ಪೋಷಕಾಂಶಗಳಿಂದ ಸಮೃದ್ಧವಾದ ಆಹಾರಗಳನ್ನು ಸೇವಿಸುವುದು ಆರೋಗ್ಯಕರ ದೇಹ ಮತ್ತು ಯೋಗಕ್ಷೇಮವನ್ನು ಉತ್ತೇಜಿಸಲು ಸಹಕಾರಿಯಾಗಿದೆ. ಖನಿಜಗಳು, ಪ್ರೋಟೀನ್, ಫೈಬರ್, ವಿಟಮಿನ್ ಮತ್ತು ದೇಹಕ್ಕೆ ಅಗತ್ಯವಾದ ಪ್ರಯೋಜನಗಳನ್ನು ಒದಗಿಸುವ ಇತರ ಪೋಷಕಾಂಶಗಳಿಂದ ಸಮೃದ್ಧವಾದ ಆಹಾರಗಳನ್ನು ಪ್ರತಿನಿತ್ಯ ಸೇವಿಸುವುದು ಅಗತ್ಯವಾಗಿದೆ. ನಾವು ಸೇವಿಸುವ ಆಹಾರದಲ್ಲಿ ದೊರಕುವ ಪ್ರತಿಯೊಂದು ಪೋಷಕಾಂಶವು ಆರೋಗ್ಯ ಮತ್ತು ಯೋಗಕ್ಷೇಮದಲ್ಲಿ ವಿಭಿನ್ನ ಪಾತ್ರವನ್ನು ವಹಿಸುತ್ತದೆ. ಅದರಲ್ಲಿ ಫೈಬರ್ ದೇಹದ ಸರಿಯಾದ ಕಾರ್ಯನಿರ್ವಹಣೆಗೆ ಅಗತ್ಯವಾದ ಪೋಷಕಾಂಶವಾಗಿದೆ. ಫೈಬರ್ ಆರೋಗ್ಯಕ್ಕೆ ಅತ್ಯಗತ್ಯ ಏಕೆಂದರೆ ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು, ಜೀರ್ಣಕ್ರಿಯೆಯನ್ನು ಸುಧಾರಿಸಲು, ತೂಕನಷ್ಟವನ್ನು ಉತ್ತೇಜಿಸಲು ಸಹಾಯ ಮಾಡುತ್ತದೆ.
ಒಂದು ಕಪ್ ಕಡಲೆಯಲ್ಲಿ ಸುಮಾರು 14 ಗ್ರಾಂ ಫೈಬರ್ ಇರುತ್ತದೆ. ಮೆಗ್ನೇಸಿಯಮ್ ಮತ್ತು ಒಮೆಗಾ-3 ಕೊಬ್ಬಿನಾಮ್ಲ, ಮತ್ತು ಪ್ರೋಟೀನ್ ಗಳಲ್ಲಿ ಸಮೃದ್ಧವಾಗಿರುವ ಕಡಲೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು, ತೂಕವನ್ನು ನಿರ್ವಹಿಸಲು ಸಹಾಯ ಮಾಡುತ್ತದೆ. ಹಾಗೂ ಹೃದಯ, ಕರುಳಿನ ಆರೋಗ್ಯವನ್ನು ಬೆಂಬಲಿಸುತ್ತದೆ. ಮಾಂಸಕ್ಕೆ ಬದಲಿಯಾಗಿ ಸಸ್ಯಮೂಲದ ಈ ಆಹಾರವನ್ನು ಪ್ರತಿನಿತ್ಯ ಸೇವಿಸಬಹುದು. ಅಲ್ಲದೆ ಇದು ದಿನವಿಡೀ ಹೊಟ್ಟೆ ತುಂಬಿರಲು ಸಹಾಯ ಮಾಡುತ್ತದೆ. ಆದ್ದರಿಂದ ಇದ ತೂಕನಷ್ಟಕ್ಕೆ ಸಹಕಾರಿಯಾಗಿದೆ.
ಅವಕಾಡೊಗಳು ಆರೋಗ್ಯಕರ ಕೊಬ್ಬು ಮತ್ತು ಫೈಬರ್ ಸೇರಿದಂತೆ ಪ್ರಮುಖ ಪೋಷಕಾಂಶಗಳ ಸಮೃದ್ಧ ಮೂಲವಾಗಿದೆ. ಅವುಗಳು ಉತ್ಕರ್ಷಣ ನಿರೋಧಕ ಸಂಯುಕ್ತಗಳನ್ನು ಒಳಗೊಂಡಿರುತ್ತದೆ, ಇದು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡುತ್ತದೆ. ಹಾಗೂ ಒಂದು ಅವಕಾಡೊದಲ್ಲಿ ಸುಮಾರು 14 ಗ್ರಾಂ ಗಳಷ್ಟು ಫೈಬರ್ ಅಂಶ ಇರುತ್ತದೆಯಂತೆ. ಹಾಗಾಗಿ ಅವಕಾಡೊ ಹಣ್ಣುಗಳನ್ನು ಸೇವಿಸುವ ಮೂಲಕ ದೇಹದ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಇದು ಪೋಷಕಾಂಶದ ಉತ್ತಮ ಮೂಲವಾಗಿದೆ. ಚೀಯಾ ಬೀಜಗಳು ಪ್ರೋಟೀನ್, ಜೀವಸತ್ವಗಳು, ಖನಿಜಗಳು ಮತ್ತು ಒಮೆಗಾ-3 ಕೊಬ್ಬಿನಾಮ್ಲದಿಂದ ಸಮೃದ್ಧವಾಗಿದೆ. ಇದು ಕರುಳಿನ ಆರೋಗ್ಯವನ್ನು ಕಾಪಾಡಿಕೊಳ್ಳಲು ಮತ್ತು ಜೀರ್ಣಾಂಗ ವ್ಯವಸ್ಥೆಯ ಸರಿಯಾದ ಕಾರ್ಯನಿರ್ವಹಣೆಗೆ ಸಹಕಾರಿಯಾಗಿದೆ.
ಇದನ್ನೂ ಓದಿ:ಗರಿಗರಿಯಾದ ಬಾಳೆಕಾಯಿ ಚಿಪ್ಸ್ ತಯಾರಿಸಲು ಈ ಸಲಹೆ ಪಾಲಿಸಿ
ಇತರ ಹಣ್ಣುಗಳಿಗಿಂತ ಬೆರ್ರಿ ಹಣ್ಣುಗಳು ಕಡಿಮೆ ಸಕ್ಕರೆಯ ಅಂಶವನ್ನು ಹೊಂದಿರುತ್ತದೆ. ಇವು ಹೆಚ್ಚಿನ ಪ್ರಮಾಣದ ಫೈಬರ್, ವಿಟಮಿನ್ ಎ, ಸಿ, ಇ ಮತ್ತು ಕೆ ಹಾಗೂ ಫೋಲೆಟ್ ಅಂಶದಿಂದ ಸಮೃದ್ಧವಾಗಿದೆ. ಇದು ಮೂಳೆಗಳ ಹಾಗೂ ಚರ್ಮದ ಆರೋಗ್ಯವನ್ನು ಹೆಚ್ಚಿಸಲು ಮತ್ತು ರಕ್ತದಲ್ಲಿ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ.
ಅದರ ಹೆಸರೇ ಸೂಚಿಸುವಂತೆ ಸಿಹಿಗೆಣಸು ಸ್ವಾಭಾವಿಕವಾಗಿ ಸಿಹಿಯಾಗಿರುತ್ತವೆ. ಇದು ಬೀಟಾ ಕ್ಯಾರೋಟಿನ್, ವಿಟಮಿನ್ ಬಿ, ವಿಟಮಿನ್ ಸಿ, ಪೊಟ್ಯಾಸಿಯಂ, ಫೈಬರ್, ಕಬ್ಬಿಣಾಂಶಗಳಿಂದ ಸಮೃದ್ಧವಾಗಿದೆ. ಇದು ಹೆಚ್ಚು ಫೈಬರ್ ಯುಕ್ತ ಆಹಾರವಾಗಿದ್ದು, ಟೈಪ್ 1 ಮಧುಮೇಹದಿಂದ ಬಳಲುತ್ತಿರುವ ವ್ಯಕ್ತಿಗಳ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಇದು ಸಹಕಾರಿಯಾಗಿದೆ.
ಕ್ಯಾರೆಟ್ ವಿಶೇಷವಾಗಿ ಬೀಟಾ ಕ್ಯಾರೋಟಿನ್, ಫೈಬರ್, ವಿಟಮಿನ್ ಕೆ 1, ಪೊಟ್ಯಾಸಿಯಮ್ ಮತ್ತು ಉತ್ಕರ್ಷಣ ನಿರೋಧಕಗಳ ಉತ್ತಮ ಮೂಲವಾಗಿದೆ. ಕ್ಯಾರೆಟ್ ಗಳು ಕರಗುವ ಫೈಬರ್ ಗಳನ್ನು ಹೊಂದಿದ್ದು, ಇದು ಜೀರ್ಣಕ್ರಿಯೆಯನ್ನು ಸುಧಾರಿಸಲು, ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಅಲ್ಲದೆ ಇದು ಪದೇ ಪದೇ ಹಸಿವಾಗುವ ಭಾವನೆಯನ್ನು ನಿಯಂತ್ರಿಸುತ್ತದೆ.
ಸೇಬಹಣ್ಣುಗಳು ಜೀವಸತ್ವಗಳು, ಪೊಟ್ಯಾಸಿಯಮ್ ಮತ್ತು ಫೈಬರ್ ನಿಂದ ಸಮೃದ್ಧವಾಗಿದೆ. ಇಷ್ಟೆಲ್ಲಾ ಪೋಷಕಾಂಶಗಳಿಂದ ಸಮೃದ್ಧವಾಗಿರುವ ಸೇಬುಗಳು ಹೃದಯಾಘಾತ, ಪಾರ್ಶ್ವವಾಯು, ಮಧುಮೇಹ, ಅಧಿಕ ರಕ್ತದೊತ್ತಡ, ಸ್ಥೂಲಕಾಯತೆ ಮತ್ತು ಕ್ಯಾನ್ಸರ್ಗಳ ಅಪಾಯವನ್ನು ಕಡಿಮೆ ಮಾಡುತ್ತದೆ. ಅಲ್ಲದೆ ಇದು ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಹಾಗಾಗಿ ಪ್ರತಿನಿತ್ಯ ಒಂದು ಸೇಬುಹಣ್ಣನ್ನು ಸೇವನೆ ಮಾಡುವ ಮೂಲಕ ಉತ್ತಮ ರೀತಿಯಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು.
ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ: