AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maha Shivaratri Wishes 2025: ಶಿವರಾತ್ರಿ ಹಬ್ಬಕ್ಕೆ ನಿಮ್ಮ ಸ್ನೇಹಿತರು ಆತ್ಮೀಯರಿಗೆ ಶುಭಾಶಯ ಕೋರಲು ಇಲ್ಲಿದೆ ಸಂದೇಶಗಳು

ಹಿಂದೂಗಳ ಪ್ರಮುಖ ಹಬ್ಬಗಳಲ್ಲಿ ಒಂದಾದ ಶಿವರಾತ್ರಿಯನ್ನು ಪ್ರತಿ ವರ್ಷ ಶಿಶಿರ ಋತುವಿನ ಫಾಲ್ಗುಣ ಮಾಸದ ಕೃಷ್ಣ ಪಕ್ಷದ ಚತುರ್ದಶಿಯಂದು ಆಚರಿಸಲಾಗುತ್ತದೆ. ಈ ಬಾರಿ ಫೆಬ್ರವರಿ 26 ರಂದು ಮಹಾಶಿವರಾತ್ರಿ ಹಬ್ಬವನ್ನು ಆಚರಿಸಲಾಗುತ್ತದೆ. ಮಹಾಮಹಿಮ ಮಹಾದೇವ ಪಾರ್ವತಿದೇವಿಯನ್ನು ವರಿಸಿದ ಶುಭದಿನ ಈ ಶಿವರಾತ್ರಿ. ಮಹಾಶಿವರಾತ್ರಿ ಹಬ್ಬದಂದು ನೀವು ನಿಮ್ಮ ಸ್ನೇಹಿತರು ಬಂಧು-ಬಾಂಧವರೊಂದಿಗೆ ಇಲ್ಲಿರುವ ಶುಭಾಶಯಗಳು ಹಾಗೂ ಸಂದೇಶಗಳನ್ನು ಕಳುಹಿಸುವ ಮೂಲಕ ಹಬ್ಬದ ಸಂಭ್ರಮವನ್ನು ಇನ್ನಷ್ಟು ಹೆಚ್ಚಿಸಿಕೊಳ್ಳಬಹುದು, ಹಾಗಾದ್ರೆ ನಿಮ್ಮವರಿಗೆ ಶುಭಾಶಯಗಳು ಕೋರಲು ಇಲ್ಲಿದೆ ಸಂದೇಶಗಳು.

Maha Shivaratri Wishes 2025: ಶಿವರಾತ್ರಿ ಹಬ್ಬಕ್ಕೆ ನಿಮ್ಮ ಸ್ನೇಹಿತರು ಆತ್ಮೀಯರಿಗೆ ಶುಭಾಶಯ ಕೋರಲು ಇಲ್ಲಿದೆ ಸಂದೇಶಗಳು
ಸಾಂದರ್ಭಿಕ ಚಿತ್ರ
ಸಾಯಿನಂದಾ
| Edited By: |

Updated on: Feb 25, 2025 | 6:07 PM

Share

ಹಿಂದೂಗಳ ಪಾಲಿನ ವಿಶೇಷ ಹಬ್ಬಗಳಲ್ಲಿ ಮಹಾಶಿವರಾತ್ರಿ ಹಬ್ಬ ಕೂಡ ಒಂದು. ಕೈಲಾಸವಾಸಿ ಶಿವನಿಗೆ ಶಿವರಾತ್ರಿ ಅತ್ಯಂತ ಪ್ರಿಯವಾದ ದಿನವಾಗಿದ್ದು ದೇಶದೆಲ್ಲೆಡೆ ಬಾರಿ ಸಂಭ್ರಮದಿಂದ ಆಚರಿಸಲಾಗುವ ಶಿವರಾತ್ರಿ ಹಬ್ಬ ಆಚರಿಸಲಾಗುತ್ತದೆ. ಈ ಬಾರಿ ಫೆಬ್ರವರಿ 26 ರಂದು ಮಹಾ ಶಿವರಾತ್ರಿ ಹಬ್ಬ ಆಚರಿಸಲಾಗುತ್ತಿದ್ದು, ಈ ದಿನ ಶ್ರದ್ಧಾ ಭಕ್ತಿಯಿಂದ ಉಪವಾಸ, ಜಾಗರಣೆ ಮಾಡಲಾಗುತ್ತದೆ. ಶಿವನಿಗೆ ಪ್ರಿಯವಾದ ಸಿಹಿತಿನಿಸುಗಳನ್ನು ಮಾಡಿ ನೈವೇದ್ಯವಾಗಿ ಅರ್ಪಿಸಲಾಗುತ್ತದೆ. ಈ ಬಾರಿಯ ಶಿವರಾತ್ರಿ ಹಬ್ಬಕ್ಕೆ ನಿಮ್ಮ ಆತ್ಮೀಯರು ಹಾಗೂ ಸ್ನೇಹಿತರಿಗೆ ವಾಟ್ಸ್‌ಆಪ್‌, ಫೇಸ್‌ಬುಕ್‌ನಲ್ಲಿ ಶುಭಾಶಯ ಕೋರಲು ಸಂದೇಶಗಳನ್ನು ಹುಡುಕುತ್ತಿದ್ದರೆ ಇಲ್ಲಿದೆ ಒಂದಿಷ್ಟು ಸಂದೇಶಗಳು.

ನಿಮ್ಮ ಆತ್ಮೀಯರಿಗೆ ಶುಭಾಶಯ ಕೋರಲು ಇಲ್ಲಿವೆ ಸಂದೇಶಗಳು

  • ನಿಮ್ಮ ಎಲ್ಲಾ ಪ್ರಾರ್ಥನೆಗಳನ್ನು ಶಿವನು ಪೂರೈಸಲಿ ನಿಮಗೆ ಮತ್ತು ನಿಮ್ಮ ಕುಟುಂಬಕ್ಕೆ ಮಹಾಶಿವರಾತ್ರಿಯ ಶುಭಾಶಯಗಳು.
  • ಸರ್ವಶಕ್ತನಾದ ಶಿವನು ನಿಮಗೆ ಎಲ್ಲಾ ಒಳ್ಳೆಯದನ್ನು ಮತ್ತು ಪರಿಪೂರ್ಣ ಆರೋಗ್ಯವನ್ನು ದಯಪಾಲಿಸಲಿ ನಿಮಗೆ ಮಹಾ ಶಿವರಾತ್ರಿಯ ಶುಭಾಶಯಗಳು.
  • ದೈವಬಲವು ನಿಮ್ಮ ಎಲ್ಲಾ ಕಷ್ಟಗಳನ್ನು ದೂರ ಮಾಡಲಿ. ಎಲ್ಲಾ ಕೆಲಸ ಕಾರ್ಯಗಳಲ್ಲೂ ಯಶಸ್ಸು ನಿಮ್ಮದಾಗಲಿ. ಹ್ಯಾಪಿ ಮಹಾಶಿವರಾತ್ರಿ.
  • ಭಗವಾನ್‌ ಶಿವನ ದೈವಿಕ ಆಶೀರ್ವಾದ ಸದಾಕಾಲ ನಿಮ್ಮ ಮತ್ತು ನಿಮ್ಮ ಕುಟುಂಬದ ಮೇಲಿರಲಿ… ಮಹಾಶಿವರಾತ್ರಿ ಹಬ್ಬದ ಹಾರ್ದಿಕ ಶುಭಾಶಯಗಳು.
  • ಶಿವನಾಮ ಸ್ಮರಣೆಯಿಂದ ನೆಮ್ಮದಿ ಕಾಣಿರಿ. ಪರಶಿವನ ಆಶೀರ್ವಾದ ಪಡೆಯಿರಿ. ಬದುಕಿನುದ್ದಕ್ಕೂ ಒಳಿತನ್ನೇ ಕಾಣಿರಿ… ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು.
  • ಮಹಾ ಶಿವರಾತ್ರಿಯು ಶಿವನೊಂದಿಗೆ ಪಾರ್ವತಿ ದೇವಿ ಐಕ್ಯವಾದ ರಾತ್ರಿ ಮತ್ತು ವಿನಾಶ ಮತ್ತು ಸೃಷ್ಟಿಯ ರಾತ್ರಿ. ಈ ಮಹಾ ಶುಭ ರಾತ್ರಿಯ ಶುಭಾಶಯಗಳು.
  • ಮಹಾ ಶಿವರಾತ್ರಿಯ ಸಂದರ್ಭದಲ್ಲಿ ಸರ್ವಶಕ್ತ ಪರಮೇಶ್ವರನು ನಿಮಗೆ ಒಳಿತನ್ನೇ ಮಾಡಲಿ. ಆಯುಷ್ಯ, ಆರೋಗ್ಯ ಕರುಣಿಸಲಿ. ಎಲ್ಲರಿಗೂ ಶಿವರಾತ್ರಿ ಹಬ್ಬದ ಶುಭಾಶಯಗಳು.
  •  ಶಿವ ಮತ್ತು ಪಾರ್ವತಿ ದೇವಿಯೂ ಎಲ್ಲರನ್ನೂ ಹರಸಲಿ ಈ ಹಬ್ಬ ಪ್ರತಿಯೊಬ್ಬರಿಗೂ ಖುಷಿ ತರಲಿ. ನಿಮ್ಮ ಸಕಲ ಇಷ್ಟಾರ್ಥಗಳು ಈಡೇರಲಿ. ನಿಮ್ಮೆಲ್ಲರಿಗೂ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು.
  • ನಿಮ್ಮ ಎಲ್ಲಾ ಆಸೆಗಳು ಈಡೇರಲಿ ಮತ್ತು ದೇವರ ಆಶೀರ್ವಾದ ಯಾವಾಗಲೂ ನಿಮ್ಮೊಂದಿಗೆ ಇರಲಿ. ಮಹಾ ಶಿವರಾತ್ರಿಯ ಶುಭಾಶಯಗಳು.
  • ನೃತ್ಯಕಲೆಯ ಆದಿದೈವ ನಟರಾಜ, ಪತ್ನಿ ಸತಿಯ ಅರ್ಧಾಂಗಿ ಎಂದ ಅರ್ಧನಾರೀಶ್ವರ, ಹೆಣ್ಣಿಗೆ ಅತ್ಯುತ್ತನ ಸ್ಥಾನ ನೀಡಿದ ಗಂಗಾಧರ, ದುಷ್ಟರನ್ನು ಎಲ್ಲಿದರೂ ಬಿಡದ ಸಂಹಾರಕನ, ಕೃಪಾಶೀರ್ವಾದ ನಿಮ್ಮದಾಗಲಿ ಮಹಾಶಿವರಾತ್ರಿ ಹಬ್ಬದ ಶುಭಾಶಯಗಳು.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಎಷ್ಟು ಅದ್ದೂರಿಯಾಗಿದೆ ನೋಡಿ ಅಲ್ಲು ಅರ್ಜುನ್ ಹೊಸ ಥಿಯೇಟರ್
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಗಿಲ್ಲಿ ಬಿಗ್ ಬಾಸ್ ಮನೆ ಒಳಗೆ ಇಟ್ಟ ಬೇಡಿಕೆಯನ್ನು ಹೊರಗೆ ಈಡೇರಿಸಿದ ಫ್ಯಾನ್ಸ
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