದಿನದ ಉದ್ದೇಶವು ಜೀವಗಳನ್ನು ಉಳಿಸಲು ಪ್ರಥಮ ಚಿಕಿತ್ಸೆಯನ್ನು ಹೇಗೆ ಬಳಸಬಹುದು ಎಂಬುದರ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸುವುದಾಗಿದೆ.

ಹಿಂದಿ ದಿವಸ:

ಹಿಂದಿ ದಿವಸವನ್ನು ಸೆಪ್ಟೆಂಬರ್ 14 ರಂದು ಆಚರಿಸಲಾಗುತ್ತದೆ. ಏಕೆಂದರೆ ಈ ದಿನವನ್ನು ಭಾರತದ ಸಂವಿಧಾನ ಸಭೆಯು 1949ರಲ್ಲಿ ದೇವನಾಗರಿ ಲಿಪಿಯಲ್ಲಿ ಬರೆದ ಹಿಂದಿಯನ್ನು ಭಾರತ ಗಣರಾಜ್ಯದ ಅಧಿಕೃತ ಭಾಷೆಯಾಗಿ ಸ್ವೀಕರಿಸಿತು.

ಇಂಜಿನಿಯರ್ಸ್ ಡೇ:

ಭಾರತೀಯ ಇಂಜಿನಿಯರ್ ಭಾರತ ರತ್ನ ಮೋಕ್ಷಗುಂಡಂ ವಿಶ್ವೇಶ್ವರಯ್ಯ ಅವರಿಗೆ ಗೌರವ ಸಲ್ಲಿಸಲು ಪ್ರತಿವರ್ಷ ಸೆಪ್ಟೆಂಬರ್ 15 ರಂದು ಭಾರತದಲ್ಲಿ ಎಂಜಿನಿಯರ್​ ದಿನವನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನ:

ಪ್ರಜಾಪ್ರಭುತ್ವದ ಮಹತ್ವ ಮತ್ತು ಮಾನವ ಹಕ್ಕುಗಳ ಬಗ್ಗೆ ಜನರಿಗೆ ಅರಿವು ಮೂಡಿಸುವ ನಿಟ್ಟಿನಲ್ಲಿ ಸೆಪ್ಟೆಂಬರ್ ೧5 ರಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನವನನು ಆಚರಿಸಲಾಗುತ್ತದೆ.

ವಿಶ್ವ ಓಝೋನ್ ದಿನ:

ವಿಶ್ವ ಸಂಸ್ಥೆಯ ಸಾಮಾನ್ಯ ಸಭೆಯು ಸೆಪ್ಟೆಂಬರ್ 16, 1987 ರಂದು ಓಝೋನ್ ಪದರದ ಸಂರಕ್ಷಣೆಗಾಗಿ ಅಂತರಾಷ್ಟ್ರೀಯ ಓಝೋ ದಿನವನ್ನು ಸ್ಥಾಪಿಸಿತು.

ವಿಶ್ವ ಬಿದಿರು ದಿನ:

ಜಾಗತಿಕವಾಗಿ ಬಿದಿರಿನ ಬಗ್ಗೆ ಜಾಗೃತಿ ಮೂಡಿಸಲು ಸಪ್ಟೆಂಬರ್ 18 ರಂದು ಈ ದಿನವನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ಕೆಂಪು ಪಾಂಡಾ ದಿನ:

ಅಳಿವಿನಂಚಿನಲ್ಲಿರುವ ಕೆಂಪು ಪಾಂಡಗಳ ಸಂರಕ್ಷಣೆಯ ಬಗ್ಗೆ ಜಾಗೃತಿ ಮೂಡಿಸಲು ಸೆಪ್ಟೆಂಬರ್ ತಿಂಗಳ ಮೂರನೇ ಶನಿವಾರದಂದು ಅಂತರಾಷ್ಟ್ರೀಯ ಕೆಂಪು ಪಾಂಡಾ ದಿನವನ್ನು ಆಚರಿಸಲಾಗುತ್ತದೆ.

ಅಂತರಾಷ್ಟ್ರೀಯ ಶಾಂತಿ ದಿನ:

ಅಂತರಾಷ್ಟ್ರೀಯ ಶಾಂತಿ ದಿನವನ್ನು ವಿಶ್ವಾದ್ಯಂತ ಸೆಪ್ಟೆಂಬರ್ 21 ರಂದು ಆಚರಿಸಲಾಗುತ್ತದೆ.

ವಿಶ್ವ ಆಲ್ಝೈಮರ್ ದಿನ:

ಬುದ್ಧಿಮಾಂದ್ಯತೆಯಿಂದ ರೋಗಿಯು ಎದುರಿಸುವ ಸವಾಲುಗಳ ಬಗ್ಗೆ ಜಾಗೃತಿ ಮೂಡಿಸಲು ಸೆಪ್ಟೆಂಬರ್ 21 ರಂದು ವಿಶ್ವ ಆಲ್ಝೈಮರ್ ದಿನವನ್ನು ಆಚರಿಸಲಾಗುತ್ತದೆ

ರೋಸ್ ಡೇ (ಕ್ಯಾನ್ಸರ್ ರೋಗಿಗಳ ಕಲ್ಯಾಣ ದಿನ)

