AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mental Health: ನಿಮ್ಮ ಈ ಅಭ್ಯಾಸಗಳು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು

ನಿಮ್ಮ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯದ ಕಾಳಜಿಯೂ ಅಷ್ಟೇ ಮುಖ್ಯ. ಮಾನಸಿಕ ಆರೋಗ್ಯದ ಕ್ಷೀಣತೆಗೆ ಕಾರಣವಾಗುವ ದೈನಂದಿನ ಅಭ್ಯಾಸಗಳನ್ನು ಗುರುತಿಸುವುದು ಮತ್ತು ಅವುಗಳಿಂದ ಹೊರಬರಲು ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ.

Mental Health: ನಿಮ್ಮ ಈ ಅಭ್ಯಾಸಗಳು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಬಹುದು
Mental Health
ಅಕ್ಷತಾ ವರ್ಕಾಡಿ
|

Updated on: May 31, 2023 | 12:39 PM

Share

ಮುಖ್ಯಾಂಶಗಳು

  • ನಿಮ್ಮ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯದ ಕಾಳಜಿಯೂ ಅಷ್ಟೇ ಮುಖ್ಯ.
  • ಮಾನಸಿಕ ಆರೋಗ್ಯದ ಕ್ಷೀಣತೆಗೆ ಕಾರಣವಾಗುವ ದೈನಂದಿನ ಅಭ್ಯಾಸಗಳನ್ನು ಗುರುತಿಸುವುದು ಮತ್ತು ಅವುಗಳಿಂದ ಹೊರಬರಲು ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ.
  • ನಿಮ್ಮ ಮಾನಸಿಕ ಆರೋಗ್ಯವನ್ನು ಹದಗೆಡಿಸುವ ದೈನಂದಿನ ಅಭ್ಯಾಸಗಳನ್ನು ಇಲ್ಲಿವೆ.

ಪ್ರತಿಯೊಬ್ಬರೂ ಕೂಡ ದೈಹಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸುತ್ತಾರೆ. ಆದರೆ ದೈಹಿಕ ಆರೋಗ್ಯದಷ್ಟೇ ಮಾನಸಿಕವಾಗಿ ಆರೋಗ್ಯದಿಂದಿರುವುದು ಅಗತ್ಯ. ನೀವು ಮಾನಸಿಕವಾಗಿ ಆರೋಗ್ಯದಿಂದ ಇಲ್ಲದ್ದಿದ್ದರೆ, ಇದು ನಿಮ್ಮ ಒಟ್ಟಾರೆ ಆರೋಗ್ಯದ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ. ನಿಮ್ಮ ಈ ದೈನಂದಿನ ಅಭ್ಯಾಸಗಳು ಮಾನಸಿಕ ಆರೋಗ್ಯವನ್ನು ಹದಗೆಡಿಸಬಹುದು. ಸಾಕಷ್ಟು ನಿದ್ರೆ, ವ್ಯಾಯಾಮ ಮತ್ತು ಸಕಾರಾತ್ಮಕ ಸ್ವ-ಮಾತು ಆರೋಗ್ಯಕರ ಅಭ್ಯಾಸಗಳನ್ನು ಮಾಡುವುದರಿಂದ ನಿಮ್ಮ ಮಾನಸಿಕ ಯೋಗಕ್ಷೇಮವನ್ನು ಸುಧಾರಿಸಬಹುದು. ನಿಮ್ಮ ಮಾನಸಿಕ ಆರೋಗ್ಯವನ್ನು ಹದಗೆಡಿಸುವ ದೈನಂದಿನ ಅಭ್ಯಾಸಗಳನ್ನು ಇಲ್ಲಿವೆ.

ನಿಮ್ಮ ಮಾನಸಿಕ ಆರೋಗ್ಯವನ್ನು ಹದಗೆಡಿಸುವ ದೈನಂದಿನ ಅಭ್ಯಾಸಗಳು:

1. ನಿದ್ರೆಯ ಕೊರತೆ:

ದೇಹದ ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ನಿದ್ರೆ ಅತ್ಯಗತ್ಯ. ನಿದ್ರೆಯ ಕೊರತೆಯು ಮೂಡ್ ಸ್ವಿಂಗ್, ಖಿನ್ನತೆ, ಆತಂಕ ಮತ್ತು ಆಯಾಸಕ್ಕೆ ಕಾರಣವಾಗಬಹುದು. ನಿಮ್ಮ ಮಾನಸಿಕ ಆರೋಗ್ಯವನ್ನು ಹೆಚ್ಚಿಸಲು 7-9 ಗಂಟೆಗಳ ನಿದ್ದೆ ಮಾಡುವುದು ಅತ್ಯಂತ ಅಗತ್ಯವಾಗಿದೆ.

