AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Meditation Benefits: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ?

ಇಂದಿನ ಈ ವೇಗದ ಜೀವನದಲ್ಲಿ, ಮಾನಸಿಕ ಮತ್ತು ದೈಹಿಕ ಆರೋಗ್ಯವನ್ನು ಕಾಪಾಡಿಕೊಳ್ಳುವುದು ಬಹುದೊಡ್ಡ ಸವಾಲಾಗಿದೆ. ಜೊತೆಗೆ ಒತ್ತಡವು ಬದುಕಿನ ಅವಿಭಾಜ್ಯ ಅಂಗವಾಗಿ ಹೋಗಿದೆ. ಹೀಗಿರುವಾಗ ಒತ್ತಡದಿಂದ ಮುಕ್ತಿ ಪಡೆದು ನೆಮ್ಮದಿಯಿಂದ ಬದುಕು ಸಾಗಿಸಲು ಪ್ರತಿನಿತ್ಯ ಧ್ಯಾನವನ್ನು ಮಾಡಿ. ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಒತ್ತಡ ದೂರವಾಗುವುದಲ್ಲದೆ, ಈ ಎಲ್ಲಾ ಪ್ರಯೋಜನಗಳು ಲಭಿಸುತ್ತವೆ.

Meditation Benefits: ಪ್ರತಿದಿನ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನಾಗುತ್ತದೆ ಗೊತ್ತಾ?
ಧ್ಯಾನದ ಪ್ರಯೋಜನImage Credit source: Getty Images
ಮಾಲಾಶ್ರೀ ಅಂಚನ್​
|

Updated on: May 19, 2026 | 5:06 PM

Share

ಇಂದಿನ ಈ ಕಾರ್ಯನಿರತ ಜೀವನದಲ್ಲಿ ಆರೋಗ್ಯವನ್ನು ಕಾಪಾಡಿಕೊಳ್ಳಲು, ಫಿಟ್‌ ಆಗಿರಲು ಬಹುತೇಕ ಹೆಚ್ಚಿನವರು ಜಿಮ್‌, ವ್ಯಾಯಾಮದ ಮೊರೆ ಹೋಗ್ತಾರೆ. ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಜಿಮ್‌ಗೆ ಹೋಗಿ ವರ್ಕ್‌ಔಟ್‌ ಮಾಡುವಂತೆ, ಇಂದಿನ ಈ ಬ್ಯುಸಿ ಜೀವನದಲ್ಲಿ ಒತ್ತಡದಿಂದ ಮುಕ್ತಿ ಪಡೆಯಲು, ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ಪ್ರತಿನಿತ್ಯ ಧ್ಯಾನ (meditation) ಮಾಡಬೇಕು. ಹೌದು ಧ್ಯಾನ ನಮ್ಮ ಜೀವನದ ದೈನಂದಿನ ಭಾಗವಾಗಬೇಕು, ಏಕೆಂದರೆ ಇದು ದೈಹಿಕ, ಮಾನಸಿಕ ಆರೋಗ್ಯ ಸೇರಿದಂತೆ ನಮ್ಮ ಒಟ್ಟಾರೆ ಯೋಗಕ್ಷೇಮವನ್ನು ಚೆನ್ನಾಗಿರಿಸಲು ಉತ್ತೇಜನ ನೀಡುತ್ತದೆ. ಹಾಗಿದ್ರೆ ಪ್ರತಿನಿತ್ಯ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಏನೆಲ್ಲಾ ಪ್ರಯೋಜನಗಳು ಲಭಿಸುತ್ತವೆ ಎಂಬುದನ್ನು ನೋಡೋಣ ಬನ್ನಿ.

ಪ್ರತಿನಿತ್ಯ 10 ನಿಮಿಷಗಳ ಕಾಲ ಧ್ಯಾನ ಮಾಡುವುದರಿಂದ ಲಭಿಸುವ ಪ್ರಯೋಜನಗಳು:

ಪ್ರತಿದಿನ ಬೆಳಿಗ್ಗೆ ಎದ್ದ ನಂತರ ನಿಮ್ಮ ಫೋನ್ ಅನ್ನು ಕೈಯಲ್ಲಿ ಹಿಡಿದುಕೊಂಡು ವೀಡಿಯೊಗಳನ್ನು ನೋಡುತ್ತಾ ಗಂಟೆಗಟ್ಟಲೆ ಕಳೆಯುವ ಬದಲು, ನಿಮ್ಮ ದಿನವನ್ನು 10 ನಿಮಿಷಗಳ ಧ್ಯಾನದೊಂದಿಗೆ ಪ್ರಾರಂಭಿಸಿ. ಬೆಳಿಗ್ಗೆ ಧ್ಯಾನ ಮಾಡುವುದರಿಂದ ದೇಹದಲ್ಲಿ ಒತ್ತಡ ಉಂಟುಮಾಡುವ ಹಾರ್ಮೋನ್ ಕಾರ್ಟಿಸೋಲ್ ಮಟ್ಟ ಕಡಿಮೆಯಾಗುತ್ತದೆ. ಧ್ಯಾನದೊಂದಿಗೆ ದಿನವನ್ನು ಪ್ರಾರಂಭಿಸುವುದು ಮಾನಸಿಕ ಒತ್ತಡ ಮತ್ತು ಆತಂಕವನ್ನು ನಿವಾರಿಸಲು ಸಹಾಯ ಮಾಡುತ್ತದೆ. ಮತ್ತು ಇದು ಭಾವನಾತ್ಮಕ ಸಮತೋಲನವನ್ನು ಕಾಪಾಡಿಕೊಳ್ಳಲು ಮತ್ತು ಕೆಲಸದ ಮೇಲೆ ಗಮನಹರಿಸಲು ಸಹಾಯ ಮಾಡುತ್ತದೆ.

ಗಮನ ಹೆಚ್ಚುತ್ತದೆ: ಪ್ರತಿದಿನ ಬೆಳಿಗ್ಗೆ 10 ನಿಮಿಷಗಳ ಕಾಲ ಧ್ಯಾನ ಮಾಡುವ ಅಭ್ಯಾಸ ಮಾಡಿಕೊಂಡರೆ, ಗೊಂದಲದ ಸಮಸ್ಯೆ ಕಡಿಮೆಯಾಗುತ್ತದೆ. ಧ್ಯಾನವು ಮಾನಸಿಕ ಶಕ್ತಿ ಮತ್ತು ಗಮನ ಕೇಂದ್ರೀಕರಿಸುವ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ. ನಿಯಮಿತವಾಗಿ 10 ನಿಮಿಷಗಳ ಧ್ಯಾನ ಮಾಡುವುದರಿಂದ ಗಮನ ಸುಧಾರಿಸುತ್ತದೆ. ಪ್ರತಿದಿನ ಬೆಳಿಗ್ಗೆ ಧ್ಯಾನ ಮಾಡುವ ಜನರು ಸ್ಪಷ್ಟ ಆಲೋಚನೆಗಳನ್ನು ಹೊಂದಿರುತ್ತಾರೆ, ತ್ವರಿತವಾಗಿ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುತ್ತದೆ, ಮತ್ತು ಅವರು ಮಾನಸಿಕವಾಗಿ ಬಲಶಾಲಿಯಾಗಿರುತ್ತಾರೆ.

ಒತ್ತಡವು ತಕ್ಷಣವೇ ನಿವಾರಣೆಯಾಗುತ್ತದೆ: ಇಂದಿನ ಈ ಬ್ಯುಸಿ ಜಮಾನದಲ್ಲಿ ಪ್ರತಿಯೊಬ್ಬರೂ ಯಾವುದಾದರೂ ಒಂದು ಕಾರಣಕ್ಕೆ ಒತ್ತಡಕ್ಕೆ ಒಳಗಾಗುತ್ತಲೇ ಇರುತ್ತಾರೆ. ಈ ರೀತಿಯ ಒತ್ತಡವನ್ನು ತೆಗೆದುಹಾಕಲು ಧ್ಯಾನವು ಅತ್ಯುತ್ತಮ ಔಷಧವಾಗಿದೆ. ಪ್ರತಿದಿನ ಧ್ಯಾನ ಮಾಡುವ ಮೂಲಕ, ನೀವು ನಿಮ್ಮ ಮನಸ್ಸನ್ನು ಶಾಂತವಾಗಿರಿಸಿಕೊಳ್ಳಬಹುದು. ನಿಯಮಿತ ಧ್ಯಾನವು ಕಿರಿಕಿರಿಯನ್ನು ಕಡಿಮೆ ಮಾಡುತ್ತದೆ. ಧ್ಯಾನವು ಮನಸ್ಸನ್ನು ಶಾಂತವಾಗಿ ಮತ್ತು ಸ್ಥಿರವಾಗಿಡಲು ಸಹಾಯ ಮಾಡುತ್ತದೆ. ಜೊತೆಗೆ ಧ್ಯಾನವು ನಿಮ್ಮನ್ನು ಭಾವನಾತ್ಮಕವಾಗಿ ಸ್ಥಿರವಾಗಿಡಲು ಸಹಾಯ ಮಾಡುತ್ತದೆ.

ಶಕ್ತಿಯ ಮಟ್ಟಗಳು ಹೆಚ್ಚಾಗುತ್ತದೆ: ಒಬ್ಬ ವ್ಯಕ್ತಿಯು ಮಾನಸಿಕವಾಗಿ ಚಿಂತಿತನಾಗಿದ್ದಾಗ ಅಥವಾ ಒತ್ತಡಕ್ಕೊಳಗಾದಾಗ, ಅವನ ಶಕ್ತಿಯ ಮಟ್ಟವು ಕಡಿಮೆಯಾಗುತ್ತದೆ. ಹೀಗಿರುವಾಗ ನೀವು ಬೆಳಿಗ್ಗೆ ಧ್ಯಾನ ಮಾಡಿದರೆ, ಶಕ್ತಿಯ ಮಟ್ಟವು ಹೆಚ್ಚಾಗುತ್ತದೆ. ಧ್ಯಾನವು ನರಮಂಡಲವನ್ನು ಸುಧಾರಿಸುತ್ತದೆ ಮತ್ತು ದೇಹದಲ್ಲಿ ಆಮ್ಲಜನಕದ ಹರಿವನ್ನು ಹೆಚ್ಚಿಸುತ್ತದೆ. ಇದರಿಂದಾಗಿ ನೀವು ದಿನವಿಡೀ ಚೈತನ್ಯಶೀಲರಾಗಿರುತ್ತೀರಿ.

