AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Makara Sankranti 2026: ಸಂಕ್ರಾಂತಿ ಹಬ್ಬಕ್ಕೆ ಮನೆಯಲ್ಲೇ ಮಾಡಿ ಆರೋಗ್ಯಕರ ಶೇಂಗಾ-ಎಳ್ಳು ಉಂಡೆ

ಹಿಂದೂಗಳ ಪವಿತ್ರ ಹಬ್ಬಗಳಲ್ಲಿ ಮಕರ ಸಂಕ್ರಾಂತಿ ಕೂಡ ಒಂದು. ವರ್ಷದ ಮೊದಲ ಹಬ್ಬ ಇದಾಗಿದ್ದು, ಈ ಸುಗ್ಗಿ ಹಬ್ಬದಲ್ಲಿ ಎಳ್ಳು ಬೆಲ್ಲ ಸೇವಿಸುವ ಸಂಪ್ರದಾಯವಿದೆ. ಜೊತೆಗೆ ವಿವಿಧ ಸಾಂಪ್ರದಾಯಿಕ ಖಾದ್ಯಗಳನ್ನು ಸಹ ತಯಾರಿಸಲಾಗುತ್ತದೆ. ವಿಶೇಷವಾಗಿ ಸಂಕ್ರಾಂತಿ ಹಬ್ಬದಲ್ಲಿ ಎಳ್ಳು ಬೆಲ್ಲದ ತಯಾರಿಸಲಾಗುತ್ತದೆ. ಅದೇ ರೀತಿ ಈ ಬಾರಿಯ ಹಬ್ಬಕ್ಕೆ ಶೇಂಗಾ ಎಳ್ಳಿನ ಉಂಡೆಯನ್ನು ಮಾಡಿ ಸವಿಯಿರಿ. ಇದು ರುಚಿಕರ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ.

Makara Sankranti 2026: ಸಂಕ್ರಾಂತಿ ಹಬ್ಬಕ್ಕೆ ಮನೆಯಲ್ಲೇ ಮಾಡಿ ಆರೋಗ್ಯಕರ ಶೇಂಗಾ-ಎಳ್ಳು ಉಂಡೆ
ಶೇಂಗಾ-ಎಳ್ಳಿನ ಉಂಡೆ Image Credit source: Pinterest
ಮಾಲಾಶ್ರೀ ಅಂಚನ್​
|

Updated on:Jan 12, 2026 | 3:44 PM

Share

ವರ್ಷದ ಮೊದಲ ಹಬ್ಬವಾದ ಸಂಕ್ರಾಂತಿ (Makara Sankranti) ಹಬ್ಬವನ್ನು ಬಹಳ ಸಂಭ್ರಮದಿಂದ ಆಚರಿಸಲಾಗುತ್ತದೆ. ಸುಗ್ಗಿ ಹಬ್ಬವಾದ ಇದನ್ನು ಉತ್ತರ ಭಾರತದಲ್ಲಿ ಲೋಹ್ರಿ ಎಂದು ಕರೆದರೆ, ತಮಿಳುನಾಡಿನಲ್ಲಿ ಪೊಂಗಲ್‌ ಎಂದೂ ಹಾಗೂ ಕರ್ನಾಟಕ ಸೇರಿದಂತೆ ಇನ್ನೂ ಕೆಲವು ರಾಜ್ಯಗಳಲ್ಲಿ ಮಕರ ಸಂಕ್ರಾಂತಿ ಎಂದು ಕರೆಯಲಾಗುತ್ತದೆ. ಈ ಹಬ್ಬದಲ್ಲಿ ಎಳ್ಳು ಬೆಲ್ಲವನ್ನು ಸೇವಿಸುವ ಸಂಪ್ರದಾಯವಿದೆ. ಜೊತೆಗೆ ಎಳ್ಳು ಮತ್ತು ಬೆಲ್ಲವನ್ನು ಬಳಸಿ ವಿವಿಧ ಖಾದ್ಯಗಳನ್ನು ಸಹ ತಯಾರಿಸಲಾಗುತ್ತದೆ. ಹೀಗಿರುವಾಗ ಈ ಬಾರಿಯ ಹಬ್ಬಕ್ಕೆ ಶೇಂಗಾ ಎಳ್ಳಿನ ಉಂಡೆಯನ್ನು ಮಾಡಿ. ಈ ಲಡ್ಡು ರುಚಿಕರ ಮಾತ್ರವಲ್ಲದೆ ಆರೋಗ್ಯಕ್ಕೂ ಪ್ರಯೋಜನಕಾರಿ.

ಶೇಂಗಾ-ಎಳ್ಳಿನ ಉಂಡೆಯ ಆರೋಗ್ಯ ಪ್ರಯೋಜನ:

ಚಳಿಗಾಲದಲ್ಲಿ ಎಳ್ಳು ಮತ್ತು ಶೇಂಗಾ ದೇಹವನ್ನು ಬೆಚ್ಚಗಿಡಲು ಸಹಾಯ ಮಾಡುತ್ತದೆ. ಎಳ್ಳು ಕ್ಯಾಲ್ಸಿಯಂ, ಕಬ್ಬಿಣ ಮತ್ತು ನಾರಿನಾಂಶದಿಂದ ಸಮೃದ್ಧವಾಗಿದೆ. ಶೇಂಗಾ ಪ್ರೋಟೀನ್‌ ಮತ್ತು ಆರೋಗ್ಯಕರ ಕೊಬ್ಬಿನ ಉತ್ತಮ ಮೂಲವಾಗಿದ್ದು, ಇದು ಶಕ್ತಿಯ ಮಟ್ಟವನ್ನು ಕಾಪಾಡಿಕೊಳ್ಳಲು ಸಹಾಯ ಮಾಡುತ್ತದೆ. ಇದಲ್ಲದೆ ಈ ಉಂಡೆಯನ್ನು ತಯಾರಿಸಲು ಬೆಲ್ಲವನ್ನು ಬಳಸಲಾಗುತ್ತದೆ. ಈ ಬೆಲ್ಲ ರೋಗನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ.

ಶೇಂಗಾ ಎಳ್ಳಿನ ಉಂಡೆಯನ್ನು ತಯಾರಿಸಲು ಬೇಕಾದ ಸಾಮಾಗ್ರಿಗಳು:

  • ಬಿಳಿ ಎಳ್ಳು – 1 ಕಪ್‌
  • ಶೇಂಗಾ – 1 ಕಪ್‌
  • ಬೆಲ್ಲ – 1 ಕಪ್‌
  • ಅರ್ಧ ಟೀ ಚಮಚ ಏಲಕ್ಕಿ ಪುಡಿ
  • ಸ್ವಲ್ಪ ತುಪ್ಪ

ಇದನ್ನೂ ಓದಿ: ಹೆಂಗಳೆಯರೇ… ಹಬ್ಬದ ದಿನ ಸುಂದರವಾಗಿ ಕಾಣಿಸಿಕೊಳ್ಳಲು ನಿಮ್ಮ ಉಡುಗೆ ಹೀಗಿರಲಿ

ಶೇಂಗಾ ಎಳ್ಳಿನ ಉಂಡೆಯನ್ನು ತಯಾರಿಸುವ ವಿಧಾನ:

ಮೊದಲಿಗೆ ಗ್ಯಾಸ್‌ ಸ್ಟೌವ್‌ ಮೇಲೆ ಒಂದು ಬಾಣಲೆಯನ್ನಿಟ್ಟು ಅದರಲ್ಲಿ ಎಳ್ಳನ್ನು ಕಡಿಮೆ ಉರಿಯಲ್ಲಿ ಗೋಲ್ಡನ್‌ ಬ್ರೌನ್‌ ಬಣ್ಣ ಬರುವವರೆಗೆ ಹುರಿಯಬೇಕು. ಅದನ್ನು ಪಕ್ಕಕ್ಕೆ ಇರಿಸಿ ನಂತರ ಅದೇ ಬಾಣಲೆಯಲ್ಲಿ ಸಿಪ್ಪೆ ತೆಗೆದ ಶೇಂಗಾವನ್ನು ಕಡಿಮೆ ಉರಿಯಲ್ಲಿ ಹುರಿದು, ಅದು ತಣ್ಣಗಾದ ನಂತರ ಸಿಪ್ಪೆ ತೆಗೆಯಿರಿ. ನಂತರ ಆ ಕಡಲೆಕಾಯಿಯನ್ನು ತರಿತರಿಯಾಗಿ ರುಬ್ಬಿಕೊಳ್ಳಿ ಜೊತೆಗೆ ಅದಕ್ಕೆ ಏಲಕ್ಕಿಯನ್ನೂ ಸೇರಿಸಿ.

ಈಗ ಒಂದು ಪ್ಯಾನ್‌ಗೆ ತುಪ್ಪ ಸೇರಿಸಿ ಅದಕ್ಕೆ ಬೆಲ್ಲವನ್ನು ಹಾಕಿ ಪಾಕ ತಯಾರಿಸಿ, ಬೆಲ್ಲ ಸಂಪೂರ್ಣವಾಗಿ ಕರಗಿದ ಬಳಿಕ ಅದಕ್ಕೆ ಹುರಿದ ಎಳ್ಳು ಮತ್ತು ಕಡಲೆಕಾಯಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ. ಈಗ ಒಲೆಯನ್ನು ಆಫ್‌ ಮಾಡಿ ಮತ್ತು ಮಿಶ್ರಣವನ್ನು ಸ್ವಲ್ಪ ತಣ್ಣಗಾಗಲು ಬಿಡಿ. ಮಿಶ್ರಣ ತಣ್ಣಗಾದ ನಂತರ ನಿಮ್ಮ ಕೈಗಳಿಗೆ ತುಪ್ಪವನ್ನು ಹಚ್ಚಿ, ಉಂಡೆ ತಯಾರಿಸಿದರೆ ರುಚಿಕರ ಹಾಗೆಯೇ ಆರೋಗ್ಯಕರ ಶೇಂಗಾ-ಎಳ್ಳಿನ ಉಂಡೆ ಸಿದ್ಧ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:44 pm, Mon, 12 January 26

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?