ಪ್ರತಿ ತಿಂಗಳಲ್ಲೂ ಯಾವುದಾದರೂ ಐತಿಹಾಸಿಕವಾಗಿ ನಡೆದ ಘಟನೆ ಮತ್ತು ವಿಶೇಷಗಳ ನೆನಪಿಗಾಗಿ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ದಿನಗಳನ್ನು ಆಚರಿಸಲಾಗುತ್ತದೆ. ಅದರಂತೆ ವರ್ಷದ ಎಂಟನೇ ತಿಂಗಳಾದ ಆಗಸ್ಟ್ ತಿಂಗಳಲ್ಲೂ ಹಲವಾರು ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ. ಆಗಸ್ಟ್ ತಿಂಗಳೆಂದಾಗ ಭಾರತೀಯರಿಗೆ ಮೊದಲಿಗೆ ನೆನಪಿಗೆ ಬರುವಂತಹದ್ದು, ಸ್ವಾತಂತ್ರ್ಯ ದಿನ. ಭಾರತೀಯ ಸ್ವಾತಂತ್ರ್ಯ ಹೋರಾಟಗಾರರ ಹೋರಾಟದ ಫಲವಾಗಿ ಆಗಸ್ಟ್ 15, 1947 ರಲ್ಲಿ ಭಾರತವು ಸ್ವಾತಂತ್ರ್ಯವನ್ನು ಪಡೆಯಿತು. ಅಂದಿನಿಂದ ಭಾರತವು ಪ್ರತಿವರ್ಷ ಸ್ವಾತಂತ್ರ್ಯದಿನವನ್ನು ಆಚರಿಸುತ್ತಾ ಬರುತ್ತಿದೆ. ಇದು ಮಾತ್ರವಲ್ಲದೆ ಈ ಆಗಸ್ಟ್ ತಿಂಗಳಲ್ಲಿ ಇನ್ನೂ ಅನೇಕ ವಿಶೇಷ ದಿನಗಳನ್ನು ಆಚರಿಸಲಾಗುತ್ತದೆ. ಅವುಗಳು ಯಾವುವು ಎಂಬುದನ್ನು ನೋಡೋಣ.
ಇದು ಜಾಗತಿಕ ಅಭಿಯಾನವಾಗಿದ್ದು, ಇದನ್ನು ಪ್ರತಿವರ್ಷ ಆಗಸ್ಟ್ ಮೊದಲ ವಾರದಲ್ಲಿ ಪ್ರಪಂಚದಾದ್ಯಂತ ಹಲವು ದೇಶಗಳಲ್ಲಿ ಆಚರಿಸಲಾಗುತ್ತದ. ವಿಶ್ವ ಸ್ತನ್ಯಪಪಾನ ಸಪ್ತಾಹವನ್ನು ಮೊದಲ ಬಾರಿಗೆ 1992 ರಲ್ಲಿ ಆಚರಿಸಲಾಯಿತು.
ಪ್ರತಿ ವರ್ಷ ಆಗಸ್ಟ್ 6 ರಂದು ಹಿರೋಷಿಮ ದಿನವನ್ನು ಆಚರಿಸಲಾಗುತ್ತದೆ. ಜಪಾನಿನ ಹಿರೋಷಿಮಾ ನಗರದ ಮೇಲೆ ಅಣುಬಾಂಬ್ ದಾಳಿ ನಡೆದ ದಿನವಿದು.
ಅಂತರಾಷ್ಟ್ರೀಯ ಬಿಯರ್ ದಿನವನ್ನು ಆಗಸ್ಟ್ ತಿಂಗಳ ಮೊದಲನೇ ವಾರದದಲ್ಲಿ ಆಚರಿಸಲಾಗುತ್ತದೆ. ಇದನ್ನು ಮೂಲತಃ 2007 ರಲ್ಲಿ ಕ್ಯಾಲಿಫೋರ್ನಿಯಾದ ಸಾಂಟಾ ಕ್ರೂಜ್ ನಲ್ಲಿ ಪ್ರಾರಂಭಿಸಲಾಯಿತು.
ಸ್ನೇಹಿತರ ದಿನವನ್ನು ಆಗಸ್ಟ್ ತಿಂಗಳ ಮೊದಲ ಭಾನುವಾರದಂದು ಆಚರಿಸಲಾಗುತ್ತದೆ. 1935 ರಲ್ಲಿ ಸ್ನೇಹಿತರ ಗೌರವಾರ್ಥವಾಗಿ ಈ ದಿನವನ್ನು ಆಚರಿಸುವ ಸಂಪ್ರದಾಯವು ಅಮೇರಿಕಾ ದಲ್ಲಿ ಪ್ರಾರಂಭವಾಯಿತು. ಕ್ರಮೇಣ ಫ್ರೆಂಡ್ ಶಿಪ್ ಡೇ ಜನಪ್ರಿಯತೆಯನ್ನು ಗಳಿಸಿತು. ಮತ್ತು ಭಾರತ ಸೇರಿದಂತರ ವಿವಿಧ ದೇಶಗಳಲ್ಲಿ ಈ ದಿನವನ್ನು ಆರಿಸಲಾಗುತ್ತದೆ.
