Event Calendar October 2023: ಅಕ್ಟೋಬರ್ನಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ, ಅಂತರಾಷ್ಟ್ರೀಯ ದಿನಾಚರಣೆಗಳ ಇಲ್ಲಿದೆ
ಅಕ್ಟೋಬರ್ ವಿವಿಧ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಆಚರಣೆಗಳ ತಿಂಗಳಾಗಿದ್ದು, ಈ ಪ್ರಮುಖ ದಿನಾಚರಣೆಗಳನ್ನು ನಿರ್ಧಿಷ್ಟ ಉದ್ದೇಶಗಳಿಗಾಗಿ ಜನರಲ್ಲಿ ಜಾಗೃತಿ ಮೂಡಿಸಲು ಆಚರಿಸಲಾಗುತ್ತದೆ. ಈ ತಿಂಗಳಲ್ಲಿ ಯಾವೆಲ್ಲಾ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ದಿನಾಚರಣೆಗಳನ್ನು ಆಚರಿಸಲಾಗುತ್ತದೆ ಎಂಬುದನ್ನು ನೋಡೋಣ.
ಅಕ್ಟೋಬರ್ ವರ್ಷದ 10ನೇ ತಿಂಗಳಾಗಿದ್ದು, ಇದು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಎರಡೂ ಪ್ರಮುಖ ಆಚರಣೆಗಳಿಂದ ಕೂಡಿದ ತಿಂಗಳು. ಈ ಪ್ರತಿಯೊಂದು ಆಚರಣೆಯು ತನ್ನದೇ ಆದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ಹೊಂದಿದೆ. ಈ ಪ್ರಮುಖ ದಿನಗಳ ಮಹತ್ವದ ಬಗ್ಗೆ ಜನರಿಗೆ ಅರಿವು ಮೂಡಿಸುವ ಉದ್ದೇಶದಿಂದ ಈ ದಿನಾಚರಣೆಗಳನ್ನು ಆಚರಿಸಲಾಗುತ್ತದೆ. ಅಂತರಾಷ್ಟ್ರೀಯ ಹಿರಿಯರ ದಿನ, ಗಾಂಧಿ ಜಯಂತಿ, ವಿಶ್ವ ಪೋಲಿಯೋ ದಿನ, ರಾಷ್ಟ್ರೀಯ ಏಕತಾ ದಿನ ಸೇರಿದಂತೆ ಹಲವು ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ದಿನಾಚರಣೆಗಳನ್ನು ಅಕ್ಟೋಬರ್ ತಿಂಗಳಲ್ಲಿ ಆಚರಿಸಲಾಗುತ್ತದೆ.
ಅಕ್ಟೋಬರ್ ತಿಂಗಳಲ್ಲಿ ಆಚರಿಸಲಾಗುವ ಪ್ರಮುಖ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ದಿನಾಚರಣೆಗಳ ಪಟ್ಟಿ:
ಅಂತರಾಷ್ಟ್ರೀಯ ಹಿರಿಯರ ದಿನ: ನಮ್ಮ ಸಮಾಜದಲ್ಲಿ ಹಿರಿಯ ವ್ಯಕ್ತಿಗಳ ಮೌಲ್ಯದ ಅರಿವು ಮೂಡಿಸಲು, ವಯಸ್ಸಾದವರ ಎದುರಿಸುತ್ತಿರುವ ಸವಾಲುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅವರ ಹಕ್ಕುಗಳು ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ಪ್ರತಿವರ್ಷ ಅಕ್ಟೋಬರ್ 1 ರಂದು ಅಂತರಾಷ್ಟ್ರೀಯ ಹಿರಿಯರ ದಿನವನ್ನು ಆಚರಿಸಲಾಗುತ್ತದೆ.
ಅಂತರಾಷ್ಟ್ರೀಯ ಕಾಫಿ ದಿನ: ಕಾಫಿಯ ವೈವಿಧ್ಯತೆ, ಅದರ ಬಹುಮುಖತೆಯನ್ನು ಸ್ಮರಿಸಲು ಮತ್ತು ಕಾಫಿ ಬೆಳೆಗಾರರ ಸ್ಥಿತಿಯ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಅಕ್ಟೋಬರ್ 1 ರಂದು ಅಂತರಾಷ್ಟ್ರೀಯ ಕಾಫಿ ದಿನವನ್ನು ಆಚರಿಸಲಾಗುತ್ತದೆ.
ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ: ಪ್ರತಿವರ್ಷ ಅಕ್ಟೋಬರ್ 2 ರಂದು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಜನ್ಮ ದಿನದ ಅಂಗವಾಗಿ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿಯನ್ನು ಭಾರತದಲ್ಲಿ ಆಚರಿಲಾಗುತ್ತದೆ.
ಗಾಂಧಿ ಜಯಂತಿ: ಮಹಾತ್ಮ ಗಾಂಧಿಯವರ ಜನ್ಮದಿನದ ಅಂಗವಾಗಿ ಪ್ರತಿವರ್ಷ ಅಕ್ಟೋಬರ್ 2 ರಂದು ಗಾಂಧಿಜಯಂತಿ ದಿನವನ್ನು ಆರಿಸಲಾಗುತ್ತದೆ.
ಅಂತರಾಷ್ಟ್ರೀಯ ಅಹಿಂಸಾ ದಿನ: ಭಾರತದ ಸ್ವಾತಂತ್ರ್ಯದಲ್ಲಿ ಪ್ರಮುಖ ಪಾತ್ರ ವಹಿಸಿದ ಹಾಗೂ ಶಾಂತಿ ಮತ್ತು ಅಹಿಂಸೆ ಪ್ರತಿಪಾದಕರಾದ ಮಹಾತ್ಮ ಗಾಂಧಿಯವರ ಜನ್ಮದಿನವಾದ ಅಕ್ಟೋಬರ್ 2 ರಂದು ಅಂತರಾಷ್ಟ್ರೀಯ ಅಹಿಂಸಾ ದಿನವನ್ನು ಆಚರಿಸಲಾಗುತ್ತದೆ .
ವಿಶ್ವ ಪ್ರಕೃತಿ ದಿನ: ಪ್ರಕೃತಿಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಮತ್ತು ಪ್ರಕೃತಿಯನ್ನು ರಕ್ಷಿಸಲು ಜನರನ್ನು ಉತ್ತೇಜಿಸಲು ಅಕ್ಟೋಬರ್ 3 ರಂದು ಜಾಗತಿಕ ಮಟ್ಟದಲ್ಲಿ ವಿಶ್ವ ಪ್ರಕೃತಿ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಪ್ರಾಣಿ ಕಲ್ಯಾಣ ದಿನ: ಪ್ರಾಣಿ ಕಲ್ಯಾಣದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಪ್ರಾಣಿಗಳ ರಕ್ಷಣೆಯ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಲು ಅಕ್ಟೋಬರ್ 4 ರಂದು 4 ರಂದು ವಿಶ್ವ ಪ್ರಾಣಿ ಕಲ್ಯಾಣ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಆವಾಸಸ್ಥಾನ ದಿನ: ಸುಸ್ಥಿರ ವಸತಿಯ ಮಹತ್ವದ ಬಗ್ಗೆ ಅರಿವು ಮೂಡಿಸಲು ಮತ್ತು ಸುಸ್ಥಿರ ನಗರೀಕರಣವನ್ನು ಉತ್ತೇಜಿಸಲು ಅಕ್ಟೋಬರ್ 4 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಶಿಕ್ಷಕರ ದಿನ: ಉತ್ತಮ ಸಮಾಜವನ್ನು ನಿರ್ಮಿಸುವಲ್ಲಿ ಶಿಕ್ಷಕರ ಕೊಡುಗೆಯನ್ನು ಗೌರವಿಸಲು ಮತ್ತು ಶಿಕ್ಷಣದ ಮಹತ್ವದ ಬಗ್ಗೆ ಅರಿವು ಮೂಡಿಸಲು ಪ್ರತಿವರ್ಷ ಅಕ್ಟೋಬರ್ 5 ರಂದು ಅಂತರಾಷ್ಟ್ರೀಯ ಶಿಕ್ಷಕರ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಹತ್ತಿ ದಿನ: ವಿಶ್ವದಾದ್ಯಂತ ಹತ್ತಿಯ ಮಹತ್ವವನ್ನು ಗುರುತಿಸಲು ಪ್ರತಿವರ್ಷ ಅಕ್ಟೋಬರ್ 7 ರಂದು ವಿಶ್ವ ಹತ್ತಿ ದಿನವನ್ನು ಆಚರಿಸಲಾಗುತ್ತದೆ.