2. ಅತಿಯಾದ ಸಾಮಾಜಿಕ ಮಾಧ್ಯಮ ಬಳಕೆ:

ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾದಂತೆ ಕೆಲವರಿಗೆ ಅದೊಂದು ಚಟವಾಗಿಬಿಡುತ್ತದೆ. ನೆಟ್ಟಿಗರು ಸಾಕಷ್ಟು ಲೈಕು ಅಥವಾ ಕಾಮೆಂಟ್‌ಗಳನ್ನು ಪಡೆಯದಿದ್ದಾಗ ಆತಂಕ ಮತ್ತು ಅತಿಯಾದ ಭಾವನೆಯನ್ನು ಉಂಟು ಮಾಡುತ್ತದೆ. ಇದರೊಂದಿಗೆ, ಅನೇಕರು ಮನರಂಜನೆಗಾಗಿ ಸಾಮಾಜಿಕ ಮಾಧ್ಯಮವನ್ನು ಅತಿಯಾಗಿ ಅವಲಂಬಿಸಿದ್ದಾರೆ. ಇದು ನಿಮ್ಮನ್ನು ಮಾನಸಿಕವಾಗಿ ಕುಗ್ಗಿಸಲು ಕಾರಣವಾಗಬಹುದು.

3. ಕಳಪೆ ಆಹಾರ:

ನೀವು ಸೇವಿಸುವ ಆಹಾರವು ನಿಮ್ಮ ಮಾನಸಿಕ ಆರೋಗ್ಯದಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಅನಾರೋಗ್ಯಕರ ಆಹಾರ ಸೇವನೆಯು ಸಿರೊಟೋನಿನ್ ಮಟ್ಟದಲ್ಲಿ ಅಸಮತೋಲನಕ್ಕೆ ಕಾರಣವಾಗಬಹುದು ಮತ್ತು ಖಿನ್ನತೆ, ಆತಂಕ ಮತ್ತು ಚಿತ್ತಸ್ಥಿತಿಯನ್ನು ಉಂಟುಮಾಡಬಹುದು. ಆರೋಗ್ಯಕರ ಮತ್ತು ಸಮತೋಲಿತ ಆಹಾರವನ್ನು ಸೇವಿಸುವುದರಿಂದ ನೀವು ದೈಹಿಕವಾಗಿ ಮತ್ತು ಮಾನಸಿಕವಾಗಿ ಉತ್ತಮವಾಗುತ್ತೀರಿ.

4. ಆಲಸ್ಯ:

ಆಲಸ್ಯವು ಹೆಚ್ಚಿನ ಮಟ್ಟದ ಆತಂಕ ಮತ್ತು ಒತ್ತಡವನ್ನು ಉಂಟುಮಾಡಬಹುದು. ಇದು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಉತ್ತಮ ಸಮಯ ನಿರ್ವಹಣೆ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು ಆಲಸ್ಯದಿಂದ ಹೊರಬರಲು ಸಹಾಯ ಮಾಡುತ್ತದೆ.

5. ನಕಾರಾತ್ಮಕ ಸ್ವ-ಮಾತು:

ಸ್ವಯಂ ವಿಮರ್ಶೆ ಮತ್ತು ನಕಾರಾತ್ಮಕ ಸ್ವ-ಮಾತುಗಳಲ್ಲಿ ತೊಡಗಿಸಿಕೊಳ್ಳುವುದು ಕಡಿಮೆ ಸ್ವಾಭಿಮಾನ, ಖಿನ್ನತೆ ಮತ್ತು ಆತಂಕಕ್ಕೆ ಕಾರಣವಾಗಬಹುದು. ಸಕಾರಾತ್ಮಕ ದೃಢೀಕರಣಗಳು ಮತ್ತು ಕೃತಜ್ಞತೆಯನ್ನು ಅಭ್ಯಾಸ ಮಾಡುವುದರಿಂದ ಋಣಾತ್ಮಕ ಸ್ವ-ಚರ್ಚೆಯನ್ನು ಬದಲಾಯಿಸಲು ಸಹಾಯ ಮಾಡುತ್ತದೆ.

6. ವ್ಯಾಯಾಮದ ಕೊರತೆ:

ವ್ಯಾಯಾಮವು ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಮತ್ತು ಎಂಡಾರ್ಫಿನ್‌ಗಳ ಬಿಡುಗಡೆಯನ್ನು ಸುಧಾರಿಸುತ್ತದೆ, ಇದು ನಿಮ್ಮ ಮನಸ್ಥಿತಿಯ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ವ್ಯಾಯಾಮ ಮಾಡದಿರುವುದು ಖಿನ್ನತೆ ಮತ್ತು ಆತಂಕಕ್ಕೆ ಕಾರಣವಾಗಬಹುದು ಮತ್ತು ಮಾನಸಿಕ ಆರೋಗ್ಯವನ್ನು ಹದಗೆಡಿಸುತ್ತದೆ. ನಿಮ್ಮ ದೈನಂದಿನ ದಿನಚರಿಯಲ್ಲಿ ನಿಯಮಿತ ವ್ಯಾಯಾಮವನ್ನು ಸೇರಿಸುವುದು ನಿಮ್ಮ ಒಟ್ಟಾರೆ ಯೋಗಕ್ಷೇಮವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ.

ಇದನ್ನೂ ಓದಿ: ವಿಶ್ವ ತಂಬಾಕು ರಹಿತ ದಿನ 2023; ಧೂಮಪಾನವನ್ನು ತ್ಯಜಿಸಿ, ನಿಮ್ಮೊಂದಿಗೆ ನಿಮ್ಮ ಕುಟುಂಬವನ್ನು ಕಾಪಾಡಿ

7. ಪ್ರತ್ಯೇಕತೆ:

ಒತ್ತಡ ಅಥವಾ ಆತಂಕದ ಕಾರಣದಿಂದಾಗಿ ತನ್ನನ್ನು ತಾನು ಪ್ರತ್ಯೇಕಿಸಿಕೊಳ್ಳುವುದು ಖಿನ್ನತೆ, ಒಂಟಿತನಕ್ಕೆ ಕಾರಣವಾಗಬಹುದು ಮತ್ತು ಮಾನಸಿಕ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತದೆ. ಒತ್ತಡವನ್ನು ನಿವಾರಿಸಲು ಮತ್ತು ಅಗತ್ಯವಿದ್ದರೆ ಸಹಾಯವನ್ನು ಪಡೆಯಲು ಸ್ನೇಹಿತರು ಮತ್ತು ಕುಟುಂಬದೊಂದಿಗೆ ಬೆರೆಯುವುದು ಅಥವಾ ಬೆಂಬಲ ಗುಂಪನ್ನು ಸೇರುವುದು ಮುಖ್ಯವಾಗಿದೆ.

ನಿಮ್ಮ ದೈಹಿಕ ಆರೋಗ್ಯದಷ್ಟೇ ಮಾನಸಿಕ ಆರೋಗ್ಯದ ಕಾಳಜಿಯೂ ಅಷ್ಟೇ ಮುಖ್ಯ. ಮಾನಸಿಕ ಆರೋಗ್ಯದ ಕ್ಷೀಣತೆಗೆ ಕಾರಣವಾಗುವ ದೈನಂದಿನ ಅಭ್ಯಾಸಗಳನ್ನು ಗುರುತಿಸುವುದು ಮತ್ತು ಅವುಗಳಿಂದ ಹೊರಬರಲು ಕ್ರಮಗಳನ್ನು ತೆಗೆದುಕೊಳ್ಳುವುದು ಮುಖ್ಯವಾಗಿದೆ. ನಿಮ್ಮ ಮಾನಸಿಕ ಆರೋಗ್ಯವನ್ನು ಸುಧಾರಿಸಲು ಸ್ನೇಹಿತರು, ಕುಟುಂಬ ಅಥವಾ ಮಾನಸಿಕ ಆರೋಗ್ಯ ವೃತ್ತಿಪರರೊಂದಿಗೆ ಮಾತನಾಡುವ ಮೂಲಕ ಅಗತ್ಯವಿದ್ದಾಗ ಬೆಂಬಲವನ್ನು ಪಡೆಯಿರಿ.

ಜೀವನಶೈಲಿಗೆ ಸಂಬಂಧಿಸಿದ ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್​​ ಮಾಡಿ: 

Follow Us
ಅಕ್ಷತಾ ವರ್ಕಾಡಿ
ಅಕ್ಷತಾ ವರ್ಕಾಡಿ

ಅಕ್ಷತಾ ವರ್ಕಾಡಿ – ಮೂಲತಃ ಕಾಸರಗೋಡು ಜಿಲ್ಲೆಯ ಮಂಜೇಶ್ವರದ ವರ್ಕಾಡಿಯವರು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು, ಟಿವಿ9 ಡಿಜಿಟಲ್​ ಮೂಲಕ ವೃತ್ತಿ ಜೀವನವನ್ನು ಆರಂಭಿಸಿದ್ದಾರೆ. ಸುದ್ದಿ ಮಾಧ್ಯಮದಲ್ಲಿ​ 3 ವರ್ಷಗಳ ಅನುಭವ ಇವರಿಗಿದೆ. ಆಧ್ಯಾತ್ಮ, ಶಿಕ್ಷಣ, ಉದ್ಯೋಗವಕಾಶ, ಆರೋಗ್ಯ ಮತ್ತು ವೈರಲ್ ಸುದ್ದಿಗಳ ಬಗ್ಗೆ ಬರೆಯುವುದರಲ್ಲಿ ಆಸಕ್ತಿಹೊಂದಿದ್ದು, ಇವರು ಓದುಗರಿಗೆ ಉತ್ತಮ ಹಾಗೂ ಆಸಕ್ತಿದಾಯಕ ಲೇಖನಗಳನ್ನು ಒದಗಿಸುತ್ತಿದ್ದಾರೆ.

Read More
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಫರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
ದರ್ಶನ್ ಕೇಸ್: ಮಾಫಿ ಸಾಕ್ಷಿ ವಿಡಿಯೋ ವೈರಲ್ ಮಾಡಿದವರಿಗೆ ಕೋರ್ಟ್ ಶಾಕ್
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ
RSS ಕಚೇರಿಯಲ್ಲೇ ಫಾರ್ಮ್-7 ಮುದ್ರಣ: ತನ್ವೀರ್ ಸೇಠ್ ಆರೋಪ