AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

High Fibre Diet: ಪ್ರತಿದಿನ ನಿಮ್ಮ ಆಹಾರಕ್ರಮದಲ್ಲಿ ಈ ಅಂಶ ಇರಲೇಬೇಕು, ಆರೋಗ್ಯಕ್ಕೆ ಇದು ಉತ್ತಮ

ದೇಹಕ್ಕೆ ಬೇಕಾದ ಅಗತ್ಯ ಪೋಷಕಾಂಶಗಳಲ್ಲಿ ಫೈಬರ್ ಕೂಡಾ ಒಂದು. ಪ್ರತಿನಿತ್ಯ ಫೈಬರ್ ಭರಿತ ಆಹಾರಗಳ್ನು ಸೇವಿಸುವ ಮೂಲಕ ನಿಮ್ಮ ದೇಹದ ಆರೋಗ್ಯವನ್ನು ಸರಿಯಾದ ರೀತಿಯಲ್ಲಿ ಕಾಪಾಡಿಕೊಳ್ಳಬಹುದು. ನೀವು ದಿನನಿತ್ಯ ಸೇವಿಸಬೇಕಾದ ಕೆಲವು ಫೈಬರ್ ಭರಿತ ಅಹಾರಗಳು ಯಾವುವು ಎಂಬ ಮಾಹಿತಿ ಇಲ್ಲಿದೆ.

High Fibre Diet: ಪ್ರತಿದಿನ ನಿಮ್ಮ ಆಹಾರಕ್ರಮದಲ್ಲಿ ಈ ಅಂಶ ಇರಲೇಬೇಕು, ಆರೋಗ್ಯಕ್ಕೆ ಇದು ಉತ್ತಮ
ಸಾಂದರ್ಭಿಕ ಚಿತ್ರ
ಮಾಲಾಶ್ರೀ ಅಂಚನ್​
| Edited By: |

Updated on: Jul 14, 2023 | 9:36 AM

Share

ಪೋಷಕಾಂಶಗಳಿಂದ ಸಮೃದ್ಧವಾದ ಆಹಾರಗಳನ್ನು ಸೇವಿಸುವುದು ಆರೋಗ್ಯಕರ ದೇಹ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಖನಿಜಗಳು, ಪ್ರೋಟೀನ್, ಫೈಬರ್, ವಿಟಮಿನ್ ಮತ್ತು ದೇಹಕ್ಕೆ ಅಗತ್ಯವಾದ ಪ್ರಯೋಜನಗಳನ್ನು ಒದಗಿಸುವ ಇತರ ಪೋಷಕಾಂಶಗಳಿಂದ ಸಮೃದ್ಧವಾದ ಆಹಾರಗಳನ್ನು ಪ್ರತಿನಿತ್ಯ ಸೇವಿಸುವುದು ಅಗತ್ಯವಾಗಿದೆ. ನಾವು ಸೇವಿಸುವ ಆಹಾರದಲ್ಲಿ ದೊರಕುವ ಪ್ರತಿಯೊಂದು ಪೋಷಕಾಂಶವು ಆರೋಗ್ಯ ಮತ್ತು ಯೋಗಕ್ಷೇಮದಲ್ಲಿ ವಿಭಿನ್ನ ಪಾತ್ರವನ್ನು ವಹಿಸುತ್ತದೆ. ಅದರಲ್ಲಿ ಫೈಬರ್ ದೇಹದ ಸರಿಯಾದ ಕಾರ್ಯನಿರ್ವಹಣೆಗೆ ಅಗತ್ಯವಾದ ಪೋಷಕಾಂಶವಾಗಿದೆ. ಫೈಬರ್ ಆರೋಗ್ಯಕ್ಕೆ ಅತ್ಯಗತ್ಯ ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸಲು, ತೂಕನಷ್ಟವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.

ಆರೋಗ್ಯಕರ ದೇಹವನ್ನು ಕಾಪಾಡಿಕೊಳ್ಳಲು ನೀವು ಪ್ರತಿನಿತ್ಯ ಸೇವಿಸಬೇಕಾದ ಫೈಬರ್ ಭರಿತ ಆಹಾರಗಳೆಂದರೆ:

ಕಡಲೆ:

ಒಂದು ಕಪ್ ಕಡಲೆಯಲ್ಲಿ ಸುಮಾರು 14 ಗ್ರಾಂ ಫೈಬರ್ ಇರುತ್ತದೆ. ಮೆಗ್ನೇಸಿಯಮ್ ಮತ್ತು ಒಮೆಗಾ-3 ಕೊಬ್ಬಿನಾಮ್ಲ, ಮತ್ತು ಪ್ರೋಟೀನ್ ಗಳಲ್ಲಿ ಸಮೃದ್ಧವಾಗಿರುವ ಕಡಲೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು, ತೂಕವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಹಾಗೂ ಹೃದಯ, ಕರುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ. ಮಾಂಸಕ್ಕೆ ಬದಲಿಯಾಗಿ ಸಸ್ಯಮೂಲದ ಈ ಆಹಾರವನ್ನು ಪ್ರತಿನಿತ್ಯ ಸೇವಿಸಬಹುದು. ಅಲ್ಲದೆ ಇದು ದಿನವಿಡೀ ಹೊಟ್ಟೆ ತುಂಬಿರಲು ಸಹಾಯ ಮಾಡುತ್ತದೆ. ಆದ್ದರಿಂದ ಇದ ತೂಕನಷ್ಟಕ್ಕೆ ಸಹಕಾರಿಯಾಗಿದೆ.

ಅವಕಾಡೊ:

ಅವಕಾಡೊಗಳು ಆರೋಗ್ಯಕರ ಕೊಬ್ಬು ಮತ್ತು ಫೈಬರ್ ಸೇರಿದಂತೆ ಪ್ರಮುಖ ಪೋಷಕಾಂಶಗಳ ಸಮೃದ್ಧ ಮೂಲವಾಗಿದೆ. ಅವುಗಳು ಉತ್ಕರ್ಷಣ ನಿರೋಧಕ ಸಂಯುಕ್ತಗಳನ್ನು ಒಳಗೊಂಡಿರುತ್ತದೆ, ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗೂ ಒಂದು ಅವಕಾಡೊದಲ್ಲಿ ಸುಮಾರು 14 ಗ್ರಾಂ ಗಳಷ್ಟು ಫೈಬರ್ ಅಂಶ ಇರುತ್ತದೆಯಂತೆ. ಹಾಗಾಗಿ ಅವಕಾಡೊ ಹಣ್ಣುಗಳನ್ನು ಸೇವಿಸುವ ಮೂಲಕ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಚೀಯಾ ಬೀಜಗಳು:

ಇದು ಪೋಷಕಾಂಶದ ಉತ್ತಮ ಮೂಲವಾಗಿದೆ. ಚೀಯಾ ಬೀಜಗಳು ಪ್ರೋಟೀನ್, ಜೀವಸತ್ವಗಳು, ಖನಿಜಗಳು ಮತ್ತು ಒಮೆಗಾ-3 ಕೊಬ್ಬಿನಾಮ್ಲದಿಂದ ಸಮೃದ್ಧವಾಗಿದೆ. ಇದು ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಜೀರ್ಣಾಂಗ ವ್ಯವಸ್ಥೆಯ ಸರಿಯಾದ ಕಾರ್ಯನಿರ್ವಹಣೆಗೆ ಸಹಕಾರಿಯಾಗಿದೆ.

ಇದನ್ನೂ ಓದಿ:ಗರಿಗರಿಯಾದ ಬಾಳೆಕಾಯಿ ಚಿಪ್ಸ್ ತಯಾರಿಸಲು ​​​ಈ ಸಲಹೆ ಪಾಲಿಸಿ

ಬೆರ್ರಿ ಹಣ್ಣುಗಳು:

ಇತರ ಹಣ್ಣುಗಳಿಗಿಂತ ಬೆರ್ರಿ ಹಣ್ಣುಗಳು ಕಡಿಮೆ ಸಕ್ಕರೆಯ ಅಂಶವನ್ನು ಹೊಂದಿರುತ್ತದೆ. ಇವು ಹೆಚ್ಚಿನ ಪ್ರಮಾಣದ ಫೈಬರ್, ವಿಟಮಿನ್ ಎ, ಸಿ, ಇ ಮತ್ತು ಕೆ ಹಾಗೂ ಫೋಲೆಟ್ ಅಂಶದಿಂದ ಸಮೃದ್ಧವಾಗಿದೆ. ಇದು ಮೂಳೆಗಳ ಹಾಗೂ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.

ಸಿಹಿಗೆಣಸು:

ಅದರ ಹೆಸರೇ ಸೂಚಿಸುವಂತೆ ಸಿಹಿಗೆಣಸು ಸ್ವಾಭಾವಿಕವಾಗಿ ಸಿಹಿಯಾಗಿರುತ್ತವೆ. ಇದು ಬೀಟಾ ಕ್ಯಾರೋಟಿನ್, ವಿಟಮಿನ್ ಬಿ, ವಿಟಮಿನ್ ಸಿ, ಪೊಟ್ಯಾಸಿಯಂ, ಫೈಬರ್, ಕಬ್ಬಿಣಾಂಶಗಳಿಂದ ಸಮೃದ್ಧವಾಗಿದೆ. ಇದು ಹೆಚ್ಚು ಫೈಬರ್ ಯುಕ್ತ ಆಹಾರವಾಗಿದ್ದು, ಟೈಪ್ 1 ಮಧುಮೇಹದಿಂದ ಬಳಲುತ್ತಿರುವ ವ್ಯಕ್ತಿಗಳ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಇದು ಸಹಕಾರಿಯಾಗಿದೆ.

ಕ್ಯಾರೆಟ್:

ಕ್ಯಾರೆಟ್ ವಿಶೇಷವಾಗಿ ಬೀಟಾ ಕ್ಯಾರೋಟಿನ್, ಫೈಬರ್, ವಿಟಮಿನ್ ಕೆ 1, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಕ್ಯಾರೆಟ್ ಗಳು ಕರಗುವ ಫೈಬರ್ ಗಳನ್ನು ಹೊಂದಿದ್ದು, ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು, ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಅಲ್ಲದೆ ಇದು ಪದೇ ಪದೇ ಹಸಿವಾಗುವ ಭಾವನೆಯನ್ನು ನಿಯಂತ್ರಿಸುತ್ತದೆ.

ಸೇಬು:

ಸೇಬಹಣ್ಣುಗಳು ಜೀವಸತ್ವಗಳು, ಪೊಟ್ಯಾಸಿಯಮ್ ಮತ್ತು ಫೈಬರ್ ನಿಂದ ಸಮೃದ್ಧವಾಗಿದೆ. ಇಷ್ಟೆಲ್ಲಾ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಸೇಬುಗಳು ಹೃದಯಾಘಾತ, ಪಾರ್ಶ್ವವಾಯು, ಮಧುಮೇಹ, ಅಧಿಕ ರಕ್ತದೊತ್ತಡ, ಸ್ಥೂಲಕಾಯತೆ ಮತ್ತು ಕ್ಯಾನ್ಸರ್​ಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾಗಿ ಪ್ರತಿನಿತ್ಯ ಒಂದು ಸೇಬುಹಣ್ಣನ್ನು ಸೇವನೆ ಮಾಡುವ ಮೂಲಕ ಉತ್ತಮ ರೀತಿಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ:

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಎಷ್ಟೇ ಕಷ್ಟಪಟ್ಟರೂ ಮನೆ ಕಟ್ಟೋಕೆ ಸಾಧ್ಯವಾಗ್ತಿಲ್ವಾ?
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಖರ್ಚು ಹೆಚ್ಚಾಗುವ ಸಾಧ್ಯತೆ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
150 ಕೋಟಿ ರೂಪಾಯಿ ಆಸ್ತಿ ಇದ್ದರೂ ಸುಡು ಬಿಸಿಲಲ್ಲಿ ಕೆಲಸ ಮಾಡುತ್ತಿರುವ ನಟ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ತಿಂಗಳೊಳಗೆ 4 ಹಿಂದೂ ವಿರೋಧಿಗಳು ಸಿಎಂ ಸ್ಥಾನ ಕಳೆದುಕೊಂಡ್ರು: ನಾರಾಯಣಸ್ವಾಮಿ
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಮಳೆಯಲ್ಲಿ ರಸ್ತೆ ದಾಟಲು ಪರದಾಟ: ವಿಕಲಚೇತನ ಯುವಕನ ಸಹಾಯಕ್ಕೆ ಬಂದ ಪೊಲೀಸ್
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಪ್ಲೇಆಫ್‌ ಪಂದ್ಯಗಳಲ್ಲಿ ಮುಂದುವರೆದ ಯಶಸ್ವಿ ಜೈಸ್ವಾಲ್ ಕಳಪೆ ಪ್ರದರ್ಶನ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಡಿಕೆ ಶಿವಕುಮಾರ್​ ಬುಧಾದಿತ್ಯ ಯೋಗದ ಸೀಕ್ರೆಟ್ ಬಿಚ್ಚಿಟ್ಟ ಗುರೂಜಿ
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಕ್ವಾಲಿಫೈಯರ್ 2 ಪಂದ್ಯದಲ್ಲಿ ಎರಡೆರಡು ಬಾರಿ ನಡೆದ ಟಾಸ್
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
ಧಾರಾಕಾರ ಮಳೆ: ಅಂಡರ್‌ಪಾಸ್‌ನಲ್ಲಿ ಸಿಲುಕಿದ ಕಾರು; ವಿಡಿಯೋ ನೋಡಿ
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?
40ಕ್ಕೂ ಹೆಚ್ಚು ಶಾಸಕರಿಂದ ಮಂತ್ರಿಗಿರಿಗಾಗಿ ತೀವ್ರ ಲಾಬಿ: ಯಾರ್ಯಾರು?