ಭಾರತೀಯ ವಾಯುಪಡೆ ದಿನ: ಭಾರತೀಯ ವಾಯುಪಡೆಯ ಸ್ಥಾಪನೆಯ ವಾರ್ಷಿಕೋತ್ಸವದ ನೆನಪಿಗಾಗಿ ಅಕ್ಟೋಬರ್ 8 ರಂದು ಭಾರತೀಯ ವಾಯುಪಡೆ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಅಂಚೆ ದಿನ: ಜನರ ದೈನಂದಿನ ಜೀವನದಲ್ಲಿ ಅಂಚೆ ಸೇವೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಅಕ್ಟೋಬರ್ 9 ರಂದು ವಿಶ್ವ ಅಂಚೆದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಮಾನಸಿಕ ಆರೋಗ್ಯ ದಿನ: ಮಾನಸಿಕ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವು ಮೂಡಿಸಲು ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಉತ್ತೇಜಿಸಲು ಅಕ್ಟೋಬರ್ 10 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಅಂತರಾಷ್ಟ್ರಿಯ ಹೆಣ್ಣು ಮಕ್ಕಳ ದಿನ: ಹೆಣ್ಣು ಮಕ್ಕಳು ಎದುರಿಸುತ್ತಿರುವ ಸವಾಲುಗಳ ಬಗ್ಗೆ ಅರಿವು ಮೂಡಿಸಲು ಮತ್ತು ಅವರ ಹಕ್ಕುಗಳ ಪರವಾಗಿ ನಿಲ್ಲಲು ಅಕ್ಟೋಬರ್ 11 ರಂದು ಅಂತರಾಷ್ಟ್ರೀಯ ಹೆಣ್ಣು ಮಕ್ಕಳ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಸಂಧಿವಾತ ದಿನ: ಸಂಧಿವಾತದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಅದರ ತಡೆಗಟ್ಟುವಿಕೆ ಮತ್ತು ಚಿಕಿತ್ಸೆಯನ್ನು ಉತ್ತೇಜಿಸಲು ಅಕ್ಟೋಬರ್ 12 ರಂದು ವಿಶ್ವ ಸಂಧಿವಾತ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ದೃಷ್ಟಿ ದಿನ: ದೃಷ್ಟಿಹೀನತೆ ಮತ್ತು ಕುರುಡುತನದ ಬಗ್ಗೆ ಜಾಗೃತಿ ಮೂಡಿಸಲು ಅಕ್ಟೋಬರ್ ತಿಂಗಳ ಎರಡನೇ ಗುರುವಾರದಂದು ವಿಶ್ವ ದೃಷ್ಟಿ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಮೊಟ್ಟೆ ದಿನ: ಮೊಟ್ಟೆಯ ಪೌಷ್ಟಿಕಾಂಶ ಮೌಲ್ಯದ ಬಗ್ಗೆ ಜನರಿಗೆ ಅರಿವು ಮೂಡಿಸಲು ಮತ್ತು ಮೊಟ್ಟೆಯ ಸೇವನೆಯನ್ನು ಉತ್ತೇಜಿಸಲು ಅಕ್ಟೋಬರ್ 14 ರಂದು ವಿಶ್ವ ಮೊಟ್ಟೆ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ವಿದ್ಯಾರ್ಥಿಗಳ ದಿನ: ಎಪಿಜೆ ಅಬ್ದುಲ್ ಕಲಾಂ ಅವರ ಜನ್ಮದಿನವಾದ ಅಕ್ಟೋಬರ್ 15 ರಂದು ವಿಶ್ವ ವಿದ್ಯಾರ್ಥಿಗಳ ದಿನವನ್ನು ಆಚರಿಸಲಾಗುತ್ತದೆ.
ಜಾಗತಿಕ ಕೈತೊಳೆಯುವ ದಿನ: ಜನರಲ್ಲಿ ನೈರ್ಮಲ್ಯದ ಬಗ್ಗೆ ಅರಿವು ಮೂಡಿಸಲು ಅಕ್ಟೋಬರ್ 15 ರಂದು ಪ್ರತಿವರ್ಷ ಜಾಗತಿಕ ಮಟ್ಟದಲ್ಲಿ ಕೈತೊಳೆಯುವ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಆಹಾರ ದಿನ: ಆಹಾರ ಭದ್ರತೆಯ ಮಹತ್ವ, ಆರೋಗ್ಯಕರ ಆಹಾರ ಸೇವನೆಯ ಬಗ್ಗೆ ಅರಿವು ಮೂಡಿಸಲು ಮತ್ತು ಹಸಿವಿನ ನಿರ್ಮೂಲನೆಯನ್ನು ಉತ್ತೇಜಿಸಲು ಅಕ್ಟೋಬರ್ 16 ರಂದು ಈ ದಿನವನ್ನು ಆಚರಿಸಲಾಗುತ್ತದೆ.
ಅಂತರಾಷ್ಟ್ರೀಯ ಬಡತನ ನಿರ್ಮೂಲನಾ ದಿನ: ಪರಸ್ಪರ ಬೆಂಬಲದ ಮೂಲಕ ಬಡತನದ ನಿರ್ಮೂಲನೆಯನ್ನು ಉತ್ತೇಜಿಸಲು ಅಂತರಾಷ್ಟ್ರೀಯ ಬಡತನ ನಿರ್ಮೂಲನಾ ದಿನವನ್ನು ಪ್ರತಿ ವರ್ಷ ಅಕ್ಟೋಬರ್ 17 ಆಚರಿಸಲಾಗುತ್ತದೆ.
ಪೊಲೀಸ್ ಸ್ಮರಣಾರ್ಥ ದಿನ: ಪೋಲಿಸರ ನಿಸ್ವಾರ್ಥ ಸೇವೆ ಮತ್ತು ಅವರ ಅತ್ಯುನ್ನತ ತ್ಯಾಗವನ್ನು ಸ್ಮರಿಸಲು ಮತ್ತು ಗೌರವಿಸಲು ಭಾರತದಲ್ಲಿ ಅಕ್ಟೋಬರ್ 21 ರಂದು ಪೊಲೀಸ್ ಸ್ಮಾರಣಾರ್ಥ ದಿನವನ್ನು ಆಚರಿಸಲಾಗುತ್ತದೆ.
ವಿಶ್ವಸಂಸ್ಥೆಯ ದಿನ: 1945 ರಲ್ಲಿ ವಿಶ್ವಸಂಸ್ಥೆಯ ಚಾರ್ಟರ್ಗೆ ಸಹಿ ಹಾಕಿದ ವಾರ್ಷಿಕೋತ್ಸವದ ನೆನಪಿಗಾಗಿ ಪ್ರತಿವರ್ಷ ಅಕ್ಟೋಬರ್ 24 ರಂದು ವಿಶ್ವ ಸಂಸ್ಥೆಯ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಪೋಲಿಯೋ ದಿನ: ಪೋಲಿಯೋ ಬಗ್ಗೆ ಜಾಗೃತಿ ಮೂಡಿಸಲು ಮತ್ತು ರೋಗನಿರ್ಮೂಲನೆಯನ್ನು ಉತ್ತೇಜಿಸಲು ಅಕ್ಟೋಬರ್ 24 ರಂದು ವಿಶ್ವ ಪೋಲಿಯೋ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ಆಯುರ್ವೇದ ದಿನ: ದೈನಂದಿನ ಜೀವನದಲ್ಲಿ ಆಯುರ್ವೇದದ ಮಹತ್ವದ ಬಗ್ಗೆ ಜನರಿಗೆ ತಿಳಿಸಲು ಭಾರತದಲ್ಲಿ ಪ್ರತಿವರ್ಷ ಅಕ್ಟೋಬರ್ 25 ರಂದು ರಾಷ್ಟ್ರೀಯ ಆಯುರ್ವೇದ ದಿನವನ್ನು ಆಚರಿಸಲಾಗುತ್ತದೆ.
ವಿಶ್ವ ಸ್ಟ್ರೋಕ್ ದಿನ: ಹೆಚ್ಚುತ್ತಿರುವ ಪಾರ್ಶ್ವವಾಯು ದರ ಮತ್ತು ಅದರ ಚಿಕಿತ್ಸೆ ಮತ್ತು ಈ ಕಾಯಿಲೆಯ ತಡೆಗಟ್ಟುವಿಕೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿ ವರ್ಷ ಅಕ್ಟೋಬರ್ 29 ರಂದು ಸ್ಟ್ರೋಕ್ ದಿನವನ್ನು ಆಚರಿಸಲಾಗುತ್ತದೆ.
ರಾಷ್ಟ್ರೀಯ ಏಕತಾ ದಿನ: ಸ್ವಾತಂತ್ರ್ಯದ ನಂತರ ಭಾರತವನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರವಹಿಸಿದ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಜನ್ಮ ದಿನದ ನೆನಪಿಗಾಗಿ ಅಕ್ಟೋಬರ್ 31 ರಂದು ಭಾರತದಲ್ಲಿ ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಗುತ್ತದೆ.
ಜೀವನಶೈಲಿಗೆ ಸಂಬಂಧಿಸಿದಂತೆ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: