Martyrs’ Day 2026: ಜನವರಿ 30 ರಂದು ಹುತಾತ್ಮರ ದಿನವನ್ನು ಆಚರಿಸುವುದೇಕೆ? ಇಲ್ಲಿದೆ ಮಾಹಿತಿ

ಭಾರತದಲ್ಲಿ ಪ್ರತಿ ವರ್ಷ 2 ಬಾರಿ ಜನವರಿ 30 ಮತ್ತು ಮಾರ್ಚ್ 23 ರಂದು.ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಜನವರಿ 30 ರಂದು ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿ, ಇದೇ ದಿನ ಹುತಾತ್ಮರ ದಿನವನ್ನು ಆಚರಿಸುವುದೇಕೆ, ಈ ಮಹತ್ವದ ದಿನದ ಇತಿಹಾಸ ಮತ್ತು ಪ್ರಾಮುಖ್ಯತೆಯನ್ನು ತಿಳಿಯೋಣ ಬನ್ನಿ.

Martyrs Day 2026: ಜನವರಿ 30 ರಂದು ಹುತಾತ್ಮರ ದಿನವನ್ನು ಆಚರಿಸುವುದೇಕೆ? ಇಲ್ಲಿದೆ ಮಾಹಿತಿ
ಹುತಾತ್ಮರ ದಿನ
Image Credit source: Pinterest

Updated on: Jan 30, 2026 | 10:18 AM

ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯಾದ ಜನವರಿ 30 ರಂದು ಪ್ರತಿ ವರ್ಷ ಹುತಾತ್ಮರ ದಿನವನ್ನು (Martyrs’ Day)  ಆಚರಿಸಲಾಗುತ್ತದೆ. ಭಾರತ ಸ್ವಾತಂತ್ರ್ಯ ಪಡೆದ ಕೆಲವು ವರ್ಷಗಳ ನಂತರ, ಜನವರಿ 30, 1948 ರಂದು, ದೆಹಲಿಯ ಬಿರ್ಲಾ ಭವನದಲ್ಲಿ ನಾಥುರಾಮ್ ಗೋಡ್ಸೆ ಗಾಂಧೀಜಿಯನ್ನು ಗುಂಡಿಕ್ಕಿ ಕೊಂದನು. ಈ ದಿನವು ಭಾರತೀಯ ಇತಿಹಾಸದಲ್ಲಿ ಕರಾಳ ದಿನವೆಂದು ಗುರುತಿಸಲ್ಪಟ್ಟಿದೆ. ಹಾಗಾಗಿ ಸತ್ಯ, ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತದ ಸ್ವಾತಂತ್ರ್ಯದಲ್ಲಿ ನಿರ್ಣಾಯಕ ಪಾತ್ರ ವಹಿಸಿದ ಮಹಾತ್ಮ ಗಾಂಧೀಜಿ ಮತ್ತು ಭಾರತಕ್ಕಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಧೈರ್ಯಶಾಲಿ ಹೋರಾಟಗಾರರನ್ನು ಸ್ಮರಿಸಲು ಗಾಂಧೀಜಿಯವರ ಪುಣ್ಯತಿಥಿಯಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ.

ಹುತಾತ್ಮರ ದಿನವನ್ನು ಏಕೆ ಆಚರಿಸಲಾಗುತ್ತದೆ?

ಜನವರಿ 30 ರಂದು ಹುತಾತ್ಮರ ದಿನವನ್ನು ಆಚರಿಸುವ ಉದ್ದೇಶವು ಮಹಾತ್ಮಾ ಗಾಂಧಿಯವರಿಗೆ ಗೌರವ ಸಲ್ಲಿಸುವುದು ಮಾತ್ರವಲ್ಲ, ದೇಶದ ಸ್ವಾತಂತ್ರ್ಯ, ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಎಲ್ಲಾ ಧೈರ್ಯಶಾಲಿ ಸ್ವಾತಂತ್ರ್ಯ ಹೋರಾಟಗಾರರನ್ನು ಸ್ಮರಿಸುವುದಾಗಿದೆ. ಮಹಾತ್ಮಾ ಗಾಂಧಿಯವರು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸಿ ದೇಶವನ್ನು ಸ್ವಾತಂತ್ರ್ಯದತ್ತ ಕೊಂಡೊಯ್ದರು. ಅವರ ಹತ್ಯೆ ಕೇವಲ ವ್ಯಕ್ತಿಯ ಹತ್ಯೆಯಲ್ಲ, ಬದಲಾಗಿ ಮಾನವೀಯ ಮೌಲ್ಯಗಳ ಮೇಲಿನ ದಾಳಿಯಾಗಿತ್ತು. ಅದಕ್ಕಾಗಿಯೇ ಈ ದಿನದಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ.

ಹುತಾತ್ಮರ ದಿನದ ಇತಿಹಾಸವೇನು?

ಪ್ರತಿ ವರ್ಷ ಜನವರಿ 30 ರಂದು ಭಾರತವು ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದವರನ್ನು ಗೌರವಿಸಲು ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. 1948 ರಲ್ಲಿ ದೆಹಲಿಯ ಬಿರ್ಲಾ ಭವನದಲ್ಲಿ ಪ್ರಾರ್ಥನಾ ಸಭೆಗೆ ಹೋಗುತ್ತಿದ್ದಾಗ ಮಹಾತ್ಮ ಗಾಂಧಿಯನ್ನು ನಾಥುರಾಮ್ ಗೋಡ್ಸೆ ಹತ್ಯೆ ಮಾಡಿದನು. ಗಾಂಧೀಜಿಯವರ ಸಾವು ಭಾರತೀಯ ಇತಿಹಾಸದಲ್ಲಿ ಒಂದು ದುರಂತ ಕ್ಷಣವಾಗಿತ್ತು, ಮತ್ತು ಅಂದಿನಿಂದ, ಅವರನ್ನು ಮತ್ತು ಭಾರತದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಅನೇಕ ವೀರರನ್ನು ಸ್ಮರಿಸಲು ಜನವರಿ 30 ರಂದು ಹುತಾತ್ಮರ ದಿನವನ್ನು ಆಚರಿಸಲಾಗುತ್ತದೆ. ಈ ದಿನದಂದು  ಸ್ವಾತಂತ್ರ್ಯ ಮತ್ತು ದೇಶಕ್ಕಾಗಿ ಪ್ರಾಣ ತ್ಯಾಗ ಮಹಾನ್‌ ವೀರರಿಗೆ ಗೌರವ ಸಲ್ಲಿಸಲಾಗುತ್ತದೆ.

ಹುತಾತ್ಮರ ದಿನದ ಪ್ರಾಮುಖ್ಯತೆಯೇನು?

  • ಮಹಾತ್ಮ ಗಾಂಧೀಜಿಯವರ ಪುಣ್ಯತಿಥಿಯನ್ನು ಹುತಾತ್ಮರ ದಿನವನ್ನಾಗಿ ಆಚರಿಸಲಾಗುತ್ತದೆ.
  • ದೇಶದ ಸ್ವಾತಂತ್ರ್ಯಕ್ಕೆ ಮಹಾತ್ಮ ಗಾಂಧೀಜಿಯವರು ನೀಡಿದ ಕೊಡುಗೆಗಳನ್ನು ಸ್ಮರಿಸುವುದು ಈ ದಿನದ ಉದ್ದೇಶವಾಗಿದೆ
  • ಮಹಾತ್ಮ ಗಾಂಧಿಯವರ ಆದರ್ಶಗಳು ಜನರನ್ನು ಸತ್ಯ ಮತ್ತು ಅಹಿಂಸೆಯ ಮಾರ್ಗವನ್ನು ಅನುಸರಿಸಲು ದೇಶದ ಜನರನ್ನು ಪ್ರೇರೇಪಿಸಲಾಗುತ್ತದೆ.

ಇದನ್ನೂ ಓದಿ: ಡಿಜಿಟಲ್‌ ಯುಗದಲ್ಲೂ ಕಡಿಮೆಯಾಗಿಲ್ಲ ಪತ್ರಿಕೆಗಳ ಮಹತ್ವ

ಹುತಾತ್ಮರ ದಿನವನ್ನು ಹೇಗೆ ಆಚರಿಸಲಾಗುತ್ತದೆ?

  • ದೇಶಾದ್ಯಂತ 2 ನಿಮಿಷಗಳ ಮೌನಾಚರಣೆ ಆಚರಿಸಲಾಗುತ್ತದೆ.
  • ಹುತಾತ್ಮರ ದಿನದಂದು, ಭಾರತದ ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ ಮತ್ತು ರಕ್ಷಣಾ ಸಚಿವರು ಮಹಾತ್ಮ ಗಾಂಧಿಯವರ ಸಮಾಧಿ ಸ್ಥಳವಾದ ರಾಜ್‌ಘಾಟ್‌ನಲ್ಲಿ ಒಟ್ಟಿಗೆ ಸೇರುತ್ತಾರೆ.
  • ಎಲ್ಲಾ ಗಣ್ಯರು ಮಹಾತ್ಮ ಗಾಂಧಿಯವರಿಗೆ ಗೌರವ ಸಲ್ಲಿಸುತ್ತಾರೆ ಮತ್ತು ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಅವರ ಧೀರ ಕೊಡುಗೆಗಳನ್ನು ಸ್ಮರಿಸಲಾಗುತ್ತದೆ.
  • ಈ ದಿನದಂದು ಶಾಲೆಗಳು, ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ವಿಶೇಷ ಕಾರ್ಯಕ್ರಮಗಳನ್ನು ನಡೆಸಲಾಗುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