ಕ್ಯಾನ್ಸರ್ ರೋಗಿಗಳ ಕಲ್ಯಾಣಕ್ಕಾಗಿ ಸೆಪ್ಟೆಂಬರ್ 22 ರಂದು ವಿಶ್ವ ಗುಲಾಬಿ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಘೇಂಡಾಮೃಗ ದಿನ:

ಈ ಪ್ರಾಣಿಗಳ ರಕ್ಷಣೆಗಾಗಿ ಮತ್ತು ಅವುಗಳ ನೈಸರ್ಗಿಕ ಆವಾಸಸ್ಥಾನಗಳನ್ನು ರಕ್ಷಿಸಲು ಜನರಲ್ಲಿ ಜಾಗೃತಿ ಮೂಡಿಸಲು ಪ್ರತಿವರ್ಷ ಸಪ್ಟೆಂಬರ್ 22 ರಂದು ವಿಶ್ವ ಘೇಂಡಾಮೃಗ ದಿನವನ್ನು ಆಚರಿಸಲಾಗುತ್ತದೆ.

ಯುರೋಪಿಯನ್ ಡೇ ಆಫ್ ಲ್ಯಾಂಗ್ವೇಜಸ್:

ಭಾಷಾ ಕಲಿಕೆಯ ಪ್ರಾಮುಖ್ಯತೆ ಮತ್ತು ಭಾಷೆಯ  ಪರಂಪರೆಯನ್ನು ರಕ್ಷಿಸುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ವಾರ್ಷಕವಾಗಿ ಸೆಪ್ಟೆಂಬರ್ 26 ರಂದು ಯುರೋಪಿಯನ್ ಭಾಷಾ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ನದಿಗಳ ದಿನ:

ವಿಶ್ವ ನದಿಗಳ ದಿನವನ್ನು ಸೆಪ್ಟೆಂಬರ್ ಕೊನೆಯ ಭಾನುವಾರದಂದು ಆಚರಿಸಲಾಗುತ್ತದೆ. ಈ ದಿನವು ನದಿಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುತ್ತದೆ ಮತ್ತು ನದಿಗಳ ರಕ್ಷಣೆಯ ಬಗ್ಗೆ ಜಾಗೃತಿಯನ್ನು ಮೂಡಿಸುತ್ತದೆ.

ವಿಶ್ವ ಪ್ರವಾಸೋದ್ಯಮ ದಿನ:

ಪ್ರವಸೋದ್ಯಮದ ಮಹತ್ವವವನ್ನು ಎತ್ತಿ ಹಿಡಿಯಲು ವಾರ್ಷಿಕವಾಗಿ ಸೆಪ್ಟೆಂಬರ್  27 ರಂದು ವಿಶ್ವ ಪ್ರವಾಸೋದ್ಯಮ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ರೇಬೀಸ್ ದಿನ:

ಈ ಅನಾರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅದನ್ನು ತಡೆಗಟ್ಟಲು ಪ್ರಬಲವಾದ ಲಸಿಕೆಯನ್ನು ಕಂಡುಹಿಡಿದ ಲೂಯಿಸ್ ಪಾಶ್ಚರ್ ಅವರ ಗೌರವಾರ್ಥವಾಗಿ ಸಪ್ಟೆಂಬರ್ 28 ರಂದು ವಿಶ್ವ ರೇಬೀಸ್ ದಿನವನ್ನು ಆಚರಿಸಲಾಗುತ್ತದೆ.

ವಿಶ್ವ ಹೃದಯ ದಿನ:

ವಿಶ್ವ ಹೃದಯ ದಿನವನ್ನು ವಾರ್ಷಿಕವಾಗಿ ಸೆಪ್ಟೆಂಬರ್ 29 ರಂದು ಆಚರಿಸಲಾಗುತ್ತದೆ. ಈ ದಿನವು ಹೃದಯ ಸಂಬಂಧಿ ಕಾಯಿಲೆ ಮತ್ತು ಪಾರ್ಶ್ವವಾಯು ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತದೆ.

ಅಂತರಾಷ್ಟ್ರೀಯ ಅನುವಾದ ದಿನ:

ಭಾಷೆಗಳ ಬಗೆಗಿನ ತಿಳುವಳಿಕೆಯನ್ನು ವೃದ್ಧಿಸಲು ಮತ್ತು ರಾಷ್ಟ್ರಗಳ ನಡುವೆ ನಡುವೆ ಸಹಕಾರವನ್ನು ಸ್ಥಾಪಿಸುವ ಮೂಲಕ ವಿಶ್ವದಾದ್ಯಂತ ಶಾಂತಿ ಮತ್ತು ಭದ್ರತೆಗೆ ಕೊಡುಗೆ ನೀಡುವ ಭಾಷಾತಜ್ಞರಿಗೆ ಗೌರವ ಸಲ್ಲಿಸಲು ಪ್ರತಿವರ್ಷ ಸಪ್ಟೆಂಬರ್ 30 ರಂದು ಅಂತರಾಷ್ಟ್ರೀಯ ಅನುವಾದ ದಿನವನ್ನು ಆಚರಿಸಲಾಗುತ್ತದೆ.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ

Published On - 5:31 pm, Wed, 30 August 23