ದೇಶದ ಕೈಮಗ್ಗ ನೇಕಾರರನ್ನು ಗೌರವಿಸಲು ಪ್ರತಿವರ್ಷ ಆಗಸ್ಟ್ 7 ರಂದು ರಾಷ್ಟ್ರೀಯ ಕೈಮಗ್ಗ ದಿನವನ್ನು ಆಚರಿಸಲಾಗುತ್ತದೆ.
ಆಗಸ್ಟ್ 8, 1942ರಲ್ಲಿ ಬಾಂಬೆಯ ಅಖಿಲ ಭಾರತ ಕಾಂಗ್ರೇಸ್ ಸಮಿತಿಯ ಅಧಿವೇಶನದಲ್ಲಿ ಗಾಂಧೀಜಿ ಕ್ವಿಟ್ ಇಂಡಿಯಾ ಚಳುವಳಿಯನ್ನು ಪ್ರಾರಂಭಿಸಿದರು. ಇದನ್ನು ಆಗಸ್ಟ್ ಚಳುವಳಿ ಅಥವಾ ಆಗಸ್ಟ್ ಕಾಂತ್ರಿ ಎಂದೂ ಕರೆಯುತ್ತಾರೆ.
ಇದನ್ನೂ ಓದಿ: ಜುಲೈ ತಿಂಗಳಿನಲ್ಲಿ ಬರುವ ರಾಷ್ಟ್ರೀಯ, ಅಂತರಾಷ್ಟ್ರೀಯ ಪ್ರಮುಖ ದಿನಗಳ ಯಾವುವು? ಇಲ್ಲಿದೆ ಮಾಹಿತಿ
ಅಮೇರಿಕಾ 1945 ರ ಆಗಸ್ಟ್ 9 ರಂದು ಜಪಾನ್ನ ನಾಗಸಾಕಿಯ ಮೇಲೆ ಪರಮಾಣು ಬಾಂಬ್ ದಾಳಿ ಮಾಡಿತು. ಈ ಕರಾಳ ದಿನದ ನೆನಪಿಗಾಗಿ ನಾಗಾಕಿ ದಿನವನ್ನು ಆಚರಿಸಲಾಗುತ್ತದೆ.
ಇದನ್ನು ವಾರ್ಷಿಕವಾಗಿ ಆಗಸ್ಟ್ 10 ರಂದು ಆಚರಿಸಲಾಗುತ್ತದೆ. ಸಿಂಹಗಳು ಮತ್ತು ಅವುಗಳ ಸಂರಕ್ಷಣೆಯ ಬಗ್ಗೆ ಜನರಿಗೆ ಅರಿವು ಮೂಡಿಸುವುದು ಈ ದಿನದ ಉದ್ದೇಶವಾಗಿದೆ.
ಪಳಿಯುಳಿಕೆ ಇಂಧನಗಳಿಗೆ ಪರ್ಯಾಯವಾಗಿ ಕೆಲಸ ಮಾಡಬಹುದಾದ ಇಂಧನಳ ಮೂಲಗಳ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ಸಮಾಜದಲ್ಲಿ ಯುವಕರ ಪ್ರಾಮುಖ್ಯತೆಯನ್ನು ಸಾರಲು ಜಗತ್ತಿನಾದ್ಯಂತ ಅಂತರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಗುತ್ತದೆ.
ಆನೆಗಳ ರಕ್ಷಣೆಗಾಗಿ ವಾರ್ಷಿಕವಾಗಿ ಆಗಸ್ಟ್ 12 ರಂದು ವಿಶ್ವ ಆನೆಯ ದಿನವನ್ನು ಆಚರಿಸಲಾಗುತ್ತದೆ.
ಎಡಗೈ ವ್ಯಕ್ತಿಗಳು ಎದುರಿಸುತ್ತಿರುವ ಸಮಸ್ಯೆಗಳು ಮತ್ತು ತೊಂದರೆಗಳ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಆಗಸ್ಟ್ 13 ರಂದು ಎಡಗೈದಾರರ ದಿನವನ್ನು ಆಚರಿಸಲಾಗುತ್ತದೆ
ಅಂಗಾಂಗ ದಾನದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ಪ್ರತಿವರ್ಷ ಆಗಸ್ಟ್ 14 ರಂದು ಪಾಕಿಸ್ತಾನವು ತನ್ನ ಸ್ವಾತಂತ್ರ್ಯ ದಿನವನ್ನು ಆಚರಿಸುತ್ತದೆ.
ಭಾರತವು ಪ್ರತಿ ವರ್ಷ ಆಗಸ್ಟ್ 15 ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತದೆ.
ಆಗಸ್ಟ್ 15 ರಂದು ಬಾಂಗ್ಲಾದೇಶವು ರಾಷ್ಟ್ರೀಯ ಶೋಕ ದಿನವನ್ನು ಆಚರಿಸುತ್ತದೆ ಏಕೆಂದರೆ ಈ ದಿನದಂದು ಈ ದೇಶದ ಮೊದಲ ಅಧ್ಯಕ್ಷರಾದ ಶೇಖ್ ಮುಜಿಬುರ್ ರೆಹಮಾನ್ ಮತ್ತು ಅವರ ಕುಟುಂಬದವರನ್ನು ಹತ್ಯೆ ಮಾಡಲಾಗಿತ್ತು.
ಛಾಯಾಗ್ರಹಣದ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ವಾರ್ಷಿಕವಾಗಿ ಆಗಸ್ಟ್ 19ರಂದು ವಿಶ್ವ ಛಾಯಾಗ್ರಹಣ ದಿನವನ್ನು ಆಚರಿಸಲಾಗುತ್ತದೆ.
ಮಾನವೀಯ ಸೇವೆಯಲ್ಲಿ ತಮ್ಮ ಪ್ರಾಣವನ್ನು ಪಣಕ್ಕಿಟ್ಟು ಜನರಿಗೆ ಸಹಾಯ ಮಾಡುವ ಕಾರ್ಯಕರ್ತರಿಗೆ ಗೌರವ ಸಲ್ಲಿಸಲು ಆಗಸ್ಟ್ 19 ರಂದು ಪ್ರಪಂಚದಾದ್ಯಂತ ವಿಶ್ವ ಮಾನವೀಯ ದಿನವನ್ನು ಆಚರಿಸಲಾಗುತ್ತದೆ.
ಹೆಣ್ಣು ಸೊಳ್ಳೆಗಳು ಮನುಷ್ಯರಿಗೆ ಕಚ್ಚಿ ಅದು ಮಲೇರಿಯಾವನ್ನು ಹರಡುತ್ತವೆ ಎಂದು ಕಂಡುಹಿಡಿದ ಬ್ರಿಟೀಷ್ ವೈದ್ಯ ಸರ್ ರೊನಾಲ್ಡ್ ರಾಸ್ ಸ್ಮಾರಣಾರ್ಥವಾಗಿ ವಿಶ್ವ ಸೊಳ್ಳೆಯ ದಿನವನ್ನು ಆಚರಿಸಲಾಗುತ್ತದೆ.
ದಿವಂಗತ ರಾಜೀವ್ ಗಾಂಧಿಯವರ ಸ್ಮರಣೆಗಾಗಿ ಪ್ರತಿ ವರ್ಷ ಆಗಸ್ಟ್ 20 ರಂದು ಸದ್ಭಾವನಾ ದಿನವನ್ನು ಆರಿಸಲಾಗುತ್ತದೆ.
ಭಾರತದಲ್ಲಿ ನವೀಕರಿಸಬಹುದಾದ ಶಕ್ತಿಯ ಅಭಿವೃದ್ಧಿಯ ಬಗ್ಗೆ ಜಾಗೃತಿ ಮೂಡಿಸಲು ಅಕ್ಷಯ ಉರ್ಜಾ ದಿನವನ್ನು ಆಚರಿಸಲಾಗುತ್ತದೆ.
ಅಟ್ಲಾಂಟಿಕ್ ಸಾಗರದ ಗುಲಾಮರ ವ್ಯಾಪಾರದ ದುರಂತದ ಬಗ್ಗೆ ನೆನಪಿಸಲು ಈ ದಿನವನ್ನು ಆಚರಿಸಲಾಗುತ್ತದೆ.
ಆಗಸ್ಟ್ 29, ರಾಷ್ಟ್ರೀಯ ಕ್ರೀಡಾ ದಿನ:
ಭಾರತೀಯ ಕ್ರೀಡಾಪಟು ಧ್ಯಾನ್ ಚಂದ್ ಅವರ ಜನ್ಮದಿನದ ನೆನಪಿಗಾಗಿ ಪ್ರತಿವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಭಾರತದಲ್ಲಿ ಆಚರಿಸಲಾಗುತ್ತದೆ.
ಸಣ್ಣ ಕೈಗಾರಿಕೆಗಳನ್ನು ಬೆಂಬಲಿಸಲು ಮತ್ತು ಉತ್ತೇಜಿಸಲು ಸಣ್ಣ ಕೈಗಾರಿಕ ದಿನವನ್ನು ಆಚರಿಸಲಾಗುತ್ತದೆ.
ಆಗಸ್ಟ್ 31 ರಂದು ವಿಶ್ವ ಸಂಸ್ಕೃತ ದಿನವನ್ನು ಆಚರಿಸಲಾಗುತ್ತದೆ.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