ಇದನ್ನೂ ಓದಿ: ಜಪಾನಿಯರಂತೆ ಆರೋಗ್ಯಕರವಾಗಿ ಜೀವನ ನಡೆಸಲು ಸರಳ ಅಭ್ಯಾಸಗಳನ್ನು ಅಳವಡಿಸಿಕೊಳ್ಳಿ

ರೋಗನಿರೋಧಕ ವ್ಯವಸ್ಥೆ ಬಲಗೊಳ್ಳುತ್ತದೆ: ಹೆಚ್ಚುವರಿಯಾಗಿ, ಧ್ಯಾನವು ರೋಗನಿರೋಧಕ ಶಕ್ತಿಯನ್ನು ಬಲಪಡಿಸುತ್ತದೆ. ನೀವು ವಿಶ್ರಾಂತಿ ಪಡೆದಾಗ, ನಿಮ್ಮ ದೇಹವು ಹೆಚ್ಚು ವೇಗವಾಗಿ ಗುಣವಾಗುತ್ತದೆ. ನಿಯಮಿತವಾಗಿ ಧ್ಯಾನ ಮಾಡುವ ಜನರು ಅನಾರೋಗ್ಯಕ್ಕೆ ಒಳಗಾಗುವ ಸಾಧ್ಯತೆ ಕಡಿಮೆ. ಹಾಗಾಗಿ ಪ್ರತಿನಿತ್ಯ 10 ನಿಮಿಷಗಳ ಕಾಲ ವ್ಯಾಯಾಮ ಮಾಡಿ.

ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡುತ್ತದೆ: ರಕ್ತದೊತ್ತಡವನ್ನು ನಿಯಂತ್ರಣದಲ್ಲಿಡಲು  ಧ್ಯಾನ ಪ್ರಯೋಜನಕಾರಿಯಾಗಿದೆ. ಧ್ಯಾನವು ರಕ್ತದ ಹರಿವನ್ನು ಸುಧಾರಿಸುತ್ತದೆ, ಇದು ಹೃದಯದ ಮೇಲಿನ ಒತ್ತಡವನ್ನು ಕಡಿಮೆ ಮಾಡುತ್ತದೆ ಮತ್ತು ಅಧಿಕ ರಕ್ತದೊತ್ತಡದಂತಹ ಸಮಸ್ಯೆಗಳನ್ನು ಕ್ರಮೇಣ ಸಮತೋಲನಗೊಳಿಸುತ್ತದೆ. ಇದಲ್ಲದೆ, ಇದು ಹೃದಯದ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ.

ನಿದ್ರೆಯನ್ನು ಸುಧಾರಿಸುತ್ತದೆ: ನೀವು ನಿದ್ರೆಯ ಸಮಸ್ಯೆಯಿಂದ ಬಳಲುತ್ತಿದ್ದರೆ, ಪ್ರತಿನಿತ್ಯ ಧ್ಯಾನ ಮಾಡಿ.  ಧ್ಯಾನವು ಮಾನಸಿಕ ಉದ್ರೇಕವನ್ನು ಕಡಿಮೆ ಮಾಡುತ್ತದೆ ಮತ್ತು ನಿದ್ರೆಯ ಗುಣಮಟ್ಟವನ್ನು ಸುಧಾರಿಸುತ್ತದೆ.

ಜೀವನಶೈಲಿ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Malashree anchan
Malashree anchan

ಮಾಲಾಶ್ರೀ ಅಂಚನ್- ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದವಳು. ಸಮೂಹ ಸಂವಹನ ಮತ್ತು ಪತ್ರಿಕೋದ್ಯಮದಲ್ಲಿ (MCJ) ಸ್ನಾತಕೋತ್ತರ ಪದವಿಧರೆ. ಪ್ರಾರಂಭದಿಂದಲೂ ಬರವಣಿಗೆಯಲ್ಲಿ ಹೆಚ್ಚಿನ ಒಲವನ್ನು ಹೊಂದಿದ್ದು, ಪತ್ರಿಕಾ ರಂಗದಲ್ಲಿ 2 ವರ್ಷಗಳ ಅನುಭವವಿದೆ. ಜೀವನಶೈಲಿ, ವೈರಲ್ ಸುದ್ದಿಗಳನ್ನು ಬರೆಯುವುದರಲ್ಲಿ ಆಸಕ್ತಿಯನ್ನು ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುತ್ತಿದ್ದೇನೆ.

Read